ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೋಲಿ ರೋಜರಿ ಚರ್ಚ್ ಸ್ಥಾಪನೆಯಾಗಿ 450 ವರ್ಷಗಳಾಗಿರುವುದು ವಿಶೇಷ ಸಂದರ್ಭ. ನಾಲ್ಕು ಶತಮಾನದ ಸಾರ್ಥಕ ಸೇವೆಯ ಇತಿಹಾಸವನ್ನು ಈ ಧರ್ಮ ಕೇಂದ್ರ ಹೊಂದಿದೆ. ಭಕ್ತರಾದ ನಾವುಗಳು ನಿಷ್ಠೆ, ಪ್ರಾಮಾಣಿಕತೆ, ದೇವರ ಇಚ್ಛೆಯಂತೆ ಸತ್ಕಾರ್ಯ, ತ್ಯಾಗ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಮಾತೆ ಮಾರಿಯಮ್ಮವನರ ಸೇವೆಯನ್ನು ಮಾಡುವ ಮೂಲಕ ಜೀವನವನ್ನು ಸಾಕಾರಗೊಳಿಸಿಕೊಳ್ಳುವ ಎಂದು ಶಿವಮೊಗ್ಗ ಬಿಷಪ್ ಡಾ. ಪ್ರಾನ್ಸಿಸ್ ಸೆರಾವೋ ಎಸ್.ಜೆ. ಆಶೀರ್ವಚಿಸಿದರು. ಅವರು ಕುಂದಾಪುರದ ಹೋಲಿ ರೋಜರಿ ಚರ್ಚ್ 450ನೇ ವರ್ಷಾಚರಣೆಯ ಸಮಾರಂಭವನ್ನು ಉದ್ಘಾಟಿಸಿ, ಸಂದೇಶ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಉಡುಪಿ ಬಿಷಪ್ ಡಾ| ಜೆರಾಲ್ಡ್ ಐಸಾಕ್ ಲೋಬೋ ಆಶೀರ್ವಚಿಸಿದರು. ಸಮ್ಮಾನಈ ಸಂದರ್ಭ ಉಡುಪಿ ಬಿಷಪ್ ಡಾ| ಜೆರಾಲ್ಡ್ ಐಸಾಕ್ ಲೋಬೋ, ಶಿವಮೊಗ್ಗ ಡಾ. ಪ್ರಾನ್ಸಿಸ್ ಸೆರಾವೋ ಎಸ್.ಜೆ., ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್, ಈ ಚರ್ಚ್‌ನಲ್ಲಿ ಧರ್ಮಗುರುಗಳು, ಸೈಂಟ್ ಮೇರಿಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದವರು, ಧರ್ಮ ಭಗಿನಿಯರು, ದಾನಿಗಳನ್ನು ಸಮ್ಮಾನಿಸಲಾಯಿತು. ಸ್ಮರಣ ಸಂಚಿಕೆ ಬಿಡುಗಡೆಬರ್ನಾಡ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮದ ನರಿಕೊಡ್ಲುವಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಶುಕ್ರವಾರ ಜರುಗಿತು. ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ನೂತನ ಗೃಹದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಗೋವಿಂದ ಬಾಬು ಪೂಜಾರಿ ಅವರು ದೇವರು ಮೆಚ್ಚುವ ಕಾರ್ಯ ಮಾಡಿದ್ದಾರೆ. ಅವರಿಂದ ಇನ್ನಷ್ಟು ಜನಪರ ಕಾರ್ಯಗಳಾಗಲಿ ಎಂದು ಶುಭಹಾರೈಸಿದರು. ಗೋವಿಂದ ಬಾಬು ಪೂಜಾರಿ ಹಾಗೂ ಮಾಲತಿ ಗೋವಿಂದ ಪೂಜಾರಿ ಅವರು ಸವಿತಾ ಅವರಿಗೆ ಮನೆಯ ಬಿಗದ ಕೈ ಹಸ್ತಾಂತರಿಸಿದರು. ಬಳಿಕ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ಐದನೇ ಮನೆ ಇದಾಗಿದೆ. ಟ್ರಸ್ಟ್ ಮೂಲಕ ನಿರಂತರವಾಗಿ ಸೇವಾ ಕಾರ್ಯಗಳನ್ನು ಮಾಡುತ್ತಾ ಬರಲಾಗುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತುಳುನಾಡಿನ ಪ್ರತಿಯೊಂದು ಆರಾಧನೆಯ ಹಿಂದೆ ವೈಜ್ಞಾನಿಕ ಮಹತ್ವ ಇದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್ ಹೇಳಿದರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ತುಳು ಸಂಘದ ವತಿಯಿಂದ ನಡೆದ ‘ಗೇನದ ಬೊಲ್ಪು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಳುನಾಡಿನಲ್ಲಿ ಸತ್ಯರಾಧನೆ ಹಾಗೂ ನಾಗರಾಧನೆ ಮಾನಸಿಕ ಮತ್ತು ದೈಹಿಕ ವ್ಯಾಧಿಗಳನ್ನು ಪರಿಹರಿಸುವ ಸಲುವಾಗಿ ಬೆಳೆದು ಬಂದಿದೆ. ಮೂಲ ತುಳುವರ ಪ್ರತಿಯೊಂದು ಆರಾಧನೆಯು ಪ್ರಕೃತಿಯ ಸಂರಕ್ಷಣೆ ಹಾಗೂ ವೈಜ್ಞಾನಿಕ ಹಿನ್ನಲೆಯನ್ನು ಹೊಂದಿದೆ. ಆಧುನಿಕ ಕಾಲಘಟ್ಟದಲ್ಲಿ ಜೀರ್ಣೋದ್ಧಾರದ ಹೆಸರಿನಲ್ಲಿ ಬನಗಳನ್ನು ಕಾಂಕ್ರೀಟಿಕರಣಗೊಳಿಸುತ್ತಿದ್ದು ಇದರಿಂದ ಸ್ಥಳದ ಪಾವಿತ್ರ್ಯತೆ ನಶಿಸುತ್ತಿದೆ. ಯಾವುದೇ ಬದಲಾವಣೆಗಳು ಮೂಲ ವ್ಯವಸ್ಥೆಗೆ ಧಕ್ಕೆಯಾಗಬಾರದೆಂದರು. ದೈವರಾಧನೆಯು ಭಕ್ತಿಯೊಂದಿಗೆ ಅವಿಭಕ್ತ ಕುಟುಂಬದ ಮೌಲ್ಯಗಳನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ತುಳು ಸಂಸ್ಕೃತಿ ಹಾಗೂ ಭಾಷೆಗೆ ಕೃತಜ್ಞರಾಗಿರಬೇಕು ಎಂದು ಹೇಳಿದರು. ಇನ್ನೋರ್ವ ಅತಿಥಿ ತುಳು ಬರಹಗಾರ್ತಿ ರಾಜಶ್ರೀ ಟಿ. ರೈ ಪೆರ್ಲ ತುಳುನಾಡಿನ ಕೃಷಿ ಬದುಕಿನ ಕುರಿತು ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್ ಟಿ ಎ(NTA) ನಡೆಸಲ್ಪಡುವ ಜೆಇಇ ಬಿ.ಆರ್ಕ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಟಿ. ದೇವಾಡಿಗ ಅವರು 99.7 ಪರ್ಸಂಟೈಲ್(ಆರ್ಕಿಟೆಕ್ಚರ್ ಡ್ರಾಯಿಂಗ್) ನೊಂದಿಗೆ ರಾಷ್ಟ್ರ ಮಟ್ಟದಲ್ಲಿ 658ನೇ ರ‍್ಯಾಂಕ್ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರವೃಂದ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾಣಿಜ್ಯ ಬ್ಯಾಂಕ್‌ಗಳಲ್ಲಿ ನಾಗರೀಕರು ವ್ಯವಹರಿಸಲು ಬಂದಾಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಿಗುವ ಸೌಲಭ್ಯಗಳ ನಿಖರ ಮಾಹಿತಿಯನ್ನು ಅವರುಗಳಿಗೆ ಒದಗಿಸುವುದರೊಂದಿಗೆ ಗರಿಷ್ಠ ಸೇವೆಯನ್ನು ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ಬ್ಯಾಂಕ್ ಗಳಲ್ಲಿ ವ್ಯವಹರಿಸಲು ಬಂದಾಗ ಬ್ಯಾಂಕಿಂಗ್ ಕಾರ್ಯವ್ಯಾಪ್ತಿಯಲ್ಲಿ ಬರುವ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅವರಿಗೆ ಒದಗಿಸಿ, ಬ್ಯಾಂಕಿಂಗ್ ಕ್ಷೇತ್ರದ ಸೇವೆಗಳ ಬಗ್ಗೆ ಅವರು ವಿಶ್ವಾಸ ಹೊಂದುವಂತೆ ಮಾಡಿ, ಗರಿಷ್ಠ ಆರ್ಥಿಕ ಚಟುವಟಿಕೆಯನ್ನು ಬ್ಯಾಂಕ್ ಗಳ ಮೂಲಕ ನಿರ್ವಹಿಸುವಂತೆ ಮಾಡುವ ಮೂಲಕ ತಮ್ಮ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸಬೇಕು ಎಂದರು. ಬ್ಯಾಂಕ್ ಗಳಲ್ಲಿ ಜನಸಾಮಾನ್ಯರಿಗೆ ಸರಿಯದ ಸೇವಾ ಮಾಹಿತಿಗಳು ಒದಗಿಸುತ್ತಿಲ್ಲ ಎಂಬ ದೂರುಗಳು ಸಹ ಕೇಳಿಬರುತ್ತಿವೆ ಇದಕ್ಕೆ ಆಸ್ಪದ ನೀಡದೇ ಉತ್ತಮ ಸೇವೆಯನ್ನು ಒದಗಿಸಲು ಮುಂದಾಗಬೇಕು ಎಂದರು. ಜಿಲ್ಲೆಯಲ್ಲಿ ಸಾಲ ಠೇವಣಿ ಅನುಪಾತವು 2020…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳೆಯರು ತಾವು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಪುರುಷರ ಯಾವುದೇ ಕಿರುಕುಳಕ್ಕೆ ಒಳಗಾಗದೇ ಗೌರವಯುತವಾಗಿ ಕೆಲಸ ಮಾಡುವುದು ಮಹಿಳೆಯ ಮೂಲಭೂತ ಹಕ್ಕು ಎಂದು ವಿಶಾಖಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಸ್ವಾತಂತ್ರ್ಯೋತ್ಸವದ 75 ನೇ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಡೆದ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳದ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲಾ ವಲಯಗಳಲ್ಲಿ ಪುರುಷರಿಂದ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ, ಮಹಿಳೆಯರು ತಮ್ಮ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದಿಂದ, ದೈಹಿಕವಾಗಿ ಮಾತ್ರವಲ್ಲದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಮಹನವರಾತ್ರಿ ಮಹೋತ್ಸವಕ್ಕೆ ಗುರುವಾರ ಶಾಸ್ತ್ರೋಕ್ತ ವಿದಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು. ಬೆಳಿಗ್ಗೆ 7.30ಕ್ಕೆ ಗಣಪತಿ ಪ್ರಾರ್ಥನೆ, ಬೆಳಿಗ್ಗೆ 8.45ಕ್ಕೆ ನವರಾತ್ರಿ ಕಲಶ ಸ್ಥಾಪನೆಯೊಂದಿಗೆ ಮಹಾನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರಕಿತು. ದೇವಳದ ತಂತ್ರಿ ಡಾ. ಕೆ.ರಾಮಚಂದ್ರ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ಈ ಸಂದರ್ಭ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ದೇವಳದ ವ್ಯವಸ್ಥಾಪನಾ ಸಮಿತಿ ಆದ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ದೇವಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ ಮಹೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ಗೋಪಾಲಕೃಷ್ಣ ನಾಡ, ಗಣೇಶ ಕಿಣಿ, ಡಾ. ಅತುಲ್‌ಕುಮಾರ ಶೆಟ್ಟಿ, ಜಯಾನಂದ ಹೋಬಳಿದಾರ್, ಕೆ.ಪಿ ಶೇಖರ್,ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಿತು. ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನಿಡಿದರು. ಪ್ರದಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವುಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು ಈ ಸಂದರ್ಭದಲ್ಲಿ ಸೇವಾಸಮಿತಿ ವ್ಯವಸ್ಥಾಪನಾ ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ಶ್ರೀನಿವಾಸ ಕುಮಾರ್, ಸತ್ಯ ಪ್ರಸನ್ನ, , ದೊಟ್ಟಯ್ಯ ಪೂಜಾರಿ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ ಹಾಗೂ ಭಕ್ತಾದಿಗಳು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.07: ರಾಜ್ಯ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಹಾಗೂ ಪತ್ನಿ ವೀಣಾ ನಾಗೇಶ್ ಅವರು ಎಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಬುಧವಾರ ಭೇಟಿ ನೀಡಿದರು. ಶ್ರೀ ರಾಮಕೃಷ್ಣ ಕುಟೀರದ ಕಾರ್ಯಗಳ ಬಗ್ಗೆ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರಿಂದ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕುಟೀರದಲ್ಲಿ ನಿರಂತರವಾಗಿ ಗ್ರಾಮೀಣ ಪ್ರದೇಶ ಎಲ್ಲಾ ವರ್ಗದ ವಿದ್ಯಾರ್ಥಿಗಳು ನಿತ್ಯಸ್ತೋತ್ರ, ವೇದಮಂತ್ರಗಳ ಪಠಣ, ಸಂಗೀತಾಭ್ಯಾಸ ಮಾಡುತ್ತಿರುವುದು ಹಾಗೂ ಉನ್ನತ ವಿದ್ಯಾಭ್ಯಾಸದ ತನಕವೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ನೋಟ್ ಪುಸ್ತಕ ವಿತರಣೆ ಮೊದಲಾದ ಕಾರ್ಯಗಳನ್ನು ಪ್ರತಿವರ್ಷ ಮಾಡುತ್ತಾ ಬರಲಾಗುತ್ತಿರುವ ಬಗ್ಗೆ ತಿಳಿದು ಸೇವಾ ಕಾರ್ಯ ಮುಂದುವರಿಸುವಂತೆ ತಿಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಅ.7: ಕೋವಿಡ್ ಎರಡನೇ ಅಲೆಯ ಸಂದರ್ಭ ಆಕ್ಸಿಜನ್ ಅಗತ್ಯ ಹೆಚ್ಚಿಗೆ ಕಂಡುಬಂದು ಜನರು ಸಂಕಷ್ಟಕ್ಕೆ ಒಳಗಾಗಿದ್ದರು. ಈಗ ಕುಂದಾಪುರದಲ್ಲಿ ನಿಮಿಷಕ್ಕೆ 500 ಲೀ. ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕ ಆರಂಭವಾಗಿದ್ದು ಸಕಾಲದಲ್ಲಿ ಜನರ ಜೀವ ಉಳಿಸುವಲ್ಲಿ ನೆರವಾಗಲಿದೆ ಎಂದು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಅವರು ಗುರುವಾರ ಇಲ್ಲಿನ ಸರಕಾರಿ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟಿಸಿ ಮಾತನಾಡಿ ಘಟಕದಿಂದ ಮೂರು ಜಿಲ್ಲೆಯ ಜನರಿಗೆ ಪ್ರಯೋಜನ ಸಿಗಲಿದೆ. ಘಟಕ ಸ್ಥಾಪನೆಗೆ ಹೆಚ್ಚಿನ ಅನುದಾನ ನೀಡಿದ ಸಚಿವೆ ಶೋಭಾ ಕರಂದ್ಲಾಜೆ, ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾಡಳಿತ, ಅಧಿಕಾರಿವರ್ಗಕ್ಕೆ ಸಾರ್ವಜನಿಕರು ಅಭಾರಿಯಾಗಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉಪವಿಭಾಗ ಸಹಾಯಕ ಆಯುಕ್ತ ಕೆ. ರಾಜು, ಮಾತನಾಡಿ ಕೋವಿಡ್ 2ನೆ ಅಲೆ ಸಂದರ್ಭ ಆಕ್ಸಿಜನ್ ಇಲ್ಲದೆ ತೊಂದರೆ ಅನುಭವಿಸಿದ್ದೇವೆ. ಹಾಗಿದ್ದರೂ ಕುಂದಾಪುರ ಆಸ್ಪತ್ರೆ ಕೋವಿಡ್ ನಿರ್ವಹಣೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿ ಗುರುತಿಸಿಕೊಂಡಿದೆ.…
