ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗುವ ವಾರ್ಷಿಕ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ದೀಪೋತ್ಸವದ ಅಂಗವಾಗಿ ವನಭೋಜನ, ಧಾತ್ರೆ ಹವನ, ಮಹಾಪೂಜೆ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ ಮತ್ತು ದೇವಳದ ಪ್ರಧಾನ ಅರ್ಚಕ ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ರಘುವೀರ ನಾಯಕ್, ಜಿ.ನರಸಿಂಹ ನಾಯಕ್, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು. ಆಡಳಿತ ಮಂಡಳಿ ಸದಸ್ಯರು, ಸಮಾಜಬಾಂಧವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ರಿ. ಅಧ್ಯಕ್ಷ ಡಾ. ಕಾಶಿನಾಥ್ ಪೈ, ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಜಿ ಬಹುಮಾನಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ವಹಿಸಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಮತ್ತು ಶಾಲೆಟ್ ಲೋಬೊ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿಯೊಬ್ಬರೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಅವಶ್ಯಕ. ಕ್ರೀಡೆಯಿಂದ ಆರೋಗ್ಯ ವೃದ್ಧಿಗೊಳ್ಳುವುದಲ್ಲದೆ ಮಾನಸಿಕವಾಗಿ ಶಕ್ತರಾಗುತ್ತೇವೆ. ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಸೌಹಾರ್ದ ಮನೋಭಾವ ಬೆಳೆಯಲು ಸಾಧ್ಯ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವಿನಾಯಕ್ ಶೆಣೈ ಹೇಳಿದರು. ಅವರು ಜಿಲ್ಲಾ ಗೃಹ ರಕ್ಷಕ ದಳ ಕಚೇರಿಯಲ್ಲಿ, ಗೃಹರಕ್ಷಕ ದಳದ ವತಿಯಿಂದ ನಡೆದ, ಜಿಲ್ಲಾ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಗೃಹರಕ್ಷಕರು ದೇಶ ಸೇವೆ, ಸಮಾಜ ಸೇವೆಯಲ್ಲಿ ತಲ್ಲೀನರಾದಂತೆ, ಕ್ರೀಡಾ ಕ್ಷೇತ್ರದಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಮುಂದೆ ಜಿಲ್ಲೆ, ರಾಜ್ಯ, ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದರು. ದೇಶ ರಕ್ಷಣೆ ಮಾಡುವ ಸೇನೆ, ಆಂತರಿಕ ಭದ್ರತೆಯನ್ನು ಕಾಪಾಡುವ ಸಿ.ಆರ್.ಪಿ.ಎಫ್ ಹಾಗೂ ಸಮಾಜದ ರಕ್ಷಣೆ ಮಾಡುವ ಆರಕ್ಷಕ ದಳಕ್ಕೆ ಸರಿಸಾಟಿಯಾಗಿ ದೇಶದೆಲ್ಲೆಡೆ ಅಗತ್ಯಕ್ಕನುಗುಣವಾಗಿ ಚುನಾವಣಾ ಸಂದರ್ಭದಲ್ಲಿ, ಯಾವುದೇ ರೀತಿಯ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ, ಸರಕಾರದಿಂದ ಕರೆ ಬಂದಾಗ, ಯಾವುದನ್ನೂ ಲೆಕ್ಕಿಸದೆ ದೇಶ ಹಾಗೂ ಸಮಾಜ ಸೇವೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಾಡದೋಣಿ ಮೀನುಗಾರರಿಗೆ ಅಕ್ಟೋಬರ್ ತಿಂಗಳಲ್ಲಿ ಬಾಕಿ ಇರುವ ಸೀಮೆಎಣ್ಣೆಯನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರಿ ಗಂಗೊಳ್ಳಿಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಕಂಚುಗೋಡು, ಉಪಾಧ್ಯಕ್ಷ ಸೂರಜ್ ಖಾರ್ವಿ ಹಾಗೂ ನಿರ್ದೇಶಕ ಚಂದ್ರ ಖಾರ್ವಿ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ ನಿರ್ದೇಶನಾಲಯಲ್ಲಿ ಮೀನುಗಾರಿಕಾ ನಿರ್ದೇಶಕ ರಾಮಾಚಾರಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಕಾಮಗಾರಿಯ ಬಗ್ಗೆ ಚರ್ಚೆ ನಡೆಸಿದ ಅವರು ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಬೇಕೆಂದು ನಿರ್ದೇಶಕರಲ್ಲಿ ಮನವಿ ಮಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಆಳ್ವಾಸ್ ಪಾರಂಪರಿಕ ಔಷಧ ಭಂಡಾರ ಮತ್ತು ಸಂಶೋಧನಾ ಕೇಂದ್ರದ (ಆತ್ಮ ರಿಸರ್ಚ ಸೆಂಟರ್) ಉನ್ನತೀಕರಿಸಿದ ನೂತನ ಪ್ರಯೋಗಾಲಯವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ ಎಂ. ಮೋಹನ್ ಆಳ್ವ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, ಈ ಸಂಶೋದನಾ ಕೇಂದ್ರದ ಮೂಲಕ ವಿವಿಧ ಔಷಧೀಯ ಸಸ್ಯಗಳ ವಿಶೇಷ ಸಂಶೋದನೆ ಮಾಡಿ ಅದರಲ್ಲಿರುವ ರಾಸಾಯನಿಕ ಸಂಘಟನೆಗಳನ್ನು ವಿಘಟಿಸಿ, ಚಿಕಿತ್ಸೆಗೆ ಉಪಯೋಗಿಸುವ ಅಂಶಗಳನ್ನು ಸಂಗ್ರಹಿಸಿ, ಔಷಧಗಳ ಮೂಲಕ ಜನ ಸಾಮಾನ್ಯರಿಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಆತ್ಮ ರಿಸರ್ಚ ಸೆಂಟರ್ನ ನಿರ್ದೇಶಕ ಡಾ ಸುಬ್ರಮಣ್ಯ ಪದ್ಯಾಣ ಸ್ವಾಗತಿಸಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ ಸಜಿತ್ ಎಂ, ಆತ್ಮ ರಿಸರ್ಚ ಸೆಂಟರ್ನ ಸಂಯೋಜಕರಾದ ಡಾ ಸೌಮ್ಯ ಸರಸ್ವತಿ, ಡಾ ರೋಹನ್ ಫೆರ್ನಾಂಡೀಸ್, ಡಾ ಅಂಜಲಿ ಕುಮಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ತೂರಾಡಿಕೊಂಡಿದ್ದ ನಾವುಂದ ಗ್ರಾಮದ ಚಾತನಕೆರೆ ನಿವಾಸಿ ಮಹಮ್ಮದ್ ಸಿಯಾಬ್(20)ನನ್ನು ಬೈಂದೂರು ಪಿಎಸ್ಐ ಪವನ್ ನಾಯಕ್ ವಶಕ್ಕೆ ತೆಗೆದುಕೊಂಡಿದ್ದಾರೆ. ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪವರ್ ಜಿಮ್ ಮತ್ತು ಫಿಟ್ನೆಸ್ ಸೆಂಟರ್ನ ಶಾಖೆ ಉಪ್ಪುಂದದ ವೈಶಾಲಿ ಕಟ್ಟಡದಲ್ಲಿ ಬುಧವಾರ ಶುಭಾರಂಭಗೊಂಡಿತು. ಉಪ್ಪುಂದ ಅಶ್ವಿನಿ ಕ್ಲಿನಿಕ್ ವೈದ್ಯರಾದ ಡಾ. ಪ್ರವೀಣ ಕುಮಾರ್ ಶೆಟ್ಟಿ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ಅವರು ದೇಹದ ಆರೋಗ್ಯ ಮತ್ತು ಮಾನಸಿಕ ಸ್ಥಿರತೆ ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ. ಅತ್ಯಂತ ಒತ್ತಡದ ಬದುಕಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಅತ್ಯಗತ್ಯ ಎಂದರು. ದೀಪ ಬೆಳಗಿಸಿ ಮಾತನಾಡಿದ ಕಟ್ಟಡದ ಮಾಲಿಕ ಮತ್ತು ಉದ್ಯಮಿ ವಾಜುರಾಜ್ ಶೆಟ್ಟಿ, ಬೈಂದೂರು ತಾಲೂಕಿನಲ್ಲಿ ಪ್ರಸಿದ್ದಿಗೊಂಡಿರುವ ಪವರ್ ಮಲ್ಟಿ ಜಿಮ್ ಶಾಖೆ ಉಪ್ಪುಂದದಲ್ಲಿ ಆರಂಭವಾಗಿರುವುದ ಇಲ್ಲಿನ ಯುವಜನತೆಗೆ ಉತ್ತಮ ಅವಕಾಶವಾಗಿದೆ. ಸದೃಡ ದೇಹ ಹಾಗೂ ಆರೋಗ್ಯ ಜಾಗೃತಿಗಾಗಿ ನಿತ್ಯ ವ್ಯಾಯಾಮ ಅತ್ಯಗತ್ಯ ಎಂದರು. ಪತ್ರಕರ್ತ ಅರುಣ ಕುಮಾರ್ ಶಿರೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಆರ್.ಎಸ್ ವೆಂಚರ್ಸ್ ಎಂಡಿ ರಾಜೀವ್ ಕುಮಾರ್, ಪಾಲುದಾರ ಸಾಜು ಉಪಸ್ಥಿತರಿದ್ದರು. ಪವರ್ ಜಿಮ್ ಮತ್ತು ಫಿಟ್ನೆಸ್ ಸೆಂಟರ್ನ ವಿಘ್ನೇಶ್ ಸ್ವಾಗತಿಸಿದರು. ಶಿಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಆರ್.ಏನ್. ಶೆಟ್ಟಿ ಪಿಯು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ಶಿಸ್ತು ಸಂಯಮವನ್ನು ಅಳವಡಿಸಿಕೊಳ್ಳಬೇಕು, ಪದವಿ ಜೊತೆಗೆ ಕ್ರಿಯಾಶೀಲರಾಗಿರುವುದನ್ನು ಕಲಿಯಬೇಕು. ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಶ್ರಮ ತ್ಯಾಗ ಪ್ರಾರ್ಥನೆ ಪ್ರಯತ್ನ ಇವನ್ನು ಸಮನಾಗಿ ಪ್ರಯೋಗಿಸಿದಾಗ ಯಶಸ್ಸು ಲಭ್ಯ ” ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ ಮಾತನಾಡಿ, ವಿಧ್ಯಾರ್ಥಿಗಳು ಜೀವನದಲ್ಲಿ ಉತ್ತಮವಾದ ಮೌಲ್ಯಗಳನ್ನು ಅಳವಡಿಸಿಕೊಂಡು ಗುರುಗಳು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ಹೇಳಿದರು. ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾಮಾತನಾಡಿ, ವಿಧ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಕಾಣಲು ಪೋಷಕರ ಪಾತ್ರ ಶಿಕ್ಷಕರಷ್ಟೇ ಮಹತ್ವದ್ದಾಗಿದೆ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 1972ರಿಂದ ಭಜನಾ ಸೇವೆ ಸಲ್ಲಿಸುತ್ತಾ ಬಂದಿರುವ ಶ್ರೀ ಲಕ್ಷ್ಮೀ ವೆಂಕಟೇಶ ಮಹಿಳಾ ಭಜನಾ ಮಂಡಳಿ ತನ್ನ ಸುವರ್ಣ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಿತು. ಮಂಡಳಿಯ ಸದಸ್ಯೆಯರಿಂದ ಭಜನೆ, ಹೂವಿನ ಪೂಜೆ, ದೇವರಿಗೆ ಸುವರ್ಣ ಸಮರ್ಪಣೆ, ಭೋಜನ ಪ್ರಸಾದ ಮುಂತಾದ ಸೇವೆಗಳು ಜರಗಿದವು. ವಿನಯಾ ವಿ. ಶೆಣೈ ಅವರ ಮುಂದಾಳತ್ವದಲ್ಲಿ ಈ ಭಜನಾ ಮಂಡಳಿ ಹತ್ತು ಹಲವು ಊರುಗಳಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ಭಜನಾ ಸೇವೆ ಸಲ್ಲಿಸಿ ಜನಪ್ರಿಯತೆಗಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ ಅವರು ಈ ವರ್ಷದ ತಿರುಗಾಟದಿಂದ ರಂಗಸ್ಥಳವೇರಲಿದ್ದಾರೆ. ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್ ನಿರ್ಗಮಿಸಿದ್ದಾರೆ. ಕೆಲ ತಿಂಗಳ ಹಿಂದೆ ಜನ್ಸಾಲೆ ಪೇರ್ಡೂರು ಮೇಳದಲ್ಲಿ ಇರುವುದಿಲ್ಲ ಎಂಬ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಸ್ವತಃ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಮೇಳದ ನೂತನ ಪ್ರಸಂಗದ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರು ನಮೂದಿಸಲಾಗಿತ್ತು. ಆದರೆ ಬಳಿಕ ನಡೆದ ಬೆಳವಣಿಗೆಯಲ್ಲಿ ರಾಘವೇಂದ್ರ ಆಚಾರ್ಯ ಅವರು ಮೇಳದಲ್ಲಿ ಮುಂದುವರಿಯಲು ನಿರಾಕರಿಸಿದ್ದಾರೆನ್ನಲಾಗಿದೆ. ನ. 30ರಿಂದ ಪೆರ್ಡೂರು ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ. ಪವನ್ ಕಿರಣಕೆರೆ ಅವರ ‘ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಪೆರ್ಡೂರು ಮೇಳ ಬಿಟ್ಟ ಬಳಿಕ ಯಾವುದೇ ಮೇಳ ತಿರುಗಾಟ ಮಾಡಿರಲಿಲ್ಲ ಈಗ ಕರುಣಾಕರ ಶೆಟ್ಟಿ ಅವರು ಮತ್ತೆ ಮೇಳಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ. – ಸುಬ್ರಹ್ಮಣ್ಯ ಧಾರೇಶ್ವರ, ಭಾಗವತರು ಹಗಲು ಹೊತ್ತಿನಲ್ಲಿ ಕೂಡ ಗಾನವೈಭವ,…
