ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ, ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮ್ಯಾಕ್ಸ್ ಮೀಡಿಯಾ ಉಡುಪಿ, ಭಂಡಾರ್ಕಾರ್ಸ್ ಕಾಲೇಜು ಇವುಗಳ ಸಹಯೋಗದಲ್ಲಿ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ರವಿವಾರ “ಅಮೃತಭಾರತಿಗೆ ಸಂಗೀತದಾರತಿ” ಹಿಂದುಸ್ಥಾನಿ ಯುವ ಶಾಸ್ತ್ರಿಯ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು. ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ವಿಶ್ವಸ್ಥ ಕೆ. ಶಾಂತಾರಾಮ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಸಂಗೀತಕ್ಕೆ ತನ್ನದೇ ಆದ ಮಾಂತ್ರಿಕ ಶಕ್ತಿ ಇದ್ದು, ಇಂತಹ ಸಂಗೀತೋತ್ಸವ ಯುವ ಕಲಾವಿದರಿಗೆ ಉತ್ತಮ ವೇದಿಕೆ. ಇಂತಹ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಲಿ ಎಂದರು. ಸಂಗೀತ ಭಾರತಿ ಟ್ರಸ್ಟ್ನ ಅಧ್ಯಕ್ಷ ಕೆ. ಶ್ರೀಧರ್ ಕಾಮತ್, ಕಾರ್ಯದರ್ಶಿ ನಾರಾಯಣ್, ಟ್ರಸ್ಟಿಗಳಾದ ಎ. ಎಸ್. ಎನ್. ಹೆಬ್ಬಾರ್, ಸೀತಾರಾಮ ನಕ್ಕತ್ತಾಯ, ಡಾ| ಎಚ್. ಆರ್. ಹೆಬ್ಬಾರ್, ರೇಖಾ ಕಾರಂತ್, ಸುಪ್ರಸನ್ನ ನಕ್ಕತ್ತಾಯ, ಚಿರಂತನ ಚಾರಿಟೆಬಲ್ ಟ್ರಸ್ಟ್ನ ಭಾರವಿ ದೇರಾಜೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಬೆಳಗ್ಗಿನಿಂದ ಸಂಜೆಯವರೆಗೆ ಯುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಲಯನ್ಸ್ ಕ್ಲಬ್ ಶಿಕ್ಷಕ ದಿನಚರಣೆ ನಿಮಿತ್ತ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ನಿವೃತ್ತರಾದ ಶಿಕ್ಷಕ ಸುಬ್ಬಣ್ಣ ಮಾಸ್ಟ್ರು ಕುದ್ರುಕೋಡು, ಮಹಾದೇವ ಮಂಜ ಅರೆಹೊಳೆ ಇವರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ವಲಯ ಅಧ್ಯಕ್ಷ ನರಸಿಂಹ ದೇವಾಡಿಗ, ಸ್ಥಾಪಕ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಆಚಾರ್, ಪ್ರದೀಪ್ ಕುಮಾರ್ ಶೆಟ್ಟಿ, ರಾಜು ಬಿ ದೇವಾಡಿಗ,ಜೆ.ಪಿ ಬಡಾಕೆರೆ, ಪ್ರಮೋದ್ ಪೂಜಾರಿ, ವೀರಶೇಖರ, ಕಿಶೋರ್ ಕುಮಾರ್ ಶೆಟ್ಟಿ, ರವಿಶೆಟ್ಟಿ ಕುದ್ರುಕೊಡು ಉಪಸ್ಥಿತರಿದ್ದರು. ನಾವುಂದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಿವೃತ್ತ ಶಿಕ್ಷಕರ ಸನ್ಮಾನಿಸಲಾಯಿತು. ಲಯನ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ವಲಯ ಅಧ್ಯಕ್ಷ ನರಸಿಂಹ ದೇವಾಡಿಗ, ಸ್ಥಾಪಕ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಮುಂತಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದ ಸಂಘಟನೆ ಮಾಡಲು ಸಹಕಾರಿ ಸಂಘದಂತಹ ಉತ್ತಮ ವೇದಿಕೆಯಿಂದ ಮಾತ್ರ ಸಾಧ್ಯ ಎಂದು ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ನಾಗಪ್ಪ ಕೊಠಾರಿ ಹೇಳಿದರು. ಕುಂದಾಪುರ ರಾಜ್ಯ ಸರಕಾರಿ ನೌಕರರ ಕಟ್ಟಡದಲ್ಲಿನ ನೇತಾಜಿ ಸಭಾಭವನದಲ್ಲಿ ಭಾನುವಾರ ನಡೆದ ಕುಂದಾಪುರ ಭಂಡಾರ್ಕಾರ್ಸ್ ರಸ್ತೆಯಲ್ಲಿನ ಶ್ರೀ ಸೀತಾರಾಮ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ 2021-22ನೇ ಸಾಲಿನ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನಂಜೆ ಸಹಕಾರಿ ಸಂಘದ ನಿವೃತ್ತ ಜನರಲ್ ಮ್ಯಾನೇಜರ್ ಶ್ರೀನಿವಾಸ, ಮಾನಂಜೆ ಸಹಕಾರಿ ಸಂಘದಲ್ಲಿ ಉನ್ನತ ಹುದ್ದೆಗೇರಿದ ಶಂಕರ್ ಕೊಠಾರಿ, ಫವರ್ ಲಿಪ್ಟರ್ ಸತೀಶ್ ಖಾರ್ವಿ, ಸಂಸ್ಥೆಯ ಉತ್ತಮ ಗ್ರಾಹಕರ ನೆಲೆಯಲ್ಲಿ ಲಕ್ಷಣ ಕೊಠಾರಿ, ಪತ್ರಕರ್ತ ಎಂ.ಎನ್ ಕೊಠಾರಿ, ಕೃಷಿಕರಾದ ಬಾಬು ಕೊಠಾರಿ ಅವರ ಸನ್ಮಾನಿಸಲಾಯಿತು. ಶೈಕ್ಷಣಿಕವಾಗಿ ಮುಂಚೂಣಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಅನಾರೋಗ್ಯ ಸಮಸ್ಯೆಯಿರುವ ಬಡ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಲಾಯಿತು. ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಶಂಕರ ಕೊಠಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೋಲಾರ್ ಮಾಡೆಲ್ ವಿಲೇಜ್ ಗೋಳಿಹೊಳೆಯಲ್ಲಿ ಸೆಲ್ಕೋ ಸೋಲಾರ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸಹಯೋಗದಲ್ಲಿ ವಿಶೇಷ ಸೋಲಾರ್ ಸೇವಾ ಶಿಬಿರ ಮತ್ತು ಸೋಲಾರ್ ಲೈಟ್ ಉಪಯೋಗಿಸಿಕೊಂಡು ಎಸ್ಎಸ್ಎಲ್ಸಿಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಗುರುತಿಸುವಿಕೆ ಕಾರ್ಯಕ್ರಮ ಸೋಮವಾರ ನಡೆಯಿತು. ಗೋಳಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ಅಧ್ಯಕ್ಷತೆ ವಹಿಸಿದ್ದರು. ಎಸ್ ಕೆಡಿಆರ್ಡಿಪಿ ವಲಯ ಅಧ್ಯಕ್ಷ ಮಂಜು ಪೂಜಾರಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗೋಳಿಹಳೆ ಶಾಖೆ ಪ್ರಬಂಧಕರಾದ ಸಂತೋಷ್, ಸಿದ್ದೇಶ್ವರ ಮರಾಠಿ ಕೋ ಆಪರೇಟಿವ್ ಸೊಸೈಟಿ ಸಿಇಓ ಉದಯ ನಾಯಕ್, ಮೂಕಾಂಬಿಕಾ ಪ್ರೌಢಶಾಲೆ ಶಿಕ್ಷಕ ಉದಯ್ ಮತ್ತು ಸೆಲ್ಕೋ ಸೋಲಾರ್ ಲೈಟ್ ಏರಿಯಾ ಮೆನೇಜರ್ ಶೇಖರ್ ಶೆಟ್ಟಿ, ಶಾಖೆ ಪ್ರಬಂಧಕ ಮಂಜುನಾಥ್ ಉಪಸ್ಥಿತರಿದ್ದರು. ಸೆಲ್ಕೋ ಸೋಲಾರ್ ಲೈಟಿಂಗ್ ಸಿಸ್ಟಮ್ ಉಪಯೋಗಿಸಿಕೊಂಡು ಎಸ್ ಎಸ್ ಎಲ್ ಸಿ ಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು ಹಾಗೂ ಸೆಲ್ಕೋ ಸೋಲಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಶ್ರೀ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯ ಎಸ್. ಪೂಜಾರಿ ಮಾತನಾಡಿ ಶಿಕ್ಷಕರು ಅಕ್ಷರ ಕಲಿಸುವುದಕ್ಕಷ್ಟೇ ಸೀಮಿತವಲ್ಲ. ಮಾರ್ಗದರ್ಶಕರಾಗಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳ ತಿದ್ದಿತೀಡಿ ಬಲಿಷ್ಠ ಸಾಮಾಜ ನಿರ್ಮಾಣದ ಬುನಾದಿ ಶಿಕ್ಷಕರಾಗಿದ್ದಾರೆ. ದೇಶ ಬೆಳಗುವ ಮಕ್ಕಳ ಭವಿಷ್ಯ ಬೆಳಗಿಸುವ ಮಹತ್ತರ ಕೆಲಸ ಶಿಕ್ಷರಿಂದ ಆಗುತ್ತದೆ ಎಂದರು. ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ನಿವೇದಿತಾ ಪ್ರೌಢಸಾಲೆ ನಿವೃತ್ತ ಮುಖ್ಯಶಿಕ್ಷಕ ದಿನಕರ ಆರ್.ಶೆಟ್ಟಿ ಉಪನ್ಯಾಸ ಮಾಡಿದರು. ಕುಂದಾಪುರ ತಾಪಂ ಇಒ ಮಹೇಶ್ ಕುಮಾರ ಹೊಳ್ಳ, ಯುವ ಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಜಯಶೀಲ ಶೆಟ್ಟಿ, ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲಿ ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಡೆಯಿತು. ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರ ಸಹಶಿಕ್ಷಕಿ ವಸಂತಿ ಭಟ್ಮನಕ್ಕಿ ಶಿಕ್ಷಣ-ವಿದ್ಯಾರ್ಥಿ ಕುರಿತು ಮಾತನಾಡಿದರು. ಪ್ರಗತಿ ಮಹಿಳಾ ವಿವಿಧೋದ್ದೇಶ ಕೋ-ಆಪರೇಟಿವ್ ಸೊಸೈಟಿ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಅಭಿಜಿತ್ ಅತಿಥಿಗಳ ಪರಿಚಯಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಶ್ರೀಹರ್ಷ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉದಯಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಆಂಗ್ಲ ಭಾಷಾ ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೇಧಾವಿಗಳು ತಿಳಿದವರು ಶಿಕ್ಷಣದ ಕುರಿತು ಸಾಕಷ್ಟು ವ್ಯಾಖ್ಯಾನ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು. ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ ಎಂದು ಕೋಟ ವಿವೇಕ ಪ್ರೌಢಶಾಲಾ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಕುಂದಾಪುರ ಭಂಡಾರ್ಕಾರ್ಸ್ ಕಲಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಂಡಾರ್ಕಾರ್ಸ್ ಕಾಲೇಜು ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ. ಸತ್ಯನಾರಾಯಣ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲಲಿತಾದೇವಿ ಸ್ವಾಗತಿಸಿದರು. ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಸರೋಜ ಎಂ ವಂದಿಸಿದರು. ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕ ದುರ್ಗಾಪ್ರಸಾದ್ ಅತಿಥಿಗಳ ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮಾ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮೋಹನ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ. 96.80 ಕೋಟಿ ವ್ಯವಹಾರ ನಡೆಸಿ, ರೂ. 40.15 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ 100 ಕೋಟಿ ರೂ. ವ್ಯವಹಾರದ ಗುರಿಯಿರಿಸಿಕೊಳ್ಳಲಾಗಿದೆ. ಸಂಘವು ಪ್ರಾರಂಭದಿಂದಲೂ ಲಾಭದಲ್ಲಿಯ್ಲೇ ಮುನ್ನಡೆಯುತ್ತಿದ್ದು, ಕಳೆದ 30 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಈ ಭಾರಿ 10% ಡಿವಿಡೆಂಟ್ ಘೋಷಿಸಲಾಗಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ ಯೋಜನೆಯಿದ್ದು, ಅದಕ್ಕಾಗಿ ಜಾಗ ಮೀಸಲಿರಿಸಲಾಗಿದೆ. ಸಂಘದ ಕಾರ್ಯ ಕ್ಷೇತ್ರದಲ್ಲಿ ಎರಡನೇ ಶಾಖೆ ತೆರೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯಕತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ಸಂಘದ ಹಿರಿಯ ಸದಸ್ಯರುಗಳನ್ನು ಗೌರವಿಸಲಾಯಿತು. ವೈದ್ಯಕೀಯ ಪದವಿ ಪೂರೈಸಿದ ಡಾ. ನಿಖಿತಾ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಅಗ್ನಿಪಥಕ್ಕೆ ಪೂರಕವಾಗಿ ಸೇನಾ ಆಯ್ಕೆ ಪೂರ್ವ ತರಬೇತಿ ಸಂಸ್ಥೆಗಳನ್ನು ಆರಂಭಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀರ ರಾಣಿ ಅಬ್ಬಕ್ಕಳ ಹೆಸರಿನಲ್ಲಿ, ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯರ ಹೆಸರಿನಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಯೋಧ ಹೆಂಜ ನಾಯ್ಕ್ ಹೆಸರನ್ನು ಈಗಾಗಲೇ ಇಲಾಖೆ ಸೇನಾ ಪೂರ್ವ ತರಬೇತಿ ಸಂಸ್ಥೆಗಳಿಗೆ ಇಡುವುದಾಗಿ ಈಗಾಗಲೇ ಪ್ರಕಟಿಸಿದೆ. ಉಡುಪಿ ನಗರದ ಹೋಟೆಲ್ ಕಿದಿಯೂರಿನ ಸೇಷಶಯನ ಸಭಾಂಗಣದಲ್ಲಿ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಹೆಸರಿನಲ್ಲಿ ಸೆಪ್ಟೆಂಬರ್ 5ರಂದು ಸೇನಾ ಪೂರ್ವ ತರಬೇತಿ ಸಂಸ್ಥೆಯನ್ನು ಅಧಿಕೃತವಾಗಿ ಉದ್ಘಾಟನೆ ಆಗಲಿದೆ. ಪ್ರತಿ ತರಬೇತಿ ಸಂಸ್ಥೆಯಲ್ಲಿ ನೂರು ಜನ ಯುವಕರನ್ನು ಆಯ್ಕೆ ಮಾಡಿಕೊಂಡು ಸೇನಾಪೂರ್ವ ತರಬೇತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಲಿದ್ದು, ಮುಂದಿನ ಅಗ್ನಿಪಥಕ್ಕೆ ಅರ್ಜಿ ಆಹ್ವಾನಿಸಿದಾಗ ಈ ಕಠಿಣವಾದ ನಾಲ್ಕು ತಿಂಗಳ ತರಬೇತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.04: ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಬಟ್ಟೆಕುದ್ರು ಪರಿಸರದ ಚಕ್ರ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಣಿಕೆ ನಡೆಸುತ್ತಿರುವ ಬಗ್ಗೆ ರಾತ್ರಿ ಬಂದ ಸಾರ್ವಜನಿಕರ ಮಾಹಿತಿ ಮೇರೆಗೆ ಇಲಾಖೆಯ ಭೂ ವಿಜ್ಞಾನಿ ಸಂಧ್ಯಾ ಅವರು ಮುಂಜಾನೆ 5.30ಕ್ಕೆ ದಾಳಿ ನಡೆಸಿ 8 ಮೆಟ್ರಿಕ್ ಟನ್ ಮರಳು ಸಹಿತ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೂಂದು ಪ್ರಕರಣದಲ್ಲಿ ಸಾರ್ವಜನಿಕರ ಮಾಹಿತಿ ಮೇರೆಗೆ ಕುಂದಾಪುರ ತಾಲೂಕು ಆಲೂರು ಗ್ರಾಮದಲ್ಲಿನ ಅನಧಿಕೃತ ಕೆಂಪುಕಲ್ಲು ಕ್ವಾರಿಗಳಿಂದ ಕೆಂಪು ಕಲ್ಲು ಸಾಗಣೆ ಮಾಡುತ್ತಿದ್ದ ಮೂರು ಲಾರಿ ಮತ್ತು 14 ಮೆಟ್ರಿಕ್ ಟನ್ ಕೆಂಪುಕಲ್ಲುಗಳನ್ನು ಹೊಸಾಡು ಗ್ರಾಮದ ಬಂಟ್ವಾಡಿ…
