Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಗುರುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ಕಾರ್ಯವೈಕರಿಯ ಬಗ್ಗೆ ಶ್ಲಾಘಿಸಿದ ಅವರು ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಅವರೊಂದಿಗೆ ಚರ್ಚಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಜಿಲ್ಲಾಧಿಕಾರಿ ಅವರನ್ನು ಶಾಲು ಹೋದಿಸಿ ಫಲಪುಷ್ಭ ನೀಡಿ ಗೌರವಿಸಿದರು. ಈ ವೇಳೆ ರಾಜಗೋಪಾಲ ಆಚಾರ್ಯ ಪುತ್ರಿ ಹಾಗೂ ಸಹೋದರ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಿಕ್ಷಕ ಮತ್ತು ವಿದ್ಯಾರ್ಥಿಗಳ ಸಂಬಂಧ ಅವಿನಾಭಾವ ಸಂಬಂಧ. ವಿದ್ಯಾರ್ಥಿ ದಿಸೆಯಲ್ಲಿ ಪಡೆದ ಅನುಭವ ಜೀವನಕ್ಕೆ ಪ್ರೇರಣೆಯಾಗುತ್ತದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸುವ ಛಲ ಹೊಂದಿರಬೇಕು. ಪೈಪೋಟಿಯ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳ ಜೊತೆಯಲ್ಲಿ ಕೌಶಲ್ಯ ಬೇಕು. ಮಾತನಾಡುವ ಕಲೆ, ಪರಿಸ್ಥಿತಿಯನ್ನು ಎದುರಿಸುವ ಧೈರ್ಯ ಇರಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಸಿ. ಸುರೇಶ ತುಂಗ ಹೇಳಿದರು. ಅವರು ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶುಕ್ರವಾರ ಜಿ.ಎಸ್.ವಿ. ಅಸೋಸಿಯೇಶನ್ ಗಂಗೊಳ್ಳಿ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಬೆಳೆಯಬೇಕಾದರೆ ನಾವು ಬದಲಾಗಬೇಕು. ಬದಲಾಗಬೇಕಾದರೆ ಕಲಿಯಬೇಕು. ಕಲಿಯಬೇಕಾದರೆ ತೆರೆದುಕೊಳ್ಳಬೇಕು. ನಮ್ಮನ್ನು ನಾವು ಹೊರ ಜಗತ್ತಿಗೆ ಸಮರ್ಪಿಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ಉತ್ಸಾಹ ಮತ್ತು ಹಂಬಲ ಇರಬೇಕು. ನಮ್ಮ ಸುತ್ತಮುತ್ತಲು ಇರುವ ಅವಕಾಶಗಳನ್ನು ನೋಡುತ್ತಿರಬೇಕು. ಇವೆಲ್ಲದರ ಮಧ್ಯೆ ತಾಳ್ಮೆ ಅವಶ್ಯಕ. ಮಾತು ಸಾಧನೆಯಾಗಬಾರದು. ಸಾಧನೆ ಮಾತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ (ರಿ) ಬೈಂದೂರು ಸಾಂಸ್ಕೃತಿಕ ಸಾಹಿತ್ಯ ಸೇವಾ ಪ್ರತಿಷ್ಠಾನ ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಡಿಸೆಂಬರ್ 14ರಿಂದ 21ರ ತನಕ 08 ದಿನಗಳ ಕಾಲ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಸಂಜೆ 07 ಗಂಟೆಗೆ ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ಸಭಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ತಿಳಿಸಿದ್ದಾರೆ. ಅವರು ಗುರುವಾರ ಬೈಂದೂರು ರೋಟರಿ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ನಮ್ಮ ಸಂಸ್ಥೆ ಬೆಳ್ಳಿಹಬ್ಬದ ವರ್ಷವನ್ನು ಸಂಭ್ರಮಿಸುತ್ತಿದ್ದು ವರ್ಷವಿಡಿ ವಿವಿಧ ಸಾಂಸ್ಕೃತಿಕ ಸಾಹಿತಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು. ಡಿಸೆಂಬರ್ 14ರ ಆದಿತ್ಯವಾರ ರಂಗಾಯಣ ಟ್ರಸ್ಟ್ ಮೈಸೂರು ಪ್ರಸ್ತುತಿಯ ನಾಟಕ “ಚಾಮಚೆಲುವೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಸುಜಾತ ಅಕ್ಕಿ, ನಿರ್ದೇಶನ ವಿಕಾಸ್ ಚಂದ್ರ, ಡಿಸೆಂಬರ್ 15ರ ಸೋಮವಾರ ಕಲಾರೋಹಣ ಶಿವಮೊಗ್ಗ ಪ್ರಸ್ತುತಿಯ ನಾಟಕ “ನನ… ನನಮ್ ರಸ್ತೆ” ಪ್ರದರ್ಶನಗೊಳ್ಳಲಿದೆ. ನಾಟಕ ರಚನೆ: ಡಾ. ಗಜಾನನ ಶರ್ಮಾ ಬೆಂಗಳೂರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಾನವನು ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಈ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರೋಹಿಣಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಐಕ್ಯೂಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಚಾಲಕ ನಾಗರಾಜ ಯು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಗಣೇಶ್ ಪೈ. ಎಂ. ಪ್ರಸ್ತಾವಿಸಿ ಸ್ವಾಗತಿಸಿದರು. ನಾಗಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮಿಯ್ಯಾಣಿ ಕಾಡಿನತಾರುವಿನಲ್ಲಿ 27ನೇ ವರ್ಷದ ಸೂರ್ಯ ಕಂಬಳೋತ್ಸವ ಡಿಸೆಂಬರ್‌ 25 ಗುರುವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ, ಹಗ್ಗ ಕಿರಿಯ ವಿಭಾಗ ಹಾಗೂ ಹಲಗೆ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಂಘಟಕ ಸಂತೋಷ ಪೂಜಾರಿ ಕಾಡಿನತಾರು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಬೋಧಕ  ಬೋಧಕೇತರ ವರ್ಗದವರು  ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅವನಿಕಾ ಜಿ. ನಿರೂಪಿಸಿ, ಅಮೋಘ ಪೈ ಸ್ವಾಗತಿಸಿ, ಹರಿದಾಸ್ ಆರ್. ಮಲ್ಯ  ವಂದನಾರ್ಪಣೆ ಗೈದರು.  ಈ ಕಾರ್ಯಕ್ರಮದ ನಂತರ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಐಸ್ ಕ್ರಿಂ ವಿತರಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಬ್ಯಾಂಕ್ ಮಿತ್ರ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಉಡುಪಿ ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕರಾದ ಪೂರ್ಣಾನಂದ ಅವರು ಭಾರತದ ಒಟ್ಟಾರೆ ಆರ್ಥಿಕತೆಯು ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಯನ್ನು ಅವಲಂಬಿಸಿದೆ. ಇದು ಸಾಧ್ಯವಾಗಬೇಕಾದರೆ, ಆರ್ಥಿಕ ಚಟುವಟಿಕೆಗಳಿಂದ ಹೊರಗುಳಿದವರ ಸೇರ್ಪಡೆ ಅನಿವಾರ್ಯ. ಹಾಗಾಗಿ ಕೊನೆಯ ಹಂತದ ಸಂಪರ್ಕವನ್ನು ಪ್ರಯತ್ನಿಸುವ ಬ್ಯಾಂಕ್‌ನ ಪ್ರತಿನಿಧಿಯಾಗಿ ಸೇವೆಯನ್ನು ನೀಡುವ ವ್ಯವಸ್ಥೆ ಇದಾಗಿದೆ. ಈಗಾಗಲೇ ಬ್ಯಾಂಕ್ ಮಿತ್ರ ಯೋಜನೆಯು ಸಾಕಷ್ಟು ಪ್ರಾಮುಖ್ಯತೆಯನ್ನು ಪಡೆದಿದೆ. ಬ್ಯಾಂಕ್ ಮಿತ್ರ ಅಭ್ಯರ್ಥಿಗಳು ಕಮಿಷನ್‌ಗಾಗಿ ಕೆಲಸವನ್ನು ಮಾಡಬೇಡಿ, ಇದನ್ನು ಸೇವೆಯೆಂದು ಮನಗಂಡು ಕೆಲಸವನ್ನು ಮಾಡಿದಲ್ಲಿ ಖಂಡಿತವಾಗಿ ನಿಮಗೆ ಸಮಾಜದಲ್ಲಿ ಹೆಚ್ಚಿನ ಸ್ತಾನಮಾನಗಳು ದೊರೆಯುತ್ತದೆ. ಬ್ಯಾಂಕ್‌ಗೆ ಪೂರಕವಾಗಿ ಕಾರ್ಯವನ್ನು ಮಾಡುವುದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿ ಶಿಬಿರಾರ್ಥಿಗಳಿಗೆ ಪುಸ್ತಕವನ್ನು ವಿತರಿಸಿ, ಶುಭ ಹಾರೈಸಿದರು. ಲೀಡ್ ಬ್ಯಾಂಕ್‌ನ ಮ್ಯಾನೇಜರ್ ಹರೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಇವರು ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆಸಿದ ವಿಭಾಗಿಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶರಧಿ ಅವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ . ಅವರಿಗೆ ಕೋಟ ವಿದ್ಯಾ ಸಂಘದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಯುಎಇ ಕುಂದಗನ್ನಡಿಗರ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳು ಯಶಸ್ವಿಯಾಗಿ ಜರುಗಿದವು. ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಅರಬ್ಬ ನಾಡಿನಲ್ಲಿ ನೆಲೆಸಿರುವ ಕುಂದಗನ್ನಡಿಗರು ಭಾಗವಹಿಸಿದ್ದರು. ಆಟೋಟ ಸ್ಫರ್ಧೆಗಳಿಗೆ ಐದು ತಂಡಗಳಾಗಿ ಮಾಡಲಾಗಿದ್ದು ಪ್ರತೀ ತಂಡಗಳಿಗೆ ಕುಂದಾಪುರದ ವಿಶೇಷತೆಗಳಲ್ಲಿ ಒಂದಾದ ಪಂಚಗಂಗಾವಳಿ ನದಿಗಳಾದ ಸೌರ್ಪಣಿಕ, ವರಾಹಿ, ಖೇಟಾ, ಕುಬ್ಜಾ ಮತ್ತು ಚಕ್ರಾ ಎಂದು ಕುಂದಾಪುರದಲ್ಲಿ ಸಂಗವಿಸುವ ಐದು ನದಿಗಳ ಹೆಸರು ನೀಡಲಾಯಿತು. ಟೀಮ್ ಗ್ರಾಮೀಣ ಆಟೋಟ ಸ್ಫರ್ಧೆಗಳ ಜೊತೆಗೆ ವ್ಯಯಕ್ತಿಕ ಆಟೋಟ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು. ಅದೇ ರೀತಿ ಚಾಂಪಿಯನ್ ಮಂಜುನಾಥ ನಾಯಕತ್ವದ ಕುಬ್ಜಾ ತಂಡ ಹೊರಹೊಮ್ಮಿದರದೆ ರನ್ನರ್ಸ ಸಂತೋಷ ನಾಯಕತ್ವದ ಸೌಪರ್ಣಿಕ ತಂಡ ಹೊರಹೊಮ್ಮಿತು. ಕಾರ್ಯಕ್ರಮವನ್ನು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇದರ ಸ್ಥಾಪಕ ಅಧ್ಯಕ್ಷರಾಗಿರುವ ಸದಾನ್‌ದಾಸ್ ಉಧ್ಘಾಟಿಸಿದರು.  ಮುಖ್ಯ ಅತಿಥಿಗಳಾಗಿ ಸುರೇಶ್ ಡಿ ಹೆಚ್ ಎಲ್ ಮತ್ತು ಬಿ.ಎಂ ಗ್ರೂಫ್ ಚೇರ್ಮೇನ್ ಡಾ. ಕನಕರಾಜ್ ಪ್ರವೀಣ್ ಆಚಾರ,…

Read More