Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವು ನಿರ್ವಹಿಸುವ ಕಾರ್ಯದಲ್ಲಿ ಪ್ರಾಮಾಣಿಕ ಪ್ರಯತ್ನವಿದ್ದರೆ ಬದುಕು ಯಶಸ್ಸಿನತ್ತ ಸಾಗುತ್ತದೆ ಎಂದು ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಹೇಳಿದರು. ಬೈಂದೂರು ರೋಟರಿ ಭವನದಲ್ಲಿ ಭಾನುವಾರ ‘ಕುಂದಾಪ್ರ ಡಾಟ್ ಕಾಂ’ ಸುದ್ದಿತಾಣದ ದಶಮಾನೋತ್ಸವ ಅಂಗವಾಗಿ ಸುರಭಿ ರಿ. ಬೈಂದೂರು ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಲಾದ ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬರೂ ಬದುಕಿನಲ್ಲಿ ಕ್ರೀಯಾಶೀಲತೆಯನ್ನು ಕಾಯ್ದುಕೊಳ್ಳುವುದು ಮುಖ್ಯ. ಪತ್ರಿಕಾರಂಗದ ಸವಾಲುಗಳ ನಡುವೆ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಶುಭಹಾರೈಸಿದರು. ಕಾರ್ಯಕ್ರಮಕ್ಕೆ ಚಂಡೆ ಭಾರಿಸಿ ಚಾಲನೆ ನೀಡಿದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ ಇಂದಿನ ಬಹುಪಾಲು ಮಾಧ್ಯಮಗಳಲ್ಲಿ ವರದಿ ಪ್ರಕಟಿಸುವುದಕ್ಕಿಂತ ಹೆಚ್ಚಾಗಿ ಅಭಿಪ್ರಾಯಗಳ ಹೇರಿಕೆಯಾಗುತ್ತಿದೆ. ಓದುಗರಾಗಿ ನಾವು ಮಾಧ್ಯಮದಿಂದ ವಸ್ತುನಿಷ್ಠ ವರದಿಯನ್ನಷ್ಟೇ ನಿರೀಕ್ಷಿಸುತ್ತೇವೆ. ಓದಿದ ಬಳಿಕ ಅಭಿಪ್ರಾಯ ರೂಪಿಸಿಕೊಳ್ಳುವ ಸ್ವಾತಂತ್ರ್ಯ ಓದುಗರಿಗೆ ಬಿಡುವುದು ಒಳ್ಳೆಯದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್‌ಸ್ಟಿಟ್ಯೂಷನ್‌ನ ಅಧ್ಯಕ್ಷರಾದ ಆರ್. ಉಪೇಂದ್ರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಬದುಕನ್ನು ಕಟ್ಟಿಕೊಳ್ಳುವಲ್ಲಿ ವಿದ್ಯೆಯ ಜೊತೆಜೊತೆಗೆ, ಸಮಾಜದ ಶಿಕ್ಷಣದ ಮಹತ್ವವನ್ನು ತಮ್ಮ ಅನುಭವದೊಂದಿಗೆ ಹಂಚಿಕೊಂಡರು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ, ಹೀಗೆ ಸರ್ವಾಂಗೀಣ ಸಾಧನೆಗೆ ಕೊಡಮಾಡುವ ಬಿಎಂಎಸ್ ಗೋಲ್ಡ್ ಮೆಡಲ್ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಡಮಾಡುವ ಐಕ್ಯೂಎಸಿ ಗೋಲ್ಡ್ ಮೆಡಲ್ ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪುರಸ್ಕರಿಸಲಾಯಿತು. ಈ ಸಂದರ್ಭ ಡಾ. ಸಂಪತ್ ಕುಮಾರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸಾಡು ಗ್ರಾಮದ ಅರಾಟೆ ಜನರ ದೂರ ದೃಷ್ಟಿಯ ಆಲೋಚನೆಯಿಂದ ನಿರ್ಮಾಣಗೊಂಡ ನೂತನ ಬಸ್ ತಂಗುದಾಣಕ್ಕೆ ವಾಜಪೇಯಿ ಅವರ ಹೆಸರನ್ನು ಇಡುವುದರ ಮೂಲಕ ವಿಶೇಷವಾದ ಗೌರವವನ್ನು ಗ್ರಾಮದ ಜನರು ಅವರಿಗೆ ಸಲ್ಲಿಸಿದ್ದಾರೆ. ಇಲ್ಲಿನ ಜನರ ಬಹು ಮುಖ್ಯ ಬೇಡಿಕೆಗಳೊಂದಾದ ಬಸ್ ತಂಗುದಾಣವು ಹೋರಾಟದ ಫಲದಿಂದ ನಿರ್ಮಾಣಗೊಂಡಿದೆ. ಹೊಸಾಡು ಗ್ರಾಮದ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ ಹೊಸಾಡು ಗ್ರಾಮದ ಅರಾಟೆಯಲ್ಲಿ ರಾ.ಹೆ.66ರ ಸಮೀಪ ನಿರ್ಮಾಣಗೊಂಡ ಸುಸಜ್ಜಿತವಾದ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತಿಗೂ 20ರಿಂದ 25ಮನೆಗಳು ನೀಡುವ ವ್ಯವಸ್ಥೆ ಮಾಡಲಾಗುವುದು. ಈ ಸಂಬಂಧ ಗ್ರಾಮ ಪಂಚಾಯತಿಗಳೊಂದಿಗೆ ವಿಶೇಷ ಸಭೆ ಕರೆಯಲಾಗಿದೆ. 94ಸಿ,95ಸಿಸಿ,53ಮತ್ತು 57 ರ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಬಿಜೆಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಚೆಸ್ ಅಸೋಸಿಯೇಷನ್‌ನ ಗೌರವ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಡಾ.ರಾಜ್ ಗೋಪಾಲ್ ಶೆಣೈ ಅವರು ಆಯ್ಕೆಯಾಗಿದ್ದಾರೆ. ಅವರು ಜಿಲ್ಲೆಯಲ್ಲಿ ಸುಮಾರು ಹತ್ತು ವರ್ಷದಿಂದ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಚೆಸ್ ಸ್ಪರ್ದೆಗಳನ್ನು ಎರ್ಪಡಿಸಿ ರಾಷ್ಟ್ರಮಟ್ಟದಲ್ಲಿ ಜಿಲ್ಲೆಯ ಹೆಸರನ್ನು ಪಸರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆಹರು ಯುವಕೇಂದ್ರ ಕುಂದಾಪುರ ತಾಲೂಕು ಮತ್ತು ಯೂತ್ ರೆಡ್‌ಕ್ರಾಸ್ ಕುಂದಾಪುರ ಘಟಕ ಇದರ ಸಹಯೋಗದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ, ಭಾರತ ಕೇಂದ್ರ ಸರ್ಕಾರದ ನಿರ್ದೇಶನದಂತೆ, ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮ ಇಲ್ಲಿನ ಭಂಡಾರ್‌ರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ, ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಸದೃಢ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಜವಾಬ್ದಾರನಾಗಿರುತ್ತಾನೆ. ಬಹುಮುಖ್ಯವಾಗಿ ಶಿಕ್ಷಣ ಸಂಸ್ಥೆಗಳ ಪಾತ್ರವು ಅತ್ಯಮೂಲ್ಯವಾಗಿರುತ್ತದೆ ಎಂದರು. ಕಾಲೇಜಿನ ಎನ್‌ಸಿಸಿ ನೇವಿ ಮತ್ತು ಆರ್ಮಿ, ಎನ್‌ಎಸ್‌ಎಸ್, ಯೂತ್ ರೆಡ್‌ಕ್ರಾಸ್ ಮತ್ತು ಕ್ರೀಡಾ ವಿಭಾಗಗಳ ಸುಮಾರು150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಕುಂದಾಪುರ ಸ್ಥಳೀಯ ಪೋಲೀಸ್ ಇಲಾಖೆಯ ಸಹಕಾರದೊಂದಿಗೆ ಇಲ್ಲಿನ ಪಾರಿಜಾತ ಸರ್ಕಲ್‌ವರೆಗೆ ವಿದ್ಯಾರ್ಥಿ-ಜಾಥ ಜರುಗಿತು. ಉಡುಪಿ ಯುವಸ್ಪಂದನ ಕೇಂದ್ರದ ನರಸಿಂಹ ಗಾಣಿಗ, ಯೂತ್ ರೆಡ್ ಕ್ರಾಸ್ ಕುಂದಾಪುರ ಘಟಕ ದ ಎಸ್. ಜಯಕರ ಶೆಟ್ಟಿ, ಗಣೇಶ್ ಆಚಾರ್ಯ,…

Read More

ಕತಾರ್ ಕರ್ನಾಟಕ ಸಂಘದಿಂದ ಇಂಜಿನೀಯರ್ಸ್ ಡೇ ಆಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ,ಕತಾರ್: ಕರ್ನಾಟಕ ಸಂಘ ಕತಾರ್‌ನಲ್ಲಿ ಶ್ರೀ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ 171ನೇ ಜನ್ಮಶತಮಾನೋತ್ಸವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿರುವ ಮುಂಬೈ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಸಂಘ ಕತಾರಿನ ಅಧ್ಯಕ್ಷರಾದ ನಾಗೇಶ್ ರಾವ್ ಅವರು ವಿಶ್ವೇಶ್ವರಯ್ಯನವರ ಈ ಮಾತುಗಳನ್ನು ಸಭಿಕರೊಂದಿಗೆ ಹಂಚಿಕೊಂಡರು. ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಬಾಬೂರಾಜನ್ ಉಪಸ್ಥಿತರಿದ್ದರು. ಕರ್ನಾಟಕ ಮೂಲದ ಮೂರು ಅಭಿಯಂತರರು, ವಿವಿಧ ತಾಂತ್ರಿಕ ವಿಷಯಗಳ ಕುರಿತು ಭಾಷಣ ನೀಡಿದರು. ಕತಾರ್ ಗೇಸ್ ಸಂಸ್ಥೆಯಲ್ಲಿ ಹಿರಿಯ ರಾಸಾಯನಿಕ ಅಭಿಯಂತರರಾದ ಶಂಕರಸ ಧರ್ಮದಾಸ್ ತಾಂತ್ರಿಕ ವಿಷಯ ‘ಕಂಟ್ರೋಲ್ ವಾಲ್ವ’ ಬಗ್ಗೆ ಪ್ರಸ್ತುತಪಡಿಸಿದರು, ಮೆಹೂಲ್ ಕನ್ಸಲ್ಟಿಂಗ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸೈಯದ್ ಯಾಸೀನ್ ಅವರು ‘ಕತಾರ್ 2022 ಫುಟ್ಬಾಲ್ ಕ್ರೀಡಾಂಗಣಗಳಿಗೆ ಸಾರಿಗೆ ವ್ಯವಸ್ಥೆ’ ಕುರಿತು ಮಾತನಾಡಿದರು, ಸೇವಿಯಸ್ ಕ್ರಾಸ್ತಾ ಅವರು ‘ಸೇತಿವೆ ನಿರ್ಮಾಣದ ಅಚ್ಚುಗಳ’ ಬಗ್ಗೆ ಪ್ರಸ್ತುತಪಡಿಸಿದರು. ಕರ್ನಾಟಕ ಸಂಘ ಕತಾರ್ ಪ್ರತಿ ವರ್ಷದಂತೆ ಈ…

Read More

ಕುಂದಾಪ್ರ ಡಾಟ್ ಕಾ ಸುದ್ದಿ.ಕುಂದಾಪುರ: ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗೌರವ ಡಾಕ್ಟರೇಟ್ ಪದವಿ ಪಡೆದ ಪ್ರಸಿದ್ಧ ಜಾನಪದ ಕಲಾವಿದ ಗಣೇಶ ಗಂಗೊಳ್ಳಿ ಅವರನ್ನು ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ ಮೇಲ್‌ಗಂಗೊಳ್ಳಿ, ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್‌ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಮೇಲ್‌ಗಂಗೊಳ್ಳಿಯ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗಣೇಶ ಗಂಗೊಳ್ಳಿ, ಕಲಾವಿದ ಬೆಳೆಯಬೇಕಾದರೆ ಸಂಘ ಸಂಸ್ಥೆಗಳ, ಕಲಾಭಿಮಾನಿಗಳ ಸಹಕಾರ ಪ್ರೋತ್ಸಾಹ ಬೇಕಿದೆ. ಪೋಷಕರು ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು ಎಂದರು. ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷ ಅಕ್ಷಯ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಅಮೃತಾ ಯುವತಿ ಮಂಡಲದ ಅಧ್ಯಕ್ಷೆ ವೇದಾವತಿ ಉಪಸ್ಥಿತರಿದ್ದರು. ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯುವತಿ ಮಂಡಲದ ಕಾರ್ಯದರ್ಶಿ ಅನಿತಾ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾ ಕಾರ್ಯದರ್ಶಿ ಸಹನಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಇದರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ರೋಟರಿ ಭವನದಲ್ಲಿ ಜರುಗಿತು. ಸಂಸ್ಥೆಯ ಅಧ್ಯಕ್ಷರಾದ ಅನುಸೂಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ, ಜಮಾ ಖರ್ಚು, ಆಸ್ತಿ ಜವಾಬ್ಧಾರಿ ವರದಿ ಮಂಡಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷರಾದ ಆಶಾ, ನಿರ್ದೇಶಕರಾದ ಲಕ್ಷ್ಮೀ ಬೈಂದೂರು, ಗೀತಾ. ಎಸ್, ಸರಳಾ, ಅಂಬಿಕಾ, ಸಾವಿತ್ರಿ, ನೇತ್ರಾವತಿ, ಮಾಲತಿ, ಗಿರಿಜಾ, ಶ್ಯಾಮಲಾ, ಆಲಿಯಾ ನಾಜ್, ಪ್ರೇಮ, ಸಂಸ್ಥೆಯ ಸಿಬ್ಬಂದಿಗಳಾದ ಶಶಿಕುಮಾರ್, ನಾಗಶ್ರೀ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗಾಯಕಿ ಅಕ್ಷತಾ ಗಂಗೊಳ್ಳಿ ಭಕ್ತಿಗೀತೆ, ಚಿತ್ರಗೀತೆ ಹಾಡಿದರು, ಆಶಾ ಕಿಶೋರ್ ಪ್ರಾರ್ಥಿಸಿದರು, ಸಂಸ್ಥೆಯ ಸಿಬ್ಬಂದಿ ಪ್ರಫುಲ್ಲ ಸ್ವಾಗತಿಸಿದರು. ಪತ್ರಕರ್ತ ಅಂದುಕಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

Read More

ಕುಂದಾಪ್ರ ಡಾಟ್ ಕಾಂ ಸುಸದ್ದಿ.ಬೈಂದೂರು: ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಸಂಘ ಕೊಯಾನಗರ ಘಟಕದ ಸವ೯ಸದಸ್ಯರ ಸಭೆಯು ಸ್ಥಳೀಯ ಮೆಸ್ಕಾಂ ಕಚೇರಿ ಬಳಿ ಜರಗಿತು. ಕಾಮಿ೯ಕ ಸಂಘದ ರಾಜ್ಯ ಸಮಿತಿ ಸದಸ್ಯರಾದ ಕಾರ್ಮಿಕ ಮುಖಂಡ ರೊನಾಲ್ಡ್ ರಾಜೇಶ್ ಕ್ವಾಡ್ರಸ್ಕಾರ್ಮಿಕ ಇಲಾಖೆಯಿಂದ ಕೊಡಮಾಡಿದ ಸುರಕ್ಷಾ ಕಿಟ್ ಮತ್ತು ಪ್ರತಿರಕ್ಷಣಾ ಕಿಟ್ ಗಳನ್ನು ಕಾರ್ಮಿಕರಿಗೆ ವಿತರಿಸಿದರು, ಕಿಟ್ ವಿತರಿಸಿ ಮಾತನಾಡಿದಕಾರ್ಮಿಕ ಮುಖಂಡ ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಕಾರ್ಮಿಕ ಸಂಘದ ಮೂಲಕವೇ ಅಹಾರ ಕಿಟ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಮಾಡಿದ ಹೋರಾಟದ ಫಲವಾಗಿ ಇಂದು ನಮ್ಮ ಸಂಘಟನೆಯಿಂದ ಈ ಕಿಟ್ ಗಳನ್ನು ವಿತರಿಸಲು ಸಾಧ್ಯವಾಯಿತು. ಇದು ನಮ್ಮ ಸಂಘಟಿತ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು. ಕಾಕಾರ್ಮಿಕ ಮುಖಂಡ ವೆಂಕಟೇಶ್ ಕೋಣಿ ಮಾತನಾಡಿ, ಇತ್ತೀಚೆಗೆ ಜರಗಿದ ‘ಕಾಮಿ೯ಕ ಅದಾಲತ್’ ಸಭೆಯಲ್ಲಿ ಸಲ್ಲಿಸಿದ ಕಾರ್ಮಿಕರ ವಿವಿಧ ಸೌಲಭ್ಯಗಳ ಬಾಕಿ ನಿಂತಿರುವ ಅಜಿ೯ಗಳಿಗೆ ಈ ಕೂಡಲೆ ಹಣ ಬಿಡುಗಡೆ ಮಾಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.…

Read More