ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಯುವ ಬಂಟರ ವೇದಿಕೆ ವತಿಯಿಂದ ಇಂಡಿಯ ಬುಕ್ ಅಫ್ ರೆಕಾರ್ಡ್ ಸೇರ್ಪಡೆಯಾದ ಬಾಲಕಿ ಆಗಮ್ಯ ಎಂ. ಶೆಟ್ಟಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯುವ ಬಂಟರ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ ಗಂಟೆಹೊಳೆ ಕಂಬದಕೋಣೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ಹಳಗೇರಿ ಯುವ ಬಂಟರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರೀಕಟ್ಟೆ, ಬಾಲಕಿಯ ತಂದೆ ಗುರುದತ್ ಶೆಟ್ಟಿ ಮತ್ತು ತಾಯಿ ಮಮತಾ ಶೆಟ್ಟಿ ಯುವ ಬಂಟರ ವೇದಿಕೆಯ ಪದಾಧಿಕಾರಿ ಶಿವರಾಜ್ ಶೆಟ್ಟಿ ಹುಂಚನಿ, ಜೊತೆ ಕಾರ್ಯದರ್ಶಿ ಪ್ರತಾಪ್ ಶೆಟ್ಟಿ ಹಳಗೇರಿ, ಕ್ರೀಡಾ ಕಾರ್ಯದರ್ಶಿ ಕೀರ್ತಿರಾಜ್ ಶೆಟ್ಟಿ ಖಜಾಂಜಿ ರವೀಂದ್ರ ಶೆಟ್ಟಿ ಉಪ್ಪುಂದ ಪದಾಧಿಕಾರಿಗಳಾದ ನವೀನ್ ಶೆಟ್ಟಿ ಶ್ರೀಕಾಂತ್ ಶೆಟ್ಟಿ ಪವನ್ ಶೆಟ್ಟಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಒಂದುವರೆ ವರ್ಷದ ಬಾಲಕಿ ಅಗಮ್ಯ ಎಂ. ಶೆಟ್ಟಿ ತನ್ನ ಅತಿ ಕಿರಿಯ ವಯಸ್ಸಿನಲ್ಲಿ ತನ್ನ ವಿಶೇಷ ಬುದ್ಧಿಶಕ್ತಿ ಹಾಗೂ ನೆನಪಿನ ಶಕ್ತಿಯ ಮೂಲಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಜೇಸಿಐ ವತಿಯಿಂದ ಇಲ್ಲಿನ ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ನಡೆದ ವಲಯಾಧ್ಯಕ್ಷರ ಭೇಟಿಯ ಕಾರ್ಯಕ್ರಮದಲ್ಲಿ 2017ನೇ ಸಾಲಿನಲ್ಲಿ ಜೆಸಿಐಗೆ ಪಾದಾರ್ಪಣೆ ಮಾಡಿ ಜೇಸಿಐ ಉಪ್ಪುಂದದ ಕಾರ್ಯದರ್ಶಿಯಾಗಿ ಅತೀ ಕಡಿಮೆ ಅವಧಿಯಲ್ಲಿ ಜೇಸಿಐನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 2021ನೇ ಸಾಲಿನಲ್ಲಿ ಜೇಸಿಐ ಉಪ್ಪುಂದದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ರಾರಾಜಿಸುವಂತೆ ಮಾಡಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆಯವರಿಗೆ 2021ನೇ ಸಾಲಿನ ಯುವ ಪ್ರಶಸ್ತಿಯನ್ನು ವಲಯಾಧ್ಯಕ್ಷೆ ಸೌಜನ್ಯಾ ಹೆಗ್ಡೆಯವರು ಪ್ರದಾನಿಸಿದರು. ಈ ಸಂದರ್ಭದಲ್ಲಿ ಜೇಸಿಐ ಉಪ್ಪುಂದದ ಅಧ್ಯಕ್ಷರಾದ ಪುರುಷೋತ್ತಮದಾಸ್, ಕಾರ್ತಿಕೇಯ ಮದ್ಯಸ್ಥ, ದೀಪಕ್ ಗಂಗೂಲಿ ವಲಯಾಧಿಕಾರಿ, ಪ್ರೋಗ್ರಾಂ ಡೈರೆಕ್ಟರ್ ಅಬ್ದುಲ್ ಜಬ್ಬಾರ್ ಸಾಹೇಬ್, ಸುಬ್ರಮಣ್ಯ ಜಿ. ಪೂರ್ವಾದ್ಯಕ್ಷರಾದ ಸೆನೆಟರ್. ಯು. ಪ್ರಕಾಶ್ ಭಟ್, ಮಂಗೇಶ್ ಶ್ಯಾನ್ ಭಾಗ್, ಕಾರ್ಯಕ್ರಮದ ನಿರ್ದೇಶಕರಾದ ಪುರಂದರ ಖಾರ್ವಿ, ಕಾರ್ಯದರ್ಶಿ ಸಂದೀಪ್ ನಾಯಕ್, ಜೇಸಿರೇಟ್ ಅಧ್ಯಕ್ಷೆ ರಮಾದೇವಿ ಮೊದಲಾದವರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.1: ಕಾಡಿನೊಳಕ್ಕೆ ಎಸೆದಿದ್ದ ನವಜಾತ ಶಿಶುವನ್ನು, ಸ್ಥಳೀಯ ಮಹಿಳೆಯೂರ್ವರು ಗುರುತಿಸಿ ರಕ್ಷಿಸಿರುವ ಘಟನೆ ತಾಲೂಕಿನ ಮಚ್ಚಟ್ಟು ಗ್ರಾಮದಲ್ಲಿ ನಡೆದಿದೆ. ಪೋಷಕರು ಎಸೆದು ಹೋಗಿದ್ದ ಹಸುಳೆಯನ್ನು ಮಚ್ಚಟ್ಟು ಗ್ರಾಮದ ಮಡಿವಾಳಕಟ್ಟು ನಿವಾಸಿ ಗೀತಾ ಎಂಬುವವರು ರಕ್ಷಿಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬುಧವಾರ ಸಂಜೆ 4:30ರ ವೇಳೆಗೆ ಕುಂದಾಪುರ ತಾಲೂಕು ಮಚ್ಚಟ್ಟು ಗ್ರಾಮದ ಸೇತುವೆ ಸಮೀಪ ಹಾಲು ಡೈರಿಗೆ ತೆರಳುತ್ತಿದ್ದ ಗೀತಾ, ಕಾಡಿನ ಪೊದೆಯಲ್ಲಿ ಮಗು ಅಳುತ್ತಿರುವ ಧ್ವನಿ ಕೇಳಿ ಹತ್ತಿರ ಹೋಗಿ ನೋಡಿದಾಗ ಹೆಣ್ಣು ಮಗುವೊಂದು ಅನಾಥವಾಗಿ ಬಿದ್ದಿತ್ತು. ನಿರ್ಜನ ಪ್ರದೇಶದಲ್ಲಿದ್ದ ಮಗುವನ್ನು ಎತ್ತಿಕೊಂಡು ಬಂದ ಮಹಿಳೆ ಅಮಾಸೆಬೈಲು ಪೊಲೀಸ್ ಠಾಣೆಗೆ ತಂದು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗುವಿನ ತಂದೆ -ತಾಯಿ ಮಗುವಿನ ಪಾಲನೆ ಪೋಷಣೆ ಮಾಡದೆ ಅಪಾಯಕರ ಸ್ಥಿತಿಯಲ್ಲಿ ಎಸೆದು ಹೋಗಿದ್ದಾರೆಂದು ಮಗುವನ್ನು ರಕ್ಷಿಸಿದ ಮಹಿಳೆ ದೂರು ದಾಖಲಿಸಿ, ಅಮಾಸೆಬೈಲು ಠಾಣಾ ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳಿಗೆ ಮಗುವನ್ನು ಹಸ್ತಾಂತರಿಸಿದ್ದಾರೆ. ರಕ್ಷಿಸಲಾದ ಏಳು ದಿನಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ).ಕುಂದಾಪುರ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನ ಕೇಂದ್ರ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಆಶ್ರಯದಲ್ಲಿ 1488ನೇ ಮದ್ಯವರ್ಜನ ಶಿಬಿರ ಶಂಕರನಾರಾಯಣದ ಶ್ರೀ ಸುಬ್ರಹ್ಮಣ್ಯ ಜೋಯಿಶಿ ಸುವರ್ಣ ಸಭಾಭವನದಲ್ಲಿ ಬುಧವಾರ ಜರುಗಿತು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಶಿಬಿರ ಉದ್ಘಾಟಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆದ 1487 ಶಿಬಿರಗಳಿಂದ ಈಗಾಗಲೇ 1.2 ಲಕ್ಷಕ್ಕೂ ಹೆಚ್ಚು ಜನರು ಮದ್ಯವ್ಯಸನದಿಂದ ಮುಕ್ತವಾಗಿದ್ದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ರೂಪುಗೊಂಡಿದೆ. ಪರಮಪೂಜ್ಯ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀಯವರ ಆಶಯದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರದ ಪ್ರಯೋಜನ ಪಡೆದು ಶಿಬಿರಾರ್ಥಿಗಳು ವ್ಯಸನಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲು ಕರೆ ನೀಡಿದರು. 1488ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಕಲ್ಗದ್ದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಉಡುಪಿ ಶ್ರೀ ಕೃಷ್ಣಮಠಕ್ಕೆ ತನ್ನದೇ ಆದ ಮಹತ್ವವಿದೆ. ಮಧ್ವಮತ ಪ್ರವರ್ತಕರಾದ ಶ್ರೀ ಮಧ್ವಾಚಾರ್ಯರ ಸನ್ನಿಧಾನವಿರುವ ಸರ್ವಜ್ಞ ಪೀಠ ಎಂಬುಂದು ಅತಿ ದೊಡ್ಡ ಶಕ್ತಿ ಪೀಠವಾಗಿದೆ. ಇತಂಹ ಪೀಠದಿಂದ ಪರ್ಯಾಯ ಮಹೋತ್ಸವವನ್ನು ಕೊಡುಗೆಯಾಗಿ ನೀಡಿದವರು ಮಧ್ವಾಚಾರ್ಯರು ಎಂದು ಬಸ್ರೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜನವರಿಯಲ್ಲಿ ನಡೆಯಲಿರುವ ಶ್ರೀ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರಿಗೆ ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸುವ ಬಗ್ಗೆ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜರುಗಿದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರು ಶ್ರೀ ಮಧ್ವಾಚಾರ್ಯರು ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರದ ಮಹತ್ವವನ್ನು ಸಮಾಜಕ್ಕೆ ಅರ್ಪಿಸಿದ್ದಾರೆ. ನಮ್ಮೆಲ್ಲ ಸಂಸ್ಕೃತಿ ಸಂಸ್ಕಾರ ಉಳಿದು ಬೆಳಗಬೇಕಾದರೆ ನಾವೆಲ್ಲರೂ ಒಂದಾಗಿ ಪರ್ಯಾಯ ಮಹೋತ್ಸವದ ಯಶಸ್ಸಿನ ಹೊಣೆಯನ್ನು ಹೊರಬೇಕಾಗಿದೆ. ಕುಂದಾಪುರ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಆತ್ರಾಡಿಯ ವಿಜಯ ಮಕ್ಕಳ ಕೂಟದಲ್ಲಿ ಅಂಪಾರು ರೋಟರಿ ಕ್ಲಬ್ ಸಹಯೋಗದಲ್ಲಿ ಸೈಬರ್ ಕ್ರೈಂ ಜಾಗ್ರತಿ ಶಿಬಿರ ಇತ್ತೀಚೆಗೆ ನಡೆಯಿತು. ಯುವಜನ ಸಬಲೀಕರಣದ ಕುರಿತು ನರಸಿಂಹ ಗಾಣಿಗ ಹೆಮ್ಮಾಡಿ ವಿದ್ಯಾರ್ಥಿಗಳುನ್ನುದ್ದೇಶಿಸಿ ಮಾತನಾಡಿದರು. ಹೊಸಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರಂಜಿತ್ಕುಮಾರ್ ಶೆಟ್ಟಿ ಸೈಬರ್ಕ್ರೈಂಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಪಾರು ರೋಟರಿ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ವಹಿಸಿದರು. ವಿ.ಎಂ.ಕೆ ಪೋಷಕ ಸಂಘದ ಅಧ್ಯಕ್ಷರಾದ ಬಗ್ವಾಡಿ ಚಂದ್ರಶೆಟ್ಟಿ, ಇಂಟರ್ಯಾಕ್ಟ್ ಅಧ್ಯಕ್ಷೆ ದೀಕ್ಷಿತಾ ದೇವಾಡಿಗ, ಕಾರ್ಯದರ್ಶಿ ಸ್ವರ್ಣ ಉಪಸ್ಥಿತರಿದ್ದರು. ಸಂಸ್ಥೆಯ ಮುಖೋಪಾಧ್ಯಾಯಿನಿ ದೀಪಿಕಾ ಸುಭಾಸ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಟಿ.ಕೆ. ನಂದಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಆಶ್ರಿತ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಜನರಿಂದ ಜನರಿಗಾಗಿ ಜನರಿಗೋಸ್ಕರ ಹುಟ್ಟಿದ ಸಾಹಿತ್ಯವೇ ಜನಪದ ಸಾಹಿತ್ಯ. ಜನವಾಣಿ ಬೇರು ಕವಿವಾಣಿ ಹೂವು ಜಾನಪದ ಸಾಹಿತ್ಯ ಸಂಪಾದನೆಯ ಪ್ರಥಮ ಘಟ್ಟದಲ್ಲಿ ಹಲಸಂಗಿ ಗೆಳೆಯರು ಪ್ರಕಟಿಸಿದ ಗರತಿಯ ಹಾಡು, ಜೀವನ ಸಂಗೀತ ಹಾಗೂ ಮಲ್ಲಿಗೆ ದಂಡೆ ಸಂಕಲನಗಳ ಹಲವಾರು ಹಾಡುಗಳೊಂದಿಗೆ ಹಲಸಂಗಿ ಗೆಳೆಯರ ಬಳಗ ಜನಪದ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಕನ್ನಡ ನಾಡಿನ ಜಾನಪದ ಸಿರಿಯನ್ನು ಅನಾವರಣಗೊಳಿ ಕನ್ನಡಿಗರಿಗೆ ಉಣ ಬಡಿಸಿದ ಶ್ರೇಯಸ್ಸು ಕೀರ್ತಿ ಹಲಸಂಗಿ ಗೆಳೆಯರ ಬಳಗಕ್ಕೆ ಸಲ್ಲಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಪಾದ ಶೆಟ್ಟಿ ಹೇಳಿದರು. ಹಲಸಂಗಿ ಗೆಳೆಯರ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದೊಂದಿಗೆ ಕನ್ನಡ ಸಂಘ, ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಹಾಗೂ ಇವರ ಆಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಜರುಗಿದ ಹಲಸಂಗಿ ಗೆಳೆಯರು ಮತ್ತು ಜನಪದ ಸಾಹಿತ್ಯ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತುರ್ತು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಎದುರಿಸಲು ಅನುಕೂಲವಾಗುವ ರೀತಿಯಲ್ಲಿ ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ನಕ್ಷೆಯನ್ನು ಒಳಗೊಂಡಂತೆ ಎಲ್ಲಾ ಇಲಾಖೆಗಳ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು, ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುರ್ತು ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ, ಎಲ್ಲಾ ಅತ್ಯಾವಶ್ಯಕ ಸೌಲಭ್ಯಗಳ ಮಾಹಿತಿ ಒಂದೇ ಕಡೆ ದೊರೆಯುವಂತೆ ಮಾಹಿತಿಗಳು ಕ್ರೂಡೀಕೃತವಾಗಿ ಲಭ್ಯವಿದ್ದಲ್ಲಿ, ಯಾವುದೇ ರೀತಿಯ ವಿಳಂಬವಿಲ್ಲದೇ ಗೊಂದಲಕ್ಕೆ ಅವಕಾಶ ನೀಡದೇ ನಿರ್ವಹಣಾ ಕಾರ್ಯಗಳನ್ನು ಮಾಡಲು ಅನುಕೂಲವಾಗುತ್ತದೆ ಎಂದರು. ಮಳೆ, ಪ್ರವಾಹ ಸೇರಿದಂತೆ ಮತ್ತಿತರ ತುರ್ತು ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಹೋಗಲು ಸೂಕ್ತ ರಸ್ತೆ ಸೌಲಭ್ಯ, ಹತ್ತಿರದ ಆಸ್ಪತ್ರೆ, ಸಂಬAದಪಟ್ಟ ವೈದ್ಯಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಮೊಬೈಲ್ ಸಂಖ್ಯೆ, ಅಂಬುಲೆನ್ಸ್ ಲಭ್ಯತೆ, ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವ ಸ್ಥಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದ ಸಚಿವ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನ ಪರಿ?ತ್ನಲ್ಲಿ ಸಭಾ ನಾಯಕರಾಗಿ 1,000 ರೂ. ಇದ್ದ ಗೌರವ ಧನವನ್ನು 2,000ರೂ.ಗೆ ಹೆಚ್ಚಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ. ಇತಿಹಾಸದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಗ್ರಾಮ ಪಂಚಾಯತ್ಗಳು ಸರಕಾರದಂತೆ ಕೆಲಸವನ್ನು ಮಾಡಬೇಕೆನ್ನುವ ಕಲ್ಪನೆಯನ್ನು ನೀಡಿ ನಿರಂತರವಾಗಿ ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿಗೋಸ್ಕರ ದುಡಿದಿರುವ ಕೋಟ ಶ್ರೀನಿವಾಸ ಪೂಜಾರಿ ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತದಿಂದ ಅವರನ್ನು ಗೆಲ್ಲಿಸಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಅವರು ತ್ರಾಸಿಯ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಸೋಮವಾರ ಜರಗಿದ ಬಿಜೆಪಿ ಗಂಗೊಳ್ಳಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಿಕ್ಷಾ ನಿಲ್ದಾಣದೊಳಗೆ ಟಿಪ್ಪರ್ ನುಗ್ಗಿ ನಾಲ್ಕು ಆಟೋ ರಿಕ್ಷಾ ಜಖಂ ಆದ ಘಟನೆ ಮಂಗಳವಾರ ಮಧ್ಯಾಹ್ನ ತಾಲೂಕಿನ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಕುಂದಾಪುರ ಕಡೆಯಿಂದ ತ್ರಾಸಿ ಕಡೆಗೆ ಸಾಗುತ್ತಿದ್ದ ಟಿಪ್ಪರ್, ಮುಳ್ಳಿಕಟ್ಟೆ ಕ್ರಾಸ್ ಬಳಿ ತಿರುವು ತೆಗೆದುಕೊಂಡು ಅತೀ ವೇಗದಿಂದ ಸಾಗಿ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ಆಟೋ ಸ್ಟ್ಯಾಂಡ್ ಒಳಕ್ಕೆ ನುಗ್ಗಿದೆ. ಪರಿಣಾಮ ನಿಲ್ದಾಣದಲ್ಲಿದ್ದ 4 ಆಟೋಗಳು ನಜ್ಜುಗುಜ್ಜಾಗಿದೆ. ಆಟೋ ಚಾಲಕರು ಅದೃಷ್ಡವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆ, ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
