Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಬೀಜಾಡಿ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರಪಾಲಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದಾನೆ. ಓರ್ವ ನಾಪತ್ತೆಯಾಗಿದ್ದು, ಇಬ್ಬರು ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಮರವಂತೆ ಬೀಚ್ ಬಳಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಬೀಜಾಡಿಯ ಗೋಳಿಬೆಟ್ಟು ನಿವಾಸಿ ವಿರಾಜ್ ಆಚಾರ್ಯ(28) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರೋಶನ್‌ ಎಂಬವರು ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಶಂಕೆ‌ ವ್ಯಕ್ತವಾಗಿದೆ. ಸಂದೇಶ್ ಹಾಗೂ ಕಾರ್ತಿಕ್ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ತಡರಾತ್ರಿ ಕುಂದಾಪುರದಿಂದ ಕೆಂಪು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ವಿರಾಜ್ ಹಾಗೂ ಅವರ ಸಹೋದರ ಸಂಬಂಧಿಗಳು ಕುಂದಾಪುರ ಕಡೆಯಿಂದ ಬೈಂದೂರು‌ ಕಡೆಗೆ ಪ್ರಯಾಣಿಸುತ್ತಿದ್ದರು. ವಿರಾಜ್ ಸ್ವತಃ ಕಾರನ್ನು ಚಾಲನೆ‌ ಮಾಡುತ್ತಿದ್ದರು ಎನ್ನಲಾಗಿದೆ. ಮರವಂತೆ ಬೀಚ್ ಸಮೀಪ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 40 ಅಡಿ ಕೆಳಕ್ಕೆ ಉರುಳಿದೆ. ಸಮುದ್ರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕಥೆ ಹೇಳುವ ಸಾಮರ್ಥ್ಯ ಕಿರುಚಿತ್ರಗಳಿಗೆ ಇದೆ ಎಂದು ಹೆಸರಾಂತ ಚಿತ್ರ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗವು ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆ ‘ಆಳ್ವಾಸ್ ಅರೆನಾ’ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸ್ಪರ್ಧೆಗೆ ಬಂದ ಎಲ್ಲಾ ಕಿರುಚಿತ್ರಗಳು ಕಥೆಯ ಆಯ್ಕೆ, ಅಭಿನಯ, ಛಾಯಾಗ್ರಹಣ, ನಿರೂಪಣೆಯಲ್ಲಿ ಪ್ರಬುದ್ಧತೆ ಮೆರೆದಿವೆ. ಮುಖ್ಯವಾಹಿನಿಯ ಚಿತ್ರಗಳಿಗೂ ಈ ಕಿರುಚಿತ್ರಗಳು ಸ್ಪರ್ಧೆಯನ್ನೊಡ್ಡಿವೆ ಎಂದು ಹೇಳಿದರು. ವಿಜೇತ ವಸತಿಯುತ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಾಮಾಜಿಕ ಕಾಳಜಿ ಇರುವ ಚಿತ್ರ ನಿರ್ಮಿಸಿದರೆ ಸಮಾಜಕ್ಕೆ ಒಳಿತಾಗುತ್ತದೆ. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಿರ್ಮಿಸಿದ ವಿಜೇತ ವಿಶೇಷ ಶಾಲೆಯ ಸಾಕ್ಷ ಚಿತ್ರಕ್ಕೆ ಹಲವೆಡೆಯಿಂದ ಉತ್ತಮ ಸ್ಪಂದನೆ ದೊರಕಿದೆ. ಇದರಿಂದ ಚಿತ್ರೋದ್ಯಮವು ಸಮಾಜಮುಖಿ ವಸ್ತುವಿಷಯವನ್ನು ಆರಿಸಿಕೊಂಡರೆ ಸಮಾಜದಲ್ಲಿ ಧನಾತ್ಮಕ ಬದಲಾವಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೆಕ್ಕ ಪರಿಶೋಧಕರ ದಿನಾಚರಣೆಯ ಅಂಗವಾಗಿ ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಖ್ಯಾತ ಹಿರಿಯ ಲೆಕ್ಕ ಪರಿಶೋಧಕರಾದ ಸಿ. ಎ. ತೆಕ್ಕಟ್ಟೆ ಕೃಷ್ಣರಾಯ ಶ್ಯಾನುಭಾಗ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಲೆಕ್ಕ ಪರಿಶೋಧಕರಾಗಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತ ನೂರಾರು ಯುವಕರಿಗೆ ಮಾರ್ಗದರ್ಶನ ಮಾಡಿರುವ ಇವರು ಕೋಟೇಶ್ವರದಲ್ಲಿ ತಮ್ಮ “ಶಾಂತಿ ಧಾಮ ಟ್ರಸ್ಟ್” ಮೂಲಕ “ಶಾಂತಿ ಧಾಮ ಪೂರ್ವ ಗುರುಕುಲ” ಎನ್ನುವ ಉಚಿತ ಶಾಲೆಯನ್ನು ನಡೆಸುತ್ತಿದ್ದಾರೆ. ರೋಟರಿ ಕುಂದಾಪುರ ದಕ್ಷಿಣದ ನಿಯೋಜಿತ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ, ಮಾಜಿ ಅಧ್ಯಕ್ಷ ಯು. ಎಸ್. ಶೆಣೈ, ಮಾಜಿ ಕಾರ್ಯದರ್ಶಿ ಮನೋಹರ್, ಲೆಕ್ಕ ಪರಿಶೋಧಕ ತೆಕ್ಕಟ್ಟೆ ಕೃಷ್ಣರಾಯ ಶ್ಯಾನುಭಾಗರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರಾದ ವಸಂತ ಶ್ಯಾನುಭಾಗ, ಅಕ್ಷತಾ ಶ್ಯಾನುಭಾಗ ದಂಪತಿಯನ್ನು ಗುರುತಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.1: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇ಼ಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ, ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಜುಲೈ 22 ರ ಒಳಗೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜುಲೈ.1: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12, 13 ಮತ್ತು 14 ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ, ಜಿಲ್ಲೆಯಲ್ಲಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ 10000 ಜನರಿಗೆ ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ,ಯೋಗವನ್ನು ತಮ್ಮ ದೈನಂದಿನ ಚಟುವಟಿಕೆಗಳನ್ನಾಗಿಸಿಕೊಳ್ಳುವುದರೊಂದಿಗೆ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವಂತರನ್ನಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ , ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು. ಯೋಗಾಭ್ಯಾಸಕ್ಕೆ ಸಾರ್ವಜನಿಕರು ಸೇರಲು ಅನುಕೂಲವಾಗುವ ಸೂಕ್ತ ಸ್ಥಳವನ್ನು ಗುರುತಿಸಿ, ಅಲ್ಲಿ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಕೈಗೊಳ್ಳಬೇಕು, ಕಾರ್ಯಕ್ರಮದಲ್ಲಿ ಜಿಲ್ಲೆಯ ಯೋಗ ಸಂಸ್ಥೆಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ೨೦೨೨-೨೩ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಸಭೆ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಶಾಲೆಯ ಸಂಚಾಲಕ ಎನ್. ಸದಾಶಿವ ನಾಯಕ್, ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನಿಂದ ಶಾಲೆಗೆ ಬಹಳಷ್ಟು ಸಮಸ್ಯೆಗಳಾಗಿದೆ. ಸರಕಾರ ನೀತಿ ನಿಯಮಗಳಿಗೆ ಅನುಸಾರವಾಗಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಾಲೆಯ ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸರಕಾರ ಶಾಲಾ ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿದ್ದರೂ ಪೋಷಕರಿಗೆ ಹೊರೆಯಾದಂತೆ ಅತಿ ಕಡಿಮೆ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಶಾಲೆ ಉತ್ತಮ ಸಾಧನೆ ಮಾಡಿದ್ದು, ಮಕ್ಕಳ ದಾಖಲಾತಿಯಲ್ಲೂ ಈ ವರ್ಷ ಉತ್ತಮ ಪ್ರಗತಿಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ಶಾಲೆಯ ನೀತಿ, ನಿಯಮ, ಶಿಸ್ತು ಮೊದಲಾದವುಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶಾಂತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ಸಂಸ್ಥೆ ವತಿಯಿಂದ ಉಡುಪಿ, ಕುಂದಾಪುರ ಮತ್ತು ಮಂಗಳೂರು ಶಾಖೆಗಳಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಉಡುಪಿಯಲ್ಲಿ ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್ ಹಾಗೂ ಉಡುಪಿ ಟೆಂಪಲ್ ಸಿಟಿ ಲೀಜಿನ್ ಸಹಭಾಗಿತ್ವದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಡಾ. ತಲ್ಲೂರು ಶಿವರಾಮ್ ಶೆಟ್ಟಿ ಭಾಗವಹಿಸಿದ್ದರು. ವೈದ್ಯರುಗಳಾದ ಡಾ. ರವೀಂದ್ರನಾಥ್, ಡಾ. ಭಾಸ್ಕರ್ ಪಾಲನ್, ಡಾ. ಅಶೋಕ್ ಕುಮಾರ್, ಡಾ. ರಂಜಿತಾ ನಾಯಕ್, ಡಾ. ಮ್ಯಾರೆಟ್ ಡಿ ಸೋಜಾ, ಡಾ. ದೀಪಾ ನಾಯಕ್, ಡಾ. ಶ್ರೀಪತಿ ಎಂ. ಭಟ್, ಉದ್ಯಾವರ ಆಯುರ್ವೇದ ಕಾಲೇಜಿನ ವೈದ್ಯರು ಹಾಗೂ ಕುಂದಾಪುರದಲ್ಲಿ ಹಿರಿಯ ವೈದ್ಯರುಗಳಾದ ಕುಂದಾಪುರ ಡಾ. ಎ. ವಿ. ಶೆಟ್ಟಿ, ಡಾ. ಎಂ. ವಿ. ಕುಲಾಲ್ ಹಾಗೂ ಇನ್ನಿತರ ವೈದ್ಯರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಟೆಂಪಲ್ ಸಿಟಿ ಲೀಜಿನ್ ನ ಅಧ್ಯಕ್ಷರಾದ ಜಗದೀಶ ಕೆಮ್ಮಣ್ಣು, ವಿಜಯ್ ಕುಮಾರ್ ಉದ್ಯಾವರ, ಸಂತೋಷ್ ಉದ್ಯಾವರ, ಸುಕುಮಾರ್ ಮೊದಲಾದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಊರಿನ ಹಿರಿಯರು ಹೇಳಿದ ಮಾತಿನ ಅಂದಾಜಿನಂತೆ ಉತ್ಕನನ ನಡೆಸಿದ ಹೊಸಂಗಡಿಯ ವಿದ್ಯಾರ್ಥಿಗಳು ಇತಿಹಾಸ ಕುರುಹುಗಳನ್ನು ಪತ್ತೆ ಹಚ್ಚಿದ್ದಾರೆ. ದೊಡ್ಡ ಕಂಬ, ಆನೆ ನೀರು ಕುಡಿಯುವ ಮರಿಗೆ ಮಣ್ಣಿನೊಳಗೆ ಸಿಕ್ಕಿದೆ. ಕುಂದಾಪುರ ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ಗತ ಕಾಲದಲ್ಲಿ ಬಳಸಲಾಗುತ್ತಿದ್ದ ಆನೆ ನೀರು ಕುಡಿಯುವ ಮರಿಗೆ ಆನೆ ಲಾಯದ ಕಂಬವನ್ನು ವಿದ್ಯಾರ್ಥಿಗಳು ಪತ್ತೆಹಚ್ಚಿದ್ದಾರೆ. ಶತಮಾನಗಳ ಹಿಂದಿನ ಕಾಲದ ಪ್ರಾಚ್ಯವಸ್ತುಗಳು ಇವಾಗಿದೆ. ರಾಜರ ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ ಆನೆಗೆ ನೀರು ಕುಡಿಯಲು ನಿರ್ಮಿಸಿದ ಕಲ್ಲಿನ ಕೊಪ್ಪರಿಗೆ ಇದು ಎನ್ನಲಾಗಿದೆ. ಮೊದಲಿನಿಂದಲೂ ಹೊಸಂಗಡಿ ರಸ್ತೆ ಪಕ್ಕದಲ್ಲಿ ಆನೆ ಕಟ್ಟುವ ಕಂಬ ಕಾಣುತ್ತಿತ್ತು, ಇಲ್ಲಿ ಕೊಪ್ಪರಿಗೆ ಇತ್ತು ಎಂಬ ಮಾತನ್ನು ಕೇಳಿದ ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ, ಸಮರ್ಥ, ರಿತೀಶ್ ಹಾಗೂ ಅನ್ವಿತ್ ಮಲ್ಯ ಅವರು ಆಸಕ್ತಿಯಿಂದ ಅದನ್ನು ಹುಡುಕಿದಾಗ ಮಣ್ಣಿನ ಅಡಿ ಹೂತು ಹೋಗಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆಯಾಗಿದೆ. ಕೆಳದಿ ಶಿವಪ್ಪ ನಾಯಕನ ಕಾಲದ ಹೊನ್ನಯ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವಾ ನಿವೃತ್ತಿಗೊಂಡ ಶಿಕ್ಷಕಿ ಭಾಗಿರಥಿ ಮೊಗೇರ ಅವರಿಗೆ ಬೀಳ್ಕೊಡುಗೆ ಸಮಾರಂಭ ಗುರುವಾರ ಜರುಗಿತು. ಅಧ್ಯಕ್ಷತೆ ವಹಿಸಿದ ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ಧನ್ ಶಿಕ್ಷಕರ ಉತ್ತಮ ಸೇವೆಯಿಂದ ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸ ಹಾಗೂ ಆತ್ಮ ಸಂತೃಪ್ತಿ ಸಾಧ್ಯ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಕರುಣಾರ ಶೆಟ್ಟಿ, ಬೈಂದೂರು ವಲಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ ಪೂಜಾರಿ, ನಿವೃತ್ತ ಶಿಕ್ಷಕಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸಂಜಯ್ ದೇವಾಡಿಗ, ನಿವೃತ್ತ ಮುಖ್ಯೋಪಾಧ್ಯಾಯರಾದ ಬಾಲಯ್ಯ ಶೇರುಗಾರ್, ದೈಹಿಕ ಶಿಕ್ಷಕರಾದ ಪ್ರಭಾಕರ್ ಹೆಚ್., ಸಹ ಶಿಕ್ಷಕರಾದ ಅನ್ನಪೂರ್ಣ, ನಾಗರತ್ನ, ಸರಸ್ವತಿ ಮಮತಾ ಉಪಸ್ಥಿತರಿದ್ದರು ಶಾಲಾ ಸಹ ಶಿಕ್ಷಕಿ ವೀಣಾ ಹೆಗಡೆ ಸ್ವಾಗತಿಸಿದರು ಸುಜಾತ ಧನ್ಯವಾದ ಸಲ್ಲಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು ಶಾಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಜೂ.30: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಶಂಕರನಾರಾಯಣ ಗ್ರಾಮದ ಕುಳ್ಳಂಜೆ ಎಂಬಲ್ಲಿ ನಡೆದಿದೆ. ಶಂಕರನಾರಾಯಣ ಸರಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಮಾನಸ ಕುಲಾಲ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬಳಿಕ ಮರು ಪರೀಕ್ಷೆ ಬರೆದಿದ್ದಳು. ಆದರೆ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದರಿಂದ ಮನನೊಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಂಕರನಾರಾಯಣ ಗ್ರಾಮದ ಕುಳ್ಳಂಜೆ ಶಾಲೆ ಬಳಿಯ ನಿವಾಸಿ ಬಾಬಣ್ಣ ಕುಲಾಲ ಅವರಿಗೆ ಅಪಘಾತವಾಗಿ ದುಡಿಯಲು ಕೂಡ ಆಗುತ್ತಿರಲಿಲ್ಲ. ತಾಯಿ ಅಕ್ಷರ ದಾಸೋಹ ಕೆಲಸ ಮಾಡಿ ಸಂಸಾರ ನಡೆಸುತ್ತಿದ್ದರು. ಮಾನಸ ಅವರ ವಿದ್ಯಾಭ್ಯಾಸಕ್ಕೆ ಒಬ್ಬರು ದಾನಿಗಳು ಸಹಾಯ ಮಾಡುತಿದ್ದರು ಎನ್ನಲಾಗಿದೆ. ಅವರಿಗೆ ಇಬ್ಬರು ಮಕ್ಕಳಿದ್ದು ಒಬ್ಬ ಪುತ್ರ ಕೆಲವು ವರ್ಷದ ಹಿಂದೆ ಬೈನ್ ಟ್ಯೂಮ್ಮರ್ ನಿಂದ ಮೃತ ಪಟ್ಟಿದ್ದಾನೆ. ಇದೀಗ ಮಗಳ ಸಾವಿನಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.…

Read More