Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ವತಿಯಿಂದ ಭಂಡಾರ್ಕಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ 74 ಕೆ.ಜಿ ವಿಭಾಗದಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗೆದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗಣೇಶೋತ್ಸವ ಕಾರ್ಯಕ್ರಮದ ಮೂಲಕ ಕೋಟ ಸಾರ್ವಜನಿಕ ಗಣೇಶೋತ್ಸವ ಸಾಮಾಜಿಕ ಸೇವಾ ಕಾರ್ಯವನ್ನು ನಿಜಕ್ಕೂ ಶ್ಲಾಘನೀಯ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕೋಟದ ಅಮೃತೇಶ್ವರೀ ದೇಗುಲದ ಸಭಾಂಗಣದಲ್ಲಿ ಕೋಟದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಗಣೇಶೋತ್ಸವ ಸಾಂಸ್ಕೃತಿಕವಾಗಿ ಜನಮಾನಸದಿ ನೆಲೆಯೂರಿ ಜಾತಿ ಮತ ಭೇದ ತೊರೆದು ಆಚರಿಸುವ ಉತ್ಸವವಾಗಿ ರೂಪುಗೊಂಡಿದೆ ಎಂದರು. ಈ ಸಂದರ್ಭದಲ್ಲಿ ಕೋಟ ಗ್ರಾಮಸಹಾಯಕ ರಾಜು ಕುಂದರ್,ನ್ಯಾಯವಾದಿ ಕರುಣಾಕರ ನಾಯ್ಕ್,ಅಟಲ್ ಜೀ ಕೇಂದ್ರದ ಗಿರೀಶ್ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು. ಇದೇವೇಳೆ ಉತ್ಸವದಲ್ಲಿ ಹಮ್ಮಿಕೊಂಡ ಇತರ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಜೇತರಾದರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಭಾಧ್ಯಕ್ಷತೆಯನ್ನು ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್ ವಹಿಸಿದ್ದರು. ಕಾರ್ಯಕ್ರಮವನ್ನು ಸಮಿತಿಯ ಅಧ್ಯಕ್ಷ ಜಿ.ಎಸ್. ಆನಂದ್ ದೇವಾಡಿಗ ಉದ್ಘಾಟಿಸಿ, ಸ್ವಾಗತಿಸಿದರು. ಮುಖ್ಯ ಅಭ್ಯಾಗತರಾಗಿ ಮಂದಾರ್ತಿ ದೇಗುಲದ ಅಭ್ಯಂತರ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು‌. ಸಲಹಾ ಸಮಿತಿಯ ಪ್ರಭಾಕರ್ ಅಡಿಗ ಪ್ರಾಸ್ತಾವಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ -ಸಾಸ್ತಾನ ರೋಟರಿ ಕ್ಲಬ್‌ನ ಪ್ರಾಯೋಜಕತ್ವದಲ್ಲಿ ಬ್ರಹ್ಮಾವರ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ‘ಪ್ರಾಚ್ಯ ಪ್ರಜ್ಞೆ ‘ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಬ್ರಹ್ಮವರ ವಲಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್ಬಿನ ಅಧ್ಯಕ್ಷೆ ಕುಸುಮಾ ಮನೋಜ್ ಸ್ಪರ್ಧೆಗಳನ್ನು ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಶಾಲಾ ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿ ವಿಘ್ನೇಶ್ವರ ಅಡಿಗ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಸುರೇಶ್ ಕುಂದರ್, ನಾಗರಾಜ್ ಭಟ್, ರೋಟರಿ ಸದಸ್ಯರುಗಳಾದ ಮನೋಜ್ ಕುಮಾರ್, ಸುಲತಾ ಹೆಗ್ಡೆ, ಲೀಲಾವತಿ, ಮುರಳೀಧರ ನಾಯರಿ, ಚಂದ್ರ ನಾಯರಿ ರೋಟರಿ ಕಾರ್ಯದರ್ಶಿ ಕೆ ರಾಜಾರಾಮ ಐತಾಳ ಮುಂತಾದವರು  ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಕಲ್ಪನಾ ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ನಾಗರಾಜ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಯಂ ಫಕೀರಪ್ಪ ಕಾರ್ಯಕ್ರಮ ನಿರೂಪಿಸಿದರು . ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಶಾಲೆಗೆ ವೈಟ್ ಪ್ಯಾನಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ 2025-26ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು 13837 ಸದಸ್ಯರನ್ನು ಮತ್ತು 1.82 ಕೋಟಿ ಪಾಲು ಬಂಡವಾಳವನ್ನು ಹೊಂದಿದೆ. 40.57 ಕೋಟಿ ಠೇವಣಿಯನ್ನು ಹೊಂದಿದ್ದು, 14 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಬ್ಯಾಂಕ್ 40.50 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ರಾಮ ಮಂದಿರದ ಸಭಾಭವನದಲ್ಲಿ ಶುಕ್ರವಾರ ಜರಗಿದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಹಕರಿಗೆ ತ್ವರಿತ ಮತ್ತು ಉತ್ತಮ ಸೇವೆ ನೀಡಲು ಶ್ರಮಿಸಲಾಗುವುದು. ಸಂಘದ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ ಸುಸ್ತಿ ಸಾಲಗಳ ಪ್ರಮಾಣ ಕಡಿಮೆ ಮಾಡಲು ಕ್ರಮಕೈಗೊಳ್ಳಲಾಗುವುದು ಬ್ಯಾಂಕಿನ ಮೂರು ಶಾಖೆಗಳಲ್ಲಿ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ, ಗ್ರಾಹಕರಿಗೆ ಅಗತ್ಯವಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಹಯೋಗದಲ್ಲಿ, ಕುಂದಾಪುರ ವೃತ್ತ ಮಟ್ಟದ ಕ್ರೀಡಾಕೂಟವು ಗುರುವಾರ ಗಾಂಧಿ ಮೈದಾನದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು. ಸಭೆಯಲ್ಲಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ, ನರ್ಸರಿ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಹ್ಮಣ್ಯ ಎಸ್ ಇವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ 14 ವರ್ಷ ವಯೋಮಿತಿಯ ಎಐಸಿಎಸ್ ಅಂತರ್‌ ಶಾಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಹಟ್ಟಿಅಂಗಡಿಯು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಉತ್ಸವ ಬಿಪಿ, ವಿಖ್ಯಾತ ಮಧ್ಯಸ್ಥ, ಆರವ್ ಎಸ್. ಶೆಟ್ಟಿ, ಶಶಿಭೂಷಣ ಶೆಟ್ಟಿ, ಸಿರಿ ಜಿ. ಕಾಮತ್ ಇವರ ತಂಡವು ಶಾಲೆಯ ಪರವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ವಿದ್ಯಾರ್ಥಿಗಳನ್ನು ಮತ್ತು ಅವರಿಗೆ ಮಾರ್ಗದರ್ಶನಗೈದ ಶಿಕ್ಷಕರನ್ನೂ ಅಭಿನಂದಿಸಿ, ಮಾತನಾಡುತ್ತಾ ನಮ್ಮ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲೂ ಸಕ್ರೀಯರಾಗಿ ಭಾಗವಹಿಸಿ, ಮಾರ್ಗದರ್ಶನದಂತೆ ಸಾಗುತ್ತಿರುವುದು ಈ ಸಾಧನೆಗಳಿಗೆ ಮೂಲ ಕಾರಣ. ಅದನ್ನು ನಾವು ಇನ್ನಷ್ಟು ವೃದ್ಧಿಸಿಕೊಳ್ಳಬೇಕು ಎಂದರು. ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶಾಲಾ ಅಧ್ಯಾಪಕವೃಂದ, ಶಿಕ್ಷಕೇತರವೃಂದದವರೂ ವಿದ್ಯಾರ್ಥಿಗಳ ಸಾಧನೆಗೆ ಹರ್ಷವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ಥಳೀಯ ಐ.ಎಂ.ಜೆ. ಶಿಕ್ಷಣ ಸಂಸ್ಥೆ ಮೂಡಲಕಟ್ಟೆಯಲ್ಲಿ ಕರ್ನಾಟಕ ಸರ್ಕಾರ, ಮೈಕ್ರೋಸಾಫ್ಟ್, ಕೇಂದ್ರ ಸರ್ಕಾರದ MeitY ಸ್ಟಾರ್ಟ್‌ಅಪ್ ಹಬ್ ಮತ್ತು 1M1B ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬೃಹತ್ ಉದ್ಯೋಗ ಮೇಳ ‘ಜಾಬ್ ಎಕ್ಸ್‌ಪ್ರೆಸ್ 2K26’ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸ್ಪಂದನೆ ದೊರೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್‌ನ ಆರ್ಕಿಟೆಕ್ಟ್ ಡಾ. ಸ್ಯಾಮ್ಯುಯೆಲ್ ಅಗಸ್ಟಸ್ ನಾರ್ಟನ್ ಸ್ಟಾನ್ಲಿ ಅವರು ಆಗಮಿಸಿದ್ದು, ಇಂದಿನ ತಂತ್ರಜ್ಞಾನ ಯುಗದಲ್ಲಿ ಪರಿಸರ ಸ್ನೇಹಿ ಕೌಶಲಗಳು ಹಾಗೂ ಕೃತಕ ಬುದ್ಧಿಮತ್ತೆ (AI) ಜ್ಞಾನಕ್ಕೆ ಅಪಾರ ಬೇಡಿಕೆಯಿದ್ದು, ಯುವಜನತೆ ನಿರಂತರ ಕಲಿಕೆಯೊಂದಿಗೆ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಉದ್ಯೋಗಾಕಾಂಕ್ಷಿಗಳಿಗೆ ಕರೆ ನೀಡಿದರು. ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ರೇಮಾ ಜೋಸೆಫ್, ಮುಖ್ಯಸ್ಥರು ಮತ್ತು ಹಿರಿಯ ಮಾರ್ಗದರ್ಶಕರು, ಗ್ರೀನ್ ಸ್ಕಿಲ್ಸ್ & ಅಪ್ಲೈಡ್ ಎಐ ಫಾರ್ ಕ್ಲೈಮೇಟ್ ಆಕ್ಷನ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆಯಿದ್ದು, ಅವರನ್ನು ಜಾಗತಿಕ ಉದ್ಯೋಗ ಮಾರುಕಟ್ಟೆಗೆ ಸಂಪರ್ಕಿಸುವ ವೇದಿಕೆ ಇದಾಗಿದೆ ,ವಿದ್ಯಾರ್ಥಿಗಳಿಗೆ ಉಜ್ವಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಮತ್ತು ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ-ಬಾಲಕಿಯರ “ಕುಸ್ತಿ ಪಂದ್ಯಾಟ”-2026 ಉದ್ಘಾಟನಾ ಸಮಾರಂಭ ನಡೆಯಿತು . “ಕುಸ್ತಿ ಪಂದ್ಯಾಟ-2026″ದ ಅಂತಿಮ ಪಂದ್ಯದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಜಯಗಳಿಸಿತು . ಬ್ರಹ್ಮಾವರದ ಎಸ್.ಎಮ್.ಎಸ್ ಪದವಿಪೂರ್ವ ಕಾಲೇಜು ರನ್ನರ್ ಆಫ್ ಸ್ಥಾನ ಪಡೆಯಿತು ಬ್ರಹ್ಮಾವರ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕುಸ್ತಿ ಆಟವು ಭಾರತದ ಸಾಂಸ್ಕೃತಿಕ ಕಲೆಯಾಗಿದೆ . ಇಂತಹ ಪಂದ್ಯಾಟಗಳ ಮೂಲಕ ಕುಸ್ತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕರ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಕುಂದಾಪುರ ಪದವಿಪೂರ್ವ ವಿಭಾಗದ ಕ್ರೀಡಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಹೆಚ್‌ಕೆಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ಪುಸ್ತಕ ಮನೆ ವತಿಯಿಂದ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರಾದ ಎಚ್ ಡುಂಡಿರಾಜ್ ಅವರ 100ನೇ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ 70ನೇ ವರ್ಷದ ಅಭಿನಂದನೆ ಮತ್ತು ಖ್ಯಾತ ಸಾಹಿತಿಗಳಾದ ಬಿಆರ್ ಲಕ್ಷ್ಮಣರಾವ್ ಅವರ ಪುಸ್ತಕ ಬಿಡುಗಡೆ ಹಾಗೂ 80ನೇ ವರ್ಷದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಚ್. ಡುಂಡಿರಾಜ್ ಅವರ ‘ಕಾವ್ಯ ಡುಂಡಿಮ’ ಮತ್ತು ಬಿಆರ್ ಲಕ್ಷ್ಮಣ ರಾವ್ ಅವರ ‘ಸಾವೇ ಬೀಗಬೇಡ’ ಹಾಗೂ ‘ಓಶೋ ರಜನೀಶ್ ನಿಜರೂಪ’ ಎಂಬ ಕೃತಿಗಳು ಲೋಕಾರ್ಪಣೆಗೊಂಡವು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ನಮ್ಮ ಕ್ರಿಯೇಟಿವ್ ಪುಸ್ತಕ ಮನೆ ನಮ್ಮ ನಾಡಿನ ಖ್ಯಾತ ಬರಹಗಾರರ ಕೃತಿಗಳನ್ನು ಪ್ರಕಾಶನ ಮಾಡಲಾಗುತ್ತಿದೆ. ಹೂವಿನಲ್ಲಿ ಹೇಗೆ ದುಂಬಿಗಳಿರುತ್ತವೋ ಹಾಗೆ ಕನ್ನಡ ಸಾಹಿತ್ಯದಲ್ಲಿ ಡುಂಡಿರಾಜರು ಹಾಗೂ ಕನ್ನಡದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರಿ ಸೇವೆಗಳನ್ನು ಒದಗಿಸುವಲ್ಲಿ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟ‌ರ್ ಮಂಜುನಾಥ್ ನೇತೃತ್ವದ ತಂಡ ಸರ್ಚ್ ವಾರಂಟ್ ಪಡೆದು ಗ್ರಾ‌ಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದು ಪಡೆದಿದ್ದು ಹಲವು ಸಮಯಗಳಿಂದ ಬಾಕಿಯಿದ್ದ ಕಡತಗಳ ಪರಿಶೀಲನೆ ಜೊತೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆ ಮಧ್ಯಾಹ್ನದವರೆಗೂ ಮುಂದುವರೆದಿದ್ದು, ಗ್ರಾ.ಪಂ ಸಂಬಂಧಿತ ಬಾಕಿ ಕಡತಗಳು, ದಾಖಲೆ ಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿದರು.ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ, ಸಿಬ್ಬಂದಿಗಳಾದ ಅರುಣ ಕುಮಾರ್, ಅಬ್ದುಲ್ ಜಲಾಲ್, ಆದರ್ಶ, ಸೂರಜ್ ಕಾಪು ಮೊದಲಾದವರು ಕಾರ್ಯಾಚರಣೆಯಲ್ಲಿ ಇದ್ದರು.

Read More