ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾನೂನಿನ ಚೌಕಟ್ಟಿನಲ್ಲಿ ಶೋಷಣೆಗೆಗೆ ಒಳಗಾದವರಿಗೆ ಪ್ರಾಮಾಣಿಕವಾಗಿ ನ್ಯಾಯ ದೊರಕುವಂತಗಾಬೇಕು ಸಮಾಜದ ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಕಾರ್ಯವೆಸಗಿದಾಗ ಅನ್ಯಾಯದ ವಿರುದ್ದ ಧ್ವನಿ ಎತ್ತಿದಾಗ ಇದು ಸಾಧ್ಯ, ಕಾನೂನಿನ ರ್ದುಬಳಕೆ ಮಾಡಿಕೊಳ್ಳದೇ ಕಾನೂನಿನ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ನಾಗರಿಕರು ಮುಂದೆ ಬಂದು , ಕಾನೂನಿನ ಉದ್ದೇಶದ ತಿಳುವಳಿಕೆ ಪಡೆದುಕೊಂಡು ಅದರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸಮಿತಿ , ಕುಂದಾಪುರ ಅಧ್ಯಕ್ಷರಾದ ರಂಗೇಗೌಡ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ರಿ. ಕುಂದಾಪುರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಸಿಟಿ ರೋಟರಿ ಕೋಟ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ 75 ನೇ ಸ್ವಾತಂತ್ರೋತ್ಸವದ ಆಚರಣೆ ಅಂಗವಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸೃಷ್ಟಿ ಹಾಗೂ ಚರ್ಪ್ ಕ್ಲಬ್ ವತಿಯಿಂದ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಹಾಗೂ ಕಾನ್ಫೆಡೆರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ ಭಾಗವಾಗಿರುವ ‘ಯಂಗ್ ಇಂಡಿಯನ್ಸ್’ ಸಹಯೋಗದಲ್ಲಿ ‘ಸಸಿಹಿತ್ಲು ಮಂತ್ರ ಬೀಚ್ ಸ್ವಚ್ಛತಾ ಕಾರ್ಯಕ್ರಮ’ ಹಮ್ಮಿಕೊಳ್ಳಲಾಯಿತು. ಸುಮಾರು104 ಚೀಲಗಳಲ್ಲಿ ಸುಮಾರು 1.5 ಟನ್ ಕಸವನ್ನು ಸ್ವಚ್ಛಗೊಳಿಸಿ ಬೈಕಂಪಾಡಿ ಕಸ ಪುನರ್ವಿಲೇವಾರಿ ಘಟಕಕ್ಕೆ ನೀಡಲಾಯಿತು. ಸ್ವಚ್ಛತೆಯಲ್ಲಿ ಸೃಷ್ಟಿ ಹಾಗೂ ಚರ್ಪ್ ಕ್ಲಬ್ನ 80 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸರ್ಫಿಂಗ್ ಸ್ವಾಮಿ ಫೌಂಡೇಶನ್ ನಿರ್ದೇಶಕ ಗೌರವ್ ಹೆಗ್ಡೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಸೃಷ್ಟಿ ಹಾಗೂ ಚರ್ಪ್ ಕ್ಲಬ್ ಸಂಯೋಜಕರು, ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜನರ ಬೇಜವಬ್ದಾರಿಯಿಂದ ಪ್ಲಾಸ್ಟಿಕ್, ರಬ್ಬರ್, ಔಷಧೀಯ ತ್ಯಾಜ್ಯ, ಫೋಮ್, ಮದ್ಯದ ಬಾಟಲಿಗಳು ಸೇರಿದಂತೆ ಅನೇಕ ವಿಷಕಾರಿ ವಸ್ತುಗಳು ನದಿಯ ಒಡಲು ಸೇರಿ ಸಮುದ್ರದ ಮೂಲಕ ದಡದಲ್ಲಿ ಶೇಖರಣೆಗೊಳ್ಳುತ್ತಿವೆ. ಇದರಿಂದ ಹೆಜಮಾಡಿ ಕೋಡಿಯಂತಹ ಅಳಿವೆ ಪ್ರದೇಶಗಳ ಜಲಮೂಲ ಸಸ್ಯಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ಜಿಎಸ್ಬಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದ ಸಂಸ್ಥೆಯ ಹಿರಿಯ ಸದಸ್ಯ ಯು.ನಾರಾಯಣ ಪಿ.ಪೈ, ಸಂಸ್ಥೆಯ ಈ ಕಾರ್ಯದ ಉದ್ದೇಶ ಉತ್ತಮವಾಗಿದ್ದು, ಹಿರಿಯರ ಆಶಯದಂತೆ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ಕಲ್ಪಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿವೇತನ ಪಡೆದುಕೊಂಡವರು ನಿಧಿಯ ಸದುಪಯೋಗಪಡಿಸಿಕೊಂಡು ಪರಿಶ್ರಮಪಟ್ಟು ಉತ್ತಮ ವಿದ್ಯಾರ್ಜನೆಗೈದು ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಗಳಾಗಿ ಸಮಾಜಕ್ಕೆ, ಊರಿಗೆ ಸಹಕಾರ ನೀಡಿ ಸತ್ಪ್ರಜೆಗಳಾಗುವಂತೆ ಕರೆ ನೀಡಿದರು. ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಬಿ. ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಕೆನರಾ ಬ್ಯಾಂಕ್ ಸಿಬ್ಬಂದಿ ಜಿ.ಗಂಗಾಧರ ಪೈ ಶುಭಾಶಂಸನೆಗೈದರು. ಸುಮಾರು 87 ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಜಿ.ವೆಂಕಟೇಶ ಶೆಣೈ ಸ್ವಾಗತಿಸಿದರು. ಕೆ.ರಾಮನಾಥ್ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಬಿ.ರಾಘವೇಂದ್ರ ಪೈ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ನಾಗರಾಜ ಖಾರ್ವಿ ಅವರು ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನ, ಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನ, ಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ, 50×4 ಮೆಡ್ಲೆ ರಿಲೇ ಕಂಚು,100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು ಬೀಗ ಹಾಕಿ ಅರಬ್ಬಿ ಸಮುದ್ರದಲ್ಲಿ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಒಂದು ಕಿ.ಮೀ. ದೂರವನ್ನು ಅತ್ಯಂತ ವೇಗವಾಗಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದುಕೊಂಡಿದ್ದ ಅವರು, ರೇಷ್ಮೆ ಇಲಾಖೆಯ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಅವರಿಂದ ತರಬೇತಿ ಪಡೆದುಕೊಂಡಿದ್ದಾರೆ. ಅವರು, ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚುಗೋಡು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ಹಳೆವಿದ್ಯಾರ್ಥಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ಕುಂಜೆ ಗ್ರಾಮದ ಖ್ಯಾತ ಉದ್ಯಮಿ, ಕೃಷಿಕ, ನೇರಳಕಟ್ಟೆ ರಂಗಪ್ಪ ನಾಯಕ್ (93) ನಿಧನರಾದರು. ಅವರು, ಕೃಷಿ , ತೋಟಗಾರಿಕೆಯಲ್ಲಿ ಆಸಕ್ತಿ ಹೊಂದಿದ್ದು, ತಮ್ಮ ವಾಮನ ನಾಯಕ್ ರೈಸ್ಮಿಲ್ ಮೂಲಕ ಅಕ್ಕಿ ಉತ್ಪಾದನೆ, ವ್ಯವಹಾರ ನಡೆಸುತ್ತಿದ್ದರು , ಧಾರ್ಮಿಕ , ಸಾಮಾಜಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಮೃತರು, ಪತ್ನಿ ಹಾಗೂ ಖ್ಯಾತ ಸಾಮಾಜಿಕ ಧುರೀಣ ಎನ್.ನಾರಾಯಣ ನಾಯಕ್ ಸೇರಿದಂತೆ ಮೂವರು ಪುತ್ರರು ಐವರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಜಡ್ಕಲ್ ಇದರ ಜಂಟಿ ಆಶ್ರಯದಲ್ಲಿ ರೈತ ಸದಸ್ಯರಿಗೆ ಕೃಷಿ ಉದ್ದೇಶ ಸಾಲ -ಮೇಳ ಕಾರ್ಯಕ್ರಮವನ್ನು ಸಂಘದ ವ್ಯಾಪ್ತಿಯ ಜಡ್ಕಲ್ ಸೆಂಟ್ ಜೋರ್ಜ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ನಿರ್ದೇಶಕರಾದ ರಾಜು ಪೂಜಾರಿ ಅವರು ಕಾರ್ಯಕ್ರಮನ್ನು ಉದ್ಘಾಟಿಸಿದರು. ಈ ಸಂದರ್ಭ ಜಡ್ಕಲ್ ವ್ಯ. ವ. ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಮಹೇಶ್ ಹೆಗ್ಡೆ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಜಾಕ್ಷಿ ಶೆಟ್ಟಿ, ಜಡ್ಕಲ್ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಅಡಿಗ, ದ. ಕ. ಜಿ.ಕೇಂದ್ರ ಸಹಕಾರಿ ಬ್ಯಾಂಕ್ ಸ. ಸಂಘಗಳ ವಲಯ ಮೇಲ್ವಿಚಾರಕರಾದ ಶಿವರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ, ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಟಾಲ್ ಗೆ ರೂ.1940 ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 1960 ದರ ನಿಗಧಿಪಡಿಸಿದ್ದು, ಜಿಲ್ಲೆಯ ರೈತರಿಂದ ಭತ್ತ ಖರೀದಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭತ್ತ ಖರೀದಿ ಕೇಂದ್ರಗಳಿಗೆ ಗ್ರೇಡರ್ ಗಳನ್ನು ನೇಮಿಸುವಂತೆ ಮತ್ತು ಗೋದಾಮು ಗಳನ್ನು ಸಿದ್ದಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಜಿಲ್ಲೆಯ 20 ಅಕ್ಕಿ ಮಿಲ್ಲುಗಳ ಮಾಲೀಕರು ಭತ್ತವನ್ನು ಹಲ್ಲಿಂಗ್ ಮಾಡಿಕೊಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗ ಸೇರಿದಂತೆ ಸ್ಥಳೀಯವಾಗಿ ಕೌಶಲ್ಯಾಧರಿತ ತರಬೇತಿ ಪಡೆದ ಯುವ ಸಮುದಾಯ ನಿರ್ಮಾಣದ ಜೊತೆಗೆ ಗುಣಮಟ್ಟದ ಶಿಕ್ಷಣ ತರಬೇತಿ ಮೂಲಕ ಅತ್ಯುತ್ತಮ ಸಂಸ್ಥೆಗಳನ್ನು ಆರಂಭಿಸುವ ಉದ್ದೇಶದಿಂದ ಸರಕಾರ ವಿಶ್ವ ದರ್ಜೆಯ ಐ.ಟಿ.ಐ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು. ಅವರು, ಶನಿವಾರ ಬೈಂದೂರು ಸರಕಾರಿ ಐ.ಟಿ.ಐ ಕಾಲೇಜಿಗೆ ಬೇಟಿ ನೀಡಿ, ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಐ.ಟಿ.ಐ ಕಾಲೇಜಿನ ಕಟ್ಟಡ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಐ.ಟಿ.ಐ ಕಾಲೇಜುಗಳನ್ನು ಆರಂಭಿಸುಲು ಬೇಡಿಕೆ ಆಧಾರದಲ್ಲಿ ಹೊಸದಾದ 11 ಕೋರ್ಸ್ಗಳು ಆರಂಭವಾಗಲಿದ್ದು ಅವುಗಳಲ್ಲಿ ಆರು ವಿಷಯಗಳು ಎರಡು ವರ್ಷ ಹಾಗೂ ಐದು ವಿಷಯಗಳು ಒಂದು ವರ್ಷದ ಅವಧಿಯದ್ದಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಿದೆ ಎಂದರು. ಉಪ ಚುನಾವಣೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷ ಕುಟುಂಬ ಆಧಾರಿತವಾಗಿದೆ. ಅದು ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲೆಯಲ್ಲಿನ ಎಲ್ಲಾ ಪ್ರವಾಸಿ ಕ್ಷೇತ್ರಗಳನ್ನು , ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಒಂದೇ ವೇದಿಕೆಯಲ್ಲಿ ಕಾಣುವಂತಹ ವರ್ಚುವಲ್ 3 ಡಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರಮುಖ 1 ಅಥವಾ 2 ಎರಡು ಪ್ರವಾಸಿ ಕ್ಷೇತ್ರಗಳನ್ನು ಮಾತ್ರ ವೀಕ್ಷಣೆ ಮಾಡಿ ತೆರಳುತ್ತಿದ್ದು, ಅವರಿಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ನೈಜ ಚಿತ್ರಣ ತೋರುವಂತಹ ವರ್ಚುವಲ್ 3 ಡಿ ಯೋಜನೆಯನ್ನು ಯಾವುದಾದರೂ ಒಂದು ಪ್ರಮುಖ ಸ್ಥಳದಲ್ಲಿ ನಿರ್ಮಿಸುವುದರಿಂದ, ಎಲ್ಲಾ ತಾಣಗಳನ್ನು ಚಿತ್ರಣ ಅವರಿಗೆ ದೊರೆಯಲಿದ್ದು , ಈ ತಾಣಗಳಿಗೂ ಪ್ರವಾಸಿಗರು ಭೇಟಿ ನೀಡಲು ಸಾಧ್ಯವಾಗಲಿದೆ ಎಂದರು. ಜಿಲ್ಲೆಯಲ್ಲಿ ಅಭಿವೃದ್ದಿಪಡಿಸಬಹುದಾದ ಇನ್ನೂ ಹಲವು ಪ್ರವಾಸಿ ತಾಣಗಳಿದ್ದು, ಇವುಗಳನ್ನು ಸಮಗ್ರವಾಗಿ ಅಭಿವೃಧ್ದಿಪಡಿಸಲು ವಿವಿಧ ಸಂಸ್ಥೆಗಳಿAದ ವರದಿ ಪಡೆಯಲು ಎಕ್ಸ್ಪ್ರೆಷನ್…
ಕುಂದಾಪ್ರ ಡಾಟ್ ಕಾಂ ಸುದ್ದಿ .ಉಡುಪಿ: ಜಿಲ್ಲೆಯಲ್ಲಿ ನವೆಂಬರ್ 1ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕರು ಕೆಲಸದಲ್ಲಿ ತೊಡಗಿಕೊಳ್ಳುವುದರಿಂದ ಮಕ್ಕಳ ವಿಕಸನಕ್ಕೆ ಹಾಗೂ ಬೆಳವಣಿಗೆಗೆ ತೊಡಕಾಗುವುದರ ಜೊತೆಯಲ್ಲಿ ಶಿಕ್ಷಣ ವಂಚಿತರಾಗುತ್ತಾರೆ ಇದೊಂದು ಅನಿಷ್ಠ ಪದ್ದತಿಯಾಗಿದ್ದು, ಸಮಾಜದಿಂದ ಇದನ್ನು ತೊಡೆದು ಹಾಕಲು ಎಲ್ಲಾ ಸಾರ್ವಜನಿಕರು ಕೈ ಜೋಡಿಸಬೇಕು ಎಂದರು. ಜಿಲ್ಲೆಯ ವಿವಿಧ ಕೈಗಾರಿಕೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ,ಕಲ್ಲು ಕ್ವಾರಿಗಳು,ಜಲ್ಲಿ ಕ್ರಷರ್ ಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಬಳಸಿಕೊಳ್ಳುವ ಸಾಧ್ಯತೆಗಳಿದ್ದು ಇಂತಹ ಎಲ್ಲಾ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು , ಸಮೀಕ್ಷೆಯನ್ನು ನವೆಂ 1 ರಿಂದ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಆರಂಭಿಸಿ ತಿಂಗಳ ಅಂತ್ಯದೊಳಗೆ ಮುಕ್ತ್ತಾಯಗೊಳಿಸಿ, ಸಮಗ್ರ ವರದಿಯನ್ನು ಸಲ್ಲಿಸುವಂತೆ ಹಾಗೂ…
