Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಶಂಕರನಾರಾಯಣ: ಗುರು ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸೆಂಟರ್ ಪುಣೆ, ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಮದರ್ ತೆರೇಸಾ ಶಾಲೆಯ 6 ಮಂದಿ ವಿದ್ಯಾರ್ಥಿಗಳು ಚಾಂಪಿಯನ್‌ಶಿಪ್ ಪಡೆದಿದ್ದಾರೆ . ವಿದ್ಯಾರ್ಥಿಗಳಾದ ಶ್ರೀದೇವಿ ಶೆಟ್ಟಿ 7ನೇ ತರಗತಿ, ಆರಾಧ್ಯ ಎಮ್. 7ನೇ ತರಗತಿ, ಆಶ್ರಿತ್ ಕುಲಾಲ್ 7ನೇ ತರಗತಿ, ವಿಘ್ನೇಶ್ ನಾಯ್ಕ್ 6ನೇ ತರಗತಿ, ಪವನ್ ಉಡುಪ 6ನೇ ತರಗತಿ, ಹನಿ 6ನೇ ತರಗತಿ, ಮನ್ವಿತ್ ಜಿ. 6ನೇ ತರಗತಿ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿರುವ ಈ ಹೆಮ್ಮೆಯ ವಿದ್ಯಾರ್ಥಿಗಳ ಸಾಧನೆಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ,ಶಾಲಾ ಮುಖ್ಯೋಪಾಧ್ಯಾಯಿನಿ , ಉಪ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಫಲಪ್ರದ ಭವಿಷ್ಯ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕ್ರೀಡಾಪಟು ಸಮಯ ನಿರ್ವಹಣೆ, ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡರೆ ಯಶಸ್ಸು ಸಾಧ್ಯ ಎಂದು ಜನತಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಕೃಷ್ಣ ಮೊಗವೀರ ಹೇಳಿದರು. ಅವರು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ಟಿ.ಎನ್. ಉಪಸ್ಥಿತರಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪೂಜಾ ಕುಂದರ್ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಶೆಟ್ಟಿ ಹೆಸ್ಕತ್ತೂರು ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪ್ರಥಮ ಬಿ.ಕಾಂ. (ಬಿ) ವಿಭಾಗದ ಪ್ರತೀಕ್ಷಾ ಶೆಟ್ಟಿ, ದ್ವಿತೀಯ ಬಿಸಿಎ ವಿಭಾಗದ ರೋಹನ್ ಆರ್. ನಾಯ್ಕ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ. ಸಮಗ್ರ ವಿಭಾಗದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ರಾಜಸ್ಥಾನದಲ್ಲಿ ನವೆಂಬರ್ 24 ರಿಂದ ಡಿಸೆಂಬರ್ 05 ರವರೆಗೆ ನಡೆದ ಖೇಲೋ ಇಂಡಿಯಾ ಅಂತರ್ ವಿಶ್ವ ವಿದ್ಯಾಲಯ  ಗೇಮ್ಸ್ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಸಿದ ಆಳ್ವಾಸ್ ಕಾಲೇಜಿನ ಪುರುಷರ ತಂಡ ಮೂರನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಈ ರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಮೂರು ಚಿನ್ನ, ಒಂದು ಕಂಚಿನ ಪದಕ ಪಡೆದು ಈ ಸಾಧನೆ ಮೆರೆದರು.ಆಳ್ವಾಸ್‌ನ ನಾಗೇಂದ್ರ ಡಿಸ್ಕಸ್ ಥ್ರೋನಲ್ಲಿ ಚಿನ್ನ, ಅಮನ್ ಪೋಲ್ ವಾಲ್ಟ್ನಲ್ಲಿ ಚಿನ್ನ,, ಚಮನ್ ದೇಕಾಥಲೋನ್‌ನಲ್ಲಿ ಚಿನ್ನ, ಟ್ರಿಪ್ಪ್ಲೆ ಜಂಪ್‌ನಲ್ಲಿ ಪ್ರದೀಪ್ ಕುಮಾರ್ ಕಂಚಿನ ಪದಕ ಪಡೆಯುದರೊಂದಿಗೆ ಸಮಗ್ರ ಚಾಂಪಿಯನ್‌ಶಿಪ್ ಪಟ್ಟ ಅಲಂಕರಿಸಿತು. ಇದೇ ಪಂದ್ಯಾಟದ ಮಹಿಳಾ ವಿಭಾಗದಲ್ಲಿ ಒಂದು ಚಿನ್ನ,  ಎರಡು ಬೆಳ್ಳಿಯ ಪದಕದೊಂದಿಗೆ ಆಳ್ವಾಸ್ ನಾಲ್ಕನೇ ಸ್ಥಾನ ಪಡೆಯಿತು. ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಒಟ್ಟು 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕದೊಂದಿಗೆ ಮಂಗಳೂರು ವಿವಿ 7…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಸ್ಪಷ್ಟವಾದ ಗುರಿ ಇರಬೇಕು. ಸ್ಪಷ್ಟತೆ ಇದ್ದಾಗ ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು. ಅವರು ಶುಕ್ರವಾರ ಇಲ್ಲಿನ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನ ʼಕಂಪ್ಯೂಟರ್ ಲ್ಯಾಬ್ʼ ಉದ್ಘಾಟಿಸಿ ಮಾತನಾಡಿದರು. ಅತ್ಯುತ್ತಮ ವಿದ್ಯಾರ್ಥಿಯಾಗಬೇಕು ಎಂಬ ಛಲ ಇಟ್ಟುಕೊಳ್ಳಿ; ನಿಮ್ಮ ತಂದೆ-ತಾಯಿಗೆ ಒಳ್ಳೆಯ ಮಕ್ಕಳಾಗಿ; ಶಾಲೆಗೆ ಕೀರ್ತಿ ತರುವಂಥ ವಿದ್ಯಾರ್ಥಿಗಳಾಗಿ; ಹಾಗೆಯೇ  ದೇಶದ ಉತ್ತಮ ಪ್ರಜೆಗಳಾಗಿ ಎಂದು ಕಿವಿಮಾತು ನುಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳು ಈ ಕಂಪ್ಯೂಟರ್ ಲ್ಯಾಬ್‌ನ ಸದುಪಯೋಗಪಡಿಸಿಕೊಂಡು ಉತ್ತಮವಾದ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಆಶಿಸಿದರು. ವೇದಿಕೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ , ಟಿ.ಎ.ಪಿ.ಎಂ.ಎಸ್ ನ ಉಪಾಧ್ಯಕ್ಷ ಶರತ್ ಶೆಟ್ಟಿ, ಅಂಪಾರು ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಪ್ರದೀಪ್ ಶೆಟ್ಟಿ, ನಿರಮಯಾ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಉದಯ್ ಕುಮಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಗುರು ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸೆಂಟರ್ ಪುಣೆ, ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಪರೀಕ್ಷೆಯಲ್ಲಿ ಇಲ್ಲಿನ ಮದರ್ ತೆರೇಸಾ ಶಾಲೆಯ 7ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾದ ಸುಹಾಸ್‌ ವಿ. ಭಟ್ ಅವರಿಗೆ ಬೆಳ್ಳಿಯ ಪದಕ ಲಭಿಸಿದೆ. ಹಾಗೆಯೇ 7ನೇ ತರಗತಿಯ ಸೃಜನ್ ಅವರಿಗೆ ಕಂಚಿನ ಪದಕ ದೊರಕಿದೆ. ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿ ಉಜ್ವಲ ಭವಿಷ್ಯ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಕ್ಲರ್ಕ್, ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರ, ಪಂಪುಚಾಲಕ, ಜವಾನ, ಸ್ವಚ್ಛತಾಗಾರ ಹಾಗೂ ಗ್ರಂಥಾಲಯ ಮೇಲ್ವಿಚಾರಕರುಗಳಿಗೆ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದ ಬಗ್ಗೆ ನಡೆದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ನೌಕರರಿಗೆ ಆರ್ಥಿಕ ಸೌಲಭ್ಯವನ್ನು ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮೂಲಕ ನೆರವನ್ನು ಒದಗಿಸುತ್ತಿದೆ. ಇದರ ಲಾಭವನ್ನು ಪ್ರತಿಯೊಬ್ಬರೂ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು ಎಂದರು. ನೌಕರರ ಭವಿಷ್ಯನಿಧಿ ಯೋಜನೆಯಲ್ಲಿ ಮುಂಗಡ ಪಡೆಯುವ ನಿಯಮಗಳಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ತೆಕ್ಕಟ್ಟೆ ಶಾಖೆಯ ನೇತೃತ್ವದಲ್ಲಿ NABARD ಸಹಾಯದೊಂದಿಗೆ ಗ್ರಾಹಕರಿಗೆ ಸಹಕಾರಿ ಸಾಕ್ಷರತಾ ಶಿಬಿರ ತೆಕ್ಕಟ್ಟೆ ಶಾಖಾ ವಠಾರದಲ್ಲಿ ನಡೆಯಿತು, ತೆಕ್ಕಟ್ಟೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಕುಮಾರ ಅಧ್ಯಕ್ಷತೆ ವಹಿಸಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಮೀಣ ಭಾಗಗಳಲ್ಲಿ ತನ್ನ ಶಾಖೆಗಳನ್ನು ತರೆಯುವುದರ ಮೂಲಕ ಗ್ರಾಮೀಣ ಜನರ ಆರ್ಥಿಕ ಅವಶ್ಯಕತೆಗಳನ್ನು ಇಡೇರಿಸಿರುವುದಲ್ಲದೇ, ತೆಕ್ಕಟ್ಟೆ ವ್ಯಾಪ್ತಿಯ ಗ್ರಾಹಕರಿಗೆ ಸಹಕಾರಿ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಬಗ್ಗೆ ತೆಕ್ಕಟ್ಟೆ ಶಾಖೆಯ ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗದವರಿಗೆ ಈ ಸಂದರ್ಭದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಎಸ್‌ಸಿಡಿಸಿಸಿ ಕುಂದಾಪುರ ಶಾಖಾ ವ್ಯವಸ್ಥಾಪಕರಾದ ಪ್ರವೀಣ ಶೆಟ್ಟಿ ಎಚ್.ಕೆ. ಹಾಗೂ ಉಪ್ಪುಂದ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶಂಕರ ಶೆಟ್ಟಿ ಇವರು ತಮ್ಮ ಬ್ಯಾಂಕಿನಲ್ಲಿ ಸಿಗುವ ವಿವಿದ ಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಮನವರಿಕೆ ಮಾಡಿದರು. ಸಂಪನ್ಮೂಲ ವ್ಯಕ್ತಿ ಆಶಾರವರು ಕೇಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬೈಂದೂರು ಉತ್ಸವ ಆಯೋಜನೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಅಧ್ಯಕ್ಷತೆಯಲ್ಲಿ ಶಾಸಕರಾದ ಗುರುರಾಜ್ ಗಂಟೆಹೊಳೆ ಅವರ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಬೈಂದೂರು ಉತ್ಸವ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಪ್ರದರ್ಶಿಸುವುದರೊಂದಿಗೆ, ಗ್ರಾಮೀಣ ಭಾಗದ ಜನರಿಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಲಾಭ ದೊರಕುವಂತಾಗಬೇಕು. ಬೈಂದೂರು ಉತ್ಸವವು ಜನವರಿ 24 ರಿಂದ 26 ರ ವರೆಗೆ ಬೈಂದೂರಿನಲ್ಲಿ ನಡೆಯಲಿದೆ. ಉತ್ಸವದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಿ, ಜನಸಾಮಾನ್ಯರಿಗೆ ತಲುಪುವಂತೆ ಮಾಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಠಿಸುತ್ತಿರುವ ಸಂಜೀವಿನಿ ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಗಳು ಉತ್ಸವದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ಪ್ರತೀ 43 ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮೋತ್ಸವ ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್‌ ಕಾಂ  ಸುದ್ದಿ.ಕುಂದಾಪುರ: ಎಂಐಟಿ ಕುಂದಾಪುರದ ಇನ್ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಬೆಂಗಳೂರಿನ ನ್ಯೂ  ಹೊರಿಜಾನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ  ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿನ ಗೌರವವನ್ನು ಹೆಚ್ಚಿಸುತ್ತಾರೆ. ಆರ್. ನವೀನ್ ಪಾಟಿಲ್, ನೇತ್ರಾವತಿ, ಯಶಸ್ವಿನಿ, ನಿಹಾರಿಕಾ, ಮೇಘಶ್ರೀ ಮತ್ತು ಶಶಾಂಕ್ ಒಳಗೊಂಡ ತಂಡವು ತಮ್ಮ ಸೃಜನಶೀಲ ಚಿಂತನೆ, ನವೀನ ಕಲ್ಪನೆ ಹಾಗೂ ತಾಂತ್ರಿಕ ನೈಪುಣ್ಯದಿಂದ ತೀರ್ಪುಗಾರರನ್ನು ಮೆಚ್ಚಿಸಿ, ₹5000 ದೊಂದಿಗೆ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿದೆ. ವಿಭಾಗದ ಮುಖ್ಯಸ್ಥರಾದ ಡಾ. ಜೇ. ಪ್ರಕಾಶ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಟ್ಟ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಈ ಸಾಧನೆಗೆ ವಿದ್ಯಾರ್ಥಿಗಳನ್ನು ಮತ್ತು  ಸಹಕಾರ ನೀಡಿದ ಎಲ್ಲ ಪ್ರಾಧ್ಯಾಪಕರನ್ನು ಅಭಿನಂದಿಸಿರುತ್ತಾರೆ.

Read More