Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಹಯೋಗದಲ್ಲಿ, ಕುಂದಾಪುರ ವೃತ್ತ ಮಟ್ಟದ ಕ್ರೀಡಾಕೂಟವು ಗುರುವಾರ ಗಾಂಧಿ ಮೈದಾನದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು. ಸಭೆಯಲ್ಲಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ, ನರ್ಸರಿ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಹ್ಮಣ್ಯ ಎಸ್ ಇವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ 14 ವರ್ಷ ವಯೋಮಿತಿಯ ಎಐಸಿಎಸ್ ಅಂತರ್‌ ಶಾಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಹಟ್ಟಿಅಂಗಡಿಯು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಉತ್ಸವ ಬಿಪಿ, ವಿಖ್ಯಾತ ಮಧ್ಯಸ್ಥ, ಆರವ್ ಎಸ್. ಶೆಟ್ಟಿ, ಶಶಿಭೂಷಣ ಶೆಟ್ಟಿ, ಸಿರಿ ಜಿ. ಕಾಮತ್ ಇವರ ತಂಡವು ಶಾಲೆಯ ಪರವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ವಿದ್ಯಾರ್ಥಿಗಳನ್ನು ಮತ್ತು ಅವರಿಗೆ ಮಾರ್ಗದರ್ಶನಗೈದ ಶಿಕ್ಷಕರನ್ನೂ ಅಭಿನಂದಿಸಿ, ಮಾತನಾಡುತ್ತಾ ನಮ್ಮ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲೂ ಸಕ್ರೀಯರಾಗಿ ಭಾಗವಹಿಸಿ, ಮಾರ್ಗದರ್ಶನದಂತೆ ಸಾಗುತ್ತಿರುವುದು ಈ ಸಾಧನೆಗಳಿಗೆ ಮೂಲ ಕಾರಣ. ಅದನ್ನು ನಾವು ಇನ್ನಷ್ಟು ವೃದ್ಧಿಸಿಕೊಳ್ಳಬೇಕು ಎಂದರು. ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶಾಲಾ ಅಧ್ಯಾಪಕವೃಂದ, ಶಿಕ್ಷಕೇತರವೃಂದದವರೂ ವಿದ್ಯಾರ್ಥಿಗಳ ಸಾಧನೆಗೆ ಹರ್ಷವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ಥಳೀಯ ಐ.ಎಂ.ಜೆ. ಶಿಕ್ಷಣ ಸಂಸ್ಥೆ ಮೂಡಲಕಟ್ಟೆಯಲ್ಲಿ ಕರ್ನಾಟಕ ಸರ್ಕಾರ, ಮೈಕ್ರೋಸಾಫ್ಟ್, ಕೇಂದ್ರ ಸರ್ಕಾರದ MeitY ಸ್ಟಾರ್ಟ್‌ಅಪ್ ಹಬ್ ಮತ್ತು 1M1B ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಉದ್ಯೋಗ ಮೇಳ ‘ಜಾಬ್ ಎಕ್ಸ್‌ಪ್ರೆಸ್ 2K26’ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸ್ಪಂದನೆ ದೊರೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್‌ನ ಆರ್ಕಿಟೆಕ್ಟ್ ಡಾ. ಸ್ಯಾಮ್ಯುಯೆಲ್ ಅಗಸ್ಟಸ್ ನಾರ್ಟನ್ ಸ್ಟಾನ್ಲಿ ಅವರು ಆಗಮಿಸಿದ್ದು, ಇಂದಿನ ತಂತ್ರಜ್ಞಾನ ಯುಗದಲ್ಲಿ ಪರಿಸರ ಸ್ನೇಹಿ ಕೌಶಲಗಳು ಹಾಗೂ ಕೃತಕ ಬುದ್ಧಿಮತ್ತೆ (AI) ಜ್ಞಾನಕ್ಕೆ ಅಪಾರ ಬೇಡಿಕೆಯಿದ್ದು, ಯುವಜನತೆ ನಿರಂತರ ಕಲಿಕೆಯೊಂದಿಗೆ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಉದ್ಯೋಗಾಕಾಂಕ್ಷಿಗಳಿಗೆ ಕರೆ ನೀಡಿದರು. ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ರೇಮಾ ಜೋಸೆಫ್, ಮುಖ್ಯಸ್ಥರು ಮತ್ತು ಹಿರಿಯ ಮಾರ್ಗದರ್ಶಕರು, ಗ್ರೀನ್ ಸ್ಕಿಲ್ಸ್ & ಅಪ್ಲೈಡ್ ಎಐ ಫಾರ್ ಕ್ಲೈಮೇಟ್ ಆಕ್ಷನ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆಯಿದ್ದು, ಅವರನ್ನು ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಸಂಪರ್ಕಿಸುವ ವೇದಿಕೆ ಇದಾಗಿದೆ ,ವಿದ್ಯಾರ್ಥಿಗಳಿಗೆ ಉಜ್ವಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಮತ್ತು ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ “ಕುಸ್ತಿ ಪಂದ್ಯಾಟ”-2026 ಉದ್ಘಾಟನಾ ಸಮಾರಂಭ ನಡೆಯಿತು . “ಕುಸ್ತಿ ಪಂದ್ಯಾಟ-2026″ದ ಅಂತಿಮ ಪಂದ್ಯದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಜಯಗಳಿಸಿತು . ಬ್ರಹ್ಮಾವರದ ಎಸ್.ಎಮ್.ಎಸ್ ಪದವಿಪೂರ್ವ ಕಾಲೇಜು ರನ್ನರ್ ಆಫ್ ಸ್ಥಾನ ಪಡೆಯಿತು ಬ್ರಹ್ಮಾವರ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕುಸ್ತಿ ಆಟವು ಭಾರತದ ಸಾಂಸ್ಕೃತಿಕ ಕಲೆಯಾಗಿದೆ . ಇಂತಹ ಪಂದ್ಯಾಟಗಳ ಮೂಲಕ ಕುಸ್ತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕರ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಕುಂದಾಪುರ ಪದವಿಪೂರ್ವ ವಿಭಾಗದ ಕ್ರೀಡಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಹೆಚ್‌ಕೆಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ಪುಸ್ತಕ ಮನೆ ವತಿಯಿಂದ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರಾದ ಎಚ್ ಡುಂಡಿರಾಜ್ ಅವರ 100ನೇ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ 70ನೇ ವರ್ಷದ ಅಭಿನಂದನೆ ಮತ್ತು ಖ್ಯಾತ ಸಾಹಿತಿಗಳಾದ ಬಿಆರ್ ಲಕ್ಷ್ಮಣರಾವ್ ಅವರ ಪುಸ್ತಕ ಬಿಡುಗಡೆ ಹಾಗೂ 80ನೇ ವರ್ಷದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಚ್. ಡುಂಡಿರಾಜ್ ಅವರ ‘ಕಾವ್ಯ ಡುಂಡಿಮ’ ಮತ್ತು ಬಿಆರ್ ಲಕ್ಷ್ಮಣ ರಾವ್ ಅವರ ‘ಸಾವೇ ಬೀಗಬೇಡ’ ಹಾಗೂ ‘ಓಶೋ ರಜನೀಶ್ ನಿಜರೂಪ’ ಎಂಬ ಕೃತಿಗಳು ಲೋಕಾರ್ಪಣೆಗೊಂಡವು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ನಮ್ಮ ಕ್ರಿಯೇಟಿವ್ ಪುಸ್ತಕ ಮನೆ ನಮ್ಮ ನಾಡಿನ ಖ್ಯಾತ ಬರಹಗಾರರ ಕೃತಿಗಳನ್ನು ಪ್ರಕಾಶನ ಮಾಡಲಾಗುತ್ತಿದೆ. ಹೂವಿನಲ್ಲಿ ಹೇಗೆ ದುಂಬಿಗಳಿರುತ್ತವೋ ಹಾಗೆ ಕನ್ನಡ ಸಾಹಿತ್ಯದಲ್ಲಿ ಡುಂಡಿರಾಜರು ಹಾಗೂ ಕನ್ನಡದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರಿ ಸೇವೆಗಳನ್ನು ಒದಗಿಸುವಲ್ಲಿ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟ‌ರ್ ಮಂಜುನಾಥ್ ನೇತೃತ್ವದ ತಂಡ ಸರ್ಚ್ ವಾರಂಟ್ ಪಡೆದು ಗ್ರಾ‌ಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದು ಪಡೆದಿದ್ದು ಹಲವು ಸಮಯಗಳಿಂದ ಬಾಕಿಯಿದ್ದ ಕಡತಗಳ ಪರಿಶೀಲನೆ ಜೊತೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆ ಮಧ್ಯಾಹ್ನದವರೆಗೂ ಮುಂದುವರೆದಿದ್ದು, ಗ್ರಾ.ಪಂ ಸಂಬಂಧಿತ ಬಾಕಿ ಕಡತಗಳು, ದಾಖಲೆ ಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿದರು.ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ, ಸಿಬ್ಬಂದಿಗಳಾದ ಅರುಣ ಕುಮಾರ್, ಅಬ್ದುಲ್ ಜಲಾಲ್, ಆದರ್ಶ, ಸೂರಜ್ ಕಾಪು ಮೊದಲಾದವರು ಕಾರ್ಯಾಚರಣೆಯಲ್ಲಿ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸ್ಟೆಲಾ ಮ್ಯಾರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ 14 ವರ್ಷದ ಬಾಲಕ- ಬಾಲಕಿಯರ ನೆಟ್‌ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಬಾಲಕರ ತಂಡದಲ್ಲಿ ಸಮರ್ಥ್, ಸಮರ್ಥ್ ಖಾರ್ವಿ, ವೈಭವ್, ನಾಗರಾಜ್, ಅರವ್, ವಿಗ್ನೇಶ್, ಯಶ್ವಿಕ್, ಮೌನೇಶ್, ನಿಯಾನ್ ಮತ್ತು ಬಾಲಕಿಯರ ತಂಡದಲ್ಲಿ ಮನ್ವಿತಾ, ಸನ್ನಿಧಿ, ಶ್ರೀ ಲಕ್ಷ್ಮಿ, ಅಪೇಕ್ಷಾ, ಧನ್ಯ ಖಾರ್ವಿ, ಸನ್ನಿಧಿ ಖಾರ್ವಿ, ಶ್ರಾವಣಿ, ಅನ್ವಿತಾ, ಆಶೀತಾ ಖಾರ್ವಿ, ಅದಿತಿ ಪ್ರತಿನಿಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದರು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ವೃಂದ ಮತ್ತು ಶಿಕ್ಷಕ-ರಕ್ಷಕ ಸಮಿತಿ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ , ಶ್ರೀ ವಿಶ್ವಕರ್ಮ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಗುರುವಾರ ಸಾಲಿಗ್ರಾಮದ ಶ್ರೀ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಪುರೋಹಿತರಾದ ಲಕ್ಷ್ಮೀಕಾಂತ್ ಶರ್ಮ ಪೌರೋಹಿತ್ಯದಲ್ಲಿ ಸಂಘದ ಅಧ್ಯಕ್ಷ ಎಂ. ಸುಬ್ರಾಯ ಆಚಾರ್ಯ ದಂಪತಿಗಳ ಸಮ್ಮುಖದಲ್ಲಿ ನೆರವೇರಿತು. ಅಪರಾಹ್ನ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ಜರಗಿತು. ಈ ಅಂಗವಾಗಿವ .ಅಪರಾಹ್ನ 2.30ರಿಂದ ಎಂ. ಹೆಚ್. ಪ್ರಸಾದ್ ಕುಮಾರ್ ಮೊಗೆಬೆಟ್ಟು ಅವರ ನಿರ್ದೇಶನದಲ್ಲಿ ಸಂಘದ ಸದಸ್ಯರಿಂದ ‘ಭೀಷ್ಮ ವಿಜಯ ಯಕ್ಷಗಾನ ಪ್ರಸಂಗ ಅಭಿನಯ.ಅತಿಥಿ ಕಲಾವಿದರಾಗಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಭಾಗವತರಾಗಿ ಭಾಗಿಯಾದರು. ರಾತ್ರಿ 9.00 ರಿಂದ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗದ ಸದಸ್ಯರಿಂದ ’ಕಲಾ ವೇದಿಕೆ – 2026ʼ ಸಂಗೀತ, ನೃತ್ಯ ಮತ್ತು ಗಾನ ವೈಭವ ಮನೋರಂಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕತಾರ್: ಕರ್ನಾಟಕ ಸಂಘ ಕತಾರ್ (KSQ) ನಿಯೋಗದ ಅಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ, ಉಪಾಧ್ಯಕ್ಷರಾದ ಅನಿಲ್ ಭಾಸಗಿ, ಕಾರ್ಯಕಾರಿ ಸಮಿತಿ ಸದಸ್ಯರು, ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ ಶೆಟ್ಟಿ, ಸಲಹೆಗಾರರಾದ ವೀರೇಶ್ ಮಣ್ಣಂಗಿ ಹಾಗೂ ಸಂದೀಪ್ ರೆಡ್ಡಿ (ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಮಿತಿಯಲ್ಲಿ ಕರ್ನಾಟಕದ ಪ್ರತಿನಿಧಿ) ಅವರೊಂದಿಗೆ ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿ, ಭಾರತೀಯ ರಾಯಭಾರ ಕಚೇರಿ, ದೋಹಾದ ಉಪ ರಾಯಭಾರ ಮುಖ್ಯಸ್ಥರು (DCM) ಸಂದೀಪ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ ಸಲ್ಲಿಸಿತು. ಈ ಸಂದರ್ಭದಲ್ಲಿ, ತಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕ ಸಂಘ ಕತಾರ್‌ಗೆ ನೀಡಿದ ಅತ್ಯುತ್ತಮ ಮಾರ್ಗದರ್ಶನ, ನಿರಂತರ ಪ್ರೋತ್ಸಾಹ ಹಾಗೂ ಅಚಲ ಬೆಂಬಲಕ್ಕಾಗಿ KSQ ನಿಯೋಗವು ಸಂದೀಪ್ ಕುಮಾರ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿತು. ಸಂಘದ ವಿವಿಧ ಸಮುದಾಯ ಉಪಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಹಾಗೂ ನಿರಂತರ ಮಾರ್ಗದರ್ಶನವನ್ನು ನಿಯೋಗವು ವಿಶೇಷವಾಗಿ ಸ್ಮರಿಸಿತು. ಅವರ ಬೆಂಬಲವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಹಿಳೆಯರ ಆರ್ಥಿಕ ಸಬಲೀಕರಣವು ಕುಟುಂಬದ ಅಭಿವೃದ್ಧಿಯಷ್ಟೇ ಅಲ್ಲದೆ, ಸಮಾಜದ ಪ್ರಗತಿಗೂ ಪ್ರಮುಖ ಆಧಾರವಾಗಿದೆ. ಮಹಿಳೆಯರಲ್ಲಿರುವ ಕೌಶಲ್ಯಕ್ಕೆ ಸೂಕ್ತ ವೇದಿಕೆ ಹಾಗೂ ಮಾರುಕಟ್ಟೆ ದೊರೆತಾಗ ಅದು ಸ್ವಾವಲಂಬನೆ ಮತ್ತು ಆರ್ಥಿಕ ಸ್ವಾತಂತ್ರ‍್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಆಳ್ವಾಸ್ ಮೆಡಿಕಲ್ ಕಾಲೇಜಿನ ಡೀನ್ ಡಾ. ಮಹಾಬಲೇಶ್ ಶೆಟ್ಟಿ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ವೇದಿಕೆ ‘ಸಕ್ಷಮಾ’ ಹಾಗೂ ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಸಹಯೋಗದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಆಸಕ್ತ ಗೃಹಿಣಿಯರು, ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ಹಾಗೂ ಹವ್ಯಾಸಿ ಕಸೂತಿ ಕಲಾವಿದೆಯರಿಗಾಗಿ ಆಯೋಜಿಸಿರುವ ‘ಆರಿ ಲಹರಿ’ 15 ದಿನಗಳ ಉಚಿತ ಆರಿ ಕಸೂತಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇಂತಹ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಮಹತ್ವದ ಕೊಡುಗೆ ನೀಡುತ್ತವೆ. ಮಹಿಳೆಯರು ತಮ್ಮಲ್ಲಿರುವ ಕೌಶಲ್ಯವನ್ನು ಗುರುತಿಸಿ, ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಆರ್ಥಿಕ ಶಕ್ತಿಯಾಗಿ ಪರಿವರ್ತಿಸಿಕೊಳ್ಳಬೇಕು. ಕೌಶಲ್ಯವು ಕೇವಲ ವೈಯಕ್ತಿಕ ಆಸಕ್ತಿಯಾಗಿ ಉಳಿಯದೆ, ಆದಾಯದ ಮೂಲವಾಗಬೇಕು…

Read More