ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶ ಹಾಗೂ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಹಳಿತಪ್ಪಿದ್ದು, ಅದನ್ನು ಹಳಿಗೆ ತರುವುದು ಅಷ್ಟು ಸುಲಭವಲ್ಲ ಎನ್ನುವುದು ಬಿಜೆಪಿ ನಾಯಕರುಗಳಿಗೂ ಗೊತ್ತಿದ್ದು, ಈಗ ವಿರೋಧ ಪಕ್ಷದ ನಾಯಕರ ಮೇಲೆ ಆಡಳಿತ ಪಕ್ಷದವರು ವೈಯಕ್ತಿಕ ಟೀಕೆಗಳನ್ನು ಮಾಡುತ್ತಿರುವುದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಒಂದು ತಂತ್ರ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕರುಗಳಿಗೆ ಮಾನ, ಮರ್ಯಾದೆ ಇದ್ದರೆ ವಿರೋಧ ಪಕ್ಷದವರ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಜನಸಾಮಾನ್ಯರು ದಿನನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಪಡಲಿ ಅದೆಲ್ಲವನ್ನು ಬಿಟ್ಟು ಅನಾಗರಿಕರಂತೆ ವರ್ತಿಸುವುದು ಸರಿಯಲ್ಲ ಎಂದು ಆಡಳಿತ ಪಕ್ಷವನ್ನು ಟೀಕಿಸಿದರು. ನಳಿನ್ ಕುಮಾರ್ ಕಟೀಲ್ ಒಬ್ಬ ಬುದ್ಧಿ ಸ್ಥಿಮಿತದಲ್ಲಿ ಇರದ ವ್ಯಕ್ತಿ, ವಿರೋಧ ಪಕ್ಷದ ನಾಯಕರುಗಳ ಮೇಲೆ ವೈಯಕ್ತಿಕ ಟೀಕೆಗಳನ್ನು ಮಾಡಿದ ತಕ್ಷಣ ತಾನು ದೊಡ್ಡ ನಾಯಕನಾಗುತ್ತೇನೆ ಎನ್ನುವ ಭ್ರಮೆಯಲ್ಲಿ ಇದ್ದಾರೆ, ರಾಜಕಾರಣದಲ್ಲಿ ಟೀಕೆಗಳು ಸಾಮಾನ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರ್ನಾಟಕ ಸ್ವಿಮ್ಮಿಂಗ್ ಅಸೋಶಿಯೇಶನ್ (ರಿ) ಬೆಂಗಳೂರು ವಿಜಯನಗರದ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ 22ನೆಯ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಸಾಲಿಗ್ರಾಮ ನಿವಾಸಿ ಶ್ರೀಧರ್ ಉಳಿತಾಯ ಅವರು 400 ಮೀಟರ್ ಫ್ರೀಸ್ಟೈಲ್ ನಲ್ಲಿ ಚಿನ್ನದ ಪದಕ, 100 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನದ ಪದಕ, 50 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನದ ಪದಕ, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ,50×4 ರಿಲೇಯಲ್ಲಿ ಬೆಳ್ಳಿಯ ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರೆ, ಅವರು ಪ್ರಸ್ತುತ ಬಾರಕೂರು ನ್ಯಾಶನಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್ನ ಸದಸ್ಯರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಕಾಲೇಜಿನಲ್ಲಿ ವಿವಿಧ ವೃತ್ತಿಪರ ಕೋರ್ಸುಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಾಣಿಜ್ಯ ವಿಭಾಗದ ಎ.ಸಿ.ಸಿ.ಎ. ಕೋರ್ಸಿಗೆ ಇತ್ತೀಚೆಗೆ ಇಂಗ್ಲೆಂಡ್ ನಿಂದ ’ಅಧಿಕೃತ ಕಲಿಕಾ ಕೇಂದ್ರ’ದ ಮಾನ್ಯತೆ ದೊರಕಿದೆ. ಆಳ್ವಾಸ್ ನಲ್ಲಿ 2019-2020ರಿಂದಲೂ ಯು.ಕೆ.ಯಿಂದ ಪ್ರಮಾಣಿತ ಎ.ಸಿ.ಸಿ.ಎ ಮತ್ತು ಯು.ಎಸ್.ಎ. ಯಿಂದ ಪ್ರಮಾಣಿತ ಸಿ.ಎಮ್.ಎ. ಕೋರ್ಸುಗಳು ಚಾಲ್ತಿಯಲ್ಲಿದ್ದು ಉತ್ತಮ ಫಲಿತಾಂಶ ನೀಡುತ್ತಿವೆ. ವಿನಾಯಿತಿ ಸಿಗುವ ವಿಷಯಗಳು: ಎಸೋಸಿಯೇಷನ್ ಆಫ್ ಚಾರ್ಟರ್ಡ್ ಸರ್ಟಿಫೈಡ್ ಅಕೌಟೆಂಟ್ (ಎ.ಸಿ.ಸಿ.ಎ) ಮೂರು ವರ್ಷದ ಕೋರ್ಸಾಗಿದ್ದು ಒಟ್ಟು 13 ಪತ್ರಿಕೆಗಳನ್ನು ವಿದ್ಯಾರ್ಥಿಗಳು ಬರೆಯಬೇಕಾಗುತ್ತದೆ. ಆಳ್ವಾಸ್ ಕಾಲೇಜಿಗೆ ಸಿಕ್ಕಿರುವ ಈ ‘ಅಧಿಕೃತ ಕಲಿಕಾ ಕೇಂದ್ರದ ಮಾನ್ಯತೆಯ ಫಲವಾಗಿ ಬಿ.ಕಾಂ. ವಿದ್ಯಾರ್ಥಿಗಳಿಗೆ 5 ವಿಷಯಗಳಲ್ಲಿ ವಿನಾಯಿತಿ ದೊರೆಯಲಿದೆ. ಬಿಸಿನೆಸ್ ಆಂಡ್ ಟೆಕ್ನೋಲಾಜಿ, ಮ್ಯಾನೇಜ್ ಮೆಂಟ್ ಎಕೌಂಟಿಂಗ್, ಫೈನಾನ್ಶಿಯಲ್ ಎಕೌಂಟಿಂಗ್, ಕಾರ್ಪೋರೇಟ್ ಆಂಡ್ ಬಿಸಿನೆಸ್ ಲಾ, ಮತ್ತು ಟ್ಯಾಕ್ಸೇಶನ್ ಪತ್ರಿಕೆಗಳು ವಿನಾಯಿತಿಗೆ ಒಳಪಡುವ ವಿಷಯಗಳಾಗಿವೆ. ಈ ಹಿನ್ನಲೆಯಲ್ಲಿ 2021-22ರ ಶೈಕ್ಷಣಿಕ ವರ್ಷದಲ್ಲಿ ವಾಣಿಜ್ಯ ಪದವಿಯೊಂದಿಗೆ ಎ.ಸಿ.ಸಿ.ಎ. ಕಲಿಯುವ ವಿದ್ಯಾರ್ಥಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ ವತಿಯಿಂದ ನೂತನವಾಗಿ ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಅಸೋಡು-ಬಂಡ್ಸಾಲೆಯಲ್ಲಿ ಆರಂಭಿಸಿದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಅನಿಶ್ಚಿತತೆಯಿಂದ ರೈತರಿಂದು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಅನಗತ್ಯ ಖರ್ಚಿಗೆ ನಿಯಂತ್ರಣ, ಕೃಷಿಯಲ್ಲಿ ಸುಧಾರಿತ ಪದ್ದತಿ, ಯಂತ್ರೋಪಕರಣಗಳ ಸಮರ್ಪಕ ಬಳಕೆಯಿಂದ ಕೃಷಿಯನ್ನು ಲಾಭದಾಯಕವಾಗಿಸಲು ಸಾಧ್ಯವಿದೆ. ಕೊರೋನಾದಂತಹ ಸಂದಿಗ್ದತೆ ಎರಡು ವರ್ಷ ಕಾಡಿದರೂ ಕೂಡ ಅನ್ನದಾತ ಕರ್ಮಯೋಗ ಬಿಡಲಿಲ್ಲ. ಹಾಗಾಗಿ ಆಹಾರದ ಸಮಸ್ಯೆ ಕಾಡಲಿಲ್ಲ. ರೈತ ಈ ಸಂದರ್ಭದಲ್ಲಿ ತಟಸ್ಥನಾಗಿರುತ್ತಿದ್ದರೆ ಕೊರೋನಾಕ್ಕಿಂತ ಹೆಚ್ಚು ಸಾವು ಆಹಾರವಿಲ್ಲದೇ ಸಂಭವಿಸುತ್ತಿತ್ತು. ಹಾಗಾಗಿ ಕೃಷಿ ಅವಲಂಬಿತರನ್ನು ಇನ್ನಷ್ಟು ಉತ್ತೇಜಿಸುವ ಕೆಲಸ ಆಗಬೇಕು. ಭರವಸೆ ಮೂಡಿಸುವ ಕಾರ್ಯ ಆಗಬೇಕು ಎಂದು ಹೇಳಿದರು. ಕೃಷಿಯಲ್ಲಿ ಇವತ್ತು ಅನಗತ್ಯವಾದ ಖರ್ಚು ಹೆಚ್ಚಳವಾದ್ದರಿಂದ ಲಾಭಾಂಶ ಕಡಿಮೆಯಾಗುತ್ತಿದೆ. ಆದಾಯ ಹೆಚ್ಚಳ ಮಾಡುವ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಈ ಶಿಬಿರದ ಸಂಪೂರ್ಣ ಸದೋಪಯೋಗವನ್ನು ಪಡೆದುಕೊಂಡು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಎಸ್ ಶೆಟ್ಟಿ ಹೇಳಿದರು. ಅವರು ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ತೆಕ್ಕಟ್ಟೆ, ಗ್ರಾಮ ಪಂಚಾಯತ್ ಕೆದೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೆದೂರು ಹಾಗೂ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಬೆಂಗಳೂರು ಇವರ ಸಹಯೋಗದೊಂದಿಗೆ ಕೆದೂರಿನ ಸರ್ಕಾರಿ ಪ್ರೌಢಶಾಲೆ ಸಭಾಂಗಣದಲ್ಲಿ 10 ದಿನಗಳ ಕಾಲ ಉಚಿತವಾಗಿ ನಡೆಯುವ ಧ್ಯಾನ ಯೋಗ ಪ್ರಾಣಾಯಾಮ ಮತ್ತು ಸುದರ್ಶನ ಕ್ರಿಯಾ ಯೋಗ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಲಯನ್ಸ್ ಜಿಲ್ಲೆ ವಲಯ 1ರ ಅಧ್ಯಕ್ಷ ಕೆ.ಸೀತಾರಾಮ ಶೆಟ್ಟಿ ಶುಭಾಶಂಸನೆಗೈದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮಾಲತಿ, ಪಂಚಾಯತ್ ಸದಸ್ಯರಾದ ಉಲ್ಲಾಸ್ ಕುಮಾರ್ ಹೆಗ್ಡೆ, ಲಯನ್ಸ್ ಅಧ್ಯಕ್ಷ ಧರ್ಮರಾಜ ಮುದಲಿಯಾರ್, ಕಾರ್ಯದರ್ಶಿ ಹರ್ಷವರ್ಧನ್ ಶೆಟ್ಟಿ, ಖಜಾಂಚಿ ಕಿಶೋರ್ ಕುಮಾರ್ ಶೆಟ್ಟಿ, ಲಿಯೋ ಅಧ್ಯಕ್ಷ ಮೋಹನ್ ರಾಜ್ ಮುದಲಿಯಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಜನ ಸಮುದಾಯ ಸಮಸ್ಯೆಗಳು, ಸವಾಲುಗಳಿಗೆ ರಾಮಾಯಣದಲ್ಲಿ ಉತ್ತರಸಿಗುತ್ತದೆ. ಮಾನವೀಯ ಗುಣಗಳ ಮೈಗೂಡಿಸಿಕೊಳ್ಳುವುದು ಸೇರಿದಂತೆ ಸಮಾಜದ ಬದಲಾವಣೆ, ಪ್ರಗತಿಗೆ ಯಾವೆಲ್ಲಾ ಅಂಶ ಬೇಕು ಎನ್ನುವುದ ರಾಮಾಯಣದಲ್ಲಿ ವಾಲ್ಮೀಕಿ ತಿಳಿಸುತ್ತಾ ಹೋಗುತ್ತಾರೆ. ವಾಲ್ಮೀಕಿ ವ್ಯಕ್ತಿತ್ವ ಇಡೀ ನಾಡಿಗೆ ಪರಿಚಯ ಪಡಿಸುವುದಕ್ಕೆ ಮೂಲ ಕಾರಣ ರಾಮಾಯಣ ಮಹಾಕಾವ್ಯ ಎಂದು ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಉಪ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ ಹೇಳಿದರು. ಅವರು, ಕುಂದಾಪುರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಸಂಘಟನೆ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು. ವಿಶ್ವಾತ್ಮಕ ಪ್ರಜ್ಞೆ ಜಗತ್ತಿಗೆ ಸಾರಿದ ವಾಲ್ಮೀಕಿ ಸಮಾಜ ಸುಧಾರಕ, ತತ್ವಜ್ಞಾನಿ, ಚಿಂತಕ, ಶಿಕ್ಷಣ ತಜ್ಞ, ರಾಜನೀತಿ ತಜ್ಞ ಆಗಿದ್ದರು. ಪ್ರಾಚೀನ ಭಾರತದ ಜೀವನಕ್ರಮ, ಸಂಸ್ಕೃತಿ ರಾಮಾಯಣದ ಒಳಗೆ ಸಾದರ ಪಡಿಸಿದ್ದಾರೆ. ವಿಷಾದ ಎಂದರೆ, ಬುದ್ದ, ಬಸವ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕುಂದಾಪುರ, ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕುಂದಾಪುರ ಮತ್ತು ಬೀಜಾಡಿ ಗ್ರಾಮ ಪಂಚಾಯತ್ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಬೀಜಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೀಜಾಡಿ ಗ್ರಾಮ ಪಂಚಾಯತ್ನ ವಿವಿಧ ಸ್ಥಳಗಳಲ್ಲಿ ಜಾನುವಾರು ಆರೋಗ್ಯ ಮತ್ತು ಬಂಜೆತನ ನಿವಾರಣಾ ಶಿಬಿರ ಜರುಗಿತು. ಬೀಜಾಡಿ ಗ್ರಾಮ ಪಂಚಾಯತ್ನ ಅಧ್ಯಕ್ಷೆ ಸುಮತಿ ಮೊಗವೀರ ಶಿಬಿರ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ವಾದಿರಾಜ ಹೆಬ್ಬಾರ್, ಮಂಜುನಾಥ ಕುಂದರ್, ವಿಶ್ವನಾಥ ಮೊಗವೀರ, ಶೇಖರ ಚಾತ್ರಬೆಟ್ಟು, ಅನಿಲ್, ಜಸಿಂತಾ ಡಿ ಮೆಲ್ಲೋ, ಪಶುಪಾಲನೆ ಇಲಾಖೆಯ ಪಶು ವೀಕ್ಷಕರಾದ ಮಾಚ ಬಿಲ್ಲವ, ದೇವಾನಂದ್, ಕೃತಕ ಗರ್ಭಧಾರಣಾ ಕಾರ್ಯಕರ್ತರ ಕೆ.ಗಣೇಶ್ ಐತಾಳ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದರು. ಈ ಸಂದರ್ಭ ಕುಂದಾಪುರ ಪಶುವೈದ್ಯ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಾಬಣ್ಣ ಪೂಜಾರಿ ನೇತೃತ್ವದಲ್ಲಿ ಬೀಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾನೂನು ಸೇವಾ ಪ್ರಾಧಿಕಾರದ ಮೂಲಕ ರಾಜ್ಯದ 30 ಜಿಲ್ಲೆ ಹಾಗೂ 149 ತಾಲೂಕುಗಳ ಪ್ರತಿಯೊಂದು ಹಳ್ಳಿಗಳಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ 69 ಸಾವಿರಕ್ಕೂ ಹೆಚ್ಚು ಗ್ರಾಮದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮತ್ತು ನೆರವು ನೀಡುವ ಉದ್ದೇಶದಿಂದ ಪ್ರಾಧಿಕಾರ ಈ ಕಾರ್ಯಕ್ರಮವನ್ನು ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್. ಶಶಿಧರ ಶೆಟ್ಟಿ ಹೇಳಿದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಅರಣ್ಯ ಇಲಾಖೆ ಉಡುಪಿ, ಕುಂಭಾಸಿ ಗ್ರಾಮ ಪಂಚಾಯತ್ ಮತ್ತು ಕೊರಗ ಸಂಘಟನೆಗಳ ಸಹಯೋಗದೊಂದಿಗೆ 75ನೇ ಸ್ವಾತಂತ್ರ್ಸೋವದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಕುಂಭಾಸಿ ಮಕ್ಕಳ ಮನೆಯಲ್ಲಿ ಶನಿವಾರ ಜರುಗಿದ ಬುಡಕಟ್ಟು ಜನರಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಎಸ್ಬಿ ಸೇವಾ ಟ್ರಸ್ಟ್ ಕುಂಭಾಸಿ ಇವರ ನೇತೃತ್ವದಲ್ಲಿ ನೂತನವಾಗಿ ನಿರ್ಮಣಗೊಳ್ಳುತ್ತಿರುವ ಭಜನಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮವು ಜರುಗಿತು. ವೇ.ಮೂ. ಕೋಟ ಕಪಿಲದಾಸ್ ಭಟ್ ಹಾಗೂ ವೇ.ಮೂ. ರಾಮಚಂದ್ರ ಭಟ್ ಸೌಡ ಅವರ ಮುಂದಳತ್ವದ ಪೌರೋಹಿತ್ಯದಲ್ಲಿ ಟ್ರಸ್ಟಿನ ಅಧ್ಯಕ್ಷ ಕೆ. ಗಣೇಶ ಪ್ರಭು ಹಾಗೂ ಸರ್ವ ವಿಶ್ವಸ್ತ ಸಮಾಜ ಭಾಂದವರ ಉಪಸ್ಥಿತಿಯಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಈ ಸಂದರ್ಭ ಮಂಜೇಶ್ವರ ಶ್ರೀಮದನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ದಿನೇಶ್ ಕಾಮತ್ ಕೋಟೇಶ್ವರ, ತೆಕ್ಕಟ್ಟೆ ಜಿಎಸ್ಬಿ ಸೇವಾ ಸಂಘದ ಅಧ್ಯಕ್ಷ ಟಿ. ಸಂತೋಷ್ ನಾಯಕ್, ಉದ್ಯಮಿಗಳಾದ ಟಿ.ಅನಂತ್ ನಾಯಕ್ ತೆಕ್ಕಟ್ಟೆ, ಕೆ.ರಾಧಾಕೃಷ್ಣ ನಾಯಕ್ ಕೋಟ, ಸ್ಥಳ ದಾನಿಗಳ ಪರವಾಗಿ ಎಸ್.ನಾಗೇಶ್ ಶಾನುಭಾಗ್ ಸಾಲಿಗ್ರಾಮ, ಜಿಎಸ್ಬಿ ಸೇವಾ ಟ್ರಸ್ಟ್ ಕುಂಭಾಶಿಯ ಪದಾಧಿಕಾರಿಗಳು, ಗ್ರಾಮದ ಗೌಡ ಸಾರಸ್ವತ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿ ತಿಂಗಳ 3ನೇ ಶನಿವಾರದಂದು ಡಿಸಿಯವರ ನೇತೃತ್ವದಲ್ಲಿ ಜಿಲ್ಲೆಯದ್ಯಾಂತ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯೊಂದಿಗೆ ಜಿಲ್ಲಾಧಿಕಾರಿಯವರ ನಡೆ ಹಳ್ಳಿಯ ಕಡೆ ಎಂಬ ಒಂದು ವಿಶೇಷವಾದ ಮಹತ್ವದ ಯೋಜನೆ ಸರಕಾರ ಜಾರಿಗೆ ತಂದಿದೆ. ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ಈ ಕಾರ್ಯಕ್ರಮಕ್ಕೆ ಅ.16ರಿಂದ ಪುನರುಪಿ ಚಾಲನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಆಯಾ ಭಾಗದ ತಹಶೀಲ್ದಾರ್ ಮತ್ತು ಎಸಿಯವರ ನೇತೃತ್ವದಲ್ಲಿ ಗ್ರಾಮಗಳ ವಾಸ್ತವ್ಯ ಹೂಡಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಶಸ್ಸು ಕಾಣುತ್ತಿದೆ ಎಂದು ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೋರಯ್ಯ ಹೇಳಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದಡಿ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಶನಿವಾರ ವಾಸ್ತವ್ಯ ಹೂಡಿ ಸರಕಾರಿ ಪ್ರೌಢಶಾಲೆಯ ಸಭಾಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅವರು ಈ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿಯ ಕೆಲಸದ ಜೊತೆಗೆ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿ ಸ್ಥಳದಲ್ಲಿಯೇ…
