ಕುಂದಾಪ್ರ ಡಾಟ್ ಕಾಂ ಸುಸದ್ದಿ.ಬೈಂದೂರು: ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಸಂಘ ಕೊಯಾನಗರ ಘಟಕದ ಸವ೯ಸದಸ್ಯರ ಸಭೆಯು ಸ್ಥಳೀಯ ಮೆಸ್ಕಾಂ ಕಚೇರಿ ಬಳಿ ಜರಗಿತು. ಕಾಮಿ೯ಕ ಸಂಘದ ರಾಜ್ಯ ಸಮಿತಿ ಸದಸ್ಯರಾದ ಕಾರ್ಮಿಕ ಮುಖಂಡ ರೊನಾಲ್ಡ್ ರಾಜೇಶ್ ಕ್ವಾಡ್ರಸ್ಕಾರ್ಮಿಕ ಇಲಾಖೆಯಿಂದ ಕೊಡಮಾಡಿದ ಸುರಕ್ಷಾ ಕಿಟ್ ಮತ್ತು ಪ್ರತಿರಕ್ಷಣಾ ಕಿಟ್ ಗಳನ್ನು ಕಾರ್ಮಿಕರಿಗೆ ವಿತರಿಸಿದರು, ಕಿಟ್ ವಿತರಿಸಿ ಮಾತನಾಡಿದಕಾರ್ಮಿಕ ಮುಖಂಡ ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಕಾರ್ಮಿಕ ಸಂಘದ ಮೂಲಕವೇ ಅಹಾರ ಕಿಟ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಮಾಡಿದ ಹೋರಾಟದ ಫಲವಾಗಿ ಇಂದು ನಮ್ಮ ಸಂಘಟನೆಯಿಂದ ಈ ಕಿಟ್ ಗಳನ್ನು ವಿತರಿಸಲು ಸಾಧ್ಯವಾಯಿತು. ಇದು ನಮ್ಮ ಸಂಘಟಿತ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು. ಕಾಕಾರ್ಮಿಕ ಮುಖಂಡ ವೆಂಕಟೇಶ್ ಕೋಣಿ ಮಾತನಾಡಿ, ಇತ್ತೀಚೆಗೆ ಜರಗಿದ ‘ಕಾಮಿ೯ಕ ಅದಾಲತ್’ ಸಭೆಯಲ್ಲಿ ಸಲ್ಲಿಸಿದ ಕಾರ್ಮಿಕರ ವಿವಿಧ ಸೌಲಭ್ಯಗಳ ಬಾಕಿ ನಿಂತಿರುವ ಅಜಿ೯ಗಳಿಗೆ ಈ ಕೂಡಲೆ ಹಣ ಬಿಡುಗಡೆ ಮಾಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ರೋಟರಿ ಕ್ಲಬ್ನಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮದಡಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಸುಭಾಸ್ ಶೆಟ್ಟಿ ಕೊಡ್ಲಾಡಿ ಮಾತನಾಡಿ, ಶಿಕ್ಷಕರು ಒಂದು ರಾಷ್ಟ್ರದಲ್ಲಿ ಅಲ್ಲಿನ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳ ಮೂಲಕ ಭವಿಷ್ಯಕ್ಕೆ ಕೊಂಡೊಯ್ಯುವ ರಾಯಭಾರಿಗಳು ಎಂದರು. ನಿವೃತ್ತ ಶಿಕ್ಷಕರಾದ ನರಸಿಂಹ ನಾಯಕ್ ಮೂಡುಬಗೆ, ನಿವೃತ್ತ ಮುಖ್ಯೋಪಾಧ್ಯಾಯರಾದ ನರಸಿಂಹ ನಾಯಕ್ ಮೂಡುಬಗೆ, ಜ್ಞಾನಸುಧಾ ಪದವಿಪೂರ್ವ ಕಾಲೇಜ್ ಕಾರ್ಕಳ ಇಲ್ಲಿನ ಉಪನ್ಯಾಸಕ ಎಂ. ರವಿ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಅಂಪಾರು ರೋಟರಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ವಹಿಸಿದ್ದರು. ರೋಟರಿ 3182 ವಲಯ 2ರ ಅಸಿಸ್ಟೆಂಟ್ ಗವರ್ನರ್ ಧನಂಜಯ ಪ್ರಭು ಉಪಸ್ಥಿತರಿದ್ದರು. ಆನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭುಜಂಗ ಶೆಟ್ಟಿ ಉಪಸ್ಥಿತರಿದ್ದರು. ಎಂ.ಎನ್ ಸಿಂಹ ಪ್ರಾರ್ಥಿಸಿದರು. ಕಾರ್ಯದರ್ಶಿ ಗುರುರಾಜ್ ಶೆಟ್ಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಎಸ್ಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ಬೈಂದೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೈಂದೂರು ಕ್ಷೇತ್ರದಲ್ಲಿ ಎಸ್ ಸಿ ಮೋರ್ಚಾ ಬಲಿಷ್ಠವಾಗುತ್ತದೆ ಇನ್ನು ಬಲಿಷ್ಠವಾಗಿ ನಾವೆಲ್ಲರೂ ಸೇರಿ ಪಕ್ಷವನ್ನು ಬೆಳೆಸೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಚಂದ್ರ ಪಂಚವಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುರೇಶ್ ನಾಯಕ್ ಕುಯಿಲಾಡಿ, ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಆನಂದ್ ಖಾರ್ವಿ, ಎಸ್ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಗೋಪಾಲ ಕಳಂಜೆ, ಉಪಾಧ್ಯಕ್ಷರಾದ ನಾರಾಯಣ ಗುಜ್ಜಾಡಿ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಸದಾನಂದ ಕೈಪುಂಜಾಲು, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿಶ್ವ ಹಸಿರು ಕಟ್ಟಡ ಸಪ್ತಾಹದ ಅಂಗವಾಗಿ ಕೋಡಿ ಕಡಲತೀರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಮುಖ್ಯ ಅತಿಥಿಯಾಗಿ ಮಾತನಾಡಿ ಇವತ್ತಿನ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳೆಂದರೆ ಮಕ್ಕಳು, ಅವರು ಕೈಗೊಂಡ ಈ ಕೆಲಸ ದೇವರ ಕೆಲಸ. ಯಾವುದು ಪರಿಸರದ ಹೊರಗಡೆ ಇದೆಯೋ ಅವೆಲ್ಲವೂ ನಮ್ಮ ದೇಹದ ಒಳಗಡೆ ಸೇರುತ್ತದೆ. ಪರಿಸರ ಕಲುಷಿತಗೊಂಡರೆ ಗಾಳಿ, ನೀರು, ಆಹಾರ ಸೇವನೆಯಿಂದ ನಮ್ಮ ದೇಹದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಪ್ಲಾಸ್ಟಿಕ್ ನಂತಹ ವಸ್ತುಗಳ ಬಳಕೆಯನ್ನು ತಡೆಯುವುದು, ಪರಿಸರ ಸ್ನೇಹಿ ವಸ್ತುಗಳನ್ನು ಮರುಬಳಕೆಗೆ ಒಳಪಡಿಸುವುದು ಈ ರೀತಿಯಲ್ಲಿ ಪರಿಸರ ಸಂರಕ್ಷಣೆ ಮಾಡಬಹುದು ಎಂದು ಹೇಳಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೈಯ್ಯದ್ ಮೊಹಮ್ಮದ್ ಬ್ಯಾರಿ ಮಾತನಾಡಿ ” ಕೋಡಿ ಕಡಲತೀರ ಸ್ವಚ್ಛತೆ, ಹಸಿರು ಕೋಡಿ ಯೋಜನೆಯಿಂದ ವಿಶ್ವದಲ್ಲಿ ಕೋಡಿ ಪರಿಸರವು ವಿಶೇಷವಾಗಿ ಗುರುತಿಸಲ್ಪಡುವಂತಾಗಬೇಕೆಂಬ ಆಕಾಂಕ್ಷೆಯನ್ನು ವ್ಯಕ್ತಪಡಿಸಿ ಸ್ವಚ್ಛತಾ ಅಭಿಯಾನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೌಷ್ಟಿಕ ಆಹಾರದ ಕೊರತೆಯಿಂದ ಸಂಭವಿಸುವ ಮಹಿಳೆಯರ ಮತ್ತು ಮಕ್ಕಳ ಸಾವನ್ನು ತಡೆಯುವ ಮತ್ತು ಅವರ ಆರೋಗ್ಯ ವೃದ್ಧಿಗೆ ಪೋಷಕಾಂಶಯುಕ್ತ ಆಹಾರ ಸೇವನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2018ರಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಆರಂಭವಾಯಿತು. ಸಂಬಂಧಿಸಿದವರು ಇದರ ಪ್ರಯೋಜನ ಪಡೆಯಬೇಕು ಎಂದು ಕಾಲ್ತೋಡು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ ಕಾರಂತ ಹೇಳಿದರು. ಮರವಂತೆ ಗ್ರಾಮ ಪಂಚಾಯಿತಿ, ಶಿಶು ಆಭಿವೃದ್ದಿ ಇಲಾಖೆ ಹಾಗೂ ಮರವಂತೆ ವಲಯದ ಅಂಗನವಾಡಿ ಕೇಂದ್ರಗಳ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು. ಗರ್ಬಿಣಿಯರು ಮತ್ತು ಕಿಶೋರಿಯರು ಪೌಷ್ಟಿಕ ಆಹಾರದ ಕೊರತೆಯಿಂದ ಬಳಲುತ್ತಿದ್ದರೆ ತಮ್ಮ ದಿನನಿತ್ಯದ ಆಹಾರ ಪದ್ದತಿಯನ್ನು ಮತ್ತು ಆಹಾರ ತಯಾರಿ ವಿಧಾನವನ್ನು ಬದಲಿಸಿಕೊಳ್ಳಬೇಕು, ಹೆಚ್ಚಾಗಿ ಮನೆಯಲ್ಲಿಯೇ ಬೆಳೆಸಿದ ತರಕಾರಿಗಳನ್ನು ಉಪಯೋಗಿಸಬೇಕು. ರಕ್ತಹೀನತೆ ತಡೆಗೆ ಮತ್ತು ಗರ್ಭದ ಬೆಳವಣಿಗೆಗೆ ಹೆಚ್ಚು ಹಸಿರು ತರಕಾರಿ ಬಳಸಬೇಕು. ಅಗತ್ಯವಿದ್ದಾಗ ವೈದ್ಯರು ಸೂಚಿಸುವ ಔಷಧವನ್ನು ತಪ್ಪದೆ ಸೇವಿಸಬೇಕು ಎಂದು ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಮೇರಿಕಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾಷಿಂಗ್ಟನ್ನಲ್ಲಿದ್ದ ಮೂರು ದಿನಗಳ ಕಾಲ ಊಟೋಪಚಾರ ಸಹಿತ ಅವರ ಆತಿಥ್ಯದ ನೇತೃತ್ವವನ್ನು ತಾಲೂಕಿನ ಆಲೂರು ಮೂಲದ ಹೋಟೆಲ್ ಉದ್ಯಮಿ ಅನಂದ ಪೂಜಾರಿ ಅವರು ವಹಿಸಿದ್ದರು. ಆಲೂರು ಗ್ರಾಮದ ಕಲ್ಲಂಗಡಿ ಮನೆ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಗಳ ಪುತ್ರರಾದ ಆನಂದ ಪೂಜಾರಿ ಅವರು ಪತ್ನಿ ಸುಮಿತಾ ಅವರೊಂದಿಗೆ ವಾಷಿಂಗ್ಟನ್ ಡಿಸಿಯಲ್ಲಿ ಕಳೆದ 35 ವರ್ಷಗಳಿಂದ ನೆಲೆಸಿದ್ದು, 25 ವರ್ಷಗಳಿಂದ ವುಡ್ಲ್ಯಾಂಡ್ಸ್ ಹೋಟೆಲ್ನ್ನು ನಡೆಸುತ್ತಿದ್ದಾರೆ. ಅನಿವಾಸಿ ಭಾರತೀಯ ಆನಂದ ಪೂಜಾರಿ ಹಾಗೂ ಸುಮಿತಾ ದಂಪತಿಗಳು ಶುಕ್ರವಾರ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಅವಕಾಶ ಪಡೆದಿದ್ದರು. ಭಾರತದಿಂದ ಅಮೇರಿಕಾಕ್ಕೆ ಕೇಂದ್ರ ಸಚಿವರು ಸಹಿತ ಗಣ್ಯರು ಭೇಟಿ ನೀಡಿದರೆ ಅವರಿಗೆ ಆನಂದ ಪೂಜಾರಿ ಅವರ ಹೋಟೆಲ್ ಮೂಲಕವೇ ಆತಿಥ್ಯ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು ಮೂರನೇ ಭಾರಿಗೆ ಆತಿಥ್ಯ ನೀಡಲಾಗುತ್ತಿದ್ದು, ನಾಲ್ಕನೇ ಭಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಷ್ಯಾ ವೇದಿಕ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯು ಬೆಂಗಳೂರಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಸ್ವಂತ ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿ ಗಳಿಸಿರುವ ಇವರು ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯನ್ನು ತೆರೆದು ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾದರು. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಕಛೇರಿಯಲ್ಲಿ ಪಂಡಿತ್ ದೀನ್ದಯಾಳ್ ಉಪಾಧ್ಯಾಯರ ೧೦೫ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. 246 ಬೂತ್ಗಳಲ್ಲಿ ಕಾರ್ಯಕ್ರಮ:ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಮಾತನಾಡಿ ಪಂಡಿತ್ ದೀನ್ದಯಾಳ್ ಉಪಾಧ್ಯಾಯರ 105ನೇ ಜನ್ಮ ದಿನಾಚರಣೆಯನ್ನು ಬಿಜೆಪಿ ಕಛೇರಿಯಲ್ಲಿ ಮಾತ್ರವಲ್ಲದೇ 246 ಬೂತ್ಗಳಲ್ಲಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪಕ್ಷದ ಪ್ರತಿ ಕಾರ್ಯಕ್ರಮವನ್ನು ತಳಮಟ್ಟದ ಜನರಿಗೂ ತಲುಪಿಸುವ ಉದ್ದೇಶದಿಂದ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಬೈಂದೂರು ಮಂಡಲ ಬಿಜೆಪಿ ಅತ್ಯಂತ ಕ್ರೀಯಾಶೀಲವಾಗಿ ಗರಿಷ್ಠ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಆನಂದ್ ಖಾರ್ವಿ ಉಪ್ಪುಂದ, ಜಿಲ್ಲಾ ಕಾರ್ಯದರ್ಶಿ ಮಾಲತಿ ಬಿ. ನಾಯ್ಕ್, ಜಿಲ್ಲಾ ಕೈಗಾರಿಕಾ ಪ್ರಕೋಷ್ಟ ಸಂಚಾಲಕರಾದ ಬಿ. ಎಸ್. ಸುರೇಶ್ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಶೇಖರ ಖಾರ್ವಿ ಹಾಗೂ ಮಾಲಿನಿ ಕೆ, ಮಹಿಳಾ ಮೋರ್ಚಾ ಅಧ್ಯಕ್ಷರಾಧ ಭಾಗೀರಥಿ ಸುರೇಶ್, ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೦-೨೧ನೇ ಸಾಲಿನ ಮಹಾಸಭೆಯು ಗಂಗೊಳ್ಳಿಯ ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ, ಸಂಘವು ವರದಿ ವರ್ಷದಲ್ಲಿ ಒಟ್ಟು ೪೦೨೧ ಸದಸ್ಯರೊಂದಿಗೆ ೧೯.೧೭ ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ ೧೧.೦೯ ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಸುಮಾರು ೩.೭೯ ಕೋಟಿ ರೂ.ಗಳನ್ನು ಇತರ ಸಂಘ, ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ. ವರದಿ ವರ್ಷದಲ್ಲಿ ಆಡಿಟ್ ವರದಿಯಲ್ಲಿ ಎ ವರ್ಗ ಬಂದಿದ್ದು, ವರದಿ ವರ್ಷಾಂತ್ಯಕ್ಕೆ ಸಂಘವು ೧೧,೮೨,೯೭೬.೦೦ ರೂ. ನಿವ್ವಳ ಲಾಭ ಗಳಿಸಿದೆ. ೨೦೨೦-೨೧ರ ಸಾಲಿನಲ್ಲಿ ಸದಸ್ಯರಿಗೆ ಶೇ.೧೦ ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಣಪತಿ ಖಾರ್ವಿ ೨೦೨೧-೨೦೨೨ನೇ ಸಾಲಿನ ಆಯ-ವ್ಯಯ ಅಂದಾಜು ಬಜೆಟ್ ಹಾಗೂ ೨೦೨೦-೨೧ನೇ ಸಾಲಿನ ಲಾಭಾಂಶ ವಿಂಗಡನೆಯನ್ನು ಮಂಡಿಸಿ ಕಾರ್ಯಕ್ರಮ ನಿರ್ವಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್, ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ನಿಮಿತ್ತ ಹತ್ತಾರು ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಇಲ್ಲಿನ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆಯ ಕವಿ, ಸಂಘಟಕ ಕೆ. ಪುಂಡಲೀಕ ನಾಯಕ್ ಅವರನ್ನು ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ನಾಯಕ್ ಸಹಕಾರಿ ರಂಗದಲ್ಲಿ ದುಡಿದು ನಿವೃತ್ತರಾದ ಬಳಿಕ ಸಾಹಿತ್ಯದಲ್ಲಿ ಆಸಕ್ತಿ ತಾಳಿ, ಕವನ ರಚನೆ ಆರಂಭಿಸಿದರು. ಈಗಾಗಲೆ ಅವರ ಮೂರು ಸಂಕಲನಗಳು ಪ್ರಕಟವಾಗಿವೆ. ಸಾಹಿತ್ಯ ಸಂಘಟನೆಯಲ್ಲೂ ತೊಡಗಿರುವ ಅವರು ಎರಡು ರಾಜ್ಯ ಮಟ್ಟದ ಕವಿಗೋಷ್ಟಿ, ಸಾಹಿತ್ಯ ಮತ್ತು ವಿಚಾರ ಸಂಕಿರಣಗಳನ್ನು ಏರ್ಪಡಿಸಿದ್ದಾರೆ. ರಾಜ್ಯದ ವಿವಿಧೆಡೆ ನಡೆದ ಕವಿಗೋಷ್ಠಿಗಳಲ್ಲಿ ತಮ್ಮ ಕವನ ವಾಚಿಸಿದ್ದಾರೆ. 25ರಂದು ಬೆಂಗಳೂರಿನಲ್ಲಿ ನಡೆಯುವ ಪ್ರತಿಷ್ಠಾನದ 30ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯುವುದು ಎಂದು ಪ್ರಕಟಿಸಲಾಗಿದೆ.
