Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ವಿಶ್ವಕರ್ಮ ಯುವಕ ಸಂಘ ರಿ ಬೈಂದೂರು ಇವರ ಮೂರನೇ ವರ್ಷದ ಅಂಗವಾಗಿ ಸಂಘದ ನೂತನ ಕಛೇರಿ ಉದ್ಘಾಟನಾ ಸಮಾರಂಭ ಭಾನುವಾರ ಬೈಂದೂರು ಪಟವಾಲ್ ಕಟ್ಟಡದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನ ಇದರ ಮಾಜಿ ಆಡಳಿತ ಮೊಕ್ತೇಸರರು ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಶ್ವಕರ್ಮ ಒಕ್ಕೂಟ ರಿ ಇದರ ಗೌರವಾಧ್ಯಕ್ಷ ಯು.ಕೆ.ಎಸ್ ಸೀತಾರಾಮ ಆಚಾರ್ಯ ಸಂಘದ ಕಛೇರಿ ಉದ್ಘಾಟಿಸಿ ಮಾತನಾಡಿ, ಯುವ ಸಂಘಟನೆಯ ಮೂಲಕ ಹೆಚ್ಚು ಹೆಚ್ಚು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು. ಪ್ರತಿಯೊಂದಕ್ಕೂ ಸಂಘಟನೆ ಬಹಳ ಮುಖ್ಯ ಸಂಘಟನೆ ಮೂಲಕ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಅಲ್ಲದೇ ಸಂಘಟನೆಗಳು ನಿರ್ದಿಷ್ಟ ಗುರಿ ಉದ್ದೇಶ ಹೊಂದಿದ್ದರೆ ಯಶಸ್ಸು ಪಡೆಯಲು ಸಾಧ್ಯ ಎಂದರು. ಗೌರವ ಉಪಸ್ಥಿತಿಯಲ್ಲಿ ಬೈಂದೂರು ಪೊಲೀಸ್ ಎಸೈ ಪವನ್ ನಾಯ್ಕ್ ಮಾತನಾಡಿ, ಸಮಾಜದ ಬಲವರ್ಧನೆಯೊಂದಿಗೆ ಪರಸ್ಪರ ಪ್ರೀತಿ ಬೆಸೆಯುವ ಉದ್ದೇಶ ಸಂಘಟನೆಯಿಂದ ಈಡೇರಿಸಲು ಸಾಧ್ಯ. ಸಮಾಜದ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳ ಹದಿಹರೆಯದ ಆರಂಭ ಹಂತದಲ್ಲಿ ಆಗುವ ಬದಲಾವಣೆಗಳು ಅವರ ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರುತ್ತವೆ. ಆನ್‌ಲೈನ್ ಆಟ, ಜಾಲತಾಣ ಜುಗಾರಿ ಮೊದಲಾದವುಗಳು ಮಕ್ಕಳಲ್ಲಿ ವ್ಯಸನಗಳಾಗಿ ಬೆಳೆಯುತ್ತಿರುವುದು ಈಚಿನ ದಿನಗಳ ವಿದ್ಯಮಾನ ಎಂದು ಉಡುಪಿಯ ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವಿಜ್ಞಾನಿ ನಾಗರಾಜ ಮೂರ್ತಿ ಹೇಳಿದರು. ತ್ರಾಸಿಯ ಡಾನ್ ಬಾಸ್ಕೊ ಸೀನಿಯರ್ ಸೆಕೆಂಡರಿ ಶಾಲೆಯ ಸ್ವಾಸ್ಥ್ಯ ವಿಭಾಗದ ಕ್ಲಬ್ ಆಫ್ ಲೈಫ್ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಆಟಗಳ ಅವಧಿ ನಿರ್ವಹಣೆ ಮೂಲಕ ಸ್ವನಿಯಂತ್ರಣ ಸಾಧಿಸಿ, ಆನ್‌ಲೈನ್ ವೇದಿಕೆಗಳಿಗೆ ಬಲಿಯಾಗುವುದನ್ನು ತಡೆಗಟ್ಟುವ ವಿವಿಧ ವಿಧಾನಗಳನ್ನು ವಿವರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲ ಫಾ. ಮ್ಯಾಕ್ಸಿಮ್ ಡಿಸೋಜ, ಕೋವಿಡ್-19 ಕುಸಿತದ ಬಳಿಕ ಭೌತಿಕ ತರಗತಿಗಳ ಆರಂಭದೊಂದಿಗೆ ಮಕ್ಕಳಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಅವುಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಾನಸಿಕ ಆರೋಗ್ಯ ಪರಿಣತರು ಮುಂದಿನ ವರ್ಷಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಶೋಷಿತರ ಪರವಾಗಿ ಸಮಾಜದಲ್ಲಿ ಧ್ವನಿ ಎತ್ತಿದವರು, ಅವರ ಕಾದಂಬರಿಯಲ್ಲೂ ಇದರ ಬಗ್ಗೆ ಬೆಳಕು ಚೆಲ್ಲುವುದರ ಮೂಲಕ ಸಮಾಜದ ಅಂಕು ಡೊಂಕುಗಳಿಗೆ ತಿದ್ದುವ ಪ್ರಯತ್ನ ಮಾಡಿದ್ದಾರೆ. ಧನಾತ್ಮಕ ಚಿಂತನೆ, ಪರಿಸರದ ಬಗ್ಗೆ ಕಾಳಜಿ, ಮಾನವೀಯ ಮೌಲ್ಯಗಳನ್ನು ಒಳಗೊಂಡ ಕಾರಂತರು ವಿಶ್ವಮಾನವ ಸಂದೇಶ ಜಗತ್ತಿಗೆ ಸಾರಿದವರು ಅದರಂತೆ ಬದುಕಿದ ಅವರ ಬದುಕೆ ನಮಗೆಲ್ಲ ಮಾದರಿ ಎಂದು ಉಡುಪಿ ಜಿಲ್ಲಾ ಕ.ಸಾ.ಪ ನಿಕಟ ಪೂರ್ವಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ17ನೇ ವರುಷದ ಸಂಭ್ರಮದ ಸಾಹ್ಯಿತ್ಯಿಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ಎಂಟನೇ ದಿನದ ಕಾರಂತ ಚಿಂತನ ಹಾಗೂ ನೆನಪು ಫೌಂಡೇಶನ್ ರಿ. ಸಾಸ್ತಾನ ಇವರಿಂದ ಡಾ. ರಾಜ್ ಗಾನಾಮೃತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಫಿಟ್ ಇಂಡಿಯಾ ಅಭಿಯಾನಕ್ಕೆ ಪ್ರಧಾನಮಂತ್ರಿ ಕರೆಕೊಟ್ಟಿದ್ದು ಈ ಮೂಲಕ ಎಲ್ಲರೂ ಸದೃಢರಾಗಬೇಕಾದ ಅಗತ್ಯವನ್ನು ತಿಳಿಸಲಾಗಿದೆ. ಉತ್ತಮ ಆರೋಗ್ಯದೊಂದಿಗೆ ಜೀವನ ನಡೆಸುವುದು ಬಹುಮುಖ್ಯವಾದುದು ಎಂದು ಕುಂದಾಪುರ ಸಹಾಯಕ ಕಮಿಷನರ್ ಕೆ. ರಾಜು ಹೇಳಿದರು. ಯುವ ಮೆರಿಡಿಯನ್ ಸಮೂಹ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಕುಂದಾಪುರ ಸೈಕ್ಲಿಂಗ್ ಕ್ಲಬ್ ಸಹಯೋಗದಲ್ಲಿ ಭಾನುವಾರ ನಡೆದ ‘ಯುವ ಸೈಕ್ಲೊತಾನ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೈಕಲ್ ಜಾಥಾಕ್ಕೆ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಯುವ ಮೆರಿಡಿಯನ್ ಸಂಸ್ಥೆ ಆಡಳಿತ ಪಾಲುದಾರರಾದ ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಯುವ ಸಮುದಾಯವನ್ನು ಪಿಟ್ನೆಸ್’ನತ್ತ ಸೆಳೆಯುವಲ್ಲಿ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಕೊರೋನಾದಿಂದ ಒಂದೂವರೆ ವರ್ಷಗಳಿಂದ ಜನರು ಫಿಟ್ನೆಸ್ಸಿನಿಂದ ದೂರವಿದ್ದು ಅವರನ್ನು ಮತ್ತೆ ಆರೋಗ್ಯ ಕಾಳಜಿಯತ್ತ ಸೆಳೆಯುವ ಜೊತೆಗೆ ಮಾನಸಿಕವಾಗಿ, ದೈಹಿಕವಾಗಿ ಸದೃಢರನ್ನಾಗಿಸಿ ಫಿಟ್ನೆಸ್ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದರು. ಕುಂದಾಪುರ ನಗರದಲ್ಲಿ ಸಂಚರಿಸಿದ ಸೈಕಲ್ ಜಾಥಾ ಕಾಳಾವರದ ಯುವ ಮೆರಿಡಿಯನ್ ಅಮ್ಯೂಸ್ಮೆಂಟ್ ಪಾರ್ಕ್ ತನಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸುಮುಖ ಕಾಂಪ್ಲೆಕ್ಸ್’ನ ನೆಲಮಹಡಿಗೆ ಸ್ಥಳಾಂತರಗೊಂಡ ರಿಶಾ ಡಯಾಗ್ನೋಸ್ಟಿಕ್ ಸೆಂಟರ್ ಕಛೇರಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವೈದ್ಯ ಡಾ. ಪ್ರವೀಣ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಬೈಂದೂರು ರೆಡ್ ಕ್ರಾಸ್ ಅಧ್ಯಕ್ಷರಾದ ನಿತಿನ್ ಶೆಟ್ಟಿ, ಕಾರ್ಯದರ್ಶಿ ಮನೋಹರ್ ಶೆಟ್ಟಿ, ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಪುರುಷೋತ್ತಮ್ ದಾಸ್, ನಾಗರಾಜ್ ಹುಬ್ಬೆರಿ, ರಿಶಾ ಡಯಾಗ್ನೋಸ್ಟಿಕ್’ನ ರಮೇಶ್ ಜೋಗಿ ಹಳಗೇರಿ, ಮೊದಲಾದವರು ಉಪಸ್ಥಿತರಿದ್ದರು. ಉಚಿತ ಮಧುಮೇಹ ಹಾಗೂ ರಕ್ತದೋತ್ತಡ ತಪಾಸಣಾ ಶಿಬಿರದ ಪ್ರಯೋಜನವನ್ನು 80ಕ್ಕೂ ಅಧಿಕ ಮಂದಿ ಪಡೆದುಕೊಂಡರು. ಡಾ. ಪಲ್ಲವಿ ಶೆಟ್ಟಿ ಶಿಬಿರವನ್ನು ನಡೆಸಿದರು. ಶಿಕ್ಷಕ ಸುಬ್ರಹ್ಮಣ್ಯ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವರಾತ್ರಿ ಪ್ರಯುಕ್ತ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರದ ಸೂಚನೆಯಂತೆ ದಿನಾಂಕ 10-10-2021 ರಿಂದ 14-10-2021 ವರೆಗೆ ಉಡುಪಿ ಜಿಲ್ಲೆಯಲ್ಲಿ ಕೊರೋನ ಕಾಯಿಲೆ ಸಂಪೂರ್ಣ ನಿಯಂತ್ರಣ ಮಾಡಲು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕಾ ವ್ಯವಸ್ಥೆ ಮಾಡಲಾಗಿದೆ. ಲಸಿಕಾ ಅಭಿಯಾನದಲ್ಲಿ 18ವರ್ಷ ಮೇಲ್ಪಟ್ಟವರಲ್ಲಿ ಕೊವಿಡ್ ಲಸಿಕೆ ಪಡೆಯದವರಿಗೆ ಪ್ರಥಮ ಡೋಸ್ ಲಸಿಕೆ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಕೊವಿಶೀಲ್ ಪ್ರಥಮ ಡೋಸ್ ಪಡೆದು 84 ದಿವಸ ದಾಟಿದವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಕೊವ್ಯಾಕ್ಸಿನ್ ಪ್ರಥಮ ಡೋಸ್ ಪಡೆದು 28 ದಿವಸ ದಾಟಿದವರು ಕೆವಿಡ್ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಕೊವಿಡ್ ಲಸಿಕೆ ಪಡೆದ ದಿನಾಂಕ ನೆನಪಿಲ್ಲದಿದ್ದರೆ, ಪ್ರಥಮ ಡೋಸ್ ಪಡೆದ ಕೋವಿಡ್ ಲಸಿಕಾ ಕೇಂದ್ರಕ್ಕೆ/ಅಥವಾ ಅದಕ್ಕೆ ಸಂಬಂಧಪಟ್ಟ ಆಸ್ಪತ್ರೆಗೆ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ನೋಂದಿಗೆ ಬಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಪತ್ರಕರ್ತ, ಕುಂದಪ್ರಭ ಸಂಪಾದಕ ಯು. ಎಸ್. ಶೆಣೈ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪಿ.ಆರ್. ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಜರುಗಿದ ರಾಜ್ಯ ಮಟ್ಟದ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಸಂಸದ ಬಿ. ವೈ. ರಾಘವೇಂದ್ರ, ಎಂಎಲ್‌ಸಿ ಆಯನೂರು ಮಂಜುನಾಥ, ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ಏಷ್ಯಾ ವಿಭಾಗದ ಸಂಚಾಲಕ ಎಚ್. ಬಿ. ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್, ಕರ್ನಾಟಕ ಕಾರ್ಯನಿರ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿ ಜೆ.ಸಿ ಲೋಕೇಶ್, ಶಿವಮೊಗ್ಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ನವಭಾರತ ಪತ್ರಿಕೆಯ ಮೂಲಕ ವೃತ್ತಿ ಜೀವನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪುಸ್ತಕಗಳು ಜ್ಞಾನದ ದೀವಿಗೆಗಳಂತೆ. ಅವುಗಳ ಓದಿನಿಂದಲೇ ಉತ್ತಮ ಹವ್ಯಾಸ ರೂಡಿಸಿಕೊಳ್ಳಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಶಾಲಾ ಗ್ರಂಥಾಲಯಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಂ. ಮುಂದಿನಮನಿ ಹೇಳಿದರು. ಅವರು ತಾಲೂಕಿನ ಸ.ಹಿ.ಪ್ರಾ ಶಾಲೆ ಹಿಂದೂಸ್ತಾನಿ ನಾಗೂರಿನಲ್ಲಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ‘ಪುಸ್ತಕ ಜೋಳಿಗೆ’ ಕಾರ್ಯಕ್ರಮಕ್ಕೆ ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶಾಂತಾ ಅವರಿಂದ ಪುಸ್ತಕ ಪಡೆಯುವುದರೊಂದಿಗೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿಗಳ ಪಾಲಕರು, ಸಾರ್ವಜನಿಕರು ಹಾಗೂ ದಾನಿಗಳಿಂದ ಪುಸ್ತಕಗಳನ್ನು ದಾನ ಪಡೆದು ಗ್ರಂಥಾಲಯಗಳಲ್ಲಿ ಶೇಖರಿಸಿ ಮಕ್ಕಳಿಗೆ ನೀಡುವುದರಿಂದ ಅದರ ಸದುಪಯೋಗ ಆಗಲಿದೆ ಎಂದವರು ತಿಳಿಸಿದರು. ಶಾಲಾ ವಾಹನದ ಮೂಲಕ ನಾಗೂರಿನ ಸುತ್ತಲು ಜಾಥಾ ನಡೆಸಿ ಪಾಲಕರಿಂದ, ಸಾರ್ವಜನಿಕರಿಂದ ಪುಸ್ತಕಗಳನ್ನು ಪಡೆಯಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವೀಂದ್ರ ಶಾನುಭಾಗ್, ಎಸ್.ಡಿ.ಸಿ ಅಧ್ಯಕ್ಷರಾದ ಮಹಮ್ಮದ್ ರಫೀಕ್, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾದ ಡಾ. ಪ್ರವೀಣ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ಸದಾಶಿವ ಶಾನುಭಾಗ್ ಸಹಕಾರ ನೀಡಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ಉದ್ಘಾಟಿಸಿದರು. ರಾಜ್ಯದಲ್ಲಿ ಗೃಹ ಇಲಾಖೆವತಿಯಿಂದ 2025 ರೊಳಗೆ 10000 ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ ಹಾಗೂ 140 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ರೈಮ್ ಸೀನ್ ಅಧಿಕಾರಿಗಳ ನೇಮಕಾತಿ ನಡೆಯುತ್ತಿದೆ. ಆಧುನಿಕ ತಂತ್ರಜ್ಞಾನಗಳನ್ನು ಇಲಾಖೆಯಲ್ಲಿ ಅಳವಡಿಸಿದ್ದು, ಸೈಬರ್ ಅಪರಾಧಗಳನ್ನು ಪತ್ತೆ ಮಾಡಲು ಬ್ಯಾಂಕ್ ಗಳೊಂದಿಗೆ ಒಪ್ಪಂದ ಆಗಿದ್ದು,ಹಣ ಕಳೆದುಕೊಂಡು ವ್ಯಕ್ತಿ 1-2 ಗಂಟೆಯೊಳಗೆ ದೂರು ನೀಡಬೇಕು , ತಕ್ಷಣದಲ್ಲಿ ಲಿಖಿತ ದೂರು ನೀಡಲು ಸಾಧ್ಯವಾಗದಿದ್ದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ದೂರು ಸಲ್ಲಿಸಬಹುದು,ಸಾರ್ವಜನಿಕರು ಪೊಲೀಸ್ ಇಲಾಖೆಯ ನೆರವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಸಮುದ್ರದಂತೆ ಅಗೆದಷ್ಟು ಮುತ್ತು ಕಾಣಿಸುವಂತ ವ್ಯಕ್ತಿತ್ವ, ನಮ್ಮ ಊಹೆಗೆ ನಿಲುಕದಂತವರು. ಪರಿಸರವನ್ನೇ ಶಾಲೆ ಎಂದು ಪರಿಸರದ ಮಹತ್ವವನ್ನು ಸಮಾಜಕ್ಕೆ ತಿಳಿಸಿದ ಕಾರಂತರು , ಕೋಟ ಅಂತಹ ಚಿಕ್ಕ ಊರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿ ನಮ್ಮೂರಿಗೆ ಹೆಮ್ಮೆ ತಂದ ಕಾರಂತರ ನೆನಪಿನಲ್ಲಿ ಸಾಹಿತ್ಯಿಕ-ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಿ ಕಾರಂತ ಥೀಮ್ ನಿರ್ಮಾಣ ಮಾಡಿರುವುದು ಶ್ಲಾಘನೀಯ ಕೆಲಸ ಎಂದು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಪ್ರಕಾಶ್ ಭಟ್ ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ)ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17ನೇ ವರುಷದ ಸಂಭ್ರಮದ ಸಾಹ್ಯಿತ್ಯಿಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ಏಳನೇ ದಿನದ ಕಾರಂತ ಚಿಂತನ ಹಾಗೂ ಗಮ್ಜಲ್ ಕುಂದಾಪ್ರ ಕನ್ನಡ ಹರಟೆ ತಂಡದವರಿಂದ ಹರಟೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೋಟತಟ್ಟು ಗ್ರಾಮ…

Read More