ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುವಿಗೆ ಗೌರವ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ವಿದ್ಯೆಯೊಂದಿಗೆ ವಿವೇಕ ಮತ್ತು ತಾಳ್ಮೆ ಇರಬೇಕು. ಸಜ್ಜನರ ಸಹವಾಸ ವ್ಯಕ್ತಿತ್ವವನ್ನು ಒಳ್ಳೆಯ ದಾರಿಗೆ ಕೊಂಡೊಯ್ಯುತ್ತದೆ. ವ್ಯಕ್ತಿತ್ವ ನಿರ್ಮಾಣಕ್ಕೆ ಜೀವನದಲ್ಲಿ ದೃಢ ನಿಶ್ಚಯ ಮತ್ತು ಸ್ಪಷ್ಟ ಗುರಿ ಅತಿ ಮುಖ್ಯ. ನಮ್ಮ ಭವಿಷ್ಯ ನಮ್ಮ ಕೈಯಲ್ಲಿದೆ, ಸನ್ಮಾರ್ಗದಲ್ಲಿ ಸೃಜನಶೀಲ ಬದುಕನ್ನು ರೂಪಿಸಿಕೊಂಡಾಗ ಸಾಧನೆಗೆ ಸುಲಭವಾಗುತ್ತದೆ. ಹವ್ಯಾಸ ಬದಲಾದರೆ ಹಣೆಬರಹ ಬದಲಾಗುತ್ತದೆ, ದೃಷ್ಟಿ ಬದಲಾದರೆ ಜೀವನ ದೃಶ್ಯವೇ ಬದಲಾಗುತ್ತದೆ ಎಂದು ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆಯ ಪರಿವೀಕ್ಷಣಾಧಿಕಾರಿ ಹಾಗೂ ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಘಟಕದ ಸಂಯೋಜಕರಾದ ದೀಪಿಕಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ಪರ್ಧೆಗಳು ನಮ್ಮನ್ನ ಕ್ರಿಯಾಶೀಲರಾಗಿ ಮಾಡುತ್ತದೆ ಅದಕ್ಕೆ ನಾವು ಪೂರಕವಾಗಿರಬೇಕೆಷ್ಟೇ ಹೊರತು ಮಾರಕವಾಗಿರಬಾರದು ಎಂದು ಸಾಂಸ್ಕೃತಿಕ ಚಿಂತಕರಾದ ಆನಂದ್ ಸಿ. ಕುಂದರ್ ನುಡಿದರು. ಅವರು ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್‌ನ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಶಾಂತಿವನ ಟ್ರಸ್ಟ್ ನಿರ್ದೇಶಕರಾದ ಡಾ. ಶಶಿಕಾಂತ್ ಜೈನ್ ಕಾರ್ಯಕ್ರಮದ ಸ್ವರೂಪಗಳನ್ನು ವಿವರಿಸಿದರು. ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷ ಸತೀಶ್ ಬಾರಿಕೆರೆ, ಜಿಲ್ಲಾ ಸಂಯೋಜಕರಾದ ಕೃಷ್ಣ ಆಚಾರ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ನಡೆದವು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವಾ ಸಂಗಮ ಶಿಶು ಮಂದಿರಗಳಲ್ಲಿ ಅಜಿತ್ ಕುಮಾರ್ ಅವರ ಪುಣ್ಯ ತಿಥಿಯನ್ನು ಸೇವಾ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದು, ವಿವಿಧ ಸೇವೆಗಳ ಮೂಲಕ ಕಾರ್ಯಕ್ರಮ ಹಾಗೂ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಕಳೆದ 39 ವರ್ಷಗಳಿಂದ ಇಂತಹ ಚಟುವಟಿಕೆಗಳ ಮೂಲಕ ಸೇವಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಅಧ್ಯಕ್ಷ ಬಿ. ರಾಘವೇಂದ್ರ ಪೈ ಹೇಳಿದರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ 39ನೇ ವರ್ಷದ ಸೇವಾ ದಿನಾಚರಣೆ ಪ್ರಯುಕ್ತ ಶನಿವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭ ಸಾಧಕ ಕಲಾವಿದ ಪಾಂಡುರಂಗ ಮಡಿವಾಳ ಗಂಗೊಳ್ಳಿ ಅವರನ್ನು ಶಿಶು ಮಂದಿರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಆಟದ ಮೈದಾನವನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳ ಸಹಯೋಗದಲ್ಲಿ ಸ್ವಚ್ಛಗೊಳಿಸಲಾಯಿತು. ಶಿಶು ಮಂದಿರದ ಸದಸ್ಯರಾದ ಉಷಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯ 20ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಯಟ್ ಕಾಲೇಜು ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಚಿಕ್ಕ ಚಿಕ್ಕ ಸಾಧನೆಗಳನ್ನು ಪ್ರೋತ್ಸಾಹಿಸಿ. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಕೆಲಸ ಪೋಷಕರು ಹಾಗೂ ಶಾಲೆಯಿಂದ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಗೌರವ ಅತಿಥಿಗಳಾದ ಡಾ. ವಾದಿರಾಜ ಗೋಪಾಡಿ ಮಾತನಾಡಿ, ಶಿಕ್ಷಣ ಎಂದರೆ ಮಗುವಿನ ಒಳಗಿನ ಜ್ಞಾನ ಹಾಗೂ ಪ್ರಜ್ಞೆಯನ್ನು ಹೊರ ಜಗತ್ತಿಗೆ ತರುವುದಾಗಿದೆ. ಎಲ್ಲವೂ ಮಗುವಿನಲ್ಲಿ ಅಡಗಿರುತ್ತದೆ. ಅದರ ಜವಾಬ್ದಾರಿ ಪೋಷಕರು, ಸಮಾಜ ಹಾಗೂ ಶಾಲೆಯದ್ದಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪೋಷಕರ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಗುಣಮಟ್ಟದ ಕಾಲೇಜು ಆರಂಭವಾಗುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಸುಧಾಕರ ಶೆಟ್ಟಿ ಹಾಗೂ ಬಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್‌ನ ಪ್ರಾಂತೀಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಇತ್ತೀಚಿಗೆ ಕುಂದಾಪುರದ ಜೆ.ಸಿ ಭವನದ ಸಭಾಂಗಣದಲ್ಲಿ ನಡೆಯಿತು. ಪ್ರಾಂತೀಯ ಅಧ್ಯಕ್ಷ ರಜತ್ ಕುಮಾರ್ ಹೆಗ್ಡೆ ಮಾತನಾಡಿ 2019 ರಲ್ಲಿ ಸ್ಥಾಪಿತಗೊಂಡ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ 317c ಜಿಲ್ಲೆಯಲ್ಲೇ ಅತ್ಯದ್ಭುತ ಕ್ಲಬ್ ಆಗಿ ಮೂಡಿ ಬಂದಿದೆ. ಇಲ್ಲಿಯ ತನಕ ಸಾರಥ್ಯ ವಹಿಸಿದ ಕ್ಲಬ್ ನ ಎಲ್ಲಾ ಅಧ್ಯಕ್ಷರಿಗೆ ನನ್ನ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇನೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲೆಯ ಮಾಜಿ ಜಿಲ್ಲಾ ಗವರ್ನರ್ ಲಯನ್ ವಿ.ಜಿ. ಶೆಟ್ಟಿ ಅವರು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಕಾರ್ಯವೈಕರಿಯನ್ನು ಪ್ರಶಂಶಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು. ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಭುಜಂಗ ಶೆಟ್ಟಿ ವರದಿ ವಾಚಿಸಿದರು. ಪ್ರಾಂತೀಯ ಕಾರ್ಯದರ್ಶಿ ಏಕನಾಥ ಬೋಳಾರ್, ವಲಯಾಧ್ಯಕ್ಷರಾದ ವಸಂತರಾಜ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಜೀವನದಲ್ಲಿ ಶಾಶ್ವತವಲ್ಲ, ಮುಂದಿನ ಜೀವನದಲ್ಲಿ ಯಶಸ್ಸು ಪಡೆಯಬೇಕೆಂದರೆ ಸೋಲು ಅನಿವಾರ್ಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹೇಳಿದರು. ಅವರು ಗುರುವಾರದಂದು ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿಸುವುದರ ಮೂಲಕ ಸದೃಢ ಆರೋಗ್ಯವನ್ನು ತಮ್ಮದಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಕ್ರೀಡಾ ಕಾರ್ಯದರ್ಶಿ ಧೀಮಂತ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಸಮಾರೋಪ ಸಮಾರಂಭವು ಇತ್ತೀಚಿಗೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಯೋಜನಾ ವ್ಯವಸ್ಥಾಪಕರಾಧ ಸಂಧ್ಯಾ ಅವರು ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಬಹಳ ಬೇಡಿಕೆ ಇರುವ ತರಬೇತಿಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಅದೇ ರೀತಿ ಸಂಸ್ಥೆ ಬಹಳ ಉನ್ನತ ಮಟ್ಟದ ಸಂಸ್ಥೆಯಾಗಿದೆ. ಮೊದಲನೇ ಹಂತ ತಳಮಟ್ಟ ತರಬೇತಿಯಲ್ಲಿ ತಮ್ಮನ್ನು ತಾವೂ ಯಶಸ್ವಿಗೊಳಿಸಿದ್ದೀರಿ. ರುಡ್ಸೆಟ್ ಸಂಸ್ಥೆಯು ತಮ್ಮನ್ನು ಸ್ವ ಉದ್ಯೋಗವನ್ನು ಕೈಗೊಳ್ಳಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ತರಬೇತಿಯ ಅವಧಿಯಲ್ಲಿ ಒದಗಿಸಿದೆ. ಮೊಬೈಲ್ ರಿಪೇರಿ ಮತ್ತು ಸೇವೆ ಉದ್ಯಮವು ದಿನದಿಂದ ದಿನಕ್ಕೆ ಬೇಡಿಕೆಯನ್ನು ಹಾಗೂ ಕುತೂಹಲವನ್ನು ಮೂಡಿಸುವ ಉದ್ಯಮವಾಗಿದೆ. ಹಾಗಾಗಿ ಉದ್ಯಮವನ್ನು ನಡೆಸಲು ಬೇಕಾಗುವ ಸಾಲಸೌಲಭ್ಯವನ್ನು ಸಂಸ್ಥೆಯ ಮುಖಾಂತರ ಒದಗಿಸುತ್ತೇವೆ. ಆದ್ದರಿಂದ ಆತ್ಮವಿಶ್ವಾಸದಿಂದ ಉದ್ಯಮವನ್ನು ಪ್ರಾರಂಭಿಸಿ, ಸಮಾಜದಲ್ಲಿ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರ ರಕ್ತ ನಿಧಿಗೆ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಕ್ತ ಸಂಗ್ರಹಣೆ, ರಕ್ತದ ಸಂರಕ್ಷಣೆ, ಅದರ ಪರೀಕ್ಷಾ ವಿಧಾನ ಹಾಗೂ ರಕ್ತ ಘಟಕಗಳ ಪ್ರಕ್ರಿಯೆಗಳ ಕುರಿತು ಸಿಬ್ಬಂದಿಯಾದ ವೀರೇಂದ್ರ ಅವರು ವಿವರವಾದ ಮಾಹಿತಿ ನೀಡಿ, ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ಸಂಯೋಜಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಜಯಕರ್ ಶೆಟ್ಟಿ, ಖಜಾಂಚಿಗಳಾದ ಶಿವರಾಮ್ ಶೆಟ್ಟಿ ಹಾಗೂ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಯಾದ ಯೋಗೀಶ್ ಶ್ಯಾನುಭೋಗ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೊಣಾಜೆಯ ಮಂಗಳಗಂಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ ‘ವೇವ್ಸ್ 2025ರಲ್ಲಿ ಸಂಗೀತ, ರಂಗಕಲೆ, ನೃತ್ಯ, ಹಾಗೂ ಸಾಹಿತ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು, ಎಲ್ಲಾ ಐದು ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮೆರೆದು ಸತತ 24 ವರ್ಷ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಒಟ್ಟು ನಡೆದ 27 ಸ್ಪರ್ಧೆಗಳಲ್ಲಿ 16 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನದೊಂದಿಗೆ ಒಟ್ಟು 22 ಸ್ಥಾನಗಳಲ್ಲಿ ಪ್ರಶಸ್ತಿಯನ್ನು ಗಳಿಸಿ ಈ ಸಾಧನೆ ಮೆರೆದಿದೆ. ಪ್ರಥಮ ಸ್ಥಾನ:ಹಿಂದಿ ಭಾಷಣ-ವಿನಿಟ್ ವಾಝ್ (ಪ್ರಥಮ), ಇಂಗ್ಲೀಷ್ ಚರ್ಚೆ- ವೈಭವ್ ಯು ಹಾಗೂ ಸಾತ್ವಿಕ್ ಸುವರ್ಣ ( ಪ್ರಥಮ), ಹಿಂದಿ ಚರ್ಚೆ- ವೈಭವ್ ಯು ಹಾಗೂ ವಿನಿಟ್ ವಾಝ್ (ಪ್ರಥಮ), ಏಕಾಂಕ ನಾಟಕ (ಪ್ರಥಮ), ಕಿರು ಪ್ರಹಸನ (ಪ್ರಥಮ), ಕ್ಲೇ ಮಾಡೆಲಿಂಗ್- ಶ್ರೀಧರ್ (ಪ್ರಥಮ), ಶಾಸ್ತ್ರೀಯ ಸಂಗೀತ ವೈಯಕ್ತಿಕ- ಆಶ್ವೀಜಾ ಉಡುಪ(ಪ್ರಥಮ), ನಾನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ರಿ. ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ನಡೆಸಲಾದ ಜ್ಞಾನ ರಥ ಎನ್ನುವ ನೈತಿಕ ಮೌಲ್ಯಾಧಾರಿತ ಪುಸ್ತಕದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಖಾರ್ವಿಕೇರಿ ಗಂಗೊಳ್ಳಿಯ 7ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿಯ ಪುತ್ರ.
