ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ (ನಖರೇಶ್ವರ) ದೇವಸ್ಥಾನದ “ಶೈವ ಪಂಥದ ಕಂಚಿನ ಕಂಬದಲ್ಲಿ ಶಾಸನ ಪತ್ತೆಯಾಗಿದೆ. ದೇವಸ್ಥಾನದ ಹೊರ ಸುತ್ತಿನ ಎದುರು ಭಾಗದಲ್ಲಿ ಕ್ರಿ.ಶ 15-16ನೇ ಶತಮಾನದ ಅಂದರೆ ಸರಿಸುಮಾರು 500 ವಷ೯ಗಳ ಹಳೆಯದಾದ ಕಂಚಿನ ಕಂಬದಲ್ಲಿ ಶಾಸನ ಪತ್ತೆಯಾಗಿದೆ. ಬಸ್ರೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ (ನಖರೇಶ್ವರ) ಶಾಸನದ ಪಠ್ಯದಲ್ಲಿ ಈ ಕೆಳಗಿನಂತೆ ನಮೂದಿಸಲಾಗಿದೆ. ೧ ವಿನಾಯಕ ದೆವರ!೨.ಕಂಚಿನ ಕಂಬ ೧ಕ್ಕೆ!೩.ನಗ ೪೪ ಕೇ ಅಶಲು!೪.೯೨ರಕ್ಕೂ ೪ ಒಂದು ಕಂಚಿನ ಕಂಬ ನಗ (ಹಣ)44 ಅಸಲು ನೊಂದಿಗೆ 92 ಸೇರು ಅಂದರೆ 85.84 ಕೆ.ಜಿ ಕಂಚುಗಳನ್ನು ಬಳಕೆ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಕಂಬದ ಮೊದಲ ಪಟ್ಟಿಕೆ ಅಂದರೆ ಕೆಳಭಾಗದಲ್ಲಿ ಕೂಮ೯ ಅವತಾರದಲ್ಲಿ(ಆಮೆಯ ಅವತಾರದಲ್ಲಿ)ತನ್ನೆಲ್ಲಾ ಭಾರವನ್ನು ಹೊತ್ತುಕೊಂಡ ಕಲಾಕೃತಿ ಇದೆ. ಕೂಮ೯ ಅವತಾರದ ಮೇಲು ಭಾಗದ ಶಾಸನ ನಾಲ್ಕು ಸಾಲಿನಲ್ಲಿ(ಬರವಣಿಗೆ) ಪತ್ತೆಯಾಗಿದ್ದು, ಆಮೆಯ ಮೇಲ್ಭಾಗದಲ್ಲಿ ಗಜ (ಆನೆ) ಕಂಬವನ್ನು ಹೊತ್ತುಕೊಂಡಕ್ಕೆ ಕಲಾಕೃತಿ ಮೂಡಿಸಲಾಗಿದ್ದು ವಿಶೇಷತೆಯಿಂದ ಕೂಡಿದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.19: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೈತ್ರೇಯಿ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡಿದ್ದಾಳೆ. ಗಣಿತ ರಸಾಯನಶಾಸ್ತ್ರ ಮತ್ತು ಸಂಸ್ಕೃತ ವಿಷಯಗಳಲ್ಲಿ 100 ಅಂಕ ಗಳಿಸಿರುತ್ತಾರೆ. ಮೈತ್ರೇಯಿ ಶಿರೂರಿನ ಶಿಕ್ಷಕ ದಂಪತಿಗಳಾದ ಮಂಜುನಾಥ ಶಿರೂರು ಮತ್ತು ಶಶಿಕಲಾ ಅವರ ಪುತ್ರಿಯಾಗಿದ್ದಾರೆ. ಇದನ್ನೂ ಓದಿ ► ದ್ವಿತೀಯ ಪಿಯುಸಿ ಫಲಿತಾಂಶ: ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ – https://kundapraa.com/?p=59942 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಯ ಮತ್ತು ಅವಕಾಶಗಳು ಎಲ್ಲರಿಗೂ ಸಿಗುತ್ತದೆ. ಅವುಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳುವ ಜಾಣ್ಮೆ ನಮ್ಮಲ್ಲಿರಬೇಕು ಎಂದು ಶಿಕ್ಷಣ ಪ್ರೇಮಿ ರಘುರಾಮ ಉಡುಪ ಹೇಳಿದರು. ಅವರು ಕೋಟೆಶ್ವರ ಪಬ್ಲಿಕ್ ಸ್ಕೂಲ್ 2001-02ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಂಗಮ ತಂಡದಿಂದ ನೀಡಲಾಗುತ್ತಿರುವ ಹತ್ತನೇ ವರ್ಷದ ಪ್ರೋತ್ಸಾಹ ಧನ ಒಟ್ಟು ರೂ.22,000ವನ್ನು ಪ್ರೌಢ ಶಾಲಾ ವಿಭಾಗದ ಪ್ರತಿಭ್ವಾನಿತ ವಿದ್ಯಾರ್ಥಿಗಳಿಗೆ ಶಾಲಾ ಸಭಾಂಗಣದಲ್ಲಿ ಶುಕ್ರವಾರ ವಿತರಿಸಿ ಶುಭಹಾರೈಸಿದರು. ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಪ್ರೇಮಿ ಪ್ರಕಾಶ ಎರ್ಮಾಳ್, ಸ್ನೇಹ ಸಂಗಮದ ಮುಖ್ಯಸ್ಥ ಗಿರೀಶ್ ಪೂಜಾರಿ ಅರಸರಬೆಟ್ಟು, ಸದಸ್ಯರಾದ ಸಂತೋಷ ಬಳ್ಕೂರು, ರಾಘವೇಂದ್ರ ಎಸ್. ಬೀಜಾಡಿ ಉಪಸ್ಥಿತರಿದ್ದರು. ಹಿಂದಿ ಶಿಕ್ಷಕಿ ಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಸ್ನೇಹ ಸಂಗಮ ಸದಸ್ಯರಾದ ರವಿ ದೇವಾಡಿಗ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಯೋಗಿಶ್ ದೇವಾಡಿಗ ದೋಡ್ಡೂಣಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.19: ಕೃಷಿ ವಲಯದಲ್ಲಿ ಇವತ್ತು ಸಾಕಷ್ಟು ಬದಲಾವಣೆಗಳು ಆಗಿವೆ. ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ, ಸವಲತ್ತುಗಳನ್ನು ಒದಗಿಸುವ ಕೆಲಸವೂ ನಡೆಯುತ್ತಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ. ಇವತ್ತು ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ವಿದ್ಯಾರ್ಥಿದಿಸೆಯಿಂದಲೇ ಆಗಬೇಕಾದ ಅನಿವಾರ್ಯತೆಯಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಅಂಪಾರು ವಿದ್ಯಾದಾಯಿನಿ ಸಭಾಭವನದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೆರವಿನೊಂದಿಗೆ ಕೃಷಿ, ತೋಟಗಾರಿಕೆ, ಜಲಾನಯನ ಮತ್ತು ಅಟಲ್ ಇನ್ಕ್ಯೂಬೇಷನ್ ಸೆಂಟರ್ ನಿಟ್ಟೆ ಇವರ ಸಹಕಾರದಲ್ಲಿ ಆರಂಭಗೊಂಡ ವಂಡ್ಸೆ ಹೋಬಳಿಯ ‘ಕುಂದನಾಡು ರೈತ ಉತ್ಪಾದಕರ ಕಂಪೆನಿ’ ಉದ್ಘಾಟಿಸಿ ಮಾತನಾಡಿದರು. ಕುಂದನಾಡು ರೈತ ಉತ್ಪಾದಕ ಕಂಪೆನಿಯ ಷೇರುಪತ್ರವನ್ನು ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ವಿತರಿಸಿದರು. ರಾಜ್ಯ ವಿಧಾನ ಪರಿಷತ್ತಿನ ಮಾಜಿ ಸಬಾಪತಿ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾಂತ್ರೀಕೃತ ಕೃಷಿಗೆ ಹೆಚ್ಚಿನ ಉತ್ತೇಜನ ಸಿಗಬೇಕು. ಇವತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂಟು ವರ್ಷದ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಭಾನುವಾರ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ವಿಕಾಸ ತೀರ್ಥ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ನರೆಂದ್ರ ಮೋದಿ ಆಡಳಿತದ ಎಂಟು ವರ್ಷಗಳಲ್ಲಿ ಆದ ಅಭಿವೃದ್ದಿ ಹಾಗೂ ದೇಶ ರಕ್ಷಣೆಯಲ್ಲಿ ತೋರಿದ ಉತ್ಸಾಹ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ತಂದಿರುವ ಅನೇಕ ಸುಧಾರಣೆಗಳೂ ಸೇರಿದಂತೆ ಒಟ್ಟಾರೆಯ ಅಭಿವೃದ್ದಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವೇಗದ ಆಡಳಿತ ಅತ್ಯಂತ ಖುಷಿ ನೀಡಿದೆ ಎಂದರು. ಪ್ರಧಾನಿ ನರೆಂದ್ರ ಮೋದಿ ಆಡಳಿತದ ಕೇಂದ್ರ ಬಿಜೆಪಿ ಸರ್ಕಾರದ ಜನಪರ ಆಡಳಿತವನ್ನು ಸಹಿಸಲಾಗದ ವಿಪಕ್ಷಗಳು ಇಲ್ಲಸಲ್ಲದ ಆರೋಪ ಹೊರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಒಂದು ರಾಜಕೀಯ ಪಕ್ಷವಾಗಿ ಸಮರ್ಥ ಆಡಳಿತ ವ್ಯವಸ್ಥೆಯೊಂದಿಗೆ ಸಾಮಾನ್ಯ ಜನರಿಗೆ ಆಡಳಿತದ ಒಟ್ಟು ಮಾಹಿತಿಯನ್ನು ಕೊಡುವಂತಹ ಈ ವಿಕಾಸ ತೀರ್ಥ ಯಾತ್ರೆ ಅತ್ಯಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜು 98.27% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 1911 ವಿದ್ಯಾರ್ಥಿಗಳಲ್ಲಿ 1878 ವಿದ್ಯಾರ್ಥಿಗಳು ಉತ್ತೀರ್ಣರಾಗಿ, 32 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ಸ್ಥಾನಗಳನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮೆರೆಯುವಂತೆ ಮಾಡಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀಕೃಷ್ಣ ಪೆಜತ್ತಾಯ ಪಿ ಎಸ್ 597 ಅಂಕಗಳೊAದಿಗೆ ಹಾಗೂ ವಾಣಿಜ್ಯ ವಿಭಾಗದಲ್ಲಿ ಸಮರ್ಥ್ ವಿಶ್ವನಾಥ್ ಜೋಶಿ 595 ಅಂಕಗಳೊAದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದರೆ, ವಾಣಿಜ್ಯ ವಿಭಾಗದಲ್ಲಿ 2 ವಿದ್ಯಾರ್ಥಿಗಳು 3ನೇ ಸ್ಥಾನ ಪಡೆದಿದ್ದಾರೆ. 33 ವಿದ್ಯಾರ್ಥಿಗಳು 98% ಕ್ಕಿಂತಲೂ ಅಧಿಕ ಫಲಿತಾಂಶ ಪಡೆದಿದ್ದು, 322 ವಿದ್ಯಾರ್ಥಿಗಳು 95% ಕ್ಕಿಂತಲೂ ಅಧಿಕ, 870 ವಿದ್ಯಾರ್ಥಿಗಳು 90%ಕ್ಕಿಂತಲೂ ಅಧಿಕ, 1209 ವಿದ್ಯಾರ್ಥಿಗಳು 85% ಕ್ಕಿಂತ ಅಧಿಕ ಹಾಗೂ 611 ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.19: ಕೊಯಿಮುತ್ತೂರಿನಲ್ಲಿ ಜರುಗಿದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನ ವಿವಿಧ ವಿಭಾಗಗಳಲ್ಲಿ ಕುಂದಾಪುರದ ಸತೀಶ್ ಖಾರ್ವಿ ಅವರು 2 ಚಿನ್ನ ಹಾಗೂ 2 ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಸತೀಶ್ ಖಾರ್ವಿ ಅವರು 2019ರಲ್ಲಿ ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ 3 ಚಿನ್ನ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದಿದ್ದರು. ಇತ್ತಿಚಿಗಷ್ಟೇ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅವರು ಈತನಕ ಹಲವರು ರಾಜ್ಯ, ರಾಷ್ಟಮಟ್ಟದ ಪವರ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಸ್ವರ್ಧೆಗಳಲ್ಲಿ ಭಾಗವಹಿಸಿ ಹತ್ತಾರು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: ► ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್ಶಿಪ್ನಲ್ಲಿ ಸೌಮ್ಯಗೆ ಕಂಚು – https://kundapraa.com/?p=59975 . ಕುಂದಾಪುರದಲ್ಲಿ ಹರ್ಕೂಲಸ್ ಜಿಮ್ನ ವ್ಯವಸ್ಥಾಪಕರಾಗಿರುವ ಸತೀಶ್ ಖಾರ್ವಿ ಅವರು ಜೀಮ್ ತರಬೇತುದಾರರಾಗಿದ್ದಾರೆ. ಪ್ರಸ್ತುತ ವರ್ಷದಲ್ಲಿ ನ್ಯೂಜಿಲಾಂಡಿನಲ್ಲಿ ಜರುಗಲಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಆರ್. ಎನ್. ಶೆಟ್ಟಿ ಪಿಯು ಕಾಲೇಜಿನ ಕಾಮರ್ಸ್ ವಿದ್ಯಾರ್ಥಿನಿ ಅನೀಕ್ಷಾ ಪೂಜಾರಿ 600ರಲ್ಲಿ 585 ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಅನೀಕ್ಷಾ ಪೂಜಾರಿ ಕೋಡಿ ಐಗಳ ಮನೆ ದಿ. ಅಣ್ಣಪ್ಪ ಪೂಜಾರಿ ಹಾಗೂ ಸರೋಜಾ ಪೂಜಾರಿ ಅವರ ಪುತ್ರಿಯಾಗಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೈಸೂರಿನ ಎನ್.ಐ.ಇ ಕಾಲೇಜು ಆಡಿಟೋರಿಯಂನಲ್ಲಿ ಇತ್ತಿಚಿಗೆ ಜರುಗಿದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ – 22ರ ಜ್ಯೂನಿಯರ್ ವಿಭಾಗದಲ್ಲಿ ಸೌಮ್ಯ ಬಿ. ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದಿದ್ದಾಳೆ. ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್ಶಿಪ್ನಲ್ಲಿ 63 ಕೆ.ಜಿ ಭಾರವನ್ನು ಎತ್ತುವ ಮೂಲಕ ಸೌಮ್ಯ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾಳೆ. ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುವೈತ್: ಸಂಘಟಕ, ರಕ್ತದಾನಿ ಸುರೇಶ್ ಶ್ಯಾಮ್ ರಾವ್ ಅವರು ದಾಖಲೆ ಪ್ರಮಾಣದಲ್ಲಿ ರಕ್ತದಾನ ಮಾಡಿರುವುದನ್ನು ಗುರುತಿಸಿ ವಿಶ್ವ ರಕ್ತದಾನಿಗಳ ದಿನದಂದು ನಡೆದ ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ರಾಯಭಾರಿ ಸಿಬಿ ಜಾರ್ಜ್ ಅವರು ಸುರೇಶ್ ಅವರಿಗೆ ಗೌರವಿಸಿದರು. ಕುವೈತ್ ದೇಶದಲ್ಲಿ ಕಳೆದ 20 ವರ್ಷಗಳಿಂದ ಉದ್ಯೋಗದಲ್ಲಿರುವ ಸುರೇಶ್ ಶ್ಯಾಮ್ ರಾವ್ ಅವರು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. ಕುವೈತ್ ನಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ, ಕುವೈತ್ನಲ್ಲಿ ಕನ್ನಡ ಚಲನಚಿತ್ರ ವಿತರಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
