ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆ.ಡಿ.ಎಫ್ ಕಪ್ 2026, ರಾಜ್ಯ ಮಟ್ಟದ ಇಂಟರ್ ಡುಜೊ ಕರಾಟೆ ಚಾಂಪಿಯನ್ಶಿಪ್ನ ಕುಮಿಟಿ ವಿಭಾಗದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ತನ್ವಿ (5B) ಹಾಗೂ ವಂಶಿಕಾ ಭಂಡಾರ್ಕರ್ (5B) ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಜಟ್ಟಿಗೆಶ್ವರ ಭಕ್ತ ವೃಂದ ಕುಂಜಿಗುಡಿ ಸಾಲಿಗ್ರಾಮ ಇದರ ನೇತೃತ್ವದಲ್ಲಿ 30ನೇ ವರ್ಷದ ಯಕ್ಷಗಾನ ಬಯಲಾಟವಾಗಿ ಅಮೃತೇಶ್ವರಿ ಮೇಳದ ವೇದಿಕೆಯಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೋಟ ಸುರೇಶ್ ಬಂಗೇರ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಸಾರ್ವಜನಿಕ ಅನ್ನ ಸಂತರ್ಪಣೆ ಸೇವಕರ್ತರಾದ ಮಂಜುನಾಥ ಹೊಳ್ಳ ದಂಪತಿಗಳಿಗೆ ಮತ್ತು ಗೆಳೆಯರ ಬಳಗದ ತಾರಾನಾಥ ಹೊಳ್ಳರಿಗೆ ವಿಶೇಷ ಗೌರವಾರ್ಪಣೆ ಸಲ್ಲಿಸಲಾಯಿತು. ಯಕ್ಷಗಾನಕ್ಕೆ ವಾರ್ಷಿಕ ನಿತ್ಯನಿಧಿ ಠೇವಣಿದಾರರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಆರೋಗ್ಯ ಸೇವೆ, ಸಮಾಜ ಸೇವೆ, ವಿದ್ಯಾ ಸೇವೆ, ಧಾರ್ಮಿಕ ಸೇವೆಗೆ ಸಹಾಯ ನಿಧಿ ವಿತರಿಸಲಾಯಿತು. ವೇದಿಕೆಯಲ್ಲಿ ಅತಿಥಿಗಳಾಗಿ ಉದ್ಯಮಿ ಕೃಷ್ಣಯ್ಯ ಪೂಜಾರಿ ಗದ್ದೆಮನೆ, ಶ್ರೀ ಜಟ್ಟಿಗೆಶ್ವರ ಭಕ್ತ ವೃಂದ ಅಧ್ಯಕ್ಷ ಗಣೇಶ್ ನಾಯರಿ, ಜಟ್ಟಿಗೆಶ್ವರ ಸಮಿತಿಯ ಕುಂಜುಗುಡಿ ಮಂಜುನಾಥ ನಾಯರಿ, ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಶಿವಪೂಜಾರಿ ಉಪಸ್ಥಿತರಿದ್ದರು. ಸಮಿತಿಯ ಕೆ. ಮಂಜುನಾಥ ನಾಯರಿ ಕಾರ್ಯಕ್ರಮ ನಿರೂಪಿಸಿ, ಸನ್ಮಾನ ಪತ್ರ ವಾಚಿಸಿ ಧನ್ಯವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಿಂಗ್ ರಸ್ತೆ ಸಮೀಪ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ಉಚಿತ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ನಡೆಸುತ್ತಿರುವಾಗ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಆಟೋ ಚಾಲಕ ಬಾಲಕೃಷ್ಣ ಖಾರ್ವಿಯನ್ನು ಪೊಲೀಸರು ಅಕ್ಕಿ ಸಹಿತ ವಶಪಡಿಸಿಕೊಂಡಿದ್ದಾರೆ. ಆಹಾರ ನಿರೀಕ್ಷಕ ಸುರೇಶ ಎಚ್.ಎಸ್, ಪಿಎಸ್ಐ ನಂಜಾನಾಯ್ಕ್ ಎನ್. ಹಾಗೂ ಸಿಬ್ಬಂದಿಯವರೊಂದಿಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಕಾಯುತ್ತಿರುವಾಗ ಆಟೋ ರಿಕ್ಷಾವು ಖಾರ್ವಿಕೇರಿ ರಿಂಗ್ ರಸ್ತೆ ಕಡೆಯಿಂದ ಬರುತ್ತಿರುವುದನ್ನು ಕಂಡು ನಿಲ್ಲಿಸಿ, ಪರಿಶೀಲಿಸಿದಾಗ ಆಟೋ ರಿಕ್ಷಾದಲ್ಲಿ ಅಕ್ಕಿ ತುಂಬಿದ 8 ಪಾಲೀಥಿನ್ ಚೀಲದಲ್ಲಿ ಉಚಿತ ಅನ್ನಭಾಗ್ಯ ಅಕ್ಕಿ ಇತ್ತು. ಚಾಲಕ ಕೃಷ್ಣ ಖಾರ್ವಿ ಬಳಿ ಇದ್ದ ಒಟ್ಟು 300 ಕೆ.ಜಿ ತೂಕದ ಅಂದಾಜು ರೂ.7,200 ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇದರ ವತಿಯಿಂದ 81ನೇ ಮಹಾ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಆಯೋಜಿಸಲಾಗಿದ್ದ ಕಾರವಾರದಿಂದ ಮಂಗಳೂರುವರೆಗಿನ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆಯಲ್ಲಿ ಮೊವಾಡಿ ಶ್ರೀ ಮಾಣಿ ಸಿದ್ಧಲಿಂಗೇಶ್ವರ ಭಜನಾ ಮಂಡಳಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆಶಿಕಾನ್ ಭಜನಾ ಮಂಡಳಿ ಭಟ್ಕಳ (ದ್ವಿತೀಯ) ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಾನಮದ್ಲು ಭಟ್ಕಳ (ತೃತೀಯ) ಸ್ಥಾನ ಪಡೆದುಕೊಂಡಿತು. ವಿಜೇತರಿಗೆ ತೀರ್ಪುಗಾರರಾದ ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಸಂಚಾಲಕ ಜಯಕರ ಪೂಜಾರಿ ಗುಲ್ವಾಡಿ, ಭಜನಾ ಪರಿಷತ್ ಗಂಗೊಳ್ಳಿ ವಲಯ ಅಧ್ಯಕ್ಷ ಜಗದೀಶ ಪೂಜಾರಿ, ಬಿ. ಪ್ರಕಾಶ ಶೆಣೈ ಮತ್ತು ಮಾಧವ ದೇವಾಡಿಗ ಬಹುಮಾನ ವಿತರಿಸಿ ಶುಭ ಹಾರೈಸಿದರು. ದೇವಸ್ಥಾನದ ಅಧ್ಯಕ್ಷ ಗುರುರಾಜ್, ಕಾರ್ಯದರ್ಶಿ ವರದರಾಜ್ ಜಿ.ಟಿ. ಮತ್ತು ಅರ್ಚಕ ಕೃಷ್ಣ ಜಿ.ಟಿ., ದೇವಸ್ಥಾನದ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ ಪಂಗಡದ ಮುಖಂಡರುಗಳು ಹಾಗೂ ಗ್ರಾಮಸ್ಥರಿಗೆ ಮಾಸಿಕ ಎಸ್ಸಿ ಎಸ್ಟಿ ಕುಂದು ಕೊರತೆ ಸಭೆ ಬೈಂದೂರು ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಅವರ ನೇತೃತ್ವದಲ್ಲಿ ಭಾನುವಾರ ನಡೆಯಿತು. ಸಭೆಯಲ್ಲಿ ಕುಂದುಕೊರತೆ ಬಗ್ಗೆ ವಿಚಾರಿಸಿ ಆಹವಾಲುಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ವ್ಯವಹಾರ ಮಾಡುವುದಾಗಿ ತಿಳಿಸಿದರು. ಇದೇ ವೇಳೆ ಸೈಬರ್ ಅಪರಾಧ, ಸಂಚಾರಿ ನಿಯಮಗಳು, ತುರ್ತು ಸಂದರ್ಭದಲ್ಲಿ 112 ದೂರವಾಣಿ ಕರೆ ಹಾಗೂ ಇನ್ನಿತರ ಬಗ್ಗೆ ಮಾಹಿತಿ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯುವ ಜನಾಂಗದಲ್ಲಿ ಹೆಚ್ಚು ಹೆಚ್ಚು ಪರಿಸರ ಜಾಗೃತಿ ಪ್ರಜ್ಞೆ ಬೆಳೆಯಬೇಕು, ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಲು ಪಣ ತೊಡಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಯುವ ಜನಾಂಗಕ್ಕೆ ಕಿವಿಮಾತು ಹೇಳಿದರು. ಅವರು ಭಾನುವಾರ ಇಲ್ಲಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆ ಬೀಚ್ನಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಗೀತಾನಂದ ಫೌಂಡೇಶನ್ ಮಣೂರು,ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್ ಇವರ ಸಹಯೋಗದೊಂದಿಗೆ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ, ಸಾಲಿಗ್ರಾಮ ಪಟ್ಟಣಪಂಚಾಯತ್ ಇವರ ಸಂಯೋಜನೆಯೊಂದಿಗೆ ಕ್ಯಾಪ್ಸ್ ಫೌಂಡೇಶನ್ ಬೆಂಗಳೂರು ಇವರ ಬಹುಮಾನ ಪ್ರಾಯೋಜಕತ್ವದಲ್ಲಿ 291ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ಸ್ವಚ್ಛತೆಯಲ್ಲಿ ಭಾಗಿಯಾಗಿ ಬಹುಮಾನ ಗೆಲ್ಲಿ ಎಂಬ ವಿನೂತನ 2ನೇ ಪ್ರಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣ, ಹೆಬ್ರಿ- 1, ಕಲಘಟಕಿ- 1, ಕೋಟ- 1 ಹಾಗೂ ಬೆಂಗಳೂರು ಚಂದ್ರ ಲೇ ಔಟ್-1 ರಂತೆ ಕಳ್ಳತನ, ಸುಲಿಗೆ, ಹನಿಟ್ರಾಪ್ ಗಳಂತಹ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ದ ನ್ಯಾಯಾಲಯವು ಈವರೆಗೆ 12 ಬಾರಿ ವಾರೆಂಟ್ ಹೊರಡಿಸಿದ್ದು ಈತ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಪತ್ತೆಯ ಬಗ್ಗೆ 4 ವರ್ಷಗಳಿಂದ ಪ್ರಯತ್ನಿಸುತ್ತಿದ್ದು ಖಚಿತ ಮಾಹಿತಿಯಂತೆ ಶಶಾಂಕ್ ಶೆಟ್ಟಿಯನ್ನು ರವಿವಾರದಂದು ಕುಂದಾಪುರ ತಾಲೂಕು ಬಿದ್ಕಲ್ ಕಟ್ಟೆ ಎಂಬಲ್ಲಿ ಬಂಧಿಸಲಾಗಿದೆ. ಕುಂದಾಪುರ ಡಿವೈಎಸ್ಪಿ ಹೆಚ್.ಡಿ ಕುಲಕರ್ಣಿ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಎ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ನಾಸೀರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಹಣಕಾಸು ಸಾಕ್ಷರತಾ ಸಪ್ತಾಹ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಲೀಡ್ ಡಿಸ್ಟ್ರಿಕ್ಟ್ ಆಫೀಸರ್ ವಿಜಯಶ್ರೀ ಅವರು ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ಸಾಕ್ಷರತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜನೆಯನ್ನು ಮಾಡಿ ಸಾರ್ವಜನಿಕರಲ್ಲಿ ಬ್ಯಾಂಕಿಂಗ್, ಸುರಕ್ಷಿತ ಡಿಜಿಟಲ್ ವ್ಯವಹಾರಗಳು ಮತ್ತು ಹಣಕಾಸು ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವುದಾಗಿದೆ. ಹಾಗಾಗಿ ಖಾಸಗಿ ವೈ ಫೈ ಬಳಸುವಾಗ ಜಾಗೃತರಾಗಿ ಹಾಗೂ ಅಂತಹ ಸಂದರ್ಭದಲ್ಲಿ ಆನ್ಲೈನ್ ಮುಖಾಂತರ ಹಣಕಾಸಿನ ವ್ಯವಹಾರ ಮಾಡಲು ಹೋಗಬೇಡಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹರೀಶ್ ಜಿ. ಅವರು ಹಣಕಾಸು ಮ್ಯೂಲ್ ಗಳ ಬಗ್ಗೆ ವಿವರಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲಿಯುಗದ ಕಾರಣಿಕ ದೈವಾದ ಕೊರಗಜ್ಜ ದೈವವು ಒಂದಲ್ಲ ಒಂದು ರೀತಿಯ ಪವಾಡಗೈಯುವ ದೈವವಾಗಿ ಭಕ್ತರನ್ನು ಸಲಹುತ್ತಿದ್ದಾನೆ, ಅಂತಯೇ ಇಲ್ಲಿನ ಪಾಂಡೇಶ್ವರದ ಕಳಿಬೈಲು ಕೊರಗಜ್ಜನ ಸನ್ನಿಧಾನ ಮತ್ತೊಮ್ಮೆ ತನ್ನ ಮಹಿಮೆಯನ್ನು ಸಾಕ್ಷೀಕರಿಸಿದ್ದಾನೆ. ಕಳೆದು ಹೋದ ಚಿನ್ನದ ಬಳೆ, ದೈವ ನುಡಿಯಂತೆ ನಿರ್ದಿಷ್ಟ ಅವಧಿಯೊಳಗೆ ಮಾಲೀಕೆಯ ಕೈ ಸೇರಿರುವ ಘಟನೆ ಭಕ್ತರ ಮನಗಳಲ್ಲಿ ಅಪಾರ ಭಕ್ತಿ ಭಾವವನ್ನು ಮೂಡಿಸಿದೆ. ಬ್ರಹ್ಮಾವರ ನಿವಾಸಿ ಹಾಗೂ ಕೋಟದ ಸರ್ಕಾರಿ ಶಾಲೆಯ ಶಿಕ್ಷಕಿ ಸುಮಾ ಅವರು ಜನವರಿ 13ರಂದು ಎಂದಿನಂತೆ ತಮ್ಮ ಬೈಸಿಕಲ್ನಲ್ಲಿ ಬ್ರಹ್ಮಾವರದಿಂದ ಕೋಟಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾಬುಕಳ ಸೇತುವೆ ಸಮೀಪ ಅವರ ಕೈಯಲ್ಲಿದ್ದ ಸುಮಾರು 12.5 ಗ್ರಾಂ ತೂಕದ (ಅಂದಾಜು 1,80,000 ಮೌಲ್ಯದ) ಚಿನ್ನದ ಬಳೆ ತಿಳಿಯದೆ ಕೈಯಿಂದ ಬಿದ್ದು ಹೋಗಿತ್ತು. ಕೋಟ ತಲುಪಿದ ನಂತರ ಬಳೆ ಕಳೆದುಹೋದ ಸಂಗತಿ ತಿಳಿದು ಅವರು ಆತಂಕಗೊಂಡರು. ತಕ್ಷಣವೇ ಹಿಂದಿರುಗಿ ಬ್ರಹ್ಮಾವರದವರೆಗೆ ಹುಡುಕಾಟ ನಡೆಸಿದರೂ ಬಳೆ ಪತ್ತೆಯಾಗಲಿಲ್ಲ. ಬಳಿಕ ಕೋಟ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (MCA) ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ನವೀನ ಚಿಂತನೆಗಳನ್ನು ಉತ್ತೇಜಿಸುವ ಉದ್ದೇಶದಿಂದ ನೂತನ ವೇದಿಕೆಯಾದ “ಇನ್ಫೋ ಸ್ಪಾರ್ಕ್” ಅನ್ನು ಉದ್ಘಾಟಿಸಿತು. ವಿಭಾಗದ ಮುಖ್ಯಸ್ಥರಾದ ಡಾ. ಟಿ. ನಂದಿನಿ ಅವರು ಸ್ವಾಗತಿಸಿ, “ಇನ್ಫೋ ಸ್ಪಾರ್ಕ್” ವೇದಿಕೆಯು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ವೃದ್ಧಿಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಇದರ ಧ್ಯೇಯೋದ್ದೇಶವನ್ನು ಅರಿತು ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಿದರು. ಈ ಉಪಕ್ರಮದಡಿಯಲ್ಲಿ ವಿವಿಧ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಸಲುವಾಗಿ “ಬೈನರಿ ಕ್ರಾಫ್ಟರ್ಸ್” (ಕೋಡಿಂಗ್, ಡಿಬಗ್ಗಿಂಗ್ ಹಾಗೂ ಹ್ಯಾಕಥಾನ್ ಮುಂತಾದ ಐಟಿ ಚಟುವಟಿಕೆಗಳು), “ಕಮ್ಯುನಿಟಿ ಕ್ಯಾಟಲಿಸ್ಟ್ಸ್” (ಆರೋಗ್ಯ ಹಾಗೂ ಸಾಮಾಜಿಕ ಜಾಗೃತಿ ಅಭಿಯಾನಗಳಂತಹ ಸಮುದಾಯಮುಖಿ ಕಾರ್ಯಕ್ರಮಗಳು) ಮತ್ತು “ಬಿಜ್ ಬೈಟ್ಸ್” (ಉದ್ಯಮಶೀಲತೆ ಹಾಗೂ ನಿರ್ವಹಣಾ ಕೌಶಲ್ಯ ಆಧಾರಿತ ಚಟುವಟಿಕೆಗಳು) ಎಂಬ ಸಂಘಗಳನ್ನು…
