ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ರಥಬೀದಿ ವಠಾರದಲ್ಲಿ ರಾತ್ರಿ ನಡೆದ ‘ಉಪ್ಪುಂದ ಶ್ರೀ ಕ್ಷೇತ್ರ ಮಹಾತ್ಮೆʼ ಪ್ರಸಂಗ ಬಿಡುಗಡೆ ಸಮಾರಂಭವು ವೈಭವದಿಂದ ಇತ್ತೀಚಿಗೆ ನೆರವೇರಿತು. ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಗುರುರಾಜ್ ಗಂಟೆಹೊಳೆ ಅವರು ಉದ್ಘಾಟಿಸಿದರು. ಆಡಳಿತ ಮೊಕ್ತೇಶರಾದ ಸೀತಾರಾಮ್ ಶೆಟ್ಟಿ ಮತ್ತು ನಿವೃತ್ತ ಮುಖ್ಯೋಪಾಧ್ಯಾಯರಾದ ವಿಶ್ವೇಶ್ವರ ಅಡಿಗ ಅವರು ಕ್ಷೇತ್ರದ ನಂಬಿಕೆ–ಪರಂಪರೆಯ ಸಾರವನ್ನು ಒಳಗೊಂಡಿರುವ “ಉಪ್ಪುಂದ ಕ್ಷೇತ್ರ ಮಹಾತ್ಮೆ” ಪ್ರಸಂಗವನ್ನು ಲೋಕಾರ್ಪಣೆಗೊಳಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಯು. ಸತೀಶ್ ಶೆಟ್ಟಿ ಅವರು ಅಧ್ಯಕ್ಷೀಯ ಭಾಷಣದಲ್ಲಿ ಪ್ರಸಂಗದ ಮಹತ್ವ, ಕ್ಷೇತ್ರದ ಐತಿಹಾಸಿಕತೆ ಮತ್ತು ಭಕ್ತರ ಒಗ್ಗಟ್ಟಿನ ಪ್ರಾಮುಖ್ಯತೆಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನಚಂದ್ರ, ಪ್ರಧಾನ ಅರ್ಚಕರಾದ ಪ್ರಕಾಶ್ ಉಡುಪ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮದನ ಕುಮಾರ್, ಓಕುಳಿ ಸಮಿತಿ ಮಂಜುನಾಥ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ…
Author: ನ್ಯೂಸ್ ಬ್ಯೂರೋ
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾಹೆ ಸಂಸ್ಕೃತಿ ಸಮನ್ವಯ ಸಮಿತಿ ಮತ್ತು ಸ್ಪಿಕ್ ಮೆಕೆ ಸಹಯೋಗದೊಂದಿಗೆ ಬಿಸ್ಮಿಲ್ಲಾ ಪ್ರಶಸ್ತಿ ಪಡೆದ ಪ್ರಸಿದ್ಧ ಒಡಿಸ್ಸಿ ನೃತ್ಯಗಾರ ರಾಹುಲ್ ಆಚಾರ್ಯ ಅವರು ಒಡಿಸ್ಸಿ ನೃತ್ಯವನ್ನು ಬುಧವಾರ ಪ್ರದರ್ಶಿಸಿದರು. ಅವರ ತಂಡದ ಮೃದಂಗ ವಾದಕ ದಿವಸ್ಕರ್ ಪರಿದ್, ಗಾಯಕ ಸುಕಾಂತ್ ಕುಂದ, ವಾಯಲಿನ್ ವಾದಕ ಪ್ರದೀಪ್ ಕುಮಾರ್ ಮಹಾರಾಣ, ಮಂಜ್ರಾ ವಾದಕ ಸುಮುಖ ತಮನ್ಕರ್ ಅವರ ಹಿಮ್ಮೇಳದ ಸಹಕಾರದೊಂದಿಗೆ ಓಡಿಸ್ಸಿ ನೃತ್ಯ ಪ್ರದರ್ಶನ ನೀಡಲಾಯಿತು. ನೃತ್ಯವನ್ನು ನಾಲ್ಕು ವಿಭಾಗಗಳಲ್ಲಿ ಪ್ರದರ್ಶಿಸಿ, ನಂತರ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಲಾಯಿತು. ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ಅವರು ರಾಹುಲ್ ಆಚಾರ್ಯ ಮತ್ತು ಅವರ ತಂಡವನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶಶಾಂಕ್ ಪಟೇಲ್ ಸ್ವಾಗತಿಸಿ, ಡಾ. ಗಣೇಶ್ ಶೆಣೈ ಪರಿಚಯ ಭಾಷಣ ಮಾಡಿದರು ಮತ್ತು ದುರ್ಗಾ ಪ್ರಸಾದ್ ಮಯ್ಯ ಧನ್ಯವಾದಗಳನ್ನು ಅರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಕೋಟ ಶಿವರಾಮ ಕಾರಂತರ 28ನೇ ಸ್ಮೃತಿ ದಿನಾಚರಣೆಯನ್ನು ಡಾ. ಕೋಟ ಶಿವರಾಮ ಕಾರಂತ ರಿಸರ್ಚ್ ಮತ್ತು ಸ್ಟಡಿ ಸೆಂಟರ್ ಟ್ರಸ್ಟ್ ಸಾಲಿಗ್ರಾಮ ಹಾಗೂ ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಕಾರಂತ ಸ್ಮೃತಿ ಚಿತ್ರಶಾಲೆಯಲ್ಲಿ ಮಂಗಳವಾರ ಆಚರಿಸಲಾಯಿತು. ಸಂಸ್ಥೆಯ ಕಾರ್ಯನಿರ್ವಹಕ ವಿಶ್ವಸ್ಥ ಗುಜ್ಜಾಡಿ ಪ್ರಭಾಕರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ ಶಿವರಾಮ ಕಾರಂತರ ನೆನಪುಗಳು ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಬಗ್ಗೆ ಎಲ್ಲರೂ ಶ್ರಮ ವಹಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಬ್ರಹ್ಮಾವರ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಜಿ. ರಾಮಚಂದ್ರ ಐತಾಳ ಮಾತನಾಡಿ, ಕಾರಂತರ ಸಂಸ್ಮರಣೆ ಮಾಡಿ ಜೀವನ ಎನ್ನುವದು ಕರ್ತವ್ಯ. ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ಕಾರಂತರ ಆಶಯವಾಗಿತ್ತು ಕಾರಂತ ಜೀವನ ಯಶೋಗಾಧೆ ಮರೆಯಲಾಗದ ವಿಶ್ವ ಪುಟಗಳಲ್ಲಿ ಸೇರಿಕೊಂಡಿದೆ ಇಂಥಹ ಮಹಾನ್ ಚೇತನ ಹೆಸರನ್ನು ಇಂದಿನ ಯುವ ಜನಾಂಗಕ್ಕೆ ಈ ಅಧ್ಯಯನ ಕೇಂದ್ರ ದಾರಿದೀಪವಾಗಲಿ ಎಂದು ತಿಳಿಸಿದರು. ಗಣ್ಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಇತ್ತೀಚಿಗೆ ನಡೆಯಿತು. ಅಜೆಕಾರ್ ಪದ್ಮಗೋಪಾಲ್ ಎಜುಕೇಶನಲ್ ಟ್ರಸ್ಟ್ ಹಾಗೂ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿಶೇಷವಾದ ಶಿಕ್ಷಣದ ಕಾಲಘಟ್ಟದಲ್ಲಿ ವಿದ್ಯಾರ್ಜನೆಗೈಯುತ್ತಿರುವ ವಿದ್ಯಾರ್ಥಿಗಳು ವಯೋಸಹಜವಾದ ಆಸೆ ಆಕಾಂಕ್ಷೆಗಳಿಗೆ ಕಡಿವಾಣ ಹಾಕಿ ತಂದೆ ತಾಯಿಯ ಶ್ರಮವನ್ನು ನೆನಪಿಸಿಕೊಂಡು ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನವಿರಲಿ ಎಂದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹ ರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಸೇವಾ ಮನೋಭಾವವುಳ್ಳ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಜಿಲ್ಲಾ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ದೂ.ಸಂಖ್ಯೆ: 0820-2533650 ಹಾಗೂ ತಾಲೂಕು ಘಟಕಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಯಕ್ಷಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನೆಹರೂ ಮೈದಾನ ಹಲವು ವರ್ಷಗಳಿಂದ ಕುಂದಾಪುರ ತಾಲ್ಲೂಕು ಆಡಳಿತ ಸುಪರ್ದಿಯಲ್ಲಿದ್ದು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ, ಪುರಸಭೆ ಆಡಳಿತದ ಸತತ ಪ್ರಯತ್ನದಿಂದ ಕುಂದಾಪುರ ಪುರಸಭೆ ಸುಪರ್ದಿಗೆ ಅಧಿಕೃತವಾಗಿ ಹಸ್ತಾಂತರವಾಗಿದ್ದು, ಇದೀಗ ಪುರಸಭೆ ನೆಹರೂ ಮೈದಾನದಲ್ಲಿ ನಡೆಯುವ ಯಕ್ಷಗಾನ ಹಾಗೂ ಇತರೆ ಸಾಂಸ್ಕೃತಿಕ, ಕಲೆ, ಕ್ರೀಡೆ, ಕೃಷಿ ಮೇಳ ಮುಂತಾದ ಎಲ್ಲಾ ಕಾರ್ಯಕ್ರಮಗಳಿಗೆ ನೆಲ ಬಾಡಿಗೆ ಹೆಸರಿನಲ್ಲಿ ಸುಮಾರು ಐವತ್ತರಿಂದ ಅರವತ್ತು ಸಾವಿರದ ತನಕ ಹಣ ವಸೂಲಿಗೆ ಹೊರಟಿರುವ ವಿಚಾರ ತಿಳಿದುಬಂದಿದ್ದು ಇದೊಂದು ಕಲಾಭಿಮಾನಿಗಳ, ಕ್ರೀಡಾ ಆಸಕ್ತರ, ಕೃಷಿಕರ ವಿರೋಧಿ ನಿಲುವಾಗಿದ್ದು ಕುಂದಾಪುರ ತಾಲ್ಲೂಕು ರೈತ ಸಂಘ ಪುರಸಭೆಯ ಈ ಕ್ರಮವನ್ನು ವಿರೋಧಿಸುತ್ತದೆ ಎಂದು ಕುಂದಾಪುರ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ನೆಹರೂ ಮೈದಾನದಲ್ಲಿ ಇಲ್ಲಿಯ ತನಕ ಯಾವುದೇ ಸ್ವಚ್ಛತೆ, ನೈರ್ಮಲ್ಯ, ಶೌಚಾಲಯ, ಬಯಲು ರಂಗ ಮಂಟಪ ಇತ್ಯಾದಿ ಯಾವುದಕ್ಕೂ ಕ್ರಮವಹಿಸದ ಪುರಸಭೆ ಹಾಗೂ ತಾಲ್ಲೂಕು ಆಡಳಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕನ್ನಡ ವಿಭಾಗ ಆಶ್ರಯದಲ್ಲಿ ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗ ಕುರಿತು ಕಗ್ಗೋತ್ಸವ ಕಾರ್ಯಕ್ರಮ ಕಾಲೇಜಿನ ಬಿ. ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ ಮತ್ತು ನಿವೃತ್ತ ಎಲ್.ಐ.ಸಿ. ಅಧಿಕಾರಿಗಳಾದ ಡಾ.ಎನ್. ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ, ಮಂಕುತಿಮ್ಮನ ಕಗ್ಗ ನಮ್ಮ ಸಂಸ್ಕೃತಿ ಮೌಲ್ಯ, ಆಧ್ಯಾತ್ಮ, ತಾತ್ವಿಕ ಚಿಂತನೆ ಮತ್ತು ಜೀವನದ ಆದರ್ಶಗಳನ್ನು ಪ್ರತಿಬಿಂಬಿಸುತ್ತದೆ. ಮಾನವನ ಹೊಣೆಗಾರಿಕೆ, ಶ್ರದ್ಧೆ, ತಾಳ್ಮೆ ಮತ್ತು ನೈತಿಕತೆ ತಿಳಿಸುವುದಲ್ಲದೆ ನಿಜವಾದ ಜೀವನದ ಮೌಲ್ಯಗಳು ತಿಳಿಸಲು ಸಂದೇಶಗಳನ್ನು ಒಳಗೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟ್‌ನ ಸದಸ್ಯರುಗಳಾದ ಸುಭಾಶ್ಚಂದ್ರ ಶೆಟ್ಟಿ, ಅನುಪಮ ಎಸ್. ಶೆಟ್ಟಿ, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕುಮಾರ ಪಿ. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಮಮತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಮೂಡುಗಿಳಿಯಾರು ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿ ಅನ್ನ ಪ್ರಶಾನ ಕಾರ್ಯಕ್ರಮ ಇತ್ತಿಚಿಗೆ ಜರಗಿತು. ಕಾರ್ಯಕ್ರಮವನ್ನು ಕೋಟ ಗಿಳಿಯಾರಿನ ಹಿರಿಯ ನಾಗರೀಕ ವೇದಿಕೆಯ ಅಧ್ಯಕ್ಷ, ರಾಷ್ಟ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಧ್ಯಾಯ ಹಂದಕುಂದ ಸೋಮಶೇಖರ ಶೆಟ್ಟಿ ಮಕ್ಕಳಿಗೆ ಆಹಾರ ಪದ್ದತಿ ಹಾಗೂ ಅವರ ಅರೋಗ್ಯದ ಕುರಿತು ಮಾಹಿತಿ ನೀಡಿ ಅನ್ನಪ್ರಾಶನಕ್ಕೆ ಚಾಲನೆ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಹಿರಿಯ ನಾಗರಿಕ ವೇದಿಕೆಯ ಪದಾಧಿಕಾರಿಗಳಾದ ಕೆ. ರಾಜಾರಾಮ್ ಶೆಟ್ಟಿ, ಜಿ. ಮಹಾಬಲ ಹೆರ್ಳೆ. ಜಿ. ಶಂಕರ ಆಚಾರ್, ಜಿ. ಸುಬ್ರಹ್ಮಣ್ಯ ಹೆರ್ಳೆ, ಜಿ. ಕೃಷ್ಣಯ್ಯ ಆಚಾರ್, ಸ್ಥಳೀಯರಾದ ಕೊಗ್ಗ ಆಚಾರ್ ಹಾಗೂ ಸರ್ವಾಜನಿಕರು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಗಂಗಾ ಸ್ವಗತಿಸಿದರು. ವಿಭಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000 ಗಳ ಪ್ರೋತ್ಸಾಹಧನ ನೀಡಲಾಗುವುದು. 18 ರಿಂದ 40 ವರ್ಷ ವಯೋಮಿತಿಯೊಳಗಿನ ಅರ್ಜಿದಾರರು ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ.ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಂದ, ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 204, ಒಂದನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
