ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.10: ಇಲ್ಲಿನ ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಆಡಳಿತ, ತಾ.ಪಂ. ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಅವರ 168ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ಕೆಲವೊಂದು ಅನಿಷ್ಟ ಪದ್ಧತಿಗಳು ತಾಂಡವವಾಡುತ್ತಿದ್ದಾಗ ಶ್ರೀ ನಾರಾಯಣ ಗುರುಗಳು ಜನಿಸಿ ಬಂದು ಜಾತಿ ವೈಷಮ್ಯ ಎಂಬ ಅಜ್ಞಾನವನ್ನು ತೊಡೆದು ಹಾಕಿ ಶಿಕ್ಷಣದ ಮೂಲಕ ಸಾಮಾಜಿಕ ಕ್ರಾಂತಿಯನ್ನು, ಶೋಷಿತ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಸಮಾನತೆಯನ್ನು ದೊರಕಿಸಿಕೊಟ್ಟ ಮಹಾನ್ ಸಂತರು. ಮಾತ್ರವಲ್ಲದೆ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದರು. ಕುಂದಾಪುರ ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಕೋರಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೆಕರ್, ಬಿಲ್ಲವ ಮುಖಂಡರಾದ ಮಂಜು ಬಿಲ್ಲವ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಹಶೀಲ್ದಾರರ ಕಛೇರಿ ಬೈಂದೂರಿನಲ್ಲಿ 168ನೇ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪತಹಶೀಲ್ದಾರ ಭೀಮಪ್ಪ ಬಿಲ್ಲಾರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗಣೇಶ ಪೂಜಾರಿ, ಬಿಲ್ಲವ ಸಂಘದ ಮುಖಂಡರಾದ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ವಾಸುದೇವ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ದೊಟ್ಟಯ್ಯ ಪೂಜಾರಿ, ಕುಂದಾಪುರ ಸಹಾಯಕ ಕಮಿಷನರ್ ಇಲಾಖೆಯ ಸಿಬ್ಬಂದಿ ಮಂಜುನಾಥ ಬಿಲ್ಲವ, ಬೈಂದೂರು ಬಿಲ್ಲವ ಸಂಘದ ಮುಖಂಡರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಇದನ್ನೂ ಓದಿ:► ಕುಂದಾಪುರ: ತಾಲೂಕು ಆಡಳಿತದಿಂದ ಗುರು ಅವರ 168ನೇ ಜಯಂತಿ ಆಚರಣೆ – https://kundapraa.com/?p=62019 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶ್ರೀಕಾಂತ್ ಎಸ್. ಹೆಗ್ಡೆ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ತೀರ್ಥಹಳ್ಳಿಯವರಾದ ಶ್ರೀಕಾಂತ್ ಅವರು, ಈ ಹಿಂದೆ ಹೊಸನಗರ ತಾಲೂಕು ಪಂಚಾಯತಿಯಲ್ಲಿ ಉಪ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಬಳಿಕ ಗ್ರೇಡ್-2 ತಹಶೀಲ್ದಾರರಾಗಿ ಭಡ್ತಿ ಹೊಂದಿದ್ದರು. ಈ ಮೊದಲು ತಹಶಿಲ್ದಾರರಾಗಿದ್ದ ಶೋಭಾಲಕ್ಷ್ಮೀ ಹೆಚ್. ಎಸ್. ಅವರ ವರ್ಗಾವಣೆಯ ಬಳಿಕ ತೆರವಾದ ಸ್ಥಾನಕ್ಕೆ ಶ್ರೀಕಾಂತ್ ಎಸ್ ಅವರು ನೇಮಕಗೊಂಡಿದ್ದಾರೆ. ಈ ನಡುವೆ ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ ಬೈಂದೂರು ತಾಲೂಕಿನ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿನ ಸ್ವಾತಂತ್ರ್ಯ ಅಮೃತಮಹೋತ್ಸವ ವನದಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧೀಯ ಸಸ್ಯಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ, ಬೈಂದೂರು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಭಾನುಮತಿ ಬಿ. ಕೆ., ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷರಾದ ಪ್ರಸಾದ್, ಇನ್ನರ್ ವೀಲ್ ಕ್ಲಬ್ ಬೈಂದೂರಿನ ಪದಾಧಿಕಾರಿಗಳಾದ ಸುಜಾತಾ ರವಿರಾಜ್, ಶಾರದಾ ನಾರಾಯಣ, ರಾಜೀವಿ ಗೋವಿಂದ ಮತ್ತು ಗುಲಾಬಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ಣಾಟಕ ಬ್ಯಾಂಕ್ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು ಎಲ್ಲರ ಜೀವನಕ್ಕೆ ಸ್ಪೂರ್ತಿಯಾಗಿರುವ ಉತ್ತಮ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರಂತರವಾಗಿ ಸಹಕಾರ ನೀಡುತ್ತಾ ಬಂದಿದೆ. ಅದರಲ್ಲೂ ಯುವ ಜನಾಂಗ ಶಿಕ್ಷಣ, ವೃತ್ತಿಯ ಒತ್ತಡದಲ್ಲೂ ಸಾಹಿತ್ಯ ಸಂಗೀತದಂತಹ ಉತ್ತಮ ಚಟುವಟಿಕೆಯ ಬಗ್ಗೆ ಆಸಕ್ತಿ ತೋರುವಾಗ ಸಂತೋಷವಾಗುತ್ತದೆ ಎಂದು ಕರ್ಣಾಟಕ ಬ್ಯಾಂಕಿನ ಸಿಒಒ ವೈ. ವಿ. ಬಾಲಚಂದ್ರ ಅವರು ಹೇಳಿದರು. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಕುಂಭಾಸಿ ರಾಧಾಬಾಯಿ ವೆಂಕಟರಮಣ ಪ್ರಭು ರಂಗ ಮಂದಿರ, ರಂಗ ಅಧ್ಯಯನ ಕೇಂದ್ರದಲ್ಲಿ ಏರ್ಪಡಿಸಿದ ಹಿಂದುಸ್ತಾನಿ ಯುವ ಸಂಗೀತೋತ್ಸವ ‘ಅಮೃತ ಭಾರತಿಗೆ ಸಂಗೀತದಾರತಿ’ ಸಮಾರಂಭದಲ್ಲಿ ಯುವ ಸಂಗೀತ ಕಲಾವಿದರನ್ನು ಗೌರವಿಸುತ್ತಾ ಅವರು ಮಾತನಾಡಿ ಕುಂದಾಪುರದಲ್ಲಿ ಸಂಗೀತ ಭಾರತಿ ಟ್ರಸ್ಟ್ ರಿ., ಚಿರಂತನ ಚಾರಿಟೆಬಲ್ ಟ್ರಸ್ಟ್ ರಿ. ಸುರತ್ಕಲ್ ಸಂಯುಕ್ತ ಆಶ್ರಯದಲ್ಲಿ ಹದಿಮೂರು ಮಂದಿ ಯುವ ಕಲಾವಿದರು ತಮ್ಮ ಸಂಗೀತ ಹಾಗೂ ಸಂಗೀತ ವಾದನಗಳ ಪ್ರತಿಭೆ ತೋರಿಸಲು ಅವಕಾಶ ನೀಡಿರುವುದು ಬಹಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.09: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.09: ಹೆರಿಕುದ್ರು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಸಾಯೀಶ್ ಶೆಟ್ಟಿ (17) ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದ ಪೆಟ್ರೋಲ್ ಬಂಕ್ ಹಿಂಭಾಗ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ವಿದ್ಯಾರ್ಥಿ, ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಗುರುವಾರ ಮಧ್ಯಾಹ್ನ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಸಂಜೆಯ ತನಕವೂ ಮುಳುಗು ತಜ್ಞರು ಹಾಗೂ ಸ್ಥಳೀಯರು ವಿದ್ಯಾರ್ಥಿಯ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರೂ ನೀರಿನ ಹರಿವು ಹೆಚ್ಚಿದ್ದರಿಂದ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇಂದು ಸುಮಾರು 22 ಕಿ.ಮೀ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಸಮುದ್ರ ತೀರದಲ್ಲಿದ್ದ ಮೃತದೇಹವನ್ನು ಸ್ಥಳೀಯ ಯುವಕರು ತಕ್ಷಣ ಪತ್ತೆಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಇದನ್ನೂ ಓದಿ:► ನೀಟ್ನಲ್ಲಿ ಕಡಿಮೆ ಅಂಕ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – https://kundapraa.com/?p=61968 . ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ 2021-22ನೇ ಸಾಲಿನಲ್ಲಿ ಮಧ್ಯಮ ವರ್ಗದ ಉತ್ತಮ ಹಾಲು ಉತ್ಪಾದನೆಯ ಸಾಧನೆ ಮಾಡಿ, ಮಧ್ಯಮ ವರ್ಗದ ಹೈನುಗಾರಿಕೆ ಪ್ರಸಸ್ತಿ ಪುರಸ್ಕೃತೆ ಹಕ್ಲಾಡಿ ಗ್ರಾಮ ಸಂತೆಗದ್ದೆ ನಿವಾಸಿ ಸುಜಾತಾ ಸಂತೋಷ ಪೂಜಾರಿ ಅವರನ್ನು ಇತ್ತಿಚಿಗೆ ನಡೆದ ಮಹಾಸಭೆಯಲ್ಲಿ ಒಕ್ಕೂಟ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ ಸನ್ಮಾನಿಸಿದರು. ಉಪಾಧ್ಯಕ್ಷ ಜಯರಾಮ ರೈ, ಒಕ್ಕೂಟ ಎಂಡಿ ಡಿ.ಅಶೋಕ್, ನಿಕಟಪೂರ್ವ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಬೋಳಾ ಸದಾಶಿವ ಶೆಟ್ಟಿ, ನರಸಿಂಹ ನಾಯಕ್, ಸುಧಾಕರ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಸ್ಮಿತಾ ಆರ್.ಶೆಟ್ಟಿ, ಸುಭದ್ರಾ ರಾವ್ ಇದ್ದರು. ಸುಜಾತಾ ಎಸ್. ಪೂಜಾರಿ ಹಕ್ಲಾಡಿ ಹಾಲು ಉತ್ಪಾದಕರ ಸೊಸೈಟಿ ಸದಸ್ಯೆ ಆಗಿದ್ದು, ಕಳೆದ ನಾಲ್ಕು ವರ್ಷದಿಂದ ಪ್ರತಿದಿನ ೪೦ ಲೀಟರ್ ಹಾಲು ಡೇರಿಗೆ ಹಾಕುತ್ತಿದ್ದಾರೆ. ಹಕ್ಲಾಡಿ ಡೇರಿ ವಾರ್ಷಿಕ ಮಹಾಸಭೆಯಲ್ಲಿ ಸಂಘ ಅಧ್ಯಕ್ಷ ಬಾಳೆಮನೆ ಸಂತೋಷ ಕುಮಾರ್ ಶೆಟ್ಟಿ ಹಕ್ಲಾಡಿ ಸನ್ಮಾನಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.08: ಜಿಲ್ಲೆಯಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ವೈಯಕ್ತಿಕ ನಷ್ಠದ ಪ್ರಮಾಣವು ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಅವರು ತಿಳಿಸಿದರು. ಅವರು ಜಿಲ್ಲೆಯಲ್ಲಿ ಮಳೆಹಾನಿ ಪರಿಸ್ಥಿತಿಯ ಅಧ್ಯಯನಕ್ಕೆ ಆಗಮಿಸಿ, ಉಡುಪಿ ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಡಳಿತದಿಂದ ನಷ್ಠದ ಅಂಕಿ ಅಂಶಗಳ ವಿವರಗಳನ್ನು ಪಡೆದು ಮಾತನಾಡಿದರು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಮತ್ತಿತರ ಬೆಳೆ ವಿಮೆಗೆ ಸರ್ಕಾರವು ಪ್ರೀಮಿಯಂ ಹಣವನ್ನು ಶೇ.98 ರಷ್ಟು ತುಂಬುತ್ತಿದ್ದು, ಬಾಕಿ ಉಳಿದ ಶೇ. 2 ರಷ್ಟು ಹಣವನ್ನು ರೈತರು ಪಾವತಿಸಿದ್ದಲ್ಲಿ ರೈತರು ತಮಗಾದ ಬೆಳೆ ನಷ್ಠ ಪರಿಹಾರವನ್ನು ಪಡೆಯಬಹುದು. ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸುವಂತೆ ಸೂಚಿಸಿದರು. ಮೀನುಗಾರಿಕೆಗೆ ತೆರಳುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯಲ್ಲಿ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಸಾಯೀಶ್ ಶೆಟ್ಟಿ ಶಿವಮೊಗ್ಗದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ನಿರೀಕ್ಷೆ ಹೊಂದಿದ್ದ. ಆದರೆ ಫಲಿತಾಂಶದಲ್ಲಿ ತೀರಾ ಕಡಿಮೆ ಅಂಕ ಬಂದಿರುವುದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಮಧ್ಯಾಹ್ನದ ವೇಳೆಗೆ ಸೈಕಲ್ಲಿನಲ್ಲಿ ಸೇತುವೆ ಬಳಿ ಬಂದ ಸಾಯೀಶ್, ಸೈಕಲ್ ಹಾಗೂ ಮೊಬೈಲನ್ನು ಸೇತುವೆ ಬದಿಯಲ್ಲಿ ಇಡುತ್ತಿದ್ದಾಗ ಸ್ಥಳೀಯರು ಕೆಲವರು ನೋಡಿದ್ದಾರೆ. ನೋಡ ನೋಡುತ್ತಿದ್ದಂತೆ ನದಿಗೆ ಹಾರಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ತಿಳಿದು ಕುಂದಾಪುರ ಪೊಲೀಸರು, ಮುಳುಗು ತಜ್ಞರು ಹಾಗೂ ಸ್ಥಳೀಯರು ವಿದ್ಯಾರ್ಥಿಯ ಮೃತದೇಹಕ್ಕಾಗಿ ಹುಡುಕಾಟ…
