ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 12 ವಿದ್ಯಾರ್ಥಿಗಳು ರಾಜ್ಯಮಟ್ಟದ ರ್ಯಾಂಕ್ ಪಡೆದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿಜ್ಞಾನ ವಿಭಾಗದಲ್ಲಿ ಮೈತ್ರೆಯಿ ೫ ನೇ ರ್ಯಾಂಕ್, ಮನೀಷ್ ಆರ್ ಹೆಬ್ಬಾರ್ ೭ ನೇ ರ್ಯಾಂಕ್, ಪ್ರಾಚಿ ಎನ್. ೯ನೇ ರ್ಯಾಂಕ್, ಯು. ಕಾರ್ತಿಕ್ ಐತಾಳ್ ೧೦ ನೇ ರ್ಯಾಂಕ್, ವಾಣಿಜ್ಯ ವಿಭಾಗದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ ಕಿಣಿ ೫ ನೇ ರ್ಯಾಂಕ್, ಶ್ರೀಶ ೬ ನೇ ರ್ಯಾಂಕ್, ಕೃತಿಕಾ ೭ ನೇ ರ್ಯಾಂಕ್, ಅದಿತಿ ಮತ್ತು ಶೃದ್ಧಾ ಬಿ ಸಾಲಿಯಾನ್ ೮ ನೇ ರ್ಯಾಂಕ್, ದೇವಾಡಿಗ ಅಂಜಲಿ ಚಂದ್ರ ಮತ್ತು ರಕ್ಷಿತಾ ಆನಂದ ಪೂಜಾರಿ ೯ ನೇ ರ್ಯಾಂಕ್ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಅಭಿನಂದನಾಪೂರ್ವಕವಾಗಿ ಶಾಲು ಹೊದಿಸಿ, ಫಲಪುಷ್ಪ, ಬೆಳ್ಳಿಲೋಟ, ಬೆಳ್ಳಿ ನಾಣ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ, ಕುಂದಾಪುರದ ಓಕ್ವುಡ್ ಇಂಡಿಯನ್ ಸ್ಕೂಲ್ಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೋಟ್೯ಗೇಟ್ ಎಜ್ಯುಕೇಶನ್ನ ಕಾಯ೯ದಶಿ೯ ನೀತಾ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಚಂದ್ರಾ ನಾಯಕ್ ಸ್ವಾಗತಿಸಿ , ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಡಲ ತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಆದರ್ಶ ಮತ್ತು ಮಾರ್ಗದರ್ಶನದ ಅಂಶಗಳನ್ನು ಚಲನ ಚಿತ್ರಗಳಲ್ಲಿ ಅಳವಡಿಸಿದರೆ, ಸಮಾಜಕ್ಕೆ ಅದೊಂದು ಉತ್ತಮ ಸಂದೇಶ ತಲುಪಿಸಿದಂತೆ. ಸುಗಂಧಿ ಚಿತ್ರ ತಂಡ ಈ ಸ್ತುತ್ಯರ್ಹ ಕಾರ್ಯವನ್ನು ಮಾಡಿದೆ. ಕಾರಂತರ ಊರಿನವರೇ ಆದ ಸಮಾನ ಮನಸ್ಕರ ಈ ಕಾರ್ಯ ಸಾರಸ್ವತ ಲೋಕಕ್ಕೊಂದು ದೊಡ್ಡ ಕಾಣಿಕೆ. ಬಾಲ ಕಲಾವಿದೆ ವೈಷ್ಣವಿ ಅಡಿಗ ಮನೋಜ್ಞವಾಗಿ ಅಭಿನಯಿಸಿದ್ದಾಳೆ. ಒಟ್ಟಿನಲ್ಲಿ ಸುಗಂಧಿ ಚಲನ ಚಿತ್ರ ಕಾರಂತರ ಜೀವಂತಿಕೆಯನ್ನು ಕಟ್ಟಿಕೊಡುವುದರಲ್ಲಿ ಯಶಸ್ವಿಯಾಗಿದೆ. ಸರ್ವರೂ ಚಿತ್ರ ನೋಡಿ, ತಂಡದದವರನ್ನು ಪ್ರೋತ್ಸಾಹಿಸಬೇಕು – ಈ ದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟದ ಸಮಾನ ಮನಸ್ಕ ಆಸಕ್ತರು ಕೂಡಿ ನಿರ್ಮಿಸಿದ “ಸುಗಂಧಿ” ಕನ್ನಡ ಚಲನ ಚಿತ್ರದ ಪ್ರೀಮಿಯರ್ ಶೋ ವನ್ನು ಕೋಟೇಶ್ವರದ ಭಾರತ್ ಸಿನಿಮಾಸ್ ನ ಮಲ್ಟಿಪ್ಲೆಕ್ಸ್ ನಲ್ಲಿ ಆದಿತ್ಯವಾರ ಉದ್ಘಾಟಿಸಿ ಅವರು ಶುಭ ಹಾರೈಸಿದರು. ಸುಗಂಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನಕ್ಕೆ ಉದ್ಯಮಿ ಯು.ಬಿ. ಶೆಟ್ಟಿ ಭೇಟಿ ಅವರು ನೀಡಿ ಕ್ಷೇತ್ರದ ದೈವ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ಈಶ್ವರ ಮಾರಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ದೇವಾಲಯಕ್ಕೆ ಆರ್ಥಿಕ ನೆರವನ್ನು ನೀಡಿದ್ದು ಕ್ಷೇತ್ರದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಅನುವಂಶಿಕ ಮೊಕ್ತೇಸರರಾದ ವಸಂತ್ ಕುಮಾರ್ ಶೆಟ್ಟಿ ಕಾರಿ ಕಟ್ಟೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಿವಾಕರ ಹೆಗ್ಡೆ ಸುಬ್ಬಣ್ಣ ಶೆಟ್ಟಿ ಸನ್ಮನೆ ಕಾರ್ಯದರ್ಶಿ ಸಂಜೀವ ಆಚಾರ್ಯ, ರಾಮ ಮೊಗವೀರ , ಸೀತಾರಾಮ ಕೊಠಾರಿ, ಅಣ್ಣಪ್ಪ ಗಾಣಿಗ, ದೊಟ ಯ್ಯ ಪೂಜಾರಿ, ಪ್ರದೀಪ್ ಶೆಟ್ಟಿ ಕಾರಿಕಟ್ಟೆ,ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ ಅರ್ಚಕರಾದ ಗಣಪಯ್ಯ ಸುಬ್ರಮಣ್ಯ ರವೀಂದ್ರ ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಂಚಿಕಾನು ಸ. ಹಿ. ಪ್ರಾ. ಶಾಲೆಗೆ ಮಟ್ನಕಟ್ಟೆ ಧರ್ಮಶ್ರೀ ರಿಲೀಫ್ ಫೌಂಡೇಶನ್ ವತಿಯಿಂದ ಸುಮಾರು 13ಸಾವಿರ ರೂಪಾಯಿ ವೆಚ್ಚದಲ್ಲಿ ಎರಡು ಗ್ರೀನ್ ಬೋರ್ಡ್ ಗಳನ್ನು ಕೊಡುಗೆಯಾಗಿ ನೀಡಿದರು. ಮಹಾಬಲೇಶ್ವರ ಅಯ್ಯಪ್ಪಸ್ವಾಮಿ ಭಕ್ತವೃಂದ ಸುಮಾರು ಒಂದು ಪೋಡಿಯಂ (ಸ್ಪೀಚ್ ಸ್ಟ್ಯಾಂಡ್) ನ್ನು ಕೊಡುಗೆಯಾಗಿ ಶಾಲೆಗೆ ನೀಡಿದರು. ನಂತರ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಅಡುಗೆ ಸಹಾಯಕರಾಗಿ ಸೇವೆ ಸಲ್ಲಿಸಿ, ವಯೋನಿವೃತ್ತಿ ಹೊಂದಿದ ಬಚ್ಚಿ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಪ್ರಭಾಕರ ದೇವಾಡಿಗ, ಉಪಾಧ್ಯಕ್ಷೆ ಲಲಿತಾ ಶೇಟ್, ಸದಸ್ಯರಾದ ರಾಘವೇಂದ್ರ ಆಚಾರ್ಯ, ಪೂಜಾ .ಯು, ಗ್ರಾಮಪಂಚಾಯತ್ ಸದಸ್ಯರಾದ ವೀರೇಂದ್ರ ಶೆಟ್ಟಿ, ಧರ್ಮಶ್ರೀ ರಿಲೀಫ್ ಫೌಂಡೇಶನ್ ನಾ ಕಾರ್ಯದರ್ಶಿ ವಿಶ್ವನಾಥ ಹೊಸ್ಕೋಟೆ ಮತ್ತು ಸದಸ್ಯರು, ಅಯ್ಯಪ್ಪ ಸ್ವಾಮಿ ಭಕ್ತವೃಂದ ಮಹಾಬಲೇಶ್ವರ ಇದರ ಅಧ್ಯಕ್ಷರಾದ ಬಾಬು ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಹಶಿಕ್ಷಕಿ ಗೀತಾ ಮಯ್ಯ ಸ್ವಾಗತಿಸಿ , ಮುಖ್ಯ ಶಿಕ್ಷಕರಾದ ತಿಮ್ಮಪ್ಪ ಗಾಣಿಗ ಪ್ರಾಸ್ತಾವಿಕ ಮಾತನಾಡಿದರು. ಸಹಶಿಕ್ಷಕಿ ಯಶೋಧಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಜರಗಿದ ನಾವುಂದ ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಆಡಳಿತ ಮಂಡಳಿ ಪದಾಧಿಕಾರಿಗಳ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿರುತ್ತದೆ. ಜೂನ್ 24ರಂದು ಕರೆದ ನೂತನ ಆಡಳಿತ ಸಮಿತಿಯ ಸಭೆಯಲ್ಲಿ ಅಧ್ಯಕ್ಷರಾಗಿ ಡಾ. ಎನ್. ಕೆ. ಬಿಲ್ಲವ ಮತ್ತು ಉಪಾಧ್ಯಕ್ಷರಾಗಿ ರಾಜೀವ ಎಂ. ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಮಂಜು ಪೂಜಾರಿ, ಶೇಖರ ಎಂ. ಪೂಜಾರಿ, ಸಾವಿತ್ರಿ ಪೂಜಾರಿ, ಸುರೇಶ ಕೆ. ಪೂಜಾರಿ, ಶುಭದಾ ಎನ್. ಬಿಲ್ಲವ, ಸುಧಾಕರ ಪಿ. ಪೂಜಾರಿ, ರೇವತಿ ನಾಯ್ಕ್, ಈಶ್ವರ ಖಾರ್ವಿ, ಸುಜನ ಆರ್. ಬಿಲ್ಲವ, ವೆಂಕಟೇಶ ಗಾಣಿಗ, ಯೋಗೀಶ ಕಾರಂತ ಅವರು ನಿರ್ದೇಶಕರಾಗಿ ನೂತನ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಲೆಕ್ಕಪರಿಶೋಧನಾ ಉಪನಿರ್ದೇಶಕರ ಕಛೇರಿಯ ನಿರ್ವಾಚನಾಧಿಕಾರಿ ಕೆ. ಎಸ್. ಜಗದೀಶ್ ಆಯ್ಕೆಯನ್ನು ಘೋಷಿಸಿರುತ್ತಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಲ್ಬರ್ಗದಲ್ಲಿ ಇತ್ತೀಚಿಗೆ ಜರುಗಿದ ರಾಜ್ಯ ಮಟ್ಟದ 19ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಚೆಸ್ ಚಾಂಪಿಯನ್ಶಿಪ್ನಲ್ಲಿ ಕುಂದಾಪುರ ಕಶ್ವಿ ಚೆಸ್ ಸ್ಕೂಲ್ನ ಮೂವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಂದಾಪುರ ಕಶ್ವಿ ಚೆಸ್ ಸ್ಕೂಲ್ ವಿದ್ಯಾರ್ಥಿಗಳಾದ ತೇಜಸ್ ಕೆ. ಬೆಂಗಳೂರು, ನಿಶಾಂತ್ ಡಿ’ಸೋಜಾ ಹಂಗಳೂರು ಮತ್ತು ಮಾನಸ ಕೋಟೇಶ್ವರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಶ್ವಿ ಚೆಸ್ ಸ್ಕೂಲ್ ಸಂಸ್ಥಾಪಕ ಹಾಗೂ ಚೆಸ್ ತರಬೇತುದಾರರಾದ ನರೇಶ್ ಬಿ. ಕೋಟೇಶ್ವರ ಅವರು ಚೆಸ್ ತರಬೇತಿಯನ್ನು ನೀಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಉದ್ಯಮಿ, ಯು.ಬಿ.ಎಸ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಯು. ಬಿ. ಶೆಟ್ಟಿ ಅವರು ಮಂಗಳವಾರ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಗರಡಿಯ ಜೀರ್ಣೋದ್ಧಾರದ ಸಂದರ್ಭ ಉದಾರ ದೇಣಿಗೆ ನೀಡಿದ ಯು. ಬಿ. ಶೆಟ್ಟಿ ಅವರನ್ನು ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ ಗೌರವಿಸಿದರು. ಈ ಸಂದರ್ಭ ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ, ಗರಡಿ ಅರ್ಚಕ ಕುಟುಂಬದ ಮಂಜುನಾಥ ಪೂಜಾರಿ ಮೇಲ್ಹಿತ್ಲು, ವಿವಿಧ ಸಮಿತಿಗಳ ಪ್ರಮುಖರಾದ ಗಣೇಶ್ ಎಲ್. ಪೂಜಾರಿ, ಶಿವರಾಮ ಪೂಜಾರಿ ಯಡ್ತರೆ, ರಘುರಾಮ ಪೂಜಾರಿ ಬಪ್ಪನಬೈಲು, ಪ್ರಕಾಶ ಮಾಕೋಡಿ, ದೊಟ್ಟಯ್ಯ ಪೂಜಾರಿ, ಅರ್ಚಕ ಗಣೇಶ್ ಪೂಜಾರಿ ಮೇಲ್ಹಿತ್ಲು, ಚಂದ್ರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಇನ್ನರ್ವೀಲ್ ಕ್ಲಬ್ ಬೈಂದೂರು ಇದರ 2022-23ನೇ ಸಾಲಿನ ಅಧ್ಯಕ್ಷೆಯಾಗಿ ಭಾನುಮತಿ ಜಯಾನಂದ ಬಿ.ಕೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪಿಂಕಿ ಮೋಬಿ ಕರ್ವಾಲೋ, ಉಪಾಧ್ಯಕ್ಷರಾಗಿ ಆಶಾ ಕಿಶೋರ್, ಜೊತೆ ಕಾರ್ಯದರ್ಶಿಯಾಗಿ ಉಷಾ ಹೆಗ್ಡೆ, ಕೋಶಾಧಿಕಾರಿಯಾಗಿ ರಾಜೀವಿ ಗೋವಿಂದ, ಬುಲೆಟಿನ್ ಸಂಪಾದಕಿ ಸುಜಾತ ರಾವ್, ಪೂರ್ವಾಧ್ಯಕ್ಷರಾಗಿ ಶಾಂತಿ ಪಿರೇರಾ ಆಯ್ಕೆಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಮಾದಕ ವಸ್ತು ವ್ಯಸನ – ವಿರೋಧಿ ದಿನದ ಅಂಗವಾಗಿ ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನಡೆಯಿತು. “ಮಾದಕ ವಸ್ತು ಸೇವನೆಯು ನಮ್ಮ ಸಮಾಜದ ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ. ಈ ವ್ಯಸನದಿಂದ ಸಂಪೂರ್ಣ ದೂರವಿದ್ದು, ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು” ಎಂದು ಕುಂದಾಪುರ ಪೋಲೀಸ್ ಠಾಣಾಧಿಕಾರಿ ಸದಾಶಿವ ಗವರೋಜಿಯವರು ಕರೆ ನೀಡಿದರು. ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರ ರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಮಾದಕ ವ್ಯಸನ ಪಿಡುಗಿನ ಗಂಭೀರ ಪರಿಣಾಮಗಳ ಬಗ್ಗೆ ಜಾಗೃತರಾಗಬೇಕೆಂದು ತಿಳಿಸಿದರು. ಹಿಂದಿ ವಿಭಾಗ ಮುಖ್ಯಸ್ಥೆ ಜಯಶೀಲಾ ಪೈಯವರು ಅತಿಥಿಗಳಿಗೆ ಪುಪ್ಪ ನೀಡಿ ಗೌರವಿಸಿದರು. ಕಾಲೇಜಿನ…
