ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿದ ಬೈಂದೂರು ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ರೂ.50,000 ಬಹುಮಾನ ಘೋಷಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯೊನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಐಜಿಪಿ ಮೆಚ್ಚುಗೆ ಸೂಚಿಸಿರುವುದಾಗಿ ತಿಳಿಸಿದರು. ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಪ್ರಕರಣದ ತನಿಕೆ ಮುಂದುವರಿದಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು. ಬೈಂದೂರು ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತೆರೆದಿರುವ ಅಂಗಡಿಗಳ ಬಗ್ಗೆ ಮಾಹಿತಿ ಇದ್ದು, ಇಲ್ಲಿನ ಪಟ್ಟಣ ಪಂಚಾಯತ್ ಮಾಡುವ ತೆರವು ಕಾರ್ಯಾಚರಣೆಗೆ ಸಹಕಾರಿ ನೀಡುವುದಾಗಿ ತಿಳಿಸಿದರು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ., ವೃತ್ತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.14: ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೊದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರಿಗಾರ್ (52), ಹಿರ್ಗಾನ್ ಶೀವನಗರ ನಿವಾಸಿ ಶಿಲ್ಪಾ ಪೂಜಾರಿ (30) ಹಾಗೂ ಕೃತ್ಯಕ್ಕೆ ಸಹಕರಿಸಿದ ಸೂಡಾ ಗ್ರಾಮದ ನಿತ್ಯಾನಂದ ದೇವಾಡಿಗ (40), ಸತೀಶ್ ಆರ್. ದೇವಾಡಿಗ (49) ಬಂಧಿತರು. ಈ ಪೈಕಿ ಸದಾನಂದ ಹಾಗೂ ಶಿಲ್ಪಾಳನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನದ ಪೊಲೀಸ್ ಕಸ್ಟಡಿ ನೀಡಲಾಗಿದೆ. ಕ್ರೈಂಸ್ಟೋರಿ ನೋಡಿ ಕೊಲೆಗೆ ಸಂಚು: (Updated)ಕಾರ್ಕಳದಲ್ಲಿ ಖಾಸಗಿ ಸರ್ವೇಯರ್ ಆಗಿದ್ದ ಸದಾನಂದ ಶೇರೆಗಾರ್, 2019ರಲ್ಲಿ ವ್ಯಕ್ತಿಯೊಬ್ಬರ ಜಮೀನಲ್ಲಿ ಅಕ್ರಮವಾಗಿ ತನ್ನ ಕೈ ಬರಹದಲ್ಲಿ ರಸ್ತೆ ಇರುವುದಾಗಿ ನಕ್ಷೆ ತಯಾರಿಸಿಕೊಟ್ಟಿದ್ದ. ಈ ಪ್ರಕರಣದ ಬಗ್ಗೆ ಜಮೀನಿನ ಮಾಲೀಕರು ಸದಾನಂದ ಶೇರಿಗಾರ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸ.ಪ.ಪೂ. ಕಾಲೆಜಿನಲ್ಲಿ 2022-23ನೇ ಸಾಲಿನ ಮೇಜರ್ ಸೋಮನಾಥ ಶರ್ಮ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ‘ವಿದ್ಯಾ ಪಥದರ್ಶನ’ ಹೆಸರಿನಲ್ಲಿ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಾನ್ ಮಿಲಿಟರಿ ನಾಯಕನ ಹೆಸರನ್ನು ಹೊತ್ತಿರುವ ಸಂಘ ಆ ಮಿಲಿಟರಿ ಶಿಸ್ತು, ರಾಷ್ಟ್ರ ಪ್ರೇಮವನ್ನು ಅಳವಡಿಸಿಕೊಂಡು ಉತ್ತಮ ಕಾರ್ಯಕ್ರಮ ನಡೆಸಲಿ. ಇಂದಿನ ವಿದ್ಯಾರ್ಥಿಗಳ ಎಲ್ಲಿ ಯಶಸ್ಸೇ ನಾಳಿನ ನಮ್ಮ ನೆಮ್ಮದಿಯ ಸಮಾಜಕ್ಕೆ ಕಾರಣವಾಗಲಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಯಾದವ ವಿ ಕರ್ಕೇರ ಅವರು ವಿದ್ಯಾರ್ಥಿ ಸಂಘದ ಎಲ್ಲಾ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಎಲ್ಲಾ ಚಟುವಟಿಕೆಗಳು ನಮ್ಮನ್ನು ಶಿಸ್ತಿಗೆ ಅಳವಡಿಸುವ ಕೆಲಸ ಮಾಡಬೇಕು. ಸಮಯದ ನಿಖರವಾದ ಪರಿಮಿತಿಯೊಳಗೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮುಗಿಯಬೇಕು. ಎಲ್ಲಾ ವಿದ್ಯಾರ್ಥಿಗಳು ವಿವಿಧ ಸಂಘದ ಅಡಿಯಲ್ಲಿ ನಡೆಯುವ ಒಂದಾದರೂ ಚಟುವಟಿಕೆಯಲ್ಲಿ ಭಾಗವಹಿಸಲೇಬೇಕು. ಎಲ್ಲಾ ಅವಕಾಶಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.14: ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೊದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಕೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಸುಟ್ಟು ಹೋದ ಕಾರಿನ ಚೆಸ್ಸಿಯನ್ನು ಫೊರೆನ್ಸಿಕ್ ತಜ್ಞರ ಸಹಾಯದಿಂದ ಪರಿಶೀಲಿಸಿ, ಮಾಲಕನ ವಿವರಗಳನ್ನು ಪತ್ತೆಹಚ್ಚಲಾಗಿತ್ತು. ಕಾರಿನ ಮಾಲಕ ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರಿಗಾರ್ (52) ಎಂದು ಗುರುತಿಸಲಾಗಿದ್ದು ಆತನೇ ಕಾರಿಗೆ ಬೆಂಕಿ ಹಚ್ಚಿ ಕಾರ್ಕಳ ಮೂಲದ ಗಾರೆ ಮೇಸ್ತ್ರಿ ಆನಂದ ದೇವಾಡಿಗ (55) ಎಂಬಾತನನ್ನು ಕೊಲೆಗೈದಿದ್ದಾನೆ ಎಂಬುದು ದೃಢಪಟ್ಟಿದೆ. ಘಟನೆಯ ಸಂಬಂಧ ಸದಾನಂದ ಶೇರಿಗಾರ್ ಹಾಗೂ ಕೃತ್ಯಕ್ಕೆ ಸಹಕರಿಸಿದ ಹಿರ್ಗಾನ್ ಶೀವನಗರ ನಿವಾಸಿ ಶಿಲ್ಪಾ ಪೂಜಾರಿ (30) ಎಂಬಾಕೆಯನ್ನು ಗುರುವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಭಾಗದಲ್ಲಿ ಹೆಚ್ಚುತ್ತಿರುವ ಕಡಲಕೊರೆತವನ್ನು ತಕ್ಷಣಕ್ಕೆ ತಡೆಯುವ ನಿಟ್ಟಿನಲ್ಲಿ ಕೂಡಲೇ ಅನುದಾನ ಬಿಡುಗಡೆಗೊಳಿಸಲಾಗುವುದು ಅಲ್ಲದೇ ಕಡಲಕೊರೆತ ಶಾಶ್ವತ ತಡೆ ಯೋಜನೆಯನ್ನು ಕೂಡ ಜಾರಿಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದರು. ಅವರು ಬುಧವಾರ ಮರವಂತೆಯ ಕಡಲಕೊರೆತದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ಹಿಂದೆ ಕಡಲಕೊರೆತ ತಡೆಗೆ ಕರಾವಳಿಯ ಕೆಲವು ಭಾಗಗಳಲ್ಲಿ ಸಮರ್ಪಕವಾಗಿ ಕಲ್ಲುಗಳನ್ನು ಹಾಕದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಎಲ್ಲಾ ಭಾಗದಲ್ಲಿಯೂ ಪರಿಶೀಲನೆ ನಡೆಸಿ ಕಳಪೆ ಕಾಮಗಾರಿ ಆಗಿರುವಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು, ಅಗತ್ಯವಿರುವ ಕಡೆಗಳಲ್ಲಿ ಶಾಶ್ವತ ಕಾಮಗಾರಿ ನಡೆಸಲು ಸಂಪೂರ್ಣ ಕಡಲತೀರದ ಡಿಪಿಆರ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮರವಂತೆ ಬಂದರು ಮುಂದುವರಿದ ಕಾಮಗಾರಿಗೆ 84 ಕೋಟಿ ರೂ. ಘೋಷಿಸಲಾಗಿದ್ದು, ಅದನ್ನು ಶೀಘ್ರ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ನೆರೆಹಾವಳಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಲು ಸರಕಾರ ಘೋಷಿಸಿದೆ ಎಂದರು. ಮರವಂತೆ ಭಾಗದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಹೇನಬೇರುವಿನಲ್ಲಿ ಸಂಪೂರ್ಣ ಸುಟ್ಟುಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ರಾತ್ರಿವೇಳೆ ಘಟನೆ ನಡೆದಿರುವ ಶಂಕೆ ಇದೆ. ಪೋರ್ಡ್ ಐಕಾನ್ ಕಾರು ಸುಟ್ಟು ಕರಕಲಾದ ಕಾರಣ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಚಾಸ್ಸಿಸ್ ಹಾಗೂ ಇಂಜಿನ್ ನಂಬರ್ ಕೂಡ ಸುಟ್ಟು ಹೋದ ಕಾರಣ ಕಾರಿನ ಮಾಲಕರ ಪತ್ತೆಮಾಡುವುದು ಸದ್ಯಕ್ಕೆ ಸಾಧ್ಯವಾಗಿಲ್ಲ. ಬೈಂದೂರು ಪೊಲೀಸರು ಘಟನೆಯ ಬಗ್ಗೆ ತನಿಕೆ ಆರಂಭಿಸಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಇಂಡಿಯಾ ಟುಡೇ ನಿಯತಕಾಲಿಕೆಯ 2022ನೇ ಸಾಲಿನ ಎಂಡಿಆರ್ಎ ಸಮೀಕ್ಷೆ ಪ್ರಕಟಗೊಂಡಿದ್ದು, ಆಳ್ವಾಸ್ ಕಾಲೇಜಿನ ವಿವಿಧ ವಿಭಾಗಗಳು ಅಖಿಲ ಭಾರತ ಮಟ್ಟದಲ್ಲಿ ಉತ್ತಮ ಶ್ರೇಣಿಗಳನ್ನು ಪಡೆದುಕೊಂಡಿವೆ. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕೆ 37ನೇ ರ್ಯಾಂಕ್, ಪದವಿ ವಿಜ್ಞಾನ ವಿಭಾಗಕ್ಕೆ 122ನೇ ರ್ಯಾಂಕ್, ಕಲಾ ವಿಭಾಗಕ್ಕೆ 123, ಬಿಸಿಎ 135, ಬಿಬಿಎ 147 ಹಾಗೂ ವಾಣಿಜ್ಯ ವಿಭಾಗವು 175ನೇ ರ್ಯಾಂಕ್ ಪಡೆದುಕೊಂಡಿವೆ. ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ, ಸಂಶೋಧನೆ, ಕಲಿಕೆಗೆ ಅಗತ್ಯವಿರುವ ಸೌಕರ್ಯಗಳು , ಸ್ವೀಕೃತ ಅರ್ಜಿಗಳ ಗುಣಮಟ್ಟ, ಉದ್ಯೋಗ ಭದ್ರತೆ, ವ್ಯಕ್ತಿತ್ವ ಹಾಗೂ ನಾಯಕತ್ವ ಕೌಶಲ್ಯ ಹಾಗೂ ವಿದ್ಯಾರ್ಥಿ ಸ್ನೇಹಿ ಕಲಿಕಾ ವಾತಾವರಣವನ್ನು ಗುರುತಿಸಿ ಈ ಶ್ರೇಣಿಗಳನ್ನು ನೀಡಲಾಗುತ್ತದೆ. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗವು ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ಕೆಟಗರಿಯಲ್ಲಿ ಅಖಿಲ ಭಾರತ ಮಟ್ಟದ ಟಾಪ್ ಕಾಲೇಜುಗಳಲ್ಲಿ 10ನೇ ರ್ಯಾಂಕ್ ಗಳಿಸಿದೆ. ಕಳೆದ ಬಾರಿಯ ಆಲ್ ಇಂಡಿಯಾ ರ್ಯಾಂಕಿAಗ್ನಲ್ಲಿ ಪತ್ರಿಕೋದ್ಯಮ ವಿಭಾಗಕ್ಕೆ 40ನೇ ರ್ಯಾಂಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.12: ಕಡಿಮೆ ವೆಚ್ಚ, ನಿರ್ವಹಣೆ, ಮಾನವ ಶ್ರಮ ಹಾಗೂ ವಿದ್ಯುಚ್ಚಕ್ತಿ ಇದ್ಯಾವುದರ ಅಗತ್ಯವೂ ಇಲ್ಲದೇ, ಪರಿಸರಕ್ಕೂ ಪೂರಕವಾಗಿ ಕಾರ್ಯನಿರ್ವಹಿಸಬಲ್ಲ ಯಶಸ್ವಿ ಜೈವಿಕ ತಂತ್ರಜ್ಞಾನ ಮ್ಯಾಕ್ ಬಯೋ ಡೈಜಿಸ್ಟರ್ (MAK Bio – Digester) ಸೆಫ್ಟಿಕ್ ಟ್ಯಾಂಕ್/ಎಸ್.ಟಿ.ಪಿ ಕರ್ನಾಟಕದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹಾಲ್ಕಲ್ ಸದಾನಂದ ಹಾಲ್ನಲ್ಲಿ ಉತ್ಪಾದನಾ ಸಂಸ್ಥೆ ಮ್ಯಾಕ್ ಇಂಡಿಯಾ (MAK India Limited) ಹಾಗೂ ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿರುವ ಮೇಡ್ ಇನ್ ಇಂಡಿಯಾ ಎಂಐಐ (Made in India MII Pvt. Ltd) ಪ್ರತಿನಿಧಿಗಳ ಸಮ್ಮುಖದಲ್ಲಿ ಸೋಮವಾರ ಲಾಂಚ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಮ್ಯಾಕ್ ಇಂಡಿಯಾ ಲಿಮಿಟೆಡ್ ಸಂಸ್ಥಾಪಕರಾದ ಮಾಣಿಕಂ ಅತ್ತಪ್ಪ ಗೌಂಡರ್, ಸಂಸ್ಥೆಯ ಹಿರಿಯ ವಿಜ್ಞಾನಿ ಶಿವಕುಮಾರ್ ರಾಮನ್, ಮೇಡ್ ಇನ್ ಇಂಡಿಯಾ ಸಂಸ್ಥೆಯ ಪ್ರಮುಖರಾದ ಕೆ. ವೆಂಕಟೇಶ ಕಿಣಿ, ರಾಜೀವ್ ಕುಮಾರ್ ಉಪಸ್ಥಿತರಿದ್ದರು. ಕರ್ನಾಟಕದಲ್ಲಿ ಮೊದಲ ಭಾರಿಗೆ ಬೈಂದೂರು ಪ್ಯಾಲೇಸ್ ಹಾಗೂ ದೇವಿ ಮೂಕಾಂಬಿ ಅಪಾರ್ಟ್ಮೆಂಟ್ಗಳಿಗೆ ಈ ಯೋಜನೆಯನ್ನ ಅಳವಡಿಸಲಾಗುತ್ತಿದೆ. ಬಯೋ ಡೈಜಿಸ್ಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಜೋನ್ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮುರುಡೇಶ್ವರ ಮಾವಳ್ಳಿಯ ನಿವಾಸಿಗಳಾದ ಮೊಹಮ್ಮದ್ ಇಫ್ಜಲ್ (27), ಮಹಮ್ಮದ್ ಅಸೀಮ್ ಡೊನ್ನಾ (20), ಮಹಮ್ಮದ್ ರಫಿ (21) ಹಾಗೂ ಭಟ್ಕಳದ ಮೊಹಮ್ಮದ್ ರಾಹಿಕ್ (22) ಬಂಧಿತ ಆರೋಪಿಗಳು. ಉಪ್ಪುಂದ ಅಂಬಾಗಿಲುವಿನಲ್ಲಿರುವ ಮೊಬೈಲ್ ಜೋನ್ ಎಂಬ ಅಂಗಡಿಯಲ್ಲಿ ಜುಲೈ 5ರ ರಾತ್ರಿ ಅಂಗಡಿಯ ಶೆಟರ್ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿತ್ತು. ಅಂಗಡಿಯಲ್ಲಿದ್ದ 3500 ರೂ. ನಗದು, 25 ಸಾವಿರ ರೂ. ಬೆಲೆಬಾಳುವ 17 ಕೀ ಪ್ಯಾಡ್ ಮೊಬೈಲ್ ಪೋನುಗಳು ಹಾಗೂ 5 ಸಾವಿರ ರೂ. ಮೌಲ್ಯದ ಮೊಬೈಲ್ ಗೆ ಉಪಯೋಗಿಸುವ ಪವರ್ ಬ್ಯಾಂಕ್ ಹಾಗೂ ಬ್ಲೂಟೂತ್ ಕಳವುಗೈದಿದ್ದು ಈ ವಸ್ತುಗಳ ಒಟ್ಟು ಮೌಲ್ಯ ರೂಪಾಯಿ 33,500 ರೂ. ಆಗಿದ್ದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡವರ ಡಾಕ್ಜರ್ ಎಂದೇ ತಾಲೂಕಲ್ಲಿ ಪ್ರಸಿದ್ದರಾಗಿದ್ದ ಜನಾನುರಾಗಿ ಹಂಗಳೂರಿನ ವೈದ್ಯ ಡಾ. ಎ.ಎಸ್. ಕಲ್ಕೂರು (87) ಅಂಕದಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು. ಡಾ.ಕಲ್ಕೂರ ಕಾಲೇಜ್ ವಿದ್ಯಾಭ್ಯಾಸದ ನಂತರ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಮಸಿಸ್ಟಾಗಿ ವೃತ್ತಿಜೀವನ ಆರಂಭಿಸಿದರು. ವೈದ್ಯರಾಗಿ ಸೇವೆ ಮುಂದುವರಿಸಿ ನಂತರ ಕೆಲಸಕ್ಕೆ ರಾಜಿನಾಮೆ ನೋಡಿ ಕುಂದಾಪುರ ಮುಖ್ಯರಸ್ತೆಯಲ್ಲಿ ಕ್ಲಿನಿಕ್ ತೆರೆದು ವೈದ್ಯ ವೃತ್ತಿ ಆರಂಭಿಸಿದರು. 53 ವರ್ಷ ಕುಂದಾಪುರಲ್ಲಿ ವೈದ್ಯವೃತ್ತಿ ನಂತರ ವಯಸ್ಸಿನ ಹಿನ್ನೆಲೆಯಲ್ಲಿ ಕ್ಲಿನಿಕ್ ಬಂದ ಮಾಡಿ ವಿಶ್ರಾಂತ ಜೀವನ ಸಾಗಿಸುತ್ತಿದ್ದರು. ಇವರು ಕನಿಷ್ಟ 5 ಹಾಗೂ ಗರಿಷ್ಟ 30 ರೂ.ಗಿಂತ ಹೆಚ್ಚಿಗೆ ಶುಲ್ಕ ತೆಗೆದುಕೊಂಡ ದಾಖಲೆಯೇ ಇಲ್ಲ. ಕುಂದಾಪುರದಲ್ಲಿ ಕಡಿಮೆ ಆಸ್ಪತ್ರೆ ವೈದ್ಯರಿದ್ದ ಕಾಲದಲ್ಲಿ ಕೇವಲ ಮಾತ್ರೆ, ಶಿರಪ್ ಮೂಲಕ ನೂರಾರು ಜನರ ಪ್ರಾಣ ಉಳಿಸಿದ್ದು, ಏನಾದರು ಅನಾರೋಗ್ಯ ಕಾಣಿಸಿಕೊಂಡರೆ ಕಲ್ಕೂರು ಡಾಕ್ಟರ್ ಹತ್ರ ಹೋದ್ರೆ ಗುಣ ಮಾಡ್ತ್ರು ಎನ್ನುವಷ್ಟು ಪ್ರಸಿದ್ದರಾಗಿದ್ದರು. ನಾಟಕ ಕಲಾವಿದರು, ಯಕ್ಷಗಾನ ಪ್ರೇಮಿಯಾಗಿದ್ದು, ಸಾಹಿತ್ಯ ಸಂಗೀತ…
