ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವೈಭವಯುತವಾಗಿ ಆಚರಿಸಲಾಯಿತು . ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ಯೋಗವು ಮನುಷ್ಯರು ದೈಹಿಕ ಮತ್ತು ಮಾನಸಿಕ ಸ್ವಸ್ಥತೆಯನ್ನು ಕಾಯ್ದುಕೊಂಡು ಉತ್ತಮ ಆರೋಗ್ಯವನ್ನು ಹೊಂದಲು ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ಪ್ರತಿಯೊಬ್ಬರು ಯೋಗದ ಆಸನಗಳನ್ನು ಅಭ್ಯಸಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ಜನತಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಅವರು ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ “ಯೋಗವಿದ್ದಲ್ಲಿ ರೋಗವಿಲ್ಲ. ಆರೋಗ್ಯಪೂರ್ಣ ಬದುಕಿಗೆ ಯೋಗ ಅನಿವಾರ್ಯ ಎಂಬಂತಾಗಿದೆ” ಎಂದರು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಮಾತನಾಡಿ “ಇಂದು ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಗುವಲ್ಲಿ ಯೋಗದ ಪಾತ್ರ ಹೆಚ್ಚಿನದ್ದಾಗಿದೆ. ಪ್ರಪಂಚದಲ್ಲಿರುವ ಬಹುತೇಕ ಜನರು ಉತ್ತಮ ಆರೋಗ್ಯವನ್ನು ಹೊಂದಲು ಯೋಗಾಭ್ಯಾಸವನ್ನು ತಮ್ಮ ಬದುಕಿನ ಭಾಗವನ್ನಾಗಿಸಿಕೊಂಡಿದ್ದಾರೆ. ನಮ್ಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಆಧುನಿಕ ಜಗತ್ತಿನ ಒತ್ತಡದ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಅತ್ಯಗತ್ಯ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಮತ್ತು ಏಕಾಗ್ರತೆ ಹೆಚ್ಚಿಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಪ್ರಖ್ಯಾತ ವೈದ್ಯರಾದ ಡಾ. ದೀಕ್ಷಾ ಶೆಣೈ ಅವರು ನುಡಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು, ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಪ್ರೇರಣಾದಾಯಕ ಸಂದೇಶ ನೀಡಿದರು. “ಇಂದಿನ ಯೋಗಾಭ್ಯಾಸ, ನಾಳಿನ ಉಜ್ವಲ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಆರೋಗ್ಯ, ಸಾಮರಸ್ಯ ಮತ್ತು ಮನಃಶಾಂತಿಯ ಸಂದೇಶವನ್ನು ಸಾರುವ ಯೋಗಾಭ್ಯಾಸದಲ್ಲಿ ಅತ್ಯಂತ ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿದರು. ಸಂಸ್ಥೆಯ ಪ್ರಮುಖರು ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಶಿಸ್ತುಬದ್ಧವಾಗಿ ಪ್ರದರ್ಶಿಸುವ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೊಳೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತರೆಯಲ್ಲಿ ನಡೆದಿದೆ. ಮೃತರನ್ನು ಉಪ್ಪುಂದ ಗ್ರಾಮದ ನಾರಾಯಣ ಖಾರ್ವಿ (64) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಮಾಡಿಕೊಂಡಿದ್ದ ಅವರು ಯಡ್ತರೆ ಗ್ರಾಮದ ಅಂಕಣಹೊಳೆಯಲ್ಲಿ ಮೀನು ಹಿಡಿಯಲು ಹೋದವರು ಮನೆಗೆ ವಾಪಸ್ ಬಂದಿರಲಿಲ್ಲ. ಜೂನ್.20 ರಂದು ನಾರಾಯಣ ಖಾರ್ವಿ ಅವರ ಮೃತದೇಹವು ಅಂಕಣಹೊಳೆಯಲ್ಲಿ ನೀರಿನಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರವಿವಾರ ಸಂಜೆ ವೇಳೆ ಕೋಟ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ಯ(45) ಎಂದು ಗುರುತಿಸಲಾಗಿದೆ. ಅವರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಾಡಿಕೆರೆ ಕಡೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿ ದಾಟುತಿದ್ದರು. ಆಗ ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಸತೀಶ್ ಆಚಾರ್ಯ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಬೆಂಗಳೂರಿನ ಪದ್ಮಶ್ರೀ ಆರ್ಎಂಬಿ ಆರಾಧ್ಯ ಟ್ರಸ್ಟ್ ಸೇವಾ ರೂಪದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಿಗೆ ನೀಡಲಾದ ನೂತನ ಬೆಳ್ಳಿ ರಥ ಸಮರ್ಪಣೆ ಹಾಗೂ ರಥೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಬೆಳಿಗ್ಗೆಯಿಂದಲೇ ದೇವಸ್ಥಾನದ ತಂತ್ರಿ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ರಥ ಶುದ್ದಿ, ಬಲಿ ಸೇರಿದಂತೆ ರಥೋತ್ಸವ ಹಾಗೂ ಸಮರ್ಪಣಾ ಕಾರ್ಯಕ್ರಮಕ್ಕೆ ಪೂರಕವಾಗಿ ಅನೇಕ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಲಾಗಿತ್ತು. 11 ಗಂಟೆಯ ಸುಮಾರಿಗೆ ಬಲಿ ವಿಧಿಗಳನ್ನು ನಡೆಸಿ ಉತ್ಸವ ಮೂರ್ತಿಯನ್ನು ಗರ್ಭಗುಡಿಯಿಂದ ಉತ್ಸವಗಳನ್ನು ವಿದ್ಯುಕ್ತವಾಗಿ ನಡೆಸಿದ ಬಳಿಕ ಮೂರ್ತಿಧಾರಕ ಶ್ರೀಶಾ ಭಟ್ ಅವರು ಶ್ರೀ ದೇವಿಯನ್ನು ನೂತನ ರಥದಲ್ಲಿ ಕುಳ್ಳಿರಿಸಿದ್ದರು. ಅಲಂಕಾರ, ಹಣ್ಣು ಕಾಯಿ ಹಾಗೂ ಮಂಗಳಾರತಿ ಸೇವೆ ನಡೆದ ಬಳಿಕ, ರಥದ ಚಕ್ರಗಳಿಗೆ ತೆಂಗಿನಕಾಯಿ ಒಡೆದ ಬಳಿಕ ವೈಭವದಿಂದ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಭಕ್ತರೊಂದಿಗೆ ಸೇವಾಕರ್ತ ಕುಟುಂಬದವರು ಜೊತೆಯಾಗಿ ಜಯಘೋಷವನ್ನು ಹಾಕುತ್ತಾ. ದೇವಸ್ಥಾನದ ಒಳ ಆವರಣದಲ್ಲಿ ರಥವನ್ನು ಎಳೆದು ಸಂಭ್ರಮಿಸಿದರು. ಆಕರ್ಷಕ ಬೆಳ್ಳಿ ರಥ:ಬೆಂಗಳೂರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸೈಂಟ್ ಥಾಮಸ್ ಸಿಬಿಎಸ್ ಇ ಶಾಲೆಯ ಮುಕ್ತ ಸಭಾಂಗಣದಲ್ಲಿ ಶಾಲಾ ಪೋಷಕರ ಮಹಾಸಭೆ ಹಾಗೂ ದಿಕ್ಸೂಚಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಶೈಕ್ಷಣಿಕ ಉಪಪ್ರಾಂಶುಪಾಲರು ಹಾಗೂ ಹಿರಿಯ ಸಮಾಲೋಚಕರಾದ ಡಾ. ನಾಗರಾಜ್ ಎಸ್. (MD Ayu, PhD GAU) ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ “ಮಕ್ಕಳ ದೈಹಿಕ ಮತ್ತು ಭಾವನಾತ್ಮಕ ಪರಿಪಕ್ವತೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದ ಕುರಿತು ಪೋಷಕರಿಗೆ ವಿಶೇಷ ಮಾರ್ಗದರ್ಶನ ನೀಡಿದ ಡಾ. ನಾಗರಾಜ್ ಅವರು, “ಬದಲಾಗುತ್ತಿರುವ ಇಂದಿನ ಆಧುನಿಕ ಯುಗದಲ್ಲಿ ಮಕ್ಕಳನ್ನು ಕೇವಲ ಅಂಕಗಳಿಕೆಯ ಯಂತ್ರಗಳನ್ನಾಗಿ ಮಾಡದೆ, ಅವರ ಭಾವನೆಗಳನ್ನು ಅರ್ಥಮಾಡಿಕೊಂಡು ಸನ್ಮಾರ್ಗದಲ್ಲಿ ಮುನ್ನಡೆಸುವುದು ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ. ಮಕ್ಕಳ ದೈಹಿಕ ಬೆಳವಣಿಗೆಯಷ್ಟೇ ಅವರ ಮಾನಸಿಕ ಹಾಗೂ ಭಾವನಾತ್ಮಕ ಪರಿಪಕ್ವತೆಯೂ ಮುಖ್ಯ” ಎಂದು ತಿಳಿಸಿದರು. ಶಾಲೆಯ ಪ್ರಾಂಶುಪಾಲರಾದ ವಂದನೀಯ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ರಿ. ಪ್ರವರ್ತಿತ ಎಚ್.ಎಮ್.ಎಮ್., ವಿ.ಕೆ.ಆರ್.ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನ್ವಿತಾ ಎಸ್. ನಾಯಕ್ ಇ೦ಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ನ ನೂತನ ವಿಶ್ವದಾಖಲೆ ಪಡೆದಿದ್ದಾರೆ. ಕೇವಲ 7.22 ಸೆಕೆಂಡ್ಸ್ಗಳಲ್ಲಿ 200 ಬಲೂನ್ಗಳನ್ನು ಕಬ್ಬಿಣದ ಮೊಳೆಯಿ೦ದ ಒಡೆಯುವುದರ ಮೂಲಕ ಈ ಸಾಧನೆಗೈದು ವಿಶ್ವದಾಖಲೆ ಮಾಡಿದ್ದಾರೆ. ವಿಶ್ವದಾಖಲೆ ಮಾಡಿದ ವಿದ್ಯಾರ್ಥಿನಿಯನ್ನು ಶಾಲಾ ಸಂಚಾಲಕರಾದ ಬಿ.ಎಮ್. ಸುಕುಮಾರ ಶೆಟ್ಟಿ ಅವರು ಸಾಧಕರ ಸನ್ಮಾನ ಸಮಾರಂಭದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. ಕಾರ್ಯದರ್ಶಿಗಳಾದ ಕೆ. ಸೀತಾರಾಮ ನಕ್ಕತ್ತಾಯ, ಸಂಸ್ಥೆಯ ಉಪಪ್ರಾಂಶುಪಾಲೆ ಸುಭಾ ಕೆ. ಎನ್., ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರೌಢ ಶಾಲಾ ಶಿಕ್ಷಕರು ಹಾಗೂ ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಕಳೆದ ಮೇ. ತಿಂಗಳಿನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಗುಜ್ಜಾಡಿ ಗ್ರಾಮದ ಮಂಕಿಯ ಜಿ. ಗಣೇಶ ಪೈ ಅವರು ಉತ್ತೀರ್ಣರಾಗಿದ್ದಾರೆ. ಈತ ಗುಜ್ಜಾಡಿಯ ಜಿ. ದಾಮೋದರ ಪೈ ಹಾಗೂ ದಿವ್ಯ ಪೈ ದಂಪತಿಯ ಪುತ್ರ. ಆರ್ಟಿಕಲ್ ಶಿಪ್ನ್ನು ಕುಂದಾಪುರದ ಶಾನುಭೋಗ್ ಹೆಗ್ಡೆ ಮತ್ತು ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಪೂರೈಸಿದ್ದಾರೆ. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪಡೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ಆರಂಭದಲ್ಲಿ ಕೈಗೊಂಡ ಪರಿಸರದ ಕಾರ್ಯ ನಿತ್ಯ ನಿರಂತರವಾಗಿರುವುದು ದೊಡ್ಡ ಸಾಧನೆಯೇ ಸರಿ ಎಂದು ಉಡುಪಿ ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟತಟ್ಟು ಬಾರಿಕೆರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ ಇವರ ಸಹಯೋಗದೊಂದಿಗೆ 306ನೇ ಭಾನುವಾರದ ಪರಿಸರಸ್ನೇಹಿ ಹಸಿರು ಹೆಜ್ಜೆ ಶೀರ್ಷಿಕೆಯಡಿ ಪಂಚವರ್ಣ ಸಂಘದ ಸದಸ್ಯರಾದ ವಸಂತಿ, ಅಕ್ಷತಾ ಇವರ ಹುಟ್ಟುಹಬ್ಬದ ಪ್ರಯುಕ್ತ ಗಿಡ ಹಸ್ತಾಂತರಿಸಿ ಮಾತನಾಡಿದರು. ಯಾವುದೇ ಸಂಘಟನೆ ಇರಲಿ ಅದರ ನಿರಂತರ ಚಟುವಟಿಕೆ ಆ ಸಂಸ್ಥೆಯ ಕ್ರಿಯಾಶೀಲತೆಯನ್ನು ತೋರ್ಪಡಿಸುತ್ತದೆ,ಪಕೃತಿಗಾಗಿ ತುಡಿತ ಹೊಂದಿದ ಈ ಸಂಸ್ಥೆಯ ವಿನೂತ ಕಾರ್ಯಕ್ರಮಗಳು ಜನಮನ್ನಣೆಯನ್ನು ಗಳಿಸಿದೆ ಎಂದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ಥಳೀಯ ಹಲವಾರು ಮನೆಗಳಲ್ಲಿ ವಿವಿಧ ತಳಿಯ ಗಿಡಗಳನ್ನು ನೆಟ್ಟು ಅದರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪಂಚವರ್ಣದ ಸದಸ್ಯರಾದ ವಸಂತಿ ಹಾಗೂ ಅಕ್ಷತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ನಿವೃತ್ತ ಪೊಲೀಸ್ ಅಧಿಕಾರಿ ಆನಂದ ಶೆಟ್ಟಿ ಅವರು ಸ್ವಂತ ಖರ್ಚಿನಲ್ಲಿ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ ಸಂಗೀತಾ ಮತ್ತು ಶ್ವೇತಾ ಹಾಗೂ ಆಂಗ್ಲ ಮಾಧ್ಯಮದ ಅನುದೀಪ ಮತ್ತು ಪ್ರತೀಕ್ಷಾ ಅವರನ್ನು ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು. ನಂತರ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ಚಿಂತನೆಯನ್ನು ಮಾಡಿ ಉತ್ತಮ ವಿದ್ಯಾಭ್ಯಾಸವನ್ನು ಪಡೆದು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬಾಳಬೇಕು ಎಂದರು. ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಸುಚಿತ್ರಾ ಅವರು ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕರಾದ ರಮೇಶ್ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಸುಧಾ ವಂದಿಸಿದರು.
