Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2026-27 ನೇ ಸಾಲಿಗೆ 6 ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿದ್ದು, ಸಮೀಪದ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬ್ರಹ್ಮಾವರದ ಆರೂರು ದೂ.ಸಂಖ್ಯೆ: 9482625925, ಕಾಪು ತಾಲೂಕಿನ ಕಳತ್ತೂರು ದೂ.ಸಂಖ್ಯೆ: 9535225409, ಪಟ್ಲ ಹಿರೇಬೆಟ್ಟು ದೂ.ಸಂಖ್ಯೆ: 8970292710, ಹೆರಂಜಾಲು ದೂ.ಸಂಖ್ಯೆ: 8073860074, ಕಾರ್ಕಳ ಮಿಯ್ಯಾರು ದೂ.ಸಂಖ್ಯೆ: 9739790298 ಹಾಗೂ ಯಡ್ಯಾಡಿ-ಮತ್ಯಾಡಿ ದೂ.ಸಂಖ್ಯೆ: 9901519126, ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಶಂಕರನಾರಾಯಣ ದೂ.ಸಂಖ್ಯೆ: 6363120177 ಹಾಗೂ ಅಜೆಕಾರು ದೂ.ಸಂಖ್ಯೆ: 7204909862, ಇಂದಿರಾಗಾಂಧಿ ವಸತಿ ಶಾಲೆ ಸಿದ್ದಾಪುರ ದೂ.ಸಂಖ್ಯೆ: 9482487266 ಹಾಗೂ ನಾರಾಯಣ ಗುರು ವಸತಿ ಶಾಲೆ ವಡ್ಡರ್ಸೆ ದೂ.ಸಂಖ್ಯೆ: 8867415291 ಅನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಸಿಎಸ್‌ಐ ಬೋರ್ಡ್‌ನಿಂದ ನಡೆಸಲ್ಪಡುವ ದೇಶದ ಅತಿ ಕ್ಲಿಷ್ಟಕರ ಪರೀಕ್ಷೆಗಳಲ್ಲಿ ಒಂದಾದ ಸಿಎಸ್‌ಇಇಟಿ ಜನವರಿ ಆವೃತ್ತಿಯ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ. ದೇಶದಲ್ಲಿ ಕಂಪನಿ ಸೆಕ್ರೆಟರಿ ಪರೀಕ್ಷೆಯ ಅರ್ಹತೆಗಾಗಿ ನಡೆಯುವ ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 60 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಗೊಂಡು ಮುಂದಿನ ಸಿಎಸ್‌ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. 200ಕ್ಕೆ ಅತಿ ಹೆಚ್ಚು 169 ಅಂಕವನ್ನು ಪಡೆದ ಸಾಯಿ ಪ್ರಸಾದ್ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ, ಕಿಶನ್ ಎನ್. 157, ಮಂಗಿಲಾಲ್ 157 ಅಂಕವನ್ನು ಪಡೆದು ದ್ವಿತೀಯ ಸ್ಥಾನಿಯಾಗಿದ್ದಾರೆ. ಜತಿನ್ ಹರೀಶ್ 144, ಸ್ಪೂರ್ತಿ ಯು.ಎ. 143, ಭೂಮಿಕಾ ಸುಬ್ರಾಯ ಹೆಗ್ಡೆ 137, ಚಿನ್ಮಯ್ ಆರ್. 134, ವರುಣ್ ಚಂದ್ರಶೇಖರ್ 130 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ 120 ಕ್ಕಿಂತ ಅಧಿಕ ಅಂಕಗಳನ್ನು 15 ವಿದ್ಯಾರ್ಥಿಗಳು, 110ಕ್ಕಿಂತ ಅಧಿಕ ಅಂಕಗಳನ್ನು 21 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಲೆಯ ವಿವಿಧ ಪ್ರಕಾರಗಳನ್ನು ಕಲಿಸುತ್ತಾ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಶ್ರಮಿಸುತ್ತಿರುವ ಸುರಭಿ ಸಂಸ್ಥೆ ವಿದ್ಯಾರ್ಥಿಗಳನ್ನು ಸುಸಂಸ್ಕೃತರನ್ನಾಗಿಸುವ ಕಾರ್ಯದಲ್ಲಿ ತೊಡಗಿದೆ. ಕಲೆ ಉಳಿಯಬೇಕಾದರೆ ಅದರ ಬಗ್ಗೆ ಅರಿವು ಅಗತ್ಯ. ನಮ್ಮ ಆಸಕ್ತಿಗಳೇ ಸಾಂಸ್ಕೃತಿಕ ಸಿರಿವಂತಿಗೆಗೆ ಸಹಕಾರಿಯಾಗುತ್ತದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಸುರಭಿಯ ರಜತ ವರ್ಷದ ಪ್ರಯುಕ್ತ ಶ್ರೀ ಶಾರದಾ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ನಾಟಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಶಿಕ್ಷಣವು ವ್ಯಕ್ತಿಯಲ್ಲಿ ಸಂಸ್ಕಾರ ಹಾಗೂ ಸ್ವಾಭಿಮಾನವನ್ನು ಬೆಳೆಸುತ್ತದೆ. ಶಿಕ್ಷಣದ ಜತೆಗೆ ಕಲಾಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಆತ ಮತ್ತಷ್ಟು ಕ್ರಿಯಾಶೀಲನಾಗುತ್ತಾನೆ ಎಂದರು. ಉದ್ಯಮಿ ಡಾ. ಗೋವಿಂದಬಾಬು ಪೂಜಾರಿ ಶುಭಾಶಂಸನೆ ಮಾಡಿದರು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಗೋವಿಂದ ಎಂ. ಆಶಯ ನುಡಿಗಳನ್ನಾಡಿದರು. ಉದ್ಯಮಿ ರಾಜು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಇವರು ನಡೆಸುವ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಅರ್ಹತಾ ಪರೀಕ್ಷೆ CSEET)ಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪರೀಕ್ಷೆ ಬರೆದ 43 ವಿದ್ಯಾರ್ಥಿಗಳಲ್ಲಿ  39 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಪಡೆಯುದರ ಮೂಲಕ  CS ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳಾದ ಸಹನಾ(168), ಅಮೂಲ್ಯ ಆರ್ ಶೆಟ್ಟಿ (166), ಧನುಷ್ ಆರ್ ಹೆಬ್ಬಾರ್( 164) ಪ್ರಥಮ್ ಜಿ ಕಾಂಚನ್(159), ಶಮ್ಯ(156) ಶಿವಮ್(155), ಶಯನ್(154), ಶ್ರೀಶಾ ಆರ್ ಶೆಟ್ಟಿ (154), ದ್ರಶ್ಯ ಜಿ ದೇವಾಡಿಗ(153), ಸಂಕೇತ್ ಎಸ್ ಬಿಲ್ಲವ (153), ಆದಿತ್ಯ ಆರ್ ಶೆಟ್ಟಿ (151), ಪ್ರಜ್ವಲ್(148), ಶಮಿತ್ ಬಿ ಪೂಜಾರಿ(145), ಪ್ರೀಥನ್ (142),ಸಂಜಯ್(142), ಶ್ರೀಶಾ ಕೆ.ಎಸ್ (136), ವೈಭವ್(134), ಮೋಹಿತ್(133), ಸ್ಪಂದನ (130),ನಿಶ್ಚಿತ್ (130), ಪೂಜಾರಿ ತನ್ವಿ ಲವ (126), ಶ್ರೇಷ್ಠ ಆರ್ ನಾಯಕ್(125), ಪಲ್ಲವಿ ಆರ್ ಪೂಜಾರಿ (123), ಪ್ರಥಮ್ ಮಯ್ಯ(122), ಹಿರಣ್ಮಯಿ(120), ಸತ್ಯನಾರಾಯಣ (118), ಸಾನಿಕ(116),…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನಾಗರಾಜ ಗಿಳಿಯಾರು ಅವರು ಮಂಡಿಸಿದ “ಕಮ್ಯೂನಿಟಿ ಇನ್ವೊಲ್ವ್‌ಮೆಂಟ್ ಅಂಡ್ ಪಾರ್ಟಿಸಿಪೇಷನ್ ಇನ್ ದಿ ಡೆವಲಪ್ಮೆಂಟ್ ಆಫ್ ಟೂರಿಸಮ್ ಇಂಡಸ್ಟ್ರಿ – ಅ ಸ್ಟಡಿ ಇನ್ ದಿ ಕೋಸ್ಟಲ್ ಡಿಸ್ಟ್ರಿಕ್ಟ್ಸ್ ಆಫ್ ಕರ್ನಾಟಕ” (Community Involvement and Participation in the Development of Tourism Industry – A Study in the Coastal Districts of Karnataka) ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್. ಡಿ. ಪದವಿಯನ್ನು ಪ್ರದಾನಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಅಬೂಬಕ್ಕರ್ ಸಿದ್ದೀಕ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮಂಡಿಸಿದ್ದರು. ಅವರು ಗಿಳಿಯಾರು ಗೋಪಾಲ ಆಚಾರ್ಯ ಮತ್ತು ವಿಜಯಲಕ್ಷ್ಮಿ ಆಚಾರ್ಯ ದಂಪತಿಯ ಪುತ್ರ. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಕಾಂ. ಪದವಿ ಪಠ್ಯಪುಸ್ತಕದ ಲೇಖಕರಾಗಿದ್ದು, ರಾಜ್ಯ ಶಿಕ್ಷಣ ನೀತಿಯ ಅಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಕಾಂ. ಪಠ್ಯಕ್ರಮ ತಯಾರಿ ಸಮಿತಿಯ ಸದಸ್ಯರಾಗಿ ಸೇವೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಗ್ರಾಮದ ಕೊರವಡಿಯ ಪಡಿಯನ ಮನೆಯ ನಿವಾಸಿ ಶೀನ ಮರಕಾಲ ಅವರ ಪುತ್ರ ಸಂತೋಷ್ (38) ಪಂಚಗಂಗಾವಳಿ ನದಿಗೆ ಬೋಟಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನಾಪತ್ತೆಯಾದ ಘಟನೆ ಸೋಮವಾರ ಬೆಳಗಿನ ಜಾವ ಸಂಭವಿಸಿದೆ. ಸಂತೋಷ್ ಅವರು ಗಂಗೊಳ್ಳಿಯ ಗುರು ಜಟ್ಟಿಗೇಶ್ವರ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಜ.19ರ ಬೆಳಗ್ಗೆ ಮೀನುಗಾರಿಕೆ ಮುಗಿಸಿ, ವಾಪಾಸು ಬಂದರಿಗೆ ಬರುವ ವೇಳೆ ಈ ಅವಘಡ ಸಂಭವಿಸಿದೆ. ಕೂಡಲೇ ಬೋಟಿನಲ್ಲಿದ್ದವರೆಲ್ಲ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಸಂತೋಷ್ ಅವರ ಸಂಬಂಧಿ ರಾಘವೇಂದ್ರ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪರಿಸರದ ಬಗ್ಗೆ ಕಾಳಜಿ ಅತ್ಯಗತ್ಯ ಆದರೆ ಪ್ರಸ್ತುತ ನಿರ್ಲಕ್ಷ್ಯ ಅತಿಯಾಗಿ ಕಾಡುತ್ತಿದೆ. ಇದು ಸರಿಯಲ್ಲ ಮುಂದಿರುವ ದಿನಗಳು ಕ್ಲಿಷ್ಟಕರ ಎಂದು ಮಣೂರು ಚಿತ್ತಾರಿ ನಾಗಬ್ರಹ್ಮ ದೇಗುಲದ ಅಧ್ಯಕ್ಷ ಕೆ. ರಮೇಶ್ ಪ್ರಭು ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ ಹಾಗೂ ಚಿತ್ತಾರಿ ದೇಗುಲದ ಸಹಯೋಗದೊಂದಿಗೆ 287ನೇ ಭಾನುವಾರದ ಅಂಗವಾಗಿ ಮಣೂರು ಚಿತ್ತಾರಿ ನಾಗಬ್ರಹ್ಮ ದೇಗುಲದ ಸ್ವಚ್ಛತಾ ಕಾರ್ಯದಲ್ಲಿ ಮಾತನಾಡಿದರು. ದಿನದಿಂದ ದಿನಕ್ಕೆ ಪರಿಸರದ ಮೇಲೆ ಮುನುಕುಲ ಹಾನಿಯುಂಟುಮಾಡುತ್ತಿದ್ದಾನೆ ಪ್ಲಾಸ್ಟಿಕ್ ತ್ಯಾಜ್ಯಗಳು ಮನುಕುಲ ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ಸಂಚಕಾರ ತಂದೊಡ್ಡುತ್ತಿವೆ ಹೀಗಾದರೆ ಮುಂದಿನ ದಿನಗಳು ಆಪತ್ತು ತಪ್ಪಿದಲ್ಲ ಈಗಲೇ ಜಾಗೃತರಾಗಿ ಎಂದು ಕರೆಕೊಟ್ಟರು. ದೇಗುದ ಪ್ರಮುಖರಾದ ಗೋಪಾಲ್ ಪೈ, ಪಂಚವರ್ಣ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಮಣೂರು ಫ್ರೆಂಡ್ಸ್ ಸುರೇಶ್ ಆಚಾರ್ ಸೇರಿದಂತೆ ಹಲವರು ಇದ್ದರು. ಇದೇ ಜ.24ರ ಶನಿವಾರ ಮಣೂರು ಚಿತ್ತಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಲಯದ ಸ್ಕೌಟ್ಸ್ ಮತ್ತು ಗೈಡ್ಸ್ ರ‍್ಯಾಲಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ದೇವಾಡಿಗ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಾಯಕತ್ವ ಪ್ರತಿಭೆ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಮಾದರಿಯಾಗಿದೆ. ಜೊತೆಗೆ ಉತ್ತಮ ನಾಗರೀಕರನ್ನಾಗಿ ವಿದ್ಯಾರ್ಥಿಗಳನ್ನು ತಯಾರುಗೊಳಿಸುತ್ತದೆ ಎಂದು ಹೇಳಿದವರು. ಕಾರ್ಯಕ್ರಮದಲ್ಲಿ ತಾಲೂಕು ಸರಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾ ಶೇಖರ್ ಪೂಜಾರಿ ಅವರು ಉಪಸ್ಥಿತರಿದ್ದು ಜೀವನದಲ್ಲಿ ಕೌಶಲ್ಯ, ಸಂಸ್ಕಾರ ಮತ್ತು ಸಂಸ್ಕೃತಿಯನ್ನ ಸ್ಕೌಟ್ಸ್ ಗೈಡ್ಸ್ ಕಲಿಸುತ್ತದೆ ಎಂದು ಹೇಳಿದರು. ಸಭೆಯಲ್ಲಿ ಉಪಸ್ಥಿತರಿದ್ದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ವಿಜಯ ಕುಮಾರ್ ಶೆಟ್ಟಿ ಅವರು ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಾವಲಂಬನೆಯನ್ನು ಬೆಳೆಸುತ್ತದೆ ಎಂದು ಹೇಳಿದರು. ರ‍್ಯಾಲಿ ಪಕ್ಷಿ ನೋಟವನ್ನು ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಮಂಜುನಾಥ್ ಹೆಗಡೆ ಅವರು ಪ್ರಸ್ತುತ ಪಡಿಸಿದರು. ಸಭೆಯಲ್ಲಿ ಜಿಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ 2006ನೇಯ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ 80,000 ರೂ. ಮೊತ್ತದ ಪ್ರೊಜೆಕ್ಟರ್ ಮತ್ತು ಲ್ಯಾಪ್‌ ಟಾಪ್ ಕೊಡುಗೆಯಾಗಿ ಇತ್ತೀಚಿಗೆ ನೀಡಿದರು. ಶಾಲೆಯ ಉಪಪ್ರಾಂಶುಪಾಲರಾದ ರಂಜೀತ್ ಬೋಳಾರ್ ಮತ್ತು ನಿಕಟಪೂರ್ವ ಉಪಪ್ರಾಂಶುಪಾಲರಾದ ಮೋಹನ್ ರಾವ್ ಎಂ.ಜೆ. ಸಂಸ್ಥೆಯೊಂದಿಗಿನ ಸವಿನೆನಪು ಮೆಲುಕು ಹಾಕಿ ವಿದ್ಯಾರ್ಥಿಗಳಿಗೆ ಸಿಹಿಯೂಟ ನೀಡಿದರು. ಜೊತೆಗೆ ಮುಂದೆಯೂ ಶಾಲಾ ಅಭಿವೃದ್ಧಿ ಕಾರ್ಯಗಳಲ್ಲಿ ಸದಾ ಜೊತೆಗಿರುವುದಾಗಿ ಭರವಸೆ ನೀಡಿದರು. ತಾವು ಕಲಿತ ಗ್ರಾಮೀಣ ಶಾಲೆಯ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಾಧಾರಿತ ಶಿಕ್ಷಣದ ಪ್ರಯೋಜನವನ್ನು ಪಡೆಯಬೇಕೆಂಬ ಉದಾತ್ತ ಧ್ಯೇಯದಿಂದ ಕೊಡುಗೆಯನ್ನು ನೀಡಿದ ಹೆಮ್ಮೆಯ ಪೂರ್ವ ವಿದ್ಯಾರ್ಥಿಗಳ ಶಾಲಾಭಿಮಾನದ ಕುರಿತು ಪ್ರಶಂಸೆಯ ಮಾತುಗಳನ್ನಾಡಿದರು. ಅವರ ಗುರುಗಳಾದ ಉದಯ ಕುಮಾರ್ ರಾಯ್ಕರ್ ಅವರು ತಮ್ಮ ಶಿಷ್ಯರ ಸಾಧನೆ ಮತ್ತು ಔದಾರ್ಯದ ಬಗ್ಗೆ ಮಾತನಾಡಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಪ್ರಭಾ, ಪೋಷಕರು, ಪೂರ್ವ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಕೃಷ್ಣ ಡಿ. ಎಸ್. ಸ್ವಾಗತಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸುವ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯು ಅತೀ ಪ್ರಾಮುಖ್ಯ ದಾಖಲೆಯಾಗಿದ್ದು, ಎಲ್ಲಾ ಇಲಾಖಾಧಿಕಾರಿಗಳು ಇದರ ತಯಾರಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸಂಬಂಧಿಸಿದ ದಾಖಲೆಗಳನ್ನು…

Read More