ಕುಂದಾಪರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ನವರಾತ್ರಿಯ ಶುಭಾಶಯ ಕೋರಿ ಸರ್ವರಿಗೂ ಶಾರದಾದೇವಿಯು ಆಯುರಾರೋಗ್ಯ ನೀಡಿ ಕಾಪಾಡಲಿ ಎಂದರು. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕ ಮಹೇಶ್ ನಾಯ್ಕ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್. ವಂದಿಸಿದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಗೃಹ ಸಚಿವ ಅರಗಾ ಜ್ಞಾನೇಂದ್ರ ಕುಟುಂಬ ಸಮೇತರಾಗಿ ಭೇಟಿ ನೀಡಿ, ಮೂಕಾಂಬಿಕೆಯ ದರ್ಶನ ಪಡೆದರು. ನಂತರ ದೇವಳದ ಪ್ರಧಾನ ಅರ್ಚಕ ಶ್ರೀಧರ್ ಅಡಿಗ ಅವರ ನೇತ್ರತ್ವದಲ್ಲಿ ದೇವಳದ ವಿಶೇಷ ಪೂಜೆ ಚಂಡಿಕಾ ಹೋಮದಲ್ಲಿ ಭಾಗಿಯಾದರು. ದೇವಳದ ಆಡಳಿತ ಮಂಡಳಿಯಿಂದ ಸಚಿವರನ್ನು ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಶಾರದಾ ಮಹೋತ್ಸವದ 47ನೇ ವರ್ಷದ ಸಮಾರಂಭ ಆರಂಭಗೊಂಡಿತು. ಬೆಳಿಗ್ಗೆ ಗಂಗೊಳ್ಳಿಯ ಶ್ರೀ ರಾಮ ಮಂದಿರದ ಬಳಿಯಿಂದ ಶ್ರೀ ಶಾರದಾ ವಿಗ್ರಹವನ್ನು ಮೆರವಣಿಗೆಯಲ್ಲಿ ತಂದು ಶ್ರೀ ಶಾರದಾ ಮಂಟಪದಲ್ಲಿ ಮಧ್ಯಾಹ್ನ ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸಲಾಯಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ಈ ಸಂದರ್ಭ ಸಮಿತಿಯ ಅಧ್ಯಕ್ಷ ಸತೀಶ ಜಿ., ಗೌರವಾಧ್ಯಕ್ಷ ವೇದಮೂರ್ತಿ ಜಿ.ನಾರಾಯಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಸಮಿತಿಯ ಪದಾಧಿಕಾರಿಗಳು, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ಎನ್.ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಮಹಿಳಾ ಮಂಡಳಿ ಪದಾಧಿಕಾರಿಗಳು, ಭಕ್ತಾದಿಗಳು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಿ-ಮೆಟ್ರಿಕ್( 9 ಮತ್ತು 10ನೇ ತರಗತಿ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಮತ್ತು ಪೋಸ್ಟ್-ಮೆಟ್ರಿಕ್( ಪಿಯುಸಿ ಯಿಂದ ಸ್ನಾತಕೋತ್ತರ ಪದವಿ) ಹಾಗೂ ಮೇಲ್ಪಟ್ಟ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ವಿಕಲಚೇತನ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ http://disabilityaffairs.gov.in/content/ ಅಥವಾ http://www.scholarship.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ದೂ.ಸಂ. 0820-2574810/811ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ, ವಿಶ್ವ ಮಾನಸಿಕ ಆರೋಗ್ಯ ದಿನ ಹಾಗೂ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಹಿನ್ನಲೆಯಲ್ಲಿ ರಾಷ್ಟ್ರಮಟ್ಟದ ಸೆಮಿನಾರ್‌ನ್ನು ಶನಿವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತ ಶೆಟ್ಟಿ, ಮಹಿಳೆಯು ಸಮಾಜದಲ್ಲಿ ವಿಭಿನ್ನ ಪಾತ್ರ ನಿರ್ವಹಿಸುತ್ತಾಳೆ. ಇಂದು ಮಹಿಳೆಯ ಎಲ್ಲಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ. ಆದರೆ ಜೀವವನ್ನು ನೀಡಿ ಸಲಹುವ ಹೆಣ್ಣಿಗೆ ಇಂದಿನ ಸಮಾಜದಲ್ಲಿ ರಕ್ಷಣೆ ಇಲ್ಲದಾಗಿರುವುದು ದುರಂತ ಎಂದರು. ಮಂಗಳೂರಿನ ಎ. ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ ಸೆಂಟರ್‌ನ ಪ್ರಾಧ್ಯಾಪಕಿ ಡಾ. ವತ್ಸಲ ಕಾಮತ್, ಶಿವಮೊಗ್ಗದ ಮಾನಸ ಆಸ್ಪತ್ರೆಯ ಆಪ್ತ ಸಮಾಲೋಚಕಿ ಹಾಗೂ ಸಮಾಜಕಾರ್ಯ ವಿಭಾಗದ ಹಿರಿಯ ವಿದ್ಯಾರ್ಥಿನಿ ಅಚಲ ಪಟೇಲ್ ಕ್ರಮವಾಗಿ ಲಿಂಗ ಸಮಾನತೆ ಮತ್ತು ಮಾನಸಿಕ ಆರೋಗ್ಯದ ಕುರಿತು ವಿಷಯ ಮಂಡಿಸಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರ ಪ್ರತಿ ಒಂದು ಕಾದಂಬರಿಯಲ್ಲೂ ಅವರಲ್ಲಿರುವ ಪ್ರತಿಭೆ ಅನಾವರಣಗೊಳ್ಳುತ್ತಿತ್ತು, ಅದನ್ನು ಅಧ್ಯಯನ ಮಾಡುತ್ತಾ ಅದರಲ್ಲಿ ನಾವು ತೊಡಗಿಕೊಂಡಾಗ ನಾವು ಹೊಸ ಲೋಕಕ್ಕೆ ತಲುಪಿದ ಅನುಭವ ಆಗುವುದರಲ್ಲಿ ಸಂಶಯವಿಲ್ಲ. ಯಾರನ್ನು ಮೆಚ್ಚಲಿಸಕ್ಕಾಗಿ ಬರೆಯದ ಕಾರಂತರು ವಾಸ್ತವದಲ್ಲಿ ಏನು ನೋಡುತ್ತಾರೆ ಅದನ್ನು ನಿರ್ಭಯದಿಂದ, ಜೀವನ ದರ್ಶನಕ್ಕೆ ಏನು ಬೇಕು, ಬದುಕನ್ನು ಕಟ್ಟಿಕೊಳ್ಳಲು ಏನು ಅವಶ್ಯವಾಗಿದೆ ಅಂತದಹುವುಗಳನ್ನು ಕಾರಂತರ ಕಾದಂಬರಿಗಳಲ್ಲಿ ನಾವು ನೋಡಬಹುದು, ಕಾರಂತರ ಸಾಹಿತ್ಯ,ವ್ಯಕ್ತಿತ್ವವನ್ನು ಪದಗಳಲ್ಲಿ ಕಟ್ಟಿಕೊಡುವುದು ಅಸಾಧ್ಯ ಎಂದು ಸಾಹಿತಿ, ಶಿಕ್ಷಕ ಸತೀಶ್ ವಡ್ಡರ್ಸೆ ಅವರು ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17ನೇ ವರುಷದ ಸಂಭ್ರಮದ ಸಾಹ್ಯಿತ್ಯಿಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ಒಂಭತ್ತನೇ ದಿನದ ಕಾರಂತ ಚಿಂತನ ಹಾಗೂ ಈಶಲಾಸ್ಯ ನೃತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು, ಹೆಣ್ಣು ಮಕ್ಕಳ ರಕ್ಷಣೆಯು ನಿರಂತರವಾಗಿ ನಡೆಯಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜೆ. ಎನ್. ಸುಬ್ರಮಣ್ಯ ಹೇಳಿದರು. ಅವರು ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ, ಆರೋಗ್ಯ ಇಲಾಖೆ, ಉಡುಪಿ,ಚೈಡ್‌ಲೈನ್ 1098 ಉಡುಪಿ, ರೋಟರಿ ಉಡುಪಿ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಭೂಮಿಗೆ ಬರುವ ಮುಂಚೆಯೇ ಅವರನ್ನು ನಾಶ ಮಾಡುವ ಪ್ರಯತ್ನಗಳು ನಡಯುತ್ತಿದ್ದು, ಅಂತಹ ಪ್ರಯತ್ನಗಳನ್ನು ತಡೆಯಬೇಕು, ಗರ್ಭಪೂರ್ವ ಮತ್ತು ಪ್ರಸವ ಪೂರ್ವದಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಅದರ ನಾಶಕ್ಕೆ ಪ್ರಯತ್ನಿಸುವವರ ವಿರುದ್ದ ಕಠಿಣ ಶಿಕ್ಷೆ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದರೂ ಸಹ, ನ್ಯಾಯಾಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಪ್ರಕರಣಗಳು ದಾಖಲಾಗಿರುವ ಮತ್ತು ಶಿಕ್ಷೆ ವಿಧಿಸಿರುವ ಸಂಖ್ಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ರತ್ನ ಪಂಡಿತ್ ಭೀಮಸೇನ್ ಜೋಶಿಯವರ ಜನ್ಮ ಶತಮಾನೋತ್ಸವವನ್ನು ಧಾರವಾಡದ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಂಸ್ಥೆಯು ಜೊತೆಯಾಗಿ ಆಚರಿಸುತ್ತಿದ್ದು, ಇದರ ಅಂಗವಾಗಿ ಅ.17ರ ಸಂಜೆ 5:30ಕ್ಕೆ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಾಡಿನ ಪ್ರಖ್ಯಾತ ಕಲಾವಿದ ಪಂಡಿತ್ ಗಣಪತಿ ಭಟ್ಟ ಹಾಸಣಗಿಯವರ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಲಾವಿದ ಪಂಡಿತ್ ಗಣಪತಿ ಭಟ್ಟ ಹಾಸಣಗಿಯವರ ಹಿಂದೂಸ್ತಾನಿ ಶಾಸ್ತ್ರೀಯ ಗಾಯನಕ್ಕೆ ತಬಲಾದಲ್ಲಿ ಶ್ರೀಧರ ಮಾಂಡ್ರೆ ಮತ್ತು ಹಾರ್ಮೋನಿಯಂನಲ್ಲಿ ಗುರುಪ್ರಸಾದ ಹೆಗಡೆ ಸಾಥ್ ನೀಡಲಿದ್ದಾರೆ. ಖ್ಯಾತ ಗಾಯಕ, ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಅವರ ಇವರ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕೂಡ ಇದ್ದು, ಇವರಿಗೆ ಶ್ರೀ ಗುರುರಾಜ ಹೆಗಡೆ ಆಡುಕಳ ಮತ್ತು ಸತೀಶ ಹೆಗ್ಗಾರ ತಬಲಾ ಮತ್ತು ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ. ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆ, ಇನ್ಫೋಸಿಸ್ ಫೌಂಡೇಶನ್, ಭಾರತೀಯ ಜೀವ ವಿಮಾ ನಿಗಮ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಕಿಟ್ ವಿತರಣೆ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ, ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಕಿಟ್ ವಿತರಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಆರೋಗ್ಯ ಎಲ್ಲರಿಗೂ ಮುಖ್ಯ. ಮನುಷ್ಯ ಆರೋಗ್ಯವಂತನಾದರೆ ಮಾತ್ರ ದೇಶ ಸದೃಢವಾಗಿ ಬೆಳೆದು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಿದೆ. ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಆರೋಗ್ಯ ಕ್ಷೇತ್ರಕ್ಕೆ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ದೇಶದಾದ್ಯಂತ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆದು ಕಡಿಮೆ ಬೆಲೆಯಲ್ಲಿ ಔಷಧಗಳನ್ನು ದೊರೆಯುವಂತೆ ಮಾಡಿದ್ದಾರೆ. ಜನೌಷಧಿ ಕೇಂದ್ರಗಳ ಮೂಲಕ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಜನರ ಆರೋಗ್ಯ ಸುಧಾರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಕೊರೋನಾ ಕಾರಣದಿಂದ ಸರಕಾರದಿಂದ ಅನುದಾನ ಒದಗಿಸಲು ಸದ್ಯದಮಟ್ಟಿಗೆ ಸಾಧ್ಯವಿಲ್ಲದೇ ಇರುವುದರಿಂದ ದಾನಿಗಳಿಂದ ಕಟ್ಟಡ ನಿರ್ಮಿಸಲು ಶಿಕ್ಷಣ ಸಚಿವರು ಸೂಚಿಸಿದ್ದಾರೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ನುಡಿದರು. ಅವರು ಚಿತ್ತೂರು ಸರಕಾರಿ ಹಿ.ಪ್ರಾಥಮಿಕ ಶಾಲೆಯಲ್ಲಿ ಅರ್ಚಕ ಶ್ರೀಧರ ಮಂಜ, ಹೈದರಬಾದ್ ಹೋಟೆಲ್ ಉದ್ಯಮಿ ಕೃಷ್ಣಮೂರ್ತಿ ಮಂಜ ಹಾಗೂ ಅರ್ಚಕ ನಾಗರಾಜ ಮಂಜ ಸಹೋದರರು ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿಕೊಡುತ್ತಿರುವ ರಂಗಮಂದಿರ ಹಾಗೂ ೪ ತರಗತಿ ಕೊಠಡಿಗಳಿಗೆ ಶಂಕುಸ್ಥಾಪನೆ ಸಂದರ್ಭ ಮಾತನಾಡಿದರು. ಯಾರೇ ಕೋಟ್ಯಾಂತರ ಹಣ ದುಡಿದರೂ ಅದನ್ನು ಕೊಂಡುಹೋಗಲು ಸಾಧ್ಯವಿಲ್ಲ. ಸಮಾಜಕ್ಕೆ ಅದನ್ನು ದಾನರೂಪದಲ್ಲಿ ಕೊಟ್ಟರೆ ಅದು ಚಿರಸ್ಥಾಯಿಯಾಗಿ ಉಳಿಯಲಿದೆ. ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಸಹೋದರರು ಈ ಸತ್ಯ ಅರಿತಿರುವುದರಿಂದ ಶಾಲೆಗಳ ಅಭಿವೃದ್ಧಿಗೆ ತಮ್ಮ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ. ಇವರಂತೆ ಉಳ್ಳವರು ಶಿಕ್ಷಣ ಸಂಸ್ಥೆಗಳಿಗೆ ದಾನ ನೀಡಬೇಕೆಂದರು. ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟಿನ…
