ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ಪ್ರಕಾಶ್ ಎಸ್. ಶೆಟ್ಟಿ (55) ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ. ಅವರು 10 ದಿನಗಳ ಹಿಂದೆ ಹೃದಯ ಸಂಬಂಧಿ ತೊಂದರೆ ಕಾಣಿಸಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲುಗೊಂಡು ಚಿಕಿತ್ಸೆ ಪಡೆದುಕೊಂಡಿದ್ದರು. ಫೆ.12ರಂದು ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಬುಧವಾರ ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಗ್ರಾಮದ ಹಂದಕೊಡ್ಲು ಇಳಿಜಾರಿನಲ್ಲಿ ಬೈಕ್ ಬಿಟ್ಟು ರಸ್ತೆಗೆ ಉರುಳಿದ ಸವಾರ ಮೃತಪಟ್ಟ ಘಟನೆ ನಡೆದಿದೆ. ಸಿದ್ದಾಪುರದಿಂದ ಆವರ್ಸೆಗೆ ಸಾಗುತ್ತಿದ್ದ ಆಟೋರಿಕ್ಷಾ ಹಂದಕೊಡ್ಲು ಸಾಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಇಳಿಜಾರಿನಲ್ಲಿ ಆಟೋರಿಕ್ಷಾ ಕಂಡು ಗಲಿಬಿಲಿಗೊಂಡು ಬೈಕ್ನ್ನು ಬಿಟ್ಟು ರಸ್ತೆಗೆ ನೆಗೆದಿದ್ದು, ನಂತರ ರಸ್ತೆಯಲ್ಲಿ ಉರುಳಿಕೊಂಡು ಹೋಗಿದ್ದಾರೆ. ಬೈಕ್ ಆಟೋರಿಕ್ಷಾದ ಬಲಭಾಗದ ಸೇಫ್ಗೆ ಬಂದು ಬಡಿದಿತ್ತು. ರಸ್ತೆಯಲ್ಲಿ ಉರುಳಿ ಬಿದ್ದ ಬೈಕ್ ಸವಾರ ಕುಂಬಾರಮಕ್ಕಿ ಕಳಿಗೆ ಚಂದ್ರ ಶೆಟ್ಟಿ (63) ಗೆ ಗಂಭೀರ ಗಾಯಗೊಂಡಿದ್ದು, ಕೂಡಲೆ ಆಟೋರಿಕ್ಷಾ ಚಾಲಕ ಮತ್ತು ಪ್ರಯಾಣಿಕರು ಚಿಕಿತ್ಸೆಯ ಬಗ್ಗೆ ಹಾಲಾಡಿಯ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದು, ಪರೀಕ್ಷಿಸಿದ ವೈದ್ಯರು ದಾರಿ ಮಧ್ಯದಲ್ಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಆಯೋಜಿಸಲಾಗಿದ್ದು, ಯುವಜನತೆ ತರಬೇತಿಯ ಲಾಭ ಪಡೆದುಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು. ಅವರು ಗುರುವಾರ ನಗರದ ಬ್ರಹ್ಮಗಿರಿಯ ಭಾರತೀಯ ರೆಡ್ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಯಾವುದೇ ಕರ್ತವ್ಯ ನಿರ್ವಹಿಸುವಾಗ ನಾಯಕತ್ವ ಗುಣ ಅತೀ ಮುಖ್ಯವಾಗಿರುತ್ತದೆ. ದೇಶದಲ್ಲಿ 18 ರಿಂದ 35 ವರ್ಷದೊಳಗಿನ ಯುವಜನರ ಸಂಖ್ಯೆಯು ಸುಮಾರು ಶೇ. 60-65 ರಷ್ಟು ಇದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವಸಮುದಾಯವು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದರು. ಸೃಜನಶೀಲತೆಯು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನದ 26ನೇ ವಾರ್ಷಿಕ ಉತ್ಸವದ ನಾಲ್ಕು ದಿನಗಳ ಸುರಭಿ “ಜೈಸಿರಿ” ಮತ್ತು “ಬಿಂದುಶ್ರೀ” ಪ್ರಶಸ್ತಿ ಪ್ರದಾನ ಸಮಾರಂಭದ ನಾಲ್ಕು ದಿನಗಳ ಸಾಂಸ್ಕೃತಿಕ ಉತ್ಸವದ ಆಮಂತ್ರಣ ಪತ್ರಿಕೆಯನ್ನು ನ್ಯಾಯವಾದಿ ಮಂಗೇಶ ಶಾನುಭಾಗ್ ಏಳಜಿತ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ, ನಿರಂತರ ವೈವಿಧ್ಯಮಯ ಸಾಂಸ್ಕೃತಿಕ ಉತ್ಸವಗಳ ಮೂಲಕ ಬೈಂದೂರನ್ನು ಸಾಂಸ್ಕೃತಿಕ ನಗರಿಯನ್ನಾಗಿಸುತ್ತಿರುವ ಸುರಭಿ ಸಂಸ್ಥೆಗೆ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸುರಭಿ ಸಂಸ್ಥೆಯ ಅಧ್ಯಕ್ಷರಾದ ಆನಂದ ಮದ್ದೋಡಿ ವಹಿಸಿದ್ದು ಕಾರ್ಯಕ್ರಮದ ರೂಪುರೇಷೆ ತಿಳಿಸಿದರು. ಸಂಸ್ಥೆಯ ನಿರ್ದೇಶಕ ಸುಧಾಕರ್ ಪಿ. ಬೈಂದೂರು ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ ವಂದಿಸಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಸ್ವಾಗತಿಸಿ, ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.12: ನಿವೃತ್ತ ಉಪನ್ಯಾಸಕ, ಸಾಹಿತಿ, ರಂಗಕರ್ಮಿ ಕೋಣಿ ಶಿವಾನಂದ ಕಾರಂತ (80) ಅವರು ಫೆ.11ರಂದು ದೈವಾಧೀನರಾದರು. ಗುಜ್ಜಾಡಿ ನಿವಾಸಿಯಾಗಿದ್ದ ಅವರು ಗಂಗೊಳ್ಳಿಯ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಾಹಿತಿಯಾಗಿದ್ದ ಕೋ.ಶಿ ಕಾರಂತರು 5 ಸಾವಿರಕ್ಕೂ ಹೆಚ್ಚು ಅಂಕಣ ಬರಹಗಳನ್ನು ಕುಂದಪ್ರಭ ವಾರಪತ್ರಿಕೆಯಲ್ಲಿ ಮೂರುವರೆ ದಶಕಗಳ ಕಾಲ ಬರೆದಿದ್ದರು. ಸಂಗೀತ, ರಂಗಭೂಮಿ, ಸಾಹಿತ್ಯ ಕ್ಷೇತ್ರಗಳಲ್ಲಿ ಅಪಾರ ಜ್ಞಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆಕಾಶವಾಣಿ ಕಾರ್ಯಕ್ರಮ, ರಂಗಭೂಮಿಯಲ್ಲಿ ಆಸಕ್ತಿ ಹೊಂದಿ ನಟನೆ ಮತ್ತು ನಾಟಕ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. 10ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು, ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರಿಗೆ ಕೋಟ ಶಿವರಾಮ ಕಾರಂತ ಸದ್ಭಾವನಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೃತರು ಪತ್ನಿ ಪುತ್ರಿಯನ್ನು ಅಗಲಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಸಮೀಪ ಬೀಜಾಡಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಮೂಡುಗೋಪಾಡಿ ರೋಶನಿ ಧಾಮದ ನಿವಾಸಿ ರಮೇಶ (60) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರುಡ್ಸೆಟ್ ಸಂಸ್ಥೆ, ಬ್ರಹ್ಮಾವರ ಇದರ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಮ್. ಇವರ ನೇತೃತ್ವದಲ್ಲಿ ವಿವಿಧ ರಾಜ್ಯಗಳ 65 ಮಂದಿ ಕೆನರಾ ಬ್ಯಾಂಕಿನ ಪ್ರೊಬೆಷನರಿ ಸಿಬ್ಬಂದಿಗಳು ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಇತ್ತೀಚಿಗೆ ಭೇಟಿ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಅವರು ಸಂಘವು ನಡೆದು ಬಂದ ದಾರಿ, ಸದಸ್ಯತ್ವ, ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಸಾಲಗಳು, ಸ್ವ ಸಹಾಯ ಸಂಘ ರಚನೆ, ಉಳಿತಾಯ ಕ್ರೋಢೀಕರಣ, ಸಾಲ ವಿತರಣೆ ಮತ್ತು ವಸೂಲಾತಿ, ಸಂಘದ ಸ್ವಂತ ಕಟ್ಟಡಗಳು ಮತ್ತು ಗೋದಾಮುಗಳು, ಸಂಘದ ವ್ಯವಹಾರ ಅಭಿವೃದ್ಧಿ, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ವಿವರವಾಗಿ ಮಾಹಿತಿ ನೀಡಿದರು. ಸಂಘದ ಆರ್ಥಿಕ ಅಭಿವೃದ್ಧಿ, ಸಾಲ ನೀಡುವಿಕೆ ಮತ್ತು ವಸೂಲಾತಿ, ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆ ಮತ್ತು ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಚರ್ಚೆಯ ಮೂಲಕ ವಿಚಾರ ವಿನಿಮಯ ಮಾಡಿಕೊಂಡರು. ಸಂಘದ ವ್ಯವಸ್ಥಿತ ಕಾರ್ಯವೈಖರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗೆ ”ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದ ಕುರಿತು ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು. ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪಿ.ವಿ. ಭಂಡಾರಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ , ಪೋಷಕರಿಗೆ ” ಮಕ್ಕಳಿಗೆ ಒತ್ತಡವನ್ನು ಹೇರದೆ, ಅವರ ಬೇಕು ಬೇಡಗಳನ್ನು ಅರಿತು, ಸ್ನೇಹಿತರಂತೆ ವರ್ತಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಮಕ್ಕಳಲ್ಲಿ ಇದ್ದ ಭಯದ ವಾತಾವರಣವನ್ನು ತೊಡೆದು ಹಾಕಿ, ಸ್ವಚ್ಛಂದವಾಗಿ ಓದುವ ಪರಿಸರವನ್ನು ನಿರ್ಮಿಸಬೇಕು” ಎಂದು ತಿಳಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಿರಣ್ಸ್ ಡ್ರಾಗನ್ ಫಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ವತಿಯಿಂದ ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಇಂಟರ್ ಡೋಜೋ ಕರಾಟೆ ಚಾಂಪಿಯನ್ಶಿಪ್ನಲ್ಲಿ ಅಂಪಾರಿನ ಸಂಜಯಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕುಮಿಟೆ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಶಾಲೆಯ 16 ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಗೆದ್ದು ಶಾಲೆಯ ಕೀರ್ತಿಯನ್ನು ರಾಜ್ಯ ಮಟ್ಟದಲ್ಲಿ ಎತ್ತಿಹಿಡಿದಿದ್ದಾರೆ. ತರಬೇತುದಾರ ಅಬ್ಜಲ್ ಯೂಸಫ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ಈ ಸಾಧನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಂಜಯ ಗಾಂಧಿ ಚಾರಿಟೆಬಲ್ ಟ್ರಸ್ಟ್ ಅಂಪಾರು ಇಲ್ಲಿನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಹಾಗೂ ಕಾರ್ಯದರ್ಶಿ ಮತ್ತು ಎಲ್ಲಾ ನಿರ್ದೇಶಕರು , ಶಾಲೆಯ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ, ಮತ್ತು ಎಲ್ಲಾ ಶಿಕ್ಷಕ – ಶಿಕ್ಷಕಿಯರು, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಶಸ್ತಿಗಳನ್ನು ಗೆದ್ದು ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾಗಾರಾಧನೆಯಿಂದ ಸಮಾಜದ ಉದ್ಧಾರಗೊಳ್ಳುವ ಜತೆಗೆ ಸೌಹಾರ್ದತೆಯನ್ನು ಸಾರುತ್ತದೆ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸಿ.ಎ. ದೇವಾನಂದ ಹೇಳಿದರು. ಅವರು ಸಾಸ್ತಾನದ ಚೆಲ್ಲೆಮಕ್ಕಿ ಶ್ರೀ ನಾಗಬನ ಇದರ ಪುನರ್ ನಿರ್ಮಾಣ ಜೀರ್ಣೋದ್ಧಾರ ಹಾಗೂ ವರ್ಧಂತಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಆಚರಣೆಗಳಿರಬಹುದು ಅಲ್ಲಿ ಶ್ರದ್ಧೆ ಮತ್ತು ಭಕ್ತಿಯ ಜತೆಗೆ ನಂಬಿಕೆಯಿಂದ ದೇವರಿಗೆ ಸೇವೆ ಸಲ್ಲಿಸಿದರೆ ಅವನ ಶ್ರೀರಕ್ಷೆ ಸದಾ ಭಕ್ತರ ಮೇಲಿರುತ್ತದೆ. ಈ ಕಾರ್ಯದೊಂದಿಗೆ ಸಾಧಕರನ್ನು ಗುರುತಿಸುವ ಕಾಯಕ ಕೂಡಾ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆಗೈದ ಸ್ಥಳೀಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅಲ್ಲದೆ ಸಿಎ ಪರೀಕ್ಷೆಯನ್ನು ಉತ್ತಿರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಂದಾರ್ತಿ ದೇಗುಲದ ಮಾಜಿ ಟ್ರಸ್ಟಿ ಶಂಭು ತಿಂಗಳಾಯ ಅವರನ್ನು ಅಭಿನಂದಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ನಾಗಬನದ ಅಧ್ಯಕ್ಷರಾದ ಸುಧಾಕರ್ ಜಿ.ಆರ್. ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರ ಶ್ರೀ ವೇಣುಗೋಪಾಲಕೃಷ್ಣ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ…
