Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಅಭಿಯಾನ ಮತ್ತು ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಎಚ್.ಗಣೇಶ ಕಾಮತ್ ಶುಭಾಶಂಸನೆಗೈದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಮತ್ತು ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಪೌಷ್ಟಿಕ ಆಹಾರದ ಮಾಹಿತಿ, ಪ್ರಾತ್ಯಕ್ಷಿಕೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಬೈಂದೂರು: ರೈತ ವಿರೋಧಿ ಕಾನೂನು, ಬೆಲೆ ಏರಿಕೆ, ತೈಲ ಬೆಲೆ ಏರಿಕೆಯಿಂದ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಿಐಟಿಯು ರಾಜ್ಯ ಕಾರ‍್ಯಕಾರಿಣಿ ಮಂಡಳಿ ಸದಸ್ಯ ಕೆ. ಶಂಕರ್ ಹೇಳಿದರು. ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ರೈತರ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ಸಿಐಟಿಯು ಹಮ್ಮಿಕೊಂಡ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು. ಸಿಐಟಿಯು ತಾಲೂಕು ಮುಖಂಡ ಎಚ್. ನರಸಿಂಹ, ಹಿರಿಯ ಮುಖಂಡರಾದ ಯು. ದಾಸ ಭಂಡಾರಿ, ಮಹಾಬಲ ವಡೇರಹೋಬಳಿ, ಡಿವೈಎಫ್‌ಐ ಮುಖಂಡ ರಾಜೇಶ್ ವಡೇರಹೋಬಳಿ, ಬೀಮಘರ್ಜನೆ ಸಂಘಟನೆಯ ಮಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬೈಂದೂರು: ಕೇಂದ್ರ ಸರಕಾರದ ನೂತನ ಕೃಷಿ ವಿಧೇಯಕಗಳ ವಿರುದ್ದ ನಾನಾ ಸಂಘಟನೆಗಳ ನೇತೃತ್ವದಲ್ಲಿ ರೈತರು ಸೋಮವಾರ ಭಾರತ ಬಂದ್‌ಗೆ ಕರೆ ನೀಡಿದ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ನಾನಾ ಸಂಘಟನೆಗಳ ವತಿಯಿಂದ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ ಹಾಗೂ ಪ್ರಗತಿಪರ ಕೃಷಿಕ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಡೀ ಜಗತ್ತೇ ಮೆಚ್ಚುವಂತಹ ನಾಯಕ, ನಮ್ಮ ದೇಶ ಕಂಡ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಬೈಂದೂರು ಕ್ಷೇತ್ರದಾದ್ಯಂತ ವಿವಿಧ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ಅರಾಟೆಯ ಪುಣ್ಯಕ್ಷೇತ್ರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸುವ ಮೂಲಕ ಒಂದು ಉತ್ತಮ ಪುಣ್ಯದ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಿದ್ದಾರೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಅಂಗವಾಗಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಭಾಗವಾಗಿ ಹೊಸಾಡು ಗ್ರಾಮದ ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಠಾರದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ರಮೇಶ ಆಚಾರ್ಯ ಅರಾಟೆ, ಹಿರಿಯರಾದ ಎಂ.ಎಂ. ಸುವರ್ಣ, ಜಿಲ್ಲಾ ಬಿಜೆಪಿ ಕಾರ‍್ಯಕಾರಿಣಿ ಸದಸ್ಯ ಹರೀಶ್ ಮೇಸ್ತ ಗುಜ್ಜಾಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳ ಕಲಿಕಾ ಹಂತದಲ್ಲಿ ಶಿಕ್ಷಕರ ಪಾತ್ರ ಮೌಲ್ಯಯುತವಾದದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ, ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ಓದಿ ಜಾಣರಾಗಲು, ಯಾವುದೇ ವಿಷಯದ ಜ್ಞಾನವನ್ನು ಧಾರೆಯೆರೆಯಲು ಗುರುಗಳು ತಮ್ಮ ಸರ್ವಸ್ವವನ್ನು ಮೀಸಲಿಡುತ್ತಾರೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಹೀಗಾಗಿ ವಿದ್ಯಾರ್ಥಿಗಳು ಕಲಿಸಿದ ಗುರುಗಳನ್ನು ಮರೆಯಬಾರದು ಎಂದರು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್., ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಗ್ರೇಶಲ್ ಸ್ವಾಗತಿಸಿ, ವಿದ್ಯಾರ್ಥಿ ಪ್ರಜ್ವಲ್ ವಂದಿಸಿದರು. ವಿದ್ಯಾರ್ಥಿನಿ ಪ್ರಿಯಾಂಕಾ ಪೂಜಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉದ್ಯೋಗದೊಂದಿಗೆ ಮನೆಯ ಕೆಲಸದಲ್ಲಿಯೂ ತೊಡಗಿಸಿಕೊಂಡ ಮಹಿಳೆ ಒತ್ತಡದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟೀಕೆಗಳಿಗೆ ಗಮನ ಕೊಡದೇ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಹಿಂಜರಿಕೆ ಕಾಣದೇ, ತಾಳ್ಮೆ, ಸಹನೆಯಿಂದ ಮುನ್ನುಗ್ಗುವಂತ ಮನೋಭಾವನೆ ಬೆಳೆಸಿಕೊಳ್ಳಬೇಕು. ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸ್ವಾವಲಂಬನೆಯತ್ತಾ ಮಹಿಳೆಯರು ದಿಟ್ಟ ಹೆಜ್ಜೆಯನ್ನಿಡಬೇಕು, ಮಹಿಳೆಯರಿಗೂ ಜ್ಞಾನ ಪೀಠ ಪ್ರಶಸ್ತಿ ದೊರಕಬೇಕು ಎಂದು ಶಿಕ್ಷಕಿ ಹಾಗೂ ಸಾಹಿತಿ ಸುಮಿತ್ರ ಐತಾಳ್ ಹೇಳಿದರು. ಅವರು ಕೋಟ ಡಾ.ಕಾರಂತ ಥೀಂ ಪಾರ್ಕ್ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್,(ರಿ) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನದ (ರಿ)ಕೋಟ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ, ಮಣೂರು ಅಶ್ವಿನಿ ಮಧ್ಯಸ್ಥ ಸ್ಮಾರಕ ಸಾಧನಾ ಶ್ರೀ ಮಹಿಳಾ ಪುರಸ್ಕಾರ ಪ್ರದಾನ ಸಮಾರಂಭ ಭಾವಗಾನ-2021(ಸಾಧನೆಯ ತಿಲ್ಲಾನ) ಕಾರ್ಯಕ್ರಮದ ಸಮ್ಮೇಳನಾಧ್ಯಕ್ಷೆ ನೆಲೆಯಲ್ಲಿ ಮಾತನಾಡಿದರು. ಹೆಣ್ಣಿನ ನೋವು ಸಾಹಿತ್ಯದಲ್ಲಿ ಅನಾವರಣಚಲನಶೀಲತೆ ಜೀವಂತಿಕೆ ಗುಣ, ನಿಸರ್ಗದ ಹೊಂದಾಣಿಕೆಯಂತೆ ಕಾಲ ಉರುಳುತ್ತದೆ. ಅದಕ್ಕೆ ತಡೆಯಂಬುದಿಲ್ಲ ಅಂತಹ ಪ್ರಭಾವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ನೂತನವಾಗಿ ನಾಲ್ಕು ಹೊಸ ತಂಡಗಳ ಉದ್ಘಾಟನಾ ಕಾರ್ಯಕ್ರಮಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೆಕ್ಕೆ ಒಕ್ಕೂಟ ಅಧ್ಯಕ್ಷರಾದ ಎಂ.ಜೆ. ಬೇಬಿ ವಹಿಸಿದ್ದರು. ಕೊಲ್ಲೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹಾಬಲ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ವಲಯ ಮೇಲ್ವಿಚಾರಕ ರಾಮ್ ಎನ್. ನಾಲ್ಕು ಹೊಸ ತಂಡದ ಸದಸ್ಯರಿಗೆ ದಾಖಲಾತಿ ಹಸ್ತಾಂತರಿಸಿ ತಂಡದ ಸಭಾ ನಡವಳಿಕೆ ಮತ್ತು ಜವಾಬ್ದಾರಿಗಳನ್ನು ತಿಳಿಸಿದರು. ಯೋಜನೆಯ ನಿಕಟವರ್ತಿ ದಿನೇಶ್ ಶಾಸ್ತ್ರೀ, ರಾಜು ನಾಯ್ಕ ಮೇಲ್ ಕೆಂಜಿ, ಒಕ್ಕೂಟದ ಉಪಾಧ್ಯಕ್ಷ ಸೂಲ್ಯ ಪೂಜಾರಿ, ಕಾರ್ಯದರ್ಶಿ ವಿದ್ಯಾ, ಜೊತೆ ಕಾರ್ಯದರ್ಶಿ ಶ್ಯಾಮಲಾ, ಕೋಶಾಧಿಕಾರಿ ಮಂಜುನಾಥ್ ನಾಯ್ಕ ಉಪಸ್ಥಿತರಿದ್ದರು. ಕೊಳಲು ತಂಡದ ಸದಸ್ಯ ಸತೀಶ್ ನಾಯ್ಕ ಅನಿಸಿಕೆ ವ್ಯಕ್ತಪಡಿಸಿದರು. ನೂತನ ನಾಲ್ಕು ತಂಡದ ಸದಸ್ಯರ ಕುಟುಂಬದವರು ಹಿರಿಯ ತಂಡಗಳ ಸದಸ್ಯರು ಹಾಜರಿದ್ದರು. ತಂಡ ಉದ್ಘಾಟನಾ ಸವಿನೆನಪಿಗಾಗಿ ನಾಲ್ಕು ತಂಡಕ್ಕೆ ಗಿಡಗಳನ್ನು ನೀಡಲಾಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವು ನಿರ್ವಹಿಸುವ ಕಾರ್ಯದಲ್ಲಿ ಪ್ರಾಮಾಣಿಕ ಪ್ರಯತ್ನವಿದ್ದರೆ ಬದುಕು ಯಶಸ್ಸಿನತ್ತ ಸಾಗುತ್ತದೆ ಎಂದು ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಹೇಳಿದರು. ಬೈಂದೂರು ರೋಟರಿ ಭವನದಲ್ಲಿ ಭಾನುವಾರ ‘ಕುಂದಾಪ್ರ ಡಾಟ್ ಕಾಂ’ ಸುದ್ದಿತಾಣದ ದಶಮಾನೋತ್ಸವ ಅಂಗವಾಗಿ ಸುರಭಿ ರಿ. ಬೈಂದೂರು ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಲಾದ ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬರೂ ಬದುಕಿನಲ್ಲಿ ಕ್ರೀಯಾಶೀಲತೆಯನ್ನು ಕಾಯ್ದುಕೊಳ್ಳುವುದು ಮುಖ್ಯ. ಪತ್ರಿಕಾರಂಗದ ಸವಾಲುಗಳ ನಡುವೆ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಶುಭಹಾರೈಸಿದರು. ಕಾರ್ಯಕ್ರಮಕ್ಕೆ ಚಂಡೆ ಭಾರಿಸಿ ಚಾಲನೆ ನೀಡಿದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ ಇಂದಿನ ಬಹುಪಾಲು ಮಾಧ್ಯಮಗಳಲ್ಲಿ ವರದಿ ಪ್ರಕಟಿಸುವುದಕ್ಕಿಂತ ಹೆಚ್ಚಾಗಿ ಅಭಿಪ್ರಾಯಗಳ ಹೇರಿಕೆಯಾಗುತ್ತಿದೆ. ಓದುಗರಾಗಿ ನಾವು ಮಾಧ್ಯಮದಿಂದ ವಸ್ತುನಿಷ್ಠ ವರದಿಯನ್ನಷ್ಟೇ ನಿರೀಕ್ಷಿಸುತ್ತೇವೆ. ಓದಿದ ಬಳಿಕ ಅಭಿಪ್ರಾಯ ರೂಪಿಸಿಕೊಳ್ಳುವ ಸ್ವಾತಂತ್ರ್ಯ ಓದುಗರಿಗೆ ಬಿಡುವುದು ಒಳ್ಳೆಯದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್‌ಸ್ಟಿಟ್ಯೂಷನ್‌ನ ಅಧ್ಯಕ್ಷರಾದ ಆರ್. ಉಪೇಂದ್ರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಬದುಕನ್ನು ಕಟ್ಟಿಕೊಳ್ಳುವಲ್ಲಿ ವಿದ್ಯೆಯ ಜೊತೆಜೊತೆಗೆ, ಸಮಾಜದ ಶಿಕ್ಷಣದ ಮಹತ್ವವನ್ನು ತಮ್ಮ ಅನುಭವದೊಂದಿಗೆ ಹಂಚಿಕೊಂಡರು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ, ಹೀಗೆ ಸರ್ವಾಂಗೀಣ ಸಾಧನೆಗೆ ಕೊಡಮಾಡುವ ಬಿಎಂಎಸ್ ಗೋಲ್ಡ್ ಮೆಡಲ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಡಮಾಡುವ ಐಕ್ಯೂಎಸಿ ಗೋಲ್ಡ್ ಮೆಡಲ್ ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪುರಸ್ಕರಿಸಲಾಯಿತು. ಈ ಸಂದರ್ಭ ಡಾ. ಸಂಪತ್ ಕುಮಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸಾಡು ಗ್ರಾಮದ ಅರಾಟೆ ಜನರ ದೂರ ದೃಷ್ಟಿಯ ಆಲೋಚನೆಯಿಂದ ನಿರ್ಮಾಣಗೊಂಡ ನೂತನ ಬಸ್ ತಂಗುದಾಣಕ್ಕೆ ವಾಜಪೇಯಿ ಅವರ ಹೆಸರನ್ನು ಇಡುವುದರ ಮೂಲಕ ವಿಶೇಷವಾದ ಗೌರವವನ್ನು ಗ್ರಾಮದ ಜನರು ಅವರಿಗೆ ಸಲ್ಲಿಸಿದ್ದಾರೆ. ಇಲ್ಲಿನ ಜನರ ಬಹು ಮುಖ್ಯ ಬೇಡಿಕೆಗಳೊಂದಾದ ಬಸ್ ತಂಗುದಾಣವು ಹೋರಾಟದ ಫಲದಿಂದ ನಿರ್ಮಾಣಗೊಂಡಿದೆ. ಹೊಸಾಡು ಗ್ರಾಮದ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ ಹೊಸಾಡು ಗ್ರಾಮದ ಅರಾಟೆಯಲ್ಲಿ ರಾ.ಹೆ.66ರ ಸಮೀಪ ನಿರ್ಮಾಣಗೊಂಡ ಸುಸಜ್ಜಿತವಾದ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತಿಗೂ 20ರಿಂದ 25ಮನೆಗಳು ನೀಡುವ ವ್ಯವಸ್ಥೆ ಮಾಡಲಾಗುವುದು. ಈ ಸಂಬಂಧ ಗ್ರಾಮ ಪಂಚಾಯತಿಗಳೊಂದಿಗೆ ವಿಶೇಷ ಸಭೆ ಕರೆಯಲಾಗಿದೆ. 94ಸಿ,95ಸಿಸಿ,53ಮತ್ತು 57 ರ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಬಿಜೆಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಚೆಸ್ ಅಸೋಸಿಯೇಷನ್‌ನ ಗೌರವ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಡಾ.ರಾಜ್ ಗೋಪಾಲ್ ಶೆಣೈ ಅವರು ಆಯ್ಕೆಯಾಗಿದ್ದಾರೆ. ಅವರು ಜಿಲ್ಲೆಯಲ್ಲಿ ಸುಮಾರು ಹತ್ತು ವರ್ಷದಿಂದ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಚೆಸ್ ಸ್ಪರ್ದೆಗಳನ್ನು ಎರ್ಪಡಿಸಿ ರಾಷ್ಟ್ರಮಟ್ಟದಲ್ಲಿ ಜಿಲ್ಲೆಯ ಹೆಸರನ್ನು ಪಸರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ.

Read More