Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಧುನಿಕ ಬದುಕಿನ ಧಾವಂತಗಳ ನಡುವೆ ಪರಸ್ಪರ ಬೆರೆಯುವ, ಮಾತನಾಡುವ ಹಾಗೂ ಬದುಕಿನ ಪ್ರತಿಕ್ಷಣವನ್ನು ಅನುಭವಿಸುವ ಸಂದರ್ಭಗಳೇ ಮರೆಯಾಗುತ್ತಿರುವ ಹೊತ್ತಿನಲ್ಲಿ ಕಲೆ ಸಾಂಸ್ಕೃತಿಕ ಚಟುವಟಿಕೆಗಳು ಮತ್ತೆ ನಮ್ಮತನವನ್ನು ನೆನಪಿಸುವ ಕಾರ್ಯವನ್ನು ಮಾಡುತ್ತವೆ ಎಂದು ಶಿರೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ ಅವರು ಹೇಳಿದರು. ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಮೇ 07ರಿಂದ ಮೇ 10ರ ತನಕ ಜರುಗಲಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ಪಿ. ಯಡ್ತರೆ, ಉಪಾಧ್ಯಕ್ಷರಾದ ಅಬ್ದುಲ್ ರವೂಫ್, ನಿರ್ದೇಶಕರಾದ ಸುಧಾಕರ ಪಿ. ಬೈಂದೂರು, ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಪ್ರಥಮ ಭಾರಿಗೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಾಯೋಜಕತ್ವದಲ್ಲಿ ರೈತಸಿರಿ ಅಗ್ರಿ ಮಾಲ್ ಎಂ.ಎಸ್.ಸಿ ಯೋಜನೆಯ ಶಿಲಾನ್ಯಾಸ ಹಾಗೂ ರೈತಸಿರಿ ಸಮಾವೇಶ ಮೇ.3ರ ಮಂಗಳವಾರ ಪೂರ್ವಾಹ್ನ 10ರಿಂದ ಕಂಬದಕೋಣೆ ಪಿಯು ಕಾಲೇಜು ಮೈದಾನದಲ್ಲಿ ಜರುಗಲಿದೆ. ಕೇಂದ್ರ ಸರಕಾರದ ಆತ್ಮನಿರ್ಭರ ಭಾರತ್ ಯೋಜನೆಯಡಿ ಆರಂಭಗೊಳ್ಳಲಿರುವ ಅಗ್ರಿಮಾಲ್‌ನಲ್ಲಿ ನಿತ್ಯ ಕೃಷಿ ಸಂತೆ, ಕೃಷಿ ಮತ್ತು ಕೃಷಿಕರ ಅಭ್ಯುದಯಕ್ಕಾಗಿ ಕೃಷಿ ಉತ್ಪನ್ನ ಖರೀದಿ, ಮಾರುಕಟ್ಟೆ ಮತ್ತು ಕೊಲ್ಡ್ ಸ್ಟೊರೇಜ್ ವ್ಯವಸ್ಥೆಯನ್ನು ಒಳಗೊಂಡಿರುವ ಬೃಹತ್ ಗೋದಾಮು ಹಾಗೂ ದಾಸ್ತಾನು ಮೊದಲಾದ ಯೋಜನೆಯನ್ನು ರೂಪಿಸಲಾಗಿದೆ. ಸಂಘದ ಕಾರ್ಯವ್ಯಾಪ್ತಿಯಲ್ಲಿನ ಅಡಿಕೆ, ತೆಂಗು, ಭತ್ತ, ನೆಲಗಡಲೆ ಹಾಗೂ ಕಾಡುತ್ಪತ್ತಿ ಮೊದಲಾದ ಬೆಳೆಗಳನ್ನು ಖರೀದಿಸಿ, ದಾಸ್ತಾನು ಮಾಡಿ, ಉತ್ತಮ ದರ ಹಾಗೂ ಮಾರುಕಟ್ಟೆ ಸಂಘದಿಂದ ಒದಗಿಸುವ ದೂರದೃಷ್ಠಿಯನ್ನು ಹೊಂದಲಾಗಿದೆ. ರೈತಸಿರಿಯಿಂದಾಗಿ ಸಂಘದ ಕಾರ್ಯವ್ಯಾಪ್ತಿಯ ನೂರಾರು ಯುವಕ, ಯುವತಿಯರಿಗೆ ಉದ್ಯೋಗಾವಕಾಶ ದೊರೆಯಲಿದೆ. ಅಂದಾಜು ರೂ. 7.65ಕೋಟಿ ವೆಚ್ಚದಲ್ಲಿ ರೈತರಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಘಗಳ ನಿಯಮಾವಳಿಯನ್ನು ಉಲ್ಲಂಘಿಸಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಗೋದಾಮು ಹಾಗೂ ಸರ್ವ ಸರಕಿನ ಬಹುಮಹಡಿ ಕಟ್ಟಡ (ಮಳಿಗೆ) ನಿರ್ಮಿಸಲಾಗುತ್ತಿದ್ದು, ಇದಕ್ಕೆ ಆರ್‌ಸಿಎಸ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕರಾದ ಬಿ. ಎಸ್. ಸುರೇಶ್ ಶೆಟ್ಟಿ ಹೇಳಿದರು. ಉಪ್ಪುಂದದಲ್ಲಿ ಸಂಘದ ನಿರ್ದೇಶಕರಾದ ಬಿ. ಎಸ್. ಸುರೇಶ್ ಶೆಟ್ಟಿ ಹಾಗೂ ಬಿ. ರಘುರಾಮ ಶೆಟ್ಟಿ ಅವರು ಶನಿವಾರ ಸಂಜೆ ಜಂಟಿಯಾಗಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಸಂಘವು ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿಯಲ್ಲಿ ಗೋದಾಮು ಹಾಗೂ ಸರ್ವ ಸರಕಿನ ಬಹುಮಹಡಿ ಕಟ್ಟಡ (ಮಳಿಗೆ) ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿಯಲ್ಲಿ ಸಾಲ ಮಂಜೂರಾತಿ ಪಡೆಯಲಾಗಿದೆ. ಅಲ್ಲದೇ ನಬಾರ್ಡ್ ಹಾಗೂ ಸಂಘದ ಹಣವನ್ನು ಬಳಸಿ ಸುಮಾರು 7ಕೋಟಿ 65ಲಕ್ಷದ ಮೊತ್ತದಲ್ಲಿ ಕಟ್ಟಡ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ನಿಬಂಧಕರ ಕಚೇರಿಯಿಂದ ಆಡಳಿತಾತ್ಮಕ ಅನುಮತಿಯನ್ನು ಲಿಖಿತರೂಪದಲ್ಲಿ ಪಡೆದುಕೊಳ್ಳಲಾಗಿದೆ. ಈ ಅನುಮತಿ ಪತ್ರದಲ್ಲಿ ತಿಳಿಸಿರುವಂತೆ ಕಟ್ಟಡದ ನಿರ್ಮಾಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಮಹಾರುದ್ರಯಾಗವನ್ನು ಎ.29ರಿಂದ ಮೇ.2ರ ತನಕ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಸಂಜೆಯಿಂದ ವಿವಿಧ ಧಾರ್ಮಿಕ ಕಾರ್ಯಗಳಿಗೆ ಚಾಲನೆ ದೊರೆತಿದೆ. ಶುಕ್ರವಾರ ಸಂಜೆ 6ರಿಂದ ಮಂಟಪ ಸಂಸ್ಕಾರ, ರಾಠೋಘ್ನ ಹೋಮ, ವಾಸ್ತು ಪೂಜೆ ನಡೆಯಿತು. ಶನಿವಾರ ಬೆಳಿಗ್ಗೆ 7ಗಂಟೆಯಿಂದ ಗಣಪತಿ ಪೂಜೆ, ಪುಣ್ಯಾಹ ನಾಂದಿ, ಋತ್ವಿಕ್ಟರಣೆ, ರುದ್ರ ಕಲಶ ಸ್ಥಾಪನೆ, ಗಣಹೋಮ ರುದ್ರ ಪುರಶ್ಚರಣೆ ಪ್ರಾರಂಭ, ದೇವರಿಗೆ ಕಲಶಾಭಿಷೇಕ, ಮಹಾಮಂಗಳಾರತಿ ಅನ್ನಸಂತರ್ಪಣೆ ಜರುಗಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಾನಂದ ಚಾತ್ರ, ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್, ಸ್ವಾಗತ ಸಮಿತಿ ಅಧ್ಯಕ್ಷ ಚಂದ್ರಶೇಖರ ಕಲ್ಪತರು, ಕಾರ್ಯದರ್ಶಿ ಸುಬ್ರಮಣ್ಯ ಹೊಳ್ಳ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತೀಶ್ ಶೆಟ್ಟಿ, ವಿಶ್ವನಾಥ ಪೂಜಾರಿ, ನಾಗರಾಜ ರಾಯಪ್ಪನಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಎಚ್. ಸವಿತಾ ಜಗದೀಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Read More

ಆಮೆ ಹಬ್ಬ, ಬೀಚ್ ಸ್ವಚ್ಛತೆ, ಕಡಲಾಮೆ ಜಾಗೃತಿ ಕಾರ್ಯಕ್ರಮ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.30: ಕಡಲಿನೊಂದಿಗೆ ಭಾಂದವ್ಯ ಹೊಂದಿರುವ ಮೀನುಗಾರರೇ ಕಡಲಾಮೆಗಳ ಸಂರಕ್ಷಣೆಯ ರಾಯಭಾರಿಗಳಾಗಬೇಕು. ಮೀನಿನ ಸಂತತಿ ಉಳಿಯಲು, ಹೆಚ್ಚುತ್ತಿರುವ ಜೆಲ್ಲಿ ಫಿಶ್ಗಳ ನಾಶಕ್ಕೆ ಕಡಲಾಮೆಗಳ ರಕ್ಷಣೆ ಅಗತ್ಯವಾಗಿದ್ದು ಸರಕಾರ, ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳಿಗಿಂತಲೂ ಮೀನುಗಾರರ ಜವಾಬ್ದಾರಿಯೂ ಹೆಚ್ಚಿದೆ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಅವರು ಶನಿವಾರ ಕೋಡಿಯ ಕಡಲ ಕಿನಾರೆಯಲ್ಲಿ ಅರಣ್ಯ ಇಲಾಖೆ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಎಫ್ಎಸ್ಎಲ್ ಇಂಡಿಯಾ ಆಶ್ರಯ ಹಾಗೂ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಆಯೋಜಿಸಿದ ಆಮೆ ಹಬ್ಬ, ಬೀಚ್ ಸ್ವಚ್ಛತೆ, ಕಡಲಾಮೆ ಜಾಗೃತಿ, ಮರಳು ಶಿಲ್ಪ, ಗಾಳಿಪಟ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮೂರಲ್ಲಿ ವನ್ಯಜೀವಿ, ಕಾಡಿನ ರಕ್ಷಣೆ ಅಗತ್ಯವಾಗಿದ್ದರೆ, ಕರಾವಳಿಯಲ್ಲಿ ಮೀನಿನ ಸಂತತಿ, ಆಮೆ, ಸ್ವಚ್ಛ ಬೀಚ್ನ ಅಗತ್ಯತೆ ಬಹಳಷ್ಟಿದೆ. ಆ ದಿಸೆಯಲ್ಲಿ ನಾವೆಲ್ಲರೂ ಕೈಜೋಡಿಸಬೇಕಾಗಿದೆ. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ನಮ್ಮ ದೇಗುಲಗಳೇ ನಾಂದಿಯಾಗಲಿ ಎಂದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.29: ಆದಿಉಡುಪಿ ಫ್ರೌಢಶಾಲೆಯಲ್ಲಿ ಕಾವಲು ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮೃತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ರಾಜೇಶ್ ಕುಂದರ್ ಎಂದು ತಿಳಿದು ಬಂದಿದೆ. ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರವಾಗಿದ್ದ ಆದಿಉಡುಪಿ ಶಾಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಕಾನ್ಸ್‌ಟೇಬಲ್ ರಾಜೇಶ್, ಶುಕ್ರವಾರ ಬೆಳಿಗ್ಗೆ ತಮ್ಮದೇ ಸರ್ವಿಸ್ ಬಂದೂಕಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಂಗಳ ಹಿಂದೆಯಷ್ಟೇ ಗಂಗೊಳ್ಳಿಯಲ್ಲಿ ಪೊಲೀಸ್ ಸಿಬ್ಬಂದಿಗಳ ನಡುವಿನ ಜಗಳದಲ್ಲಿ ಅಮಾನತುಗೊಂಡಿದ್ದ ರಾಜೇಶ್ ನಿನ್ನೆಯಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು ಎನ್ನಲಾಗಿದೆ. ಬಡಾಕೆರೆಯವರಾದ ರಾಜೇಶ್ ಅವರು ಪ್ರಸ್ತುತ ಕುಂದಾಪುರದಲ್ಲಿ ಕುಟುಂಬಿಕರೊಂದಿಗೆ ವಾಸಿಸುತ್ತಿದ್ದರು. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಉಡುಪಿ ವೃತ್ತನಿರೀಕ್ಷಕರ ನೇತೃತ್ವದಲ್ಲಿ ತನಿಕೆ ನಡೆಯುತ್ತಿದೆ. ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.28: ಜಿಲ್ಲೆಯಲ್ಲಿ ನೊಂದಾಯಿಸಲ್ಪಟ್ಟ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ನೋಂದಾವಣೆಯಾದ ಪದ್ಧತಿಯಲ್ಲಿ ನಿಯಮಾನುಸಾರವಾಗಿ ಸೇವೆ ನೀಡಬೇಕು. ಆಯುರ್ವೇದ ಪದ್ಧತಿಯೊಂದಿಗೆ ಇಂಟಿಗ್ರೇಟೆಡ್ ಡಿಪ್ಲೋಮಾ ಕೋರ್ಸ್ಗಳನ್ನು ಮಾಡಿ ಪ್ರಮಾಣ ಪತ್ರ ಹೊಂದಿರುವ ವೈದ್ಯರುಗಳು ಆಧುನಿಕ ವೈದ್ಯ ಪದ್ಧತಿಯಲ್ಲಿ ವೈದ್ಯ ವೃತ್ತಿ ನಡೆಸಲು ಅವಕಾಶವಿದ್ದು, ನೋಂದಾವಣೆ ಹೊಂದಿರುವ ಪದ್ಧತಿಯನ್ನು ಬಿಟ್ಟು ಇನ್ನೊಂದು ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಲ್ಲಿ ತಾಲೂಕು ಪ್ರಾಧಿಕೃತ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.28: ತಾಲೂಕಿನ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ “ಚಂದ್ರಶ್ರೀ’ ಹಾಗೂ ಸಾಂದ್ರಶೀತಲೀಕರಣ ಘಟಕ ಉದ್ಘಾಟನೆ ಮತ್ತು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರ ಸಹಭಾಗಿತ್ವದಲ್ಲಿ ಹೈನುಗಾರರ ಸಮಾವೇಶ ಉದ್ಘಾಟನಾ ಸಮಾರಂಭ ೧೧ನೇ ಉಳ್ಳೂರು ಗ್ರಾಮದ ಮೇಕೋಡುವಿನಲ್ಲಿ ನಡೆಯಿತು. ಸಾಂದ್ರಶಿತಲೀಕರಣ ಘಟಕ ಹಾಗೂ ಸಮಾವೇಶ ಉದ್ಘಾಟಿಸಿದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಹೈನುಗಾರರಿಗೆ ಹಾಗೂ ರೈತರ ಸಹಾಯಕ್ಕಾಗಿ ರಾಜ್ಯದಲ್ಲಿಯೇ ಎರಡನೇ ದೊಡ್ಡ ಸಾಂದ್ರಶೀತಲೀಕರಣ ಘಟಕದ ಆರಂಭಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಯೋಜನೆ ಅನುಷ್ಠಾನಗೊಳಿಸುವಲ್ಲಿ ಶ್ರಮಿಸಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಅಭಿನಂದನೆಗಳು. ಗ್ರಾಮದ ಅಭಿವೃದ್ಧಿಯ ಬಗ್ಗೆ ದೂರದೃಷ್ಠಿತ್ವ ಹೊಂದಿದ್ದ ದಿ. ವೈ. ಚಂದ್ರಶೇಖರ ಶೆಟ್ಟಿ ಅವರ ಕೊಡುಗೆ ಅಪಾರ. ಅವರ ಕಾರ್ಯಚಟುವಟಿಕೆ ಶ್ಲಾಘನೀಯವಾದದ್ದು ಎಂದರು. ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್. ಬಿ. ಜಯರಾಮ ಮಾತನಾಡಿ ರೈತರಾಗಿ, ಹೈನುಗಾರರಾಗಿ ತಳಮಟ್ಟದಿಂದ ಹಾಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.27: ಸುರಭಿ ಜೈಸಿರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುತ್ತಿರುವ ಬಿಂದಶ್ರೀ ಪ್ರಶಸ್ತಿಗೆ ಈ ಭಾರಿ ಸಾಂಸ್ಕೃತಿಕ ಚಿಂತಕ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಎಂ. ಮೋಹನ ಆಳ್ವ ಆಯ್ಕೆಯಾಗಿದ್ದು, ಮೇ.9ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂ. ನಗದು, ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಈ ಬಗ್ಗೆ ಬುಧವಾರ ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುರಭಿ ಸಂಸ್ಥೆಯ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಎಸ್. ಜನಾರ್ದನ ಮರವಂತೆ ಮಾಹಿತಿ ನೀಡಿದರು. ಸುರಭಿ ಅಧ್ಯಕ್ಷ ನಾಗರಾಜ ಪಿ ಯಡ್ತರೆ ಮಾತನಾಡಿ ಇಪ್ಪತ್ತೆರಡನೇ ವರ್ಷದ ಸಂಭ್ರಮದಲ್ಲಿರುವ ಬೈಂದೂರಿನ ಕಲಾ ಸಂಸ್ಥೆ ಸುರಭಿ ಆಶ್ರಯದಲ್ಲಿ ಮೇ.7ರಿಂದ ನಾಲ್ಕು ದಿನಗಳ ಕಾಲ ಸುರಭಿ ಜೈಸಿರಿ ಕಾರ್ಯಕ್ರಮ ಹಾಗೂ ಎಂಟನೇ ವರ್ಷದ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ 6ಕ್ಕೆ ಶಾರದಾ ವೇದಿಕೆಯಲ್ಲಿ ಜರುಗಲಿದೆ ಎಂದರು. ಡಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಏ.27: ಕೊಲ್ಲೂರು ದೇವಸ್ಥಾನ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದುರ ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮಿತಿಯ ಆಡಳಿತ ಕಚೇರಿ ಸಭಾಂಗಣದಲ್ಲಿ ದೇವಸ್ಥಾನದ ಅಭಿವೃಧ್ದಿ ಕಾರ್ಯಗಳ ಬಗ್ಗೆ ನಡೆದ ವ್ಯವಸ್ಥಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಕಾಂಬಿಕಾ ದೇವಸ್ಥಾನ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ, ಏಪ್ರಿಲ್, ಮೇ, ಜೂನ್ ತಿಂಗಳ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾÀಗದAತೆ ನೋಡಿಕೊಳ್ಳಬೇಕು, ಕುಡಿಯುವ ನೀರಿನ ಸಮಸ್ಯೆಗಳ ಪರಿಹರಕ್ಕೆ ಪ್ರತ್ಯೇಕ ಸಹಾಯವಾಣಿ ತರೆದು,ಸಮಸ್ಯೆಗಳನ್ನು ಕೂಡÀಲೇ ಬಗೆಹರಿಸಬೇಕು , ಈಗಾಗಲೇ ಕುಡಿಯುವ ನೀರು ಮತ್ತು ಒಳಚರÀಂಡಿ ಮಂಡಳಿ ವತಿಯಿಂದÀ ಕೈಗೊಂಡಿರುವ ನೀರು ಸರಬರಾಜು ಘಟಕದ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ದೇವಸ್ಥಾನದ ಹಾಗೂ ಸ್ಥಳಿಯ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕೈಗೊಳ್ಳುವಂತೆ ತಿಳಿಸಿದರು. ಕೊಲ್ಲೂರು ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿಗಳು ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದು, 334…

Read More