Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಬೈಂದೂರು ಸಿಟಿ ವತಿಯಿಂದ ಸೆಲ್ಯೂಟು ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿ ಯೋಧ ಮೋಹನ ದೇವಾಡಿಗ ಅವರ ಧರ್ಮಪತ್ನಿ ಯಶೋಧ ಅವರನ್ನು ಸನ್ಮಾನಿಸಲಾಯಿತು. ಜೆಸಿಐ ಪೂರ್ವ ಅಧ್ಯಕ್ಷರಾದ ಪ್ರಿಯದರ್ಶಿನಿ ಬೆಸ್ಕೂರ್ ಅವರ ಮನೆಯ ಸಭಾಂಗಣದಲ್ಲಿ ಗುರುತಿಸಿ ಗೌರವಿಸಲಾಯಿತು, ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ಶ್ರೀಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು, ಈ ಸಂದರ್ಭದಲ್ಲಿ ಜೆಸಿ ವಲಯ ಉಪಾಧ್ಯಕ್ಷರಾದ ನಾಗೇಶ್ ನಾವಡ, ಜೆಸಿ ಬೈಂದೂರು ಸಿಟಿ ವಲಯಾಧಿಕಾರಿ ಮಣಿಕಂಠ ಎಸ್ ದೇವಾಡಿಗ, ಉಪಾಧ್ಯಕ್ಷೆ ಸೌಮ್ಯ, ಘಟಕದ ಕಾರ್ಯದರ್ಶಿ ಸವಿತಾ ದಿನೇಶ್ ಗಾಣಿಗ, ಜೊತೆ ಕಾರ್ಯದರ್ಶಿ ಗೀತಾ ಬೈಂದೂರ್, ಜೇಸಿರೇಟ್ ಕಾರ್ಯದರ್ಶ ಗುಲಾಬಿ ಮರವಂತೆ, ಸದಸ್ಯರಾದ ಸಕ್ಕುಕಲ್ಮಕ್ಕಿ, ರಾಘವೇಂದ್ರ ಹೊಳ್ಳ, ರಾಘವೇಂದ್ರ ಶೇಟ್, ಸತೀಶ್ ದೇವಾಡಿಗ, ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ , ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಕನ್ನಡ ಕಾಯಕ ವರ್ಷವನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಸರ್ಕಾರದಿಂದ ನೀಡಿರುವ ಅಧಿಕೃತ ಚಿಹ್ನೆಯನ್ನು ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ದೈನಂದಿನ ಪತ್ರ ವ್ಯವಹಾರಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇಲಾಖೆಗಳು ತಮ್ಮ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ನಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಗಣಕಯಂತ್ರದಲ್ಲಿ ಸಂಪೂರ್ಣವಾಗಿ ಕನ್ನಡ ತಂತ್ರಾಶವನ್ನು ಅಳವಡಿಸಬೇಕು, ವಾಹನಗಳಲ್ಲಿ ಸಂಖ್ಯಾಫಲಕ, ಸರ್ಕಾರಿ ವಾಹನಗಳ ನಾಮಫಲಕಗಳಲ್ಲಿ , ಮೈಲುಗಳಲ್ಲಿ, ಹೆದ್ದಾರಿ ಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು , ಜಿಲ್ಲಾ ಪಂಚಾಯತ್ ನ ಕೆ.ಡಿ.ಪಿ ಸಭೆಗಳಲ್ಲಿ ಕನ್ನಡವನ್ನು ಒಂದು ಅಂಶವಾಗಿ ಚರ್ಚೆ ಮಾಡಬೇಕು ಎಂದರು. ಜಿಲ್ಲೆಯ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇನ್ಸ್‌ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಸಿಎ ಇಂಟರ್‌ಮಿಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ(2017-18 ಸ್ಫೂರ್ತಿ ಡಿ.ಸಿ. ಅಖಿಲ ಭಾರತ ಮಟ್ಟದಲ್ಲಿ 24ನೇ ರ‍್ಯಾಂಕ್ ಗಳಿಸಿದ್ದಾರೆ. ಇಂಟರ್‌ಮೀಡಿಯೆಟ್ ಪರೀಕ್ಷೆಯ ಗ್ರೂಪ್1 ಮತ್ತು ಗ್ರೂಪ್1 ಎರಡೂ ವಿಭಾಗಗಳಲ್ಲಿ ಒಟ್ಟು575 ಅಂಕಗಳನ್ನು ಗಳಿಸುವ ಮೂಲಕ ಒಂದೇ ಪ್ರಯತ್ನದಲ್ಲಿ ಈ ಸಾಧನೆ ಮಾಡಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಸ್ಪೂರ್ತಿ ತಮ್ಮ ಪದವಿ ಶಿಕ್ಷಣವನ್ನು ಪೂರೈಸಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಹೆದ್ದಾರಿ ರಸ್ತೆ ಮತ್ತು ಸೇತುವೆ ಸುಧಾರಣೆ ಕಾಮಗಾರಿ ಗಳ ಲೆಕ್ಕಶೀರ್ಷಿಕೆ 5054-03-337-0-17-154ರಡಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿವಮೊಗ್ಗ – ಕುಂದಾಪುರ ಸಂಪರ್ಕ  ರಸ್ತೆ ಅಭಿವೃದ್ಧಿಗೆ ಒಟ್ಟು ರೂ.12 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರಲ್ಲಿ ಕುಂದಾಪುರ ತಾಲೂಕಿನಲ್ಲಿ ಕಿ.ಮೀ.46.40 ರಿಂದ 48.40 ರವರೆಗೆ ರಸ್ತೆ ಅಭಿವೃದ್ದಿ ಹಾಗೂ ಬಾಳೆಬರೆ ಘಾಟ್ ನಿಂದ 7 ಕಿ ಮಿ. ವೈಟ್ ಟ್ಯಾಪಿಂಗ್ ಕಾಮಗಾರಿಗೆ ರೂ.300.00 ಲಕ್ಷ, ಶಿವಮೊಗ್ಗ ತಾಲೂಕು ಹಲಗೇರಿ-ಹುಲಿಕಲ್ ರಸ್ತೆ(ಎಸ್ ಹೆಚ್-26) ರ ಸರಾಪಳಿ 75.62 ರಿಂದ 86.32 ಕಿ ಮೀ ವರೆಗೆ ಆಯ್ದ ಭಾಗಗಳಲ್ಲಿ ಡಾಂಬರೀಕರಣ ಮಾಡಿ ಅಭಿವೃದ್ದಿ ಪಡಿಸುವ ಕಾಮಗಾರಿ ಹಾಗೂ ಅಯನೂರಿನಿಂದ ಸುಡುರುವರೆಗೆ ಕಾಮಗಾರಿ ರೂ.300.00 ಲಕ್ಷ, ಹೊಸನಗರ ತಾಲೂಕು ಅಲಗೆರಿಯಿಂದ ಹಾಲ್ಕಲ್ ರಾಜ್ಯ ಹೆದ್ದಾರಿ 26ರ ಸರಪಳಿ 86.32 ರಿಂದ 122.50 ಕಿ.ಮೀ. ವರೆಗೆ ಹಾಗೂ ಸುಡೂರಿನಿಂದ ಹೊಸನಗರ ಪಟ್ಟಣದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಕಾಲೇಜಿನ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಯಿತು. ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಸುರತ್ಕಲ್ ಎನ್ಐಟಿಕೆ ಯ ಪ್ರಾಧ್ಯಾಪಕರಾದ ಪ್ರೊ. ನರೇಂದ್ರನಾತ್ ಎಸ್., ಪ್ರತಿಯೊಬ್ಬರೂ ತಮ್ಮದೇ ಆದ ಧ್ಯೇಯ ಮತ್ತು ಗುರಿಯನ್ನು ಅಳವಡಿಸಿಕೊಂಡು ಅದನ್ನು ಸಾಕಾರಗೊಳಿಸುವ ಕಡೆ ಪ್ರಯತ್ನಶೀಲರಾಗಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರ ರಾವ್ ಮದಾನೆ ಮಾತನಾಡಿ, ಕೆಲಸ ಮಾಡುವ ಮನಸ್ಥಿತಿ ಹಾಗೂ ಶ್ರದ್ಧೆ ಇಟ್ಟುಕೊಂಡು ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು. ಕಾಲೇಜಿನ ಪ್ಲೇಸ್ಮೆಂಟ್ ಡೀನ್ ಸತ್ಯನಾರಾಯಣ, ಅಭ್ಯರ್ಥಿಗಳ ಕೌಶಲ್ಯ ಹಾಗೂ ಪ್ರತಿಭೆಗೆ ತಕ್ಕಂತಹ ಕಂಪೆನಿಗಳನ್ನು ಆಯ್ದುಕೊಳ್ಳಲು ಸಲಹೆ ನೀಡಿದರು ಮೇಳದಲ್ಲಿ ಹೆಸರಾಂತ ಬಹುರಾಷ್ಟ್ರೀಯ ಹಾಗೂ ರಾಷ್ಟ್ರೀಯ ಕಂಪೆನಿಗಳು ಪಾಲ್ಗೊಗೊಂಡಿದ್ದು ಉತ್ತಮ ಫಲಿತಾಂಶವನ್ನು ನಿರೀಕ್ಷಿಸುತ್ತಿದ್ದೇವೆ,  ಮಾರ್ಚ್ 27ರಂದು ಉದ್ಯೋಗ ಮೇಳದ ಎರಡನೇ ಆವ್ರತ್ತಿ ಇರಲಿದೆ ಹಾಗೂ ನೇರ ಸಂದರ್ಶನ ಇರಲಿದ್ದು, ಉದ್ಯೋಗಾಕಾಂಕ್ಷಿಗಳು ಅದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು. ಉದ್ಯೋಗ ಮೇಳದ ಸಹಭಾಗಿತ್ವವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರ 60ನೆಯ ಕೃತಿ ‘ಹುಲಿಯಪ್ಪ ಮೇಷ್ಟ್ರು ಬಿಡುಗಡೆ ಮಾ.28ರಂದು ಸಂಜೆ 3.30ಕ್ಕೆ ಕುಂದಾಪುರದ ಪಾರಿಜಾತ ಹೋಟೆಲ್ ಸ್ನೇಹಾ ಸಭಾಂಗಣದಲ್ಲಿ ನಡೆಯಲಿದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೃತಿ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿಗಳಾದ ಬೇಳಗೊಡು ರಮೇಶ್ ಭಟ್ ಕೃತಿ ಪರಿಚಯಿಸಲಿದ್ದು, ಎ. ಎಸ್. ಎನ್. ಹೆಬ್ಬಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿದ್ಯಾಂಗ ಉಪನಿರ್ದೇಶಕ ದಿವಾಕರ ಶೆಟ್ಟಿ,ಡಯಟ್ ಉ.ಪ್ರಾಂಶುಪಾಲ ಅಶೋಕ್ ಕಾಮತ್, ,ಶಿಕ್ಷಣಾಧಿಕಾರಿ ಪದ್ಮನಾಭ, ಸದಾನಂದ ಬೈಂದೂರು ,ಸುಬ್ರಹ್ಮಣ್ಯ ಶೆಟ್ಟಿ ಭಾಗವಹಿಸಲಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ಆರೋಗ್ಯ ಮಾಹಿತಿ ಅರಿವು ಕಾರ್ಯಾಗಾರ ಪಾಲಕರ ಸಭೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಾ. ಕಾಶಿನಾಥ್ ಪೈ , ಗಂಗೊಳ್ಳಿ ಇವರು ಎಪಿಲೆಪ್ಸಿ (ಮೂರ್ಛೆ ರೋಗ)ದ ಬಗ್ಗೆ  ಮಾಹಿತಿಯನ್ನು ನೀಡಿದರು. ಅದರಲ್ಲೂ ವಿಶೇಷ ಮಕ್ಕಳಲ್ಲಿ ಈ ಕಾಯಿಲೆ ಕಂಡು ಬಂದಾಗ ತೆಗೆದುಕೂಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮತ್ತು ವೈದ್ಯಕೀಯ ಚಿಕಿತ್ಸಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ ಪೋಷಕರ ವಿವಿಧ ಪ್ರಶ್ನೆಗಳಿಗೆ ಸೂಕ್ತವಾದ ವಿವರಣೆಯನ್ನು ನೀಡಿ ಸಂದೇಹಗಳಿಗೆ ಪರಿಹಾರವನ್ನು ಸೂಚಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ  ದಾನಿಗಳಾದ ಕಾರ್ತಿಕೇಯ ಶಿರೂರು ಹಾಗೂ ಕಮಲಬಾಯಿ ಟ್ರಸ್ಟ್ ನ ಜೀವಿತೇಶ್ವರ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುರೇಶ್ ತಲ್ಲೂರು ಸ್ವಾಗತಿಸಿದರು, ಟ್ರಸ್ಟೀ ವಸಂತ ಶಾನುಭಾಗ ವಂದಿಸಿದರು. ಮುಖ್ಯ ಶಿಕ್ಷಕಿ ಪ್ರೇಮಾ  ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ಇಂದುಧರ ಯುವಕ ಮಂಡಲ ಗಂಗೊಳ್ಳಿ ಇದರ ನೂತನ ಅಧ್ಯಕ್ಷರಾಗಿ ಸಂದೇಶ ಜಿ.ಟಿ. ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಗುರುರಾಜ್ ಬಿ., ಉಪಾಧ್ಯಕ್ಷರಾಗಿ ಚಂದ್ರ ಬಿ., ಸುದೀಪ್ ಜಿ.ಎಸ್., ಕಾರ್ಯದರ್ಶಿಯಾಗಿ ಸಂದೇಶ, ಜತೆ ಕಾರ್ಯದರ್ಶಿಯಾಗಿ ಸುಧಾಕರ ಜಿ.ಟಿ., ವಿಘ್ನೇಶ ಜಿ.ಟಿ., ಕ್ರೀಡಾ ಕಾರ್ಯದರ್ಶಿಯಾಗಿ ರಾಘವೇಂದ್ರ ಜಿ.ಟಿ., ಸಂದೇಶ ಜಿ.ಟಿ., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಕಾಂತ ಎನ್., ಲಕ್ಷಣ ಜಿ., ವಿಶ್ವನಾಥ ಜಿ.ಟಿ., ಪ್ರದೀಪ ಜಿ.ಟಿ., ದಿನೇಶ ಜಿ.ಟಿ. ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯಾದ್ಯಂತ ಕರೋನಾ ಹಾವಳಿ ಹೆಚ್ಚುತ್ತಿರುವುದರಿಂದ ಈ ಬಾರಿ ಹೋಳಿ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರಕಾರದ ಆದೇಶವನ್ನು ಮತ್ತು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಅರ್ಥಪೂರ್ಣವಾಗಿ ಹಬ್ಬವನ್ನು ಆಚರಿಸಿಕೊಳ್ಳಬೇಕು ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹೇಳಿದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪೂರ್ವಭಾವಿಯಾಗಿ ಜರಗಿದ ಕೊಂಕಣಿ ಖಾರ್ವಿ ಸಮಾಜದ ಮುಖಂಡರ ಹಾಗೂ ಹೋಳಿ ಹಬ್ಬ ಕಮಿಟಿಯ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ಹಬ್ಬದಲ್ಲಿ ಡಿಜೆ ಬಳಕೆಯನ್ನು ನಿಷೇಧಿಸಲಾಗಿದೆ. ನಿಗದಿತ ವೇಳೆಯಲ್ಲಿ ಕಾರ್ಯಕ್ರಮವನ್ನು ಮುಗಿಸಬೇಕು. ಯಾರಿಗೂ ಒತ್ತಾಯಪೂರ್ವಕವಾಗಿ ಬಣ್ಣ ಹಾಕಬಾರದು. ಅನ್ಯ ಧರ್ಮೀಯರಿಗೆ ತೊಂದರೆಯಾಗದಂತೆ, ಭಾವನೆಗಳಿಗೆ ಧಕ್ಕೆಯಾಗದಂತೆ ಮುತುವರ್ಜಿ ವಹಿಸಬೇಕು ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಸರಕಾರ ಹೊರಡಿಸುವ ಆದೇಶಗಳನ್ನು ಪಾಲಿಸಲು ಬದ್ಧರಾಗಿರಬೇಕು ಎಂದು ಹೇಳಿದರು. ಶೀನ ಪಟೇಲ್, ಕೃಷ್ಣ ಪಟೇಲ್, ರಾಮದಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು ಸೆಪ್ಟೆಂಬರ್ – ಅಕ್ಟೋಬರ್ 2020ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಎಂಟು ರ‍್ಯಾಂಕ್‌ಗಳು ದೊರಕಿವೆ. ವಾಣಿಜ್ಯ ಪದವಿಯಲ್ಲಿ ಯಡ್ತೆರೆಯ ಕುದ್ರಿಸಾಲ್, ವಿಠಲ ಮತ್ತು ಕಾವೇರಿಯವರ ಪುತ್ರಿ ಮಧುಶ್ರೀಗೆ ಎಂಟನೇ ರ‍್ಯಾಂಕ್, ಕಲಾ ಪದವಿಯಲ್ಲಿ ಬಿಜೂರಿನ ಕಂಚಿಕಾನ್ ಶ್ರೀಧರ ಭಟ್ ಮತ್ತು ಕಾತ್ಯಾಯಿನಿ ಭಟ್‌ಯವರ ಪುತ್ರಿ ಕೀರ್ತಿಗೆ ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ವಿಜ್ಞಾನ ಪದವಿಯಲ್ಲಿ ಕುಂದಾಪುರದ ಕುಂಭಾಶಿಯ ಮನೋಹರ್ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮೇಘನಾ ಪ್ರಭು ಅವರಿಗೆ ನಾಲ್ಕನೇ ರ‍್ಯಾಂಕ್, ಬಳ್ಕೂರಿನ ಹಾಡಿಮನೆ ಅಣ್ಣಪ್ಪ ಶೇರೆಗಾರ್ ಮತ್ತು ಮಾಲತಿಯವರ ಪುತ್ರಿ ನಾಗರತ್ನ ಅವರಿಗೆ ಐದನೇ ರ‍್ಯಾಂಕ್, ಉಪ್ಪುಂದದ ಅಮ್ಮನವರತೊಪ್ಲಿನ ಸುಧಾಕರ ಗಾಣಿಗ ಮತ್ತು ಮೂಕಾಂಬು ಎಸ್. ಗಾಣಿಗ ಅವರ ಪುತ್ರಿ ಗೌತಮಿ ಗಾಣಿಗ ಅವರಿಗೆ ಒಂಬತ್ತನೆ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವಿಯಲ್ಲಿ ಹೊಸಂಗಡಿ ಹೆನ್ನಾಬೈಲಿನ ಕೆ. ಎಂ. ಅಶ್ರಫ್ ಮತ್ತು ರುಬಿನಾ ಬಾನು ಅವರ…

Read More