Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಂಡ್ಸೆ ಒಕ್ಕೂಟ ವ್ಯಾಪ್ತಿಯ ಸವಿನಯ ಸ್ವಸಹಾಯ ಸಂಘದ 16ನೇ ವರ್ಷದ ವಾರ್ಷಿಕೋತ್ಸವ ವಂಡ್ಸೆ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ.ಶ್ರೀಧರ್ ಶೆಟ್ಟಿ, ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾ, ರಾಜಶೇಖರ ಉಪಾಧ್ಯಾ, ಹಕ್ಲಾಡಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಚಂದ್ರ ಬಿಲ್ಲವ ಹಟ್ಟಿಮನೆ, ಶ್ರೀ ಕ್ಷೇ.ಧ.ಗ್ರಾ ಯೋಜನೆಯ ವಂಡ್ಸೆ ವಲಯ ಮೇಲ್ವಿಚಾರಕಿ ಪಾರ್ವತಿ, ಸೇವಾ ಪ್ರತಿನಿಧಿ ಶರ್ಮಿಳಾ, ಒಕ್ಕೂಟದ ಅಧ್ಯಕ್ಷ ಗಿರೀಶ್ ಎನ್.ನಾಯ್ಕ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಂಡ್ಸೆ ಒಕ್ಕೂಟದ ಹಾಲಿ, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಯವರನ್ನು ಗೌರವಿಸಲಾಯಿತು. ಸಂಘದ ಸದಸ್ಯರಾದ ಗುರುರಾಜ ಗಾಣಿಗ, ರಾಘವೇಂದ್ರ, ಸುಧಾಕರ, ಹರೀಶ ನಾಯ್ಕ್, ದಯಾನಂದ, ಕೃಷ್ಣ ಉಪಸ್ಥಿತರಿದ್ದರು. ಸಂಘದ ಸದಸ್ಯರಾದ ದಿವಾಕರ ಸುಜಿ ಸ್ವಾಗತಿಸಿದರು. ಅನಂದ ನಾಯ್ಕ್ ವರದಿ ವಾಚಿಸಿದರು. ಶಂಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳ ತಾಲೂಕು ಅಜೆಕಾರುವಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಮ್ ದೇವಾಡಿಗ ಆಯ್ಕೆಯಾಗಿದ್ದಾರೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಮ್ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಉಪನ್ಯಾಸಕಿಯಾಗಿರುವ ಸಾವಿತ್ರಿ ದೇವಾಡಿಗ ಅವರ ಪುತ್ರ. ನವೆಂಬರ್ 14ರಂದು ಮಧ್ಯಾಹ್ನ ಅಜೆಕಾರಿನಲ್ಲಿ ಒಟ್ಟು 30 ಪ್ರತಿಭಾನ್ವಿತ ಮಕ್ಕಳಿಗೆ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಉಪಸ್ಥಿತಿಯಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು ಎಂದು ಮಕ್ಕಳ ವಿಭಾಗದ ಸಂಚಾಲಕರಾದ ಡಾ.ಶೇಖರ ಅಜೆಕಾರು ಅವರು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿಸಿ ಟ್ರಸ್ಟ್‌ನ ವಂಡ್ಸೆ ಕಾರ್ಯಕ್ಷೇತ್ರ ವ್ಯಾಪ್ತಿಯ ಗ್ರಾಹಕ ಸೇವಾ ಕೇಂದ್ರ ಇತೀಚೆಗೆ ಶುಭಾರಂಭಗೊಂಡಿತು. ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ. ಶ್ರೀಧರ್ ಶೆಟ್ಟಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯಾಧಿಕಾರಿ ಗೀತಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಅವಿನಾಶ್, ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಗೋವರ್ದನ್ ಜೋಗಿ, ಸುಬ್ಬು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಂಕರ ಆಚಾರ್ಯ, ವೆಂಕಟೇಶ್ ಶೆಟ್ಟಿ, ಪ್ರಭಾಕರ ಶೆಟ್ಟಿ, ವಂಡ್ಸೆ ಒಕ್ಕೂಟದ ಅಧ್ಯಕ್ಷ ಗಿರೀಶ್ ಎನ್ ನಾಯ್ಕ್, ಜಯಂತಿ ಪಿ.ಶೆಟ್ಟಿ, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಶರ್ಮಿಳಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಪಾರ್ವತಿ ಪ್ರಸ್ತಾವಿಕ ಮಾತುಗಳನ್ನಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ನಿಲ್ದಾಣದ ರಿಕ್ಷಾ ಚಾಲಕರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಂಜುನಾಥ ಮೊಗವೀರ, ಗೌರವ ಸಲಹೆಗಾರರಾಗಿ ಜೇಮ್ಸ್ ರೆಬೆರೋ, ಉಪಾಧ್ಯಕ್ಷರಾಗಿ ಸುಕುಮಾರ್ ಪೂಜಾರಿ, ಕಾರ್ಯದರ್ಶಿಯಾಗಿ ಅರುಣ್ ಎಲ್ ಮೊಗವೀರ, ಖಜಾಂಚಿಯಾಗಿ ಸಂತೋಷ್ ಎನ್ . ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಮೊಗವೀರ ಅವರು ನೂತನ ಅಧ್ಯಕ್ಷ ಪ್ರವೀಣ್ ದೇವಾಡಿಗ ಅವರಿಗೆ ಸಂಘದ ಪುಸ್ತಕವನ್ನು ಹಸ್ತಾಂತರಿಸಿದರು. ಈ ಸಂದರ್ಭ ಹೆಮ್ಮಾಡಿ ಗ್ರಾ.ಪಂ ಅಧ್ಯಕ್ಷರಾದ ಯು ಸತ್ಯನಾರಾಯಣ್ ಶೇರುಗಾರ್, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಕಾಳೂರ ಮನೆ, ಸ್ಥಳೀಯ ಮುಖಂಡರಾದ ಕೃಷ್ಣಮೂರ್ತಿ (ಪಾಂಡು) ರಾವ್ ಮೊದಲಾದವರು ಉಪಸ್ಥಿತರಿದ್ದರು. ರಿಕ್ಷಾ ಚಾಲಕ ಸಂಘದ ರವಿ.ಕೆ ಸ್ವಾಗತಿಸಿ, ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ರಥಬೀದಿ ವಾರ್ಡ್‌ನ ಅಂಗನವಾಡಿ ಕೇಂದ್ರದಲ್ಲಿ ಸರ್ಕಾರದ ಆದೇಶದಂತೆ ವಿಶೇಷವಾಗಿ ವಾದ್ಯಗೋಷ್ಠಿಯ ಮೂಲಕ ಮಕ್ಕಳನ್ನು ಬರಮಾಡಿಕ್ಕೊಳ್ಳಲಾಯಿತು. ಈ ಸಂದರ್ಭದ ಪಂಚಾಯತ್ ಸದಸ್ಯರಾದ ಮಂಜುನಾಥ ದೇವಾಡಿಗ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅಂಗನವಾಡಿ ಶಿಕ್ಷಕಿ, ಸಹಾಯಕರು, ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು, ವಾದ್ಯವೃಂದದವರು ಪೋಷಕರು, ದಾದಿಯರು, ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು. ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲಿಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಸರ್ಕಾರದ ಆದೇಶದಂತೆ ದೀಪ ಬೆಳಗಿಸಿ ಪ್ರಾರ್ಥನೆಯೊಂದಿಗೆ ಮಕ್ಕಳನ್ನು ಸ್ವಾಗತಿಸಲಾಯಿತು. ಈ ಸಂದರ್ಭ ಸಮಿತಿ ಅಧ್ಯಕ್ಷ ರು, ಗ್ರಾಮ ಪಂಚಾಯತ್ ಸದಸ್ಯ ರು, ಶಾಲಾ ಮೂಖ್ಯೇಪಧ್ಯಾರು, ಸ್ತೀ ಶಕ್ತಿ ಸದಸ್ಯರು, ಕಿರಿಯ ಆರೋಗ್ಯ ಕಾರ್ಯ ಕರ್ತೆ, ಆಶಾ ಕಾರ್ಯಕರ್ತೆ, ಮಕ್ಕಳ ಫೋಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ಸರಕಾರದ ಆದೇಶದಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕುಂದಾಪುರ ಇವರ ಸಹಯೋಗದಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಗೋಪೂಜಾ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭ ದೇವಳದ ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ದೇವಳದ ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ದೇವಳದ ಮ್ಯಾನೇಜರ್ ನಟೇಶ್ ಕಾರಂತ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೂರ್ಯನಾರಾಯಣ ಉಪಾಧ್ಯಾಯ, ನಿವೃತ್ತ ಜಾನವಾರು ಅಧಿಕಾರಿ ಸುಬ್ರಾಯ ಗಾಣಿಗ ಹಾಗೂ ಅರ್ಚಕ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜುಲೈ 2022ನೇ ಅಧಿವೇಶನಕ್ಕಾಗಿ ಡೆಹರಾಡೂನಲ್ಲಿರುವ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ದಿ. ಡಿ. 18ರಂದು ನಡೆಸಲಾಗುವುದು. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿ. 1-7-2-2022ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ ( ಅಂದರೆ ದಿ. 02-07-2009 ರಿಂದ 1-1-2011 ರೊಳಗೆ ಜನಿಸಿರುವ) ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600 ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ. 555 ಆನ್‌ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಟೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪತ್ರಿಕೆಗಳನ್ನು ಸಹ ಪಡೆಯಬಹುದು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಗಳನ್ನು ದ್ವಿಪ್ರತಿಯಲ್ಲಿ ನ.15ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಅನಿವಾಸಿ ಭಾರತೀಯ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರನ್ನು ವಕ್ವಾಡಿ ಕನಕ ನಿವಾಸದಲ್ಲಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಬೀಜಾಡಿ ಗೋಪಾಡಿ ಮಿತ್ರ ಸಂಗಮ ಮತ್ತು ರೋಟರಿ ಸಮುದಾಯ ದಳ ಬೀಜಾಡಿ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನನ್ನ ಮೇಲಿನ ಆತ್ಮೀಯತೆಯಿಂದ ನನ್ನನ್ನು ಸನ್ಮಾನಿಸಿ ಗೌರವಿಸಿದ್ದಿರಿ. ಗ್ರಾಮಗಳು ಅಭಿವೃದ್ದಿ ಕಾಣಬೇಕಾದರೆ ಸ್ಥಳೀಯ ಸಂಘ ಸಂಸ್ಥೆಗಳ ಕೊಡುಗೆ ಆಪಾರವಾಗಿರಬೇಕು. ಸಮಾಜಮುಖಿಯಾಗಿ ಸೇವೆ ನೀಡಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಸಂಸ್ಥೆ ಇನ್ನಷ್ಟು ಜನಪರ ಕಾರ್ಯಕ್ರಮಗಳ ಮೂಲಕ ಒಳ್ಳೆಯ ಹೆಸರು ಮಾಡಲಿ ಎಂದು ಹೇಳಿದರು. ಈ ಸಂದರ್ಭ ಮಿತ್ರ ಸಂಗಮ ಗೌರವಧ್ಯಕ್ಷ ವಾದಿರಾಜ್ ಹೆಬ್ಬಾರ್ ಫಲಪುಷ್ಟಗಳೊಂದಿಗೆ ಶಾಲು ಹೊದಿಸಿ ಪುಸ್ತಕಗಳನ್ನು ನೀಡಿ ಸನ್ಮಾನಿಸಿ ಗೌರವಿಸಿದರು. ಅಧ್ಯಕ್ಷ ಚಂದ್ರಶೇಖರ ಬೀಜಾಡಿ, ಕಾರ್ಯದರ್ಶಿ ರಾಜೇಶ್ ಆಚಾರ್, ಬೆಳ್ಳಿ ಹಬ್ಬದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೈಂದೂರು, ಇಲ್ಲಿ ಪ್ರಸಕ್ತ ಸಾಲಿಗೆ ಕರ್ನಾಟಕ ಸರಕಾರದ ಉದ್ಯೋಗ ಯೋಜನೆಯ ಟಾಟಾ ಟಕ್ನಾಲಜೀಸ್ ಸಹಯೋಗದೊಂದಿಗೆ advanced Manufacturing battery Electric Vehicle (scvt ಸಂಯೋಜನೆ ಹೊಂದಿರುವ) 2 ವರ್ಷ ಅವಧಿಯ ಹೊಸ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ನವೆಂಬರ್ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆ ಬೈಂದೂರು ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ( ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲಿಚ್ಚಿಸುವ 21 ರಿಂದ 35 ವಯೋಮಿತಿಯೊಳಗಿನ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ / ಯುವತಿಯರು ತಮ್ಮ ಸ್ವ ವಿವರಗಳೊಂದಿಗೆ ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಇಲ್ಲಿ ಅಕ್ಟೋಬರ್ 15 ರ ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು ಮತ್ತು ಸಂವಹನ ಕಲೆ, ಕೌಶಲ್ಯ ಹೊಂದಿ ಸಮುದಾಯದಲ್ಲಿ ಕೆಲಸ ಮಾಡಲು ಇಚ್ಛೆ ಉಳ್ಳವರಾಗಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇಲ್ಲಿ ತರಬೇತಿ ನೀಡಲಾಗುವುದು.…

Read More