ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು , ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು , ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂನ್ 20ರ ಒಳಗೆ ಹತ್ತಿರದ ರೈತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಗೋವಿಂದ ಬಾಬು ಪೂಜಾರಿ ಅವರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಅಗತ್ಯವುಳ್ಳ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಸುಮಾರು 3,700 ಕಿಟ್’ಗಳನ್ನು ವಿತರಿಸಲಾಯಿತು. ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಕೋರೋನಾ ಲಾಕ್ಡೌನ್ ಕಾರಣದಿಂದ ಜನಸಾಮಾನ್ಯರು, ದಿನನಿತ್ಯ ದುಡಿದು ತಿನ್ನುವವರಿಗೆ ಸಾಕಷ್ಟು ತೊಂದರೆ ಆಗಿದೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಟ್ರಸ್ಟ್ ಮೂಲಕ ನಮ್ಮೂರಿನ ಜನರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೈಂದೂರಿನಲ್ಲಿ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು ಹಾಗೂ ಪೌರ ಕಾರ್ಮಿಕರಿಗೆ ದಿನಸಿ ಕಿಟ್, ಮಾಸ್ಕ್ ಸ್ಯಾನಿಟೈಸರ್ ನೀಡಿರುವುದಲ್ಲದೇ ಧನಸಹಾಯವನ್ನು ಮಾಡಲಾಗಿದೆ. ಮುಂದುವರಿದು ಪ್ರತಿ ಗ್ರಾಮಗಳಿಗೂ ಜಿಬಿಪಿ ಜನಸೇವಾ ಸಂಘದ ಮೂಲಕ ಅಗತ್ಯವುಳ್ಳವರನ್ನು ಗುರುತಿಸಿ ಅವರಿಗೆ ಆಹಾರದ ಕಿಟ್ ವಿತರಿಸಲಾಗುತ್ತಿದೆ. ಬೆಂಗಳೂರಿನಲ್ಲಿಯೂ ಆಟೋ ಚಾಲಕರು, ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿ, ಧನಸಹಾಯ ಮಾಡಲಾಗಿದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದಲೂ ಶನಿವಾರ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿಯವರ ಅವರ ನೇತೃತ್ವದಲ್ಲಿ ಬೈಂದೂರಿನ ಪೆಟ್ರೋಲ್ ಪಂಪ್ ಬಳಿ ಶನಿವಾರ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ ಕೊರೋನಾ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ 100ಕ್ಕೆ ಹಾಗೂ ಡಿಸೇಲ್ ಬೆಲೆ 94ಕ್ಕೆ ಏರಿಕೆ ಮಾಡಿರುವ ಮೋದಿ ದೇಶಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಕೇಂದ್ರ ಸರಕಾರ ಕೊರೋನಾ ಸಂಕಷ್ಟದಲ್ಲಿ ದರ ಇಳಿಸುವ ಕೆಲಸ ಮಾಡಬೇಕು. ಕೊರೋನಾದಿಂದ ಉದ್ಯೋಗವಿಲ್ಲದೆ ಜನರು ಸಂಕಷ್ಟದಲ್ಲಿದ್ದಾರೆ. ಉದ್ಯೋಗ, ಪರಿಹಾರ ಕೊಡಬೇಕು. ಮನೆಯಲ್ಲಿ ಕುಳಿತವರಿಗೆ ಸಹಾಯ ಹಸ್ತವನ್ನು ಚಾಚುವ ಕೆಲಸವನ್ನು ಸರ್ಕಾರ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದರು. ಮನಮೋಹನ್ ಸಿಂಗ್ ಸರಕಾರ ಅಧಿಕಾರದಲ್ಲಿದ್ದಾಗ ಕಚ್ಛಾ ತೈಲದ ಬೆಲೆ ಡಾಲರ್ ಗೆ 100 ರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 258 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 133, ಕುಂದಾಪುರ, ಬೈಂದೂರು ತಾಲೂಕಿನ 75, ಕಾರ್ಕಳ, ಹೆಬ್ರಿ ತಾಲೂಕಿನ 47 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 258 ಪ್ರಕರಣಗಳಲ್ಲಿ 13 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 245 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 68 ವರ್ಷದ ಮಹಿಳೆ, ಕುಂದಾಪುರ ತಾಲೂಕಿನ 43 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 625 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3348 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3404 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5190 ಮಂದಿಗೆ ಮೊದಲನೇ ಡೋಸ್, 365 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್ಲಾಕ್ ಪ್ರಕ್ರಿಯೆಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ, ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಸಿಲ್ದಾರರುಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ. ಇಂದು ನಡೆದ ವಿಡಿಯೋ ಸಂವಾದದ ಮೂಲಕ ಎಲ್ಲಾ ಅಧಿಕಾರಿಗಳೊಂದಿಗೆ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧಗಳನ್ನು, ಎಲ್ಲಾ ಅಧಿಕಾರಿಗಳು ಮತ್ತು ಪಂಚಾಯತ್ ಗಳ ಸಹಕಾರದಿಂದ ಯಶಸ್ವಿಯಾಗಿ ಅನುಷ್ಠಾನ ಮಾಡಿದರ ಫಲವಾಗಿ ಜಿಲ್ಲೆಯಲ್ಲಿ ಸೋಂಕು ಹರಡುವುದು ಗಣನೀಯವಾಗಿ ಕಡಿಮೆಯಾಗಿದೆ. ಇದೇ ಕಾರಣದಿಂದ ಸರ್ಕಾರ ಜಿಲ್ಲೆಯಲ್ಲಿ ಅನ್ಲಾಕ್ ಘೋಷಣೆ ಮಾಡಿದ್ದು, ಈ ಕುರಿತಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಪಾಸಿಟಿವಿಟಿ ದರವನ್ನು ಸೊನ್ನೆಗೆ ಇಳಿಸಬೇಕು ಎಂದು ಹೇಳಿದರು. ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಎಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಾರ್ಗಸೂಚಿಯಲ್ಲಿ ಅನುಮತಿಸಲಾದ ಚಟುವಟಿಕೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ಠಾಣೆಯ ಪಿಸೈ ಸಂಗೀತಾ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಅಂಬಿಕಾ ನಗರ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾದೆ. ಬೈಂದೂರು ಠಾಣೆಗೆ ನೂತನ ಪಿಎಸೈ ಆಗಿರುವ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವ್ಯಾಸಂಗ ಹಾಗೂ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ 18 ರಿಂದ 44 ವರ್ಷ ವಯೋಮಾನದವರು ಲಸಿಕೆ ಪಡೆಯಲು ಅನೆಕ್ಸರ್-3 ಪಡೆಯುವುದು ಅಗತ್ಯವಾಗಿದ್ದು, ಅದಕ್ಕಾಗಿ ಉಡುಪಿಗೆ ತೆರಳುವುದನ್ನು ತಪ್ಪಿಸಿ ಕುಂದಾಪುರ ಹಾಗೂ ಬೈಂದೂರಿನಲ್ಲಿಯೇ ಲಭ್ಯವಾಗುವಂತೆ ಮಾಡಲಾಗಿದೆ. ಅನೆಕ್ಸರ್-3 ಪಡೆಯಲಿಚ್ಚಿಸುವವರು ಜೂನ್.14ರ ಸೋಮವಾರ ಬೆಳಿಗ್ಗೆ 10ರಿಂದ 1ರ ತನಕ ಬೈಂದೂರು ತಾಲೂಕು ಕಛೇರಿಯಲ್ಲಿ ಹಾಗೂ ಮಧ್ಯಾಹ್ನ 2 ರಿಂದ 5 ತನಕ ಕುಂದಾಪುರ ತಾಲೂಕು ಕಛೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪಡೆಯಬಹುದಾಗಿದೆ. ವಿದೇಶಕ್ಕೆ ತೆರಳಲು ಲಸಿಕೆ ಪಡೆಯಲಿಚ್ಛಿಸುವವರು ಆಧಾರ್ ಕಾರ್ಡ್, ಪಾಸ್ಪೋರ್ಟ್, ನೌಕರನಾಗಿದ್ದರೆ ಕಂಪೆನಿಯ ಆಫರ್ ಲೆಟರ್, ವೀಸಾ, ವ್ಯಾಸಂಗಕ್ಕೆ ತೆರಳುತ್ತಿದ್ದರೆ ವಿದ್ಯಾಸಂಸ್ಥೆಯ ಪತ್ರ ಇವುಗಳ ಮೂಲಪ್ರತಿ ಹಾಗೂ ಸ್ವಯಂ ದೃಢೀಕೃತ ಜೆರಾಕ್ಸ್ ಪ್ರತಿಯೊಂದಿಗೆ ಬೈಂದೂರು ಹಾಗೂ ಕುಂದಾಪುರ ತಾಲೂಕು ಕಛೇರಿಯಲ್ಲಿ ನಿಗದಿತ ದಿನಾಂಕದಂದು ಸಲ್ಲಿಸಿ ಅನೆಕ್ಸರ್-3 ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 215 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 1 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 85, ಕುಂದಾಪುರ, ಬೈಂದೂರು ತಾಲೂಕಿನ 80, ಕಾರ್ಕಳ, ಹೆಬ್ರಿ ತಾಲೂಕಿನ 49 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 215 ಪ್ರಕರಣಗಳಲ್ಲಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 198 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 72 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 309 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3717 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3407 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 8846 ಮಂದಿಗೆ ಮೊದಲನೇ ಡೋಸ್, 1006 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 3,00,199 ಮಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ 11 ಜಿಲ್ಲೆ ಹೊರತುಪಡಿಸಿ ಕೊವೀಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಜೂನ್ 14ರಿಂದ ಈ ನಿಯಮಗಳು ಜಾರಿಗೆ ಬರಲಿದ್ದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಗೆ ಅನ್ವಯವಾಗಲಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ. ಕೋವಿಡ್ ಮಾರ್ಗಸೂಚಿ ಪಾಲಿಸಿ ಕೆಲಸ ಮಾಡಬೇಕು. ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ಮಾಡಕೊಡಲಾಗಿದೆ. ಬಾರ್, ಹೋಟೆಲ್ ಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ಉಲ್ಬಣಗೊಳ್ಳುತ್ತಿದ್ದ ಕೋವಿಡ್ ಸೋಂಕಿನ ಪ್ರಸರಣವನ್ನು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಮಾರ್ಗಸೂಚಿಗಳನ್ನು ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ರೂಪಿಸಿದ, ‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವ ಮೂಲಕ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಹಕಾರಿಯಾಗಿದೆ.. ಜಿಲ್ಲೆಯಲ್ಲಿ ಅನುಷ್ಠಾನ ಮಾಡಿರುವ ‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ವೈದ್ಯರು, ಸ್ವಾಬ್ ಸಂಗ್ರಹಗಾರರು, ಗ್ರಾಮೀಣ ಕೋವಿಡ್ ಕಾರ್ಯಪಡೆಯ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ 73 ತಂಡಗಳನ್ನು ರಚಿಸಿದ್ದು, ತಂಡದ ಎಲ್ಲಾ ಸದಸ್ಯರು ಒಟ್ಟಾಗಿ ಗ್ರಾಮಗಳಿಗೆ ತೆರಳಲು ಅನುಕೂಲವಾಗುವಂತೆ, ಎಲ್ಲಾ ತಂಡಗಳಿಗೆ ಜಿಲ್ಲಾಡಳಿತದ ಮೂಲಕ ಪ್ರತ್ಯೇಕ ವಾಹನ ವ್ಯವಸ್ಥೆ ಒದಗಿಸಲಾಗಿದ್ದು, ರೋಗ ಲಕ್ಷಣಗಳಿರುವವರನ್ನು ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸಲು ರ್ಯಾಟ್ ಕಿಟ್ ಗಳನ್ನು ಒದಗಿಸಿದ್ದು, ರ್ಯಾಟ್ ಟ್ ಪರೀಕ್ಷೆ ಮೂಲಕ ಸ್ಥಳದಲ್ಲೇ ಸೋಂಕಿತರನ್ನು…
