ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಸ್ಯಾಂಡ್ ಥೀಂ’ ತಂಡದ ಕಲಾವಿದರಾದ ಹರೀಶ್ ಸಾಗಾ ಹಾಗೂ ರಾಘವೇಂದ್ರ ಪ್ರಸಾದ್ ಆರ್. ಅವರಿಂದ ಕೋಟೇಶ್ವರ ಹಳೆಅಳಿವೆ ಕಡಲ ತೀರದಲ್ಲಿ ಪ್ರಕೃತಿಯೇ ದೇವರು ಎಂಬ ಸಂಕಲ್ಪದೊಂದಿಗೆ ರಚಿಸಿದ ಮರಳುಶಿಲ್ಪ – ಅರಶಿಣ ಗಣಪ ಗಮನ ಸೆಳೆಯಿತು. ಪೃಕೃತಿ ರಕ್ಷಣೆಯ ಭರವಸೆಯನ್ನು ನೀಡುವ ಪ್ರಕೃತಿಯೇ ದೇವರು ಎನ್ನುವ ಚಿಂತನೆಯಲ್ಲ್ಲಿ ಮೂ ಆನೆಯ ಮುಖ ಸ್ವರೂಪವುಳ್ಳ ಗಣಪನಿಗೆ ಪ್ರಕೃತಿಯ ದ್ಯೋತಕವಾಗಿ ಹಳ್ಳಿ ಹಾಳೆಯ ಕಿರೀಟ, ರೋಗನಿರೋಧಕ ಶಕ್ತಿಯ ಬಿಂಬವಾಗಿ ಅರಶಿನ ಬಣ್ಣ ಹಾಗೂ ಸಂಸ್ಕೃತಿಯ ದ್ಯೋತಕವಾಗಿ ಸಿಂಧೂರ ತಿಲಕವಿರಿಸಲಾಗಿದ್ದು, ಕಡಲತಡಿಯಲ್ಲಿ ನಿರ್ಮಿಸಲಾದ ಈ ಮರಳುಶಿಲ್ಪ ಸುಂದರವಾಗಿ ಮೂಡಿಬಂದಿದೆ. ಸರಕಾರದ ‘ ಅರಿಶಿನ ಗಣಪತಿ ಅಭಿಯಾನ’ದಂತೆ ಮಾಲಿನ್ಯ ರಹಿತವಾದ ವಿಗ್ರಹ ಮತ್ತು ಕೋವಿಡ್ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೋಗನಿರೋಧಕ ಅರಿಶಿನ ಗಣಪನ ಆರಾಧನೆಯ ಸಂಕಲ್ಪ ನಮ್ಮದ್ದಾಗಲಿ ಎಂಬ ಜನಜಾಗೃತಿಯನ್ನು ಸಾರುವ ಮರಳು ಶಿಲ್ಪಾಕೃತಿ ಇದಾಗಿದೆ – ಹರೀಶ್ ಸಾಗ, ಕಲಾವಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ ಮೊಂತಿ ಫೆಸ್ತ್ (ತೆನೆ ಹಬ್ಬ) ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ಚರ್ಚುಗಳಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು. ರೈತರು ಬೆಳೆದ ಭತ್ತದ ತೆನೆಯನ್ನು ಆಯಾ ಚರ್ಚ್ನಲ್ಲಿ ಪ್ರಮುಖರು ಸಂಗ್ರಹಿಸಿ, ಈ ಹಬ್ಬದ ದಿನದಂದು ಅವನ್ನು ಧರ್ಮಗುರುಗಳು ಪವಿತ್ರೀಕರಿಸಿ ಭಕ್ತರಿಗೆ ಹಂಚುವುದು ಸಂಪ್ರದಾಯವಾಗಿದ್ದು, ಈ ನಿಟ್ಟಿನಲ್ಲಿ ಪವಿತ್ರೀಕರಿಸಿದ ಭತ್ತದ ತೆನೆಗಳನ್ನು ಆಯಾ ಚರ್ಚ್ಗಳಲ್ಲಿ ಭಕ್ತರಿಗೆ ದಿವ್ಯಬಲಿಪೂಜೆಯ ಬಳಿಕ ಹಂಚಲಾಯಿತು. ಹೊಸ ತೆನೆಯನ್ನು ಮನೆಗೆ ತಂದು ಪ್ರಾಥನೆ ಮಾಡುವುದರ ಮೂಲಕ ಹಾಲು ಅಥವಾ ಪಾಯಸದೊಂದಿಗೆ ಹೊಸ ಅಕ್ಕಿಯ ಊಟವನ್ನು ಮಾಡಲಾಗುತ್ತದೆ. ಈ ಹಬ್ಬವು ಸಸ್ಯಹಾರಿ ಭೋಜನಕ್ಕೆ ಹೆಸರಾಗಿದ್ದು, ವಿವಿಧ ಬಗೆಯ ತರಕಾರಿ ಖಾದ್ಯಗಳು ಹಬ್ಬದ ಊಟದಲ್ಲಿ ಇರುತ್ತದೆ. ಬೆಸ ಸಂಖ್ಯೆಯನ್ನು ಹೊಂದಿಕೊಂಡು ತರಕಾರಿ ಖಾದ್ಯಗಳನ್ನು ತಯಾರಿಸಲಗುತ್ತದೆ. ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಮೊಂತಿ ಹಬ್ಬದ ಆಚರಣೆಯನ್ನು ಪವಿತ್ರ ಬಲಿದಾನದ ಮೂಲಕ ಅರ್ಪಿಸಿ ಆಚರಿಸಲಾಯಿತು. ಅತಿಥಿ ಗುರುಗಳಾದ ತ್ರಾಸಿ ಡೋನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಸುಮಾರು ಒಂದುವರೆ ವರ್ಷಗಳಿಂದ ಕೋವಿಡ್ನಿಂದ ವಿದ್ಯಾಕ್ಷೇತ್ರ ಬಡವಾಗಿದೆ. ಕೋವಿಡ್ನಿಂದ ಕಳೆಗುಂದಿರುವ ಶಿಕ್ಷಣ ಕ್ಷೇತ್ರವನ್ನು ಪುನರುತ್ಥಾನಗೊಳಿಸುವಲ್ಲಿ ಶಿಕ್ಷಕರ ಪ್ರಯತ್ನ ಬಹುಮುಖ್ಯವಾಗಿದೆ. ಇದಕ್ಕಾಗಿ ಶಿಕ್ಷಕರು ವಿಶೇಷ ಹೋರಾಟ ನಡೆಸಬೇಕಾಗಿದೆ. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾಭ್ಯಾಸ ನಡೆಸಲು ಸಹಕರಿಸಬೇಕು. ಶಾಲೆಗಳಲ್ಲಿ ಅಧ್ಯಾಪಕರು ವಿಶೇಷ ಶ್ರಮವಹಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಬೈಂದೂರು ವಲಯದ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೧೦ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಹೀಗಾಗಿ ಡಿಡಿಪಿಐ ಮತ್ತು ಬಿಇಒ ಸಭೆ ನಡೆಸಿ ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಮತ್ತು ಶಾಲೆಗಳಲ್ಲಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಬೈಂದೂರು ಕ್ಷೇತ್ರದಲ್ಲಿ ಐದು ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಸರಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ವಿಧಿಸಲಾಗಿರುವ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಯವರಿಗೆ, ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿ. ಕಿಶೋರ್ ಕುಮಾರ್, ರಾಜೇಶ್ ಕಾವೇರಿ, ಪುರಂದರ ತೆಕ್ಕಟ್ಟೆ, ಮಹೇಶ್ ಪೂಜಾರಿ, ದಾಮೋದರ್ ಪೈ, ಶ್ರೀಧರ್ ಪಿ.ಎಸ್., ಪುರಸಭಾ ಅಧ್ಯಕ್ಷರಾದ ವೀಣಾ ಮೆಂಡನ್, ಪುರಸಭಾ ಉಪಾಧ್ಯಕ್ಷ ಸಂದೀಪ ಖಾರ್ವಿ, ಸದಸ್ಯರಾದ ಗಿರೀಶ್ ಜಿ.ಕೆ, ವನಿತಾ ಬಿಲ್ಲವ, ಶ್ವೇತಾ, ಕಮಲ ಇನ್ನಿತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕೊಲ್ಲೂರು ವಲಯ ಮೆಕ್ಕೆ ಒಕ್ಕೂಟದ ಛತ್ರಮಠ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ವನದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿಯಾದ ನಾರಾಯಣ ಶೆಟ್ಟಿ ಅತ್ತಿಕಾರ್ ಕಾರ್ಯಕ್ರಮ ಉದ್ಘಾಟಿಸಿದರು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮೆಕ್ಕೆ ಒಕ್ಕೂಟದ ಅಧ್ಯಕ್ಷರಾದ ಎಂ ಜೆ ಬೇಬಿ ವಹಿಸಿದ್ದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರಾದ ಗಣೇಶ್ ಬಿ., ಕೊಲ್ಲೂರು ವಲಯದ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಸತ್ಯನಾರಾಯಣ ಅಡಿಗ ಗುಡಿಮನೆ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಜಾಕ್ಷಿ ಶೆಟ್ಟಿ, ಬೈಂದೂರು ತಾಲೂಕು ಯೋಜನಾಧಿಕಾರಿಗಳಾದ ಶಶಿರೇಖಾ ಪಿ., ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾವತಿ ಕೃಷ್ಣ ಕನ್ನಂತ, ಕೊಲ್ಲೂರು ವಲಯದ ಅಧ್ಯಕ್ಷರಾದ ಜಯರಾಮ್ ಪೂಜಾರಿ, ಚಿತ್ತೂರು ವಲಯದ ವಲಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ಗೋಳಿಹೊಳೆ ವಲಯದ ವಲಯ ಅಧ್ಯಕ್ಷರಾದ ಮಂಜುನಾಥ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶಾದ್ಯಂತ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ಪ್ರಕರಣ ಖಂಡಿಸಿ ಇಲ್ಲಿನ ಶಾಸ್ತ್ರೀ ವೃತ್ತದ ಎದುರು ನ್ಯಾಷನಲ್ ವಿವೆನ್ಸ್ ಫ್ರಂಟ್ ಕುಂದಾಪುರ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು. ವಿವೆನ್ಸ್ ಫ್ರಂಟ್ ವಲಯಾಧ್ಯಕ್ಷೆ ನಸೀಮ್ ಝರೈದ್ ಮಾತನಾಡಿ, ಮಹಿಳೆ ಮತ್ತು ಹೆಣ್ಣುಮಕ್ಕಳ ಪಾಲಿಗೆ ಭಾರತ ಹೆಚ್ಚು ಅಪಯಕಾರಿ ದೇಶವಾಗಿ ಮುನ್ನಡೆಯುತ್ತಿರುವುದು ದುರಂತ ಹೆಣ್ಣುೈಮಕ್ಕಳ ಸುರಕ್ಷತೆಗೆ ಸರಕಾರ ಒತ್ತು ನೀಡಬೇಕು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕು ಎಂದರು. ವಲಯ ಕಾರ್ಯದರ್ಶಿ ನಾಝಿಯಾ ಇನ್ನಿತರರು ಇದ್ದರು. ಬಳಿಕ ಹೆಣ್ಣು ಮಕ್ಕಳ ಸುರಕ್ಷತೆಯ ಬೇಡಿಕೆ ಮುಂದಿಟ್ಟು ತಾಲೂಕಿನ ಸರಕಾರಿ ಅಧಿಕಾರಿಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್ನಲ್ಲಿ ಕ್ರೈಸ್ತರ ಭಾಂಧವರ ಪವಿತ್ರ ಹಬ್ಬವಾದ ಮೊಂತಿ ಫೆಸ್ತ್ ತೆನೆ ಹಬ್ಬವನ್ನು ಸಡಗರದಿಂದ ಆಚರಿಸಿದರು. ಚರ್ಚಿನ ಧರ್ಮಗುರುಗಳಾದ ರೆ.ಪಾ. ಚೇತನ್ ಲೋಬೋ, ರೆ.ಪಾ. ವಿನ್ಸೆಂಟ್ – ಕುವೆಲ್ಲೋ ಹಾಗೂ ಬ್ರದರ್ ಸ್ಟೀವನ್ ಡಿಸೋಜಾ ಅವರ ನೇತೃತ್ವದಲ್ಲಿ ಆಚರಿಸಲಾಯಿತು. ಚಿತ್ರಗಳು: ಎ ಒನ್ ಸ್ಟುಡಿಯೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಲ್ಲಾ ವೃತ್ತಿಗಳಿಗಿಂತ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಅದೆಷ್ಟೆ ಜನರಿದ್ದರೂ ಕೂಡ ನನಗೆ ಕಲಿಸಿದ ಶಿಕ್ಷಕರು ಎದುರಿಗೆ ಬಂದರೆ ಅವರ ಕಾಲಿಗೆರಗುತ್ತೇನೆ. ಶಿಕ್ಷಕರೆಂದರೆ ನನಗೆ ಅಪಾರ ಗೌರವ. ತಂದೆ ತಾಯಿಗೆ ಮೂರು ಮಕ್ಕಳಿದ್ದರೆ ಯಾವ ಮಗು ಬುದ್ಧಿವಂತ ಎಂದು ಗುರುತಿಸುವುದು ಕಷ್ಟ ಆಗಬಹುದು. ಆದರೆ ತರಗತಿಯಲ್ಲಿ ಸಾವಿರ ವಿದ್ಯಾರ್ಥಿಗಳಿದ್ದರೂ ಕೂಡ ಪ್ರತಿ ಮಗುವಿನ ಸಾಮರ್ಥ್ಯವನ್ನು ಅಧ್ಯಾಪಕರು ಗುರುತಿಸುವಲ್ಲಿ ಸಫಲರಾಗುತ್ತಾರೆ. ಕರೋನಾ ಕಾರಣದಿಂದಾಗಿ ಹದಗೆಟ್ಟ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ಕಟ್ಟುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಮತ್ತು ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕ್ಷೇಮಪಾಲನಾ ಸಮಿತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶ ಕಂಡ ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಅಸಭ್ಯ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ದ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಕುಂಭಾಶಿ ಎನ್ನುವವರು ತಮ್ಮ ಫೇಸ್ಬುಕ್ನಲ್ಲಿ ನಾರಾಯಣ ಗುರುಗಳ ಫೋಟೋ ಹಾಕಿ, ಅವಾಚ್ಯ ಶಬ್ದದಿಂದ ಬರೆದುಕೊಂಡು ನಾರಾಯಣ ಗುರು ಜಯಂತಿಯ ಶುಭಾಶಯ ಕೋರಿದ್ದರು. ಈ ಬಗ್ಗೆ ದೂರು ದಾಖಲಿಸಿರುವ ಕಿರಣ್ ಪೂಜಾರಿ ಎನ್ನುವವರು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಿದ್ದಾಂತವನ್ನು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಬಗೆಗೆ ಇತ್ತೀಚೆಗೆ ಹರೀಶ್ ಕುಂಭಾಶಿ ಎನ್ನುವ ವ್ಯಕ್ತಿಫೇಸ್ ಬುಕ್ನಲ್ಲಿ ಅಸಭ್ಯ ಪೋಸ್ಟ್ ಮಾಡುವ ಮೂಲಕ ನಾರಾಯಣ ಗುರುಗಳ ಅನುಯಾಯಿಗಳಿಗೆ ನೋವನ್ನುಂಟು ಮಾಡಿದೆ. ಇಂತಹ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಾಗೂ ಆ ವ್ಯಕ್ತಿ ನಾರಾಯಣ ಗುರುಗಳ ಪ್ರತಿಮೆಯ ಮುಂದೆ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಈ ಬಾರಿಯ ಕೋವಿಡ್ ಹಿನ್ನಲೆಯಲ್ಲಿ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ, ಜಿಲ್ಲೆಯಲ್ಲಿ ಸರಳವಾಗಿ, ಸಾರ್ವಜನಿಕರು ಕನಿಷ್ಠ ಸಂಖ್ಯೆಯೊಂದಿಗೆ ಭಕ್ತಿ ಪೂರ್ವಕವಾಗಿ ಗಣೇಶೋತ್ಸವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ವರ್ಚುವಲ್ ಸಭೆಯ ಮೂಲಕ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆಯ ಮಾರ್ಗಸೂಚಿ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ 3ನೇ ಅಲೆಯ ನಿಯಂತ್ರಣ ಉದ್ದೇಶದಿಂದ ಸರ್ಕಾರ ನೀಡಿರುವ ಮಾರ್ಗಸೂಚಿಯನ್ವಯ ಗಣೇಶ ಚತುರ್ಥಿ ಆಚರಣೆ ನಡೆಸಬೇಕು. ಮಾರ್ಗಸೂಚಿಗಳ ಪಾಲನೆಯಲ್ಲಿ ಯಾವುದೇ ಗೊಂದಲ ಇರಬಾರದು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿ. ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಸ್ಥಳೀಯಾಡಳಿಗಳು ಎಲ್ಲಾ ನಿಬಂದನೆಗಳ ಕುರಿತು ಆಯೋಜಕರಿಗೆ ಮನವರಿಕೆ ಮಾಡಬೇಕು ಎಂದರು. ದೇವಸ್ಥಾನದಲ್ಲಿ ಮತ್ತು ಮನೆಗಳಲ್ಲಿ ಅಥವಾ ಸರ್ಕಾರಿ /ಖಾಸಗಿ ಬಯಲು ಪ್ರದೇಶದಲ್ಲಿ ಕನಿಷ್ಠ ಸಂಖ್ಯೆಯೊAದಿಗೆ ಗಣೇಶೋತ್ಸವ ಆಚರಣೆ ಮಾಡಬೇಕು. ಸಾರ್ವಜನಿಕ ಸ್ಥಳದಲ್ಲಿ 4 ಅಡಿ ಎತ್ತರ ಮತ್ತು ಮನೆಯೊಳಗೆ 2 ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.…
