ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.17: ರಾಜ್ಯ ವಿಜ್ಞಾನ ಪರಿಷತ್ ಆಶ್ರಯದಲ್ಲಿ 10-12 ವರ್ಷದ ವಯೋಮಿತಿಯ ವಿದ್ಯಾರ್ಥಿಗಳಿಗಾಗಿ ನಡೆಸಲಾದ ವಿಜ್ಞಾನ ಪ್ರಬಂಧ ಸ್ವರ್ಧೆಯಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದ ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶಿವಾನಿ ಪ್ರಭಾಕರ ಪೂಜಾರಿ ಅವರು ಇಂದು ಬೆಂಗಳೂರಿನ ವಿಜ್ಞಾನ ಭವನದ ಪ್ರೊ.ಎಂ.ಎ.ಸೇತುರಾವ್ ಸಭಾಂಗಣದಲ್ಲಿ ನಡೆದ 8ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ರಾಜ್ಯ ಪ್ರಶಸ್ತಿ ಸ್ವೀಕರಿಸಿದರು. ಸುಸ್ಥಿರ ಜೀವನಕ್ಕಾಗಿ ವಿಜ್ಞಾನ ಎಂಬ ವಿಷಯದಲ್ಲಿ ಮರವಂತೆ ಶಾಲೆಯ ವಿದ್ಯಾರ್ಥಿಗಳು ಸ್ಥಳೀಯ ಗ್ರಾಮೀಣ ಭಾಗದ ಗುಡಿ ಕೈಗಾರಿಗಳಲ್ಲಿ ಕರಕುಶಲ ವಸ್ತುಗಳ ತಯಾರಿಕೆ ಕುರಿತು ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿದ್ದು, ಜಿಲ್ಲಾ, ರಾಜ್ಯದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಪದ್ಮವಿಭೂಷಣ ಪ್ರಶಸ್ತಿ ವಿಜೇತ ವಿಜ್ಞಾನಿ ಡಾ. ಅತ್ರಿ ಅವರಿಂದ ವಿದ್ಯಾರ್ಥಿನಿ ಶಿವಾನಿ ಪ್ರಭಾಕರ ಪೂಜಾರಿ ಅಭಿನಂದನಾ ಪತ್ರ ಹಾಗೂ ನೆನಪಿನ ಕಾಣಿಕೆ ಪಡೆದುಕೊಂಡರು. ಈ ಸಂದರ್ಭ ವಿದ್ಯಾರ್ಥಿನಿಗೆ ಮಾರ್ಗದರ್ಶಕಿಯಾಗಿದ್ದ ವಿಜ್ಞಾನ ಶಿಕ್ಷಕಿ ಚೈತ್ರಾ ಶೆಟ್ಟಿ, ರಾಷ್ಟ್ರೀಯ ಮಕ್ಕಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನಾ೯ಟಕ ರಾಜ್ಯ ಸರಕಾರಿ ಹಾಸ್ಟೇಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕರರ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕನಾ೯ಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವಗ೯ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರಿನಿವಾಸ ಪೂಜಾರಿ ಅವರಿಗೆ ಸಾಮೂಹಿಕವಾಗಿ ಮನವಿ ಸಲ್ಲಿಸಲಾಯಿತು. ಕಳೆದ ಹತ್ತು ತಿಂಗಳ ಸಂಬಳ ಬಾಕಿ ಪಾವತಿಸಬೇಕು. ಕೆಲಸದ ಭದ್ರತೆ, ಹೊರಗುತ್ತಿಗೆ ಪದ್ಧತಿ ರದ್ಧು ಮಾಡಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಹೊರಗುತ್ತಿಗೆ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ವೆಂಕಟೇಶ್ ಕೋಣಿ, ಜಿಲ್ಲಾಮುಖಂಡರಾದ ಹರೀಶ್ ಬೈಂದೂರು , ಲತಾ.ಯು. ನಾಗರಾಜ ಬೈಂದೂರು, ಕಲ್ಪನಾ ಉಡುಪಿ, ಶಾರದಾ ಪಡುವರಿ, ರೇಣುಕಾ ಯಡ್ತರೆ ಮೊದಲಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ಸರಕಾರದ ಮಹಿಳಾ ಸಬಲೀಕರಣ ಯೋಜನೆಯ ಭಾಗವಾದ ‘ಸಂಜೀವಿನಿ’ ಇದರ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧಿಕೃತ ‘ಫಾಲಾಕ್ಷ’ ಸಂಘವು ಪಂಚಾಯತ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ಸ್ವ ಉದ್ಯೋಗ ಹಾಗೂ ಇನ್ನಿತರೆ ಯೋಜನೆಗಳ ಲಾಭವನ್ನು ಪಡೆಯಲು ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಆಸಕ್ತ ಮಹಿಳೆಯರಿಗೆ ಸೂಚಿಸಲಾಗಿದೆ. ಈ ಸಂದರ್ಭ ಈಶ್ವರ ದೇವಾಡಿಗ, ಸುಬ್ಬಣ್ಣ ಶೆಟ್ಟಿ, ಅನಂದ ಪೂಜಾರಿ ಹಾಗೂ ಪಿ.ಡಿ.ಓ ರಾಜೇಶ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ಲ್ಯಾಕ್ ಫಂಗಸ್ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಸಮರ್ಪಿಸಿದ ಗಂಗೊಳ್ಳಿ ಮೂಲದ ಸಂಶೋಧಕ ಬಿ.ಶ್ರೀಕಾಂತ ಪೈ ಮುಂಬೈ ಅವರು ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೋಟದಲ್ಲಿರುವ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿದರು. ಬ್ಲ್ಯಾಕ್ ಫಂಗಸ್ ಔಷಧ ಸಂಶೋಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಬಿ. ಶ್ರೀಕಾಂತ ಪೈ ಅವರನ್ನು ಅಭಿನಂದಿಸಿ ಗೌರವಿಸಿದರು. ಸರಕಾರದಿಂದ ಏನಾದರು ನೆರವು ಬೇಕಾದಲ್ಲಿ ಅದನ್ನು ಒದಗಿಸಿಕೊಡುವ ಭರವಸೆ ನೀಡಿ ಶುಭ ಹಾರೈಸಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಸಚಿವ ಆಪ್ತ ಸಹಾಯಕ ಹರೀಶ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಂಕಷ್ಟದಲ್ಲಿರುವವರಿಗೆ 2000 ರೂ. ಪರಿಹಾರ ಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆಗಸ್ಟ್ 31 ರೊಳಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಅರ್ಜಿ ಸಲ್ಲಿಸಿ ಪರಿಹಾರ ಮೊತ್ತ ಬಾರದಿರುವವರು ಅರ್ಜಿ ಸಲ್ಲಿಸಬಹುದಾಗಿದೆ ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿಯಲ್ಲಿ ಹಲವಾರು ಆರ್ಥಿಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅರ್ಹರು ನಿಗಮದ ವೆಬ್ಸೈಟ್: https://lidkar.online ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ಕಚೇರಿ ಅಥವಾ ಮೊಬೈಲ್ ಸಂಖ್ಯೆ: 6362891017 ನ್ನು ಸಂಪರ್ಕಿಸಬಹುದೆಂದು ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿ ನಿವಾಸಿ ಸಂತೋಷ ಖಾರ್ವಿ ಎಂಬುವರು ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಮೀನು ದೊರೆತಿದೆ. ಸಮುದ್ರದಲ್ಲಿ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಈ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸುಮಾರು 5 ಅಡಿ ಎತ್ತರವಿರುವ 25 ಕೆ.ಜಿ ತೂಕ ಕೊಳಸ ಹೆಸರಿನ ಈ ಮೀನಿಗೆ ಮಾರುಕಟ್ಟೆಯಲ್ಲಿ 7 ಸಾವಿರ ರೂ. ಇದೆ. ಬೃಹತ್ ಗಾತ್ರದ ಮೀನನ್ನು ನೋಡಲು ಮೀನುಗಾರರು ಮುಗಿ ಬಿದ್ದಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಕನ್ನಡ ಭಾಷೆಗೆ ಪ್ರಾಧಾನ್ಯತೆ ದೊರಕಿಸಿಕೊಡುವ ಉದ್ದೇಶದಿಂದ ಅಕಾಡೆಮಿ ಸ್ಥಾಪಿಸುವ ಚಿಂತನೆ ನಮ್ಮ ಮುಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಸೋಮವಾರ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿ ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪಿಸಬೇಕೆಂಬ ಮನವಿಯನ್ನು ಈ ಹಿಂದೆಯೂ ಬೇರೆ ಬೇರೆ ಸಂದರ್ಭದಲ್ಲಿ ಮಾಡಿದ್ದೆವು. ಈಗ ಆ ಬಗ್ಗೆ ಸಾಧ್ಯಸಾಧ್ಯತೆಗಳನ್ನು ನೋಡಿಕೊಂಡು ಅಕಾಡೆಮಿ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದರು. ಈ ಸಂದರ್ಭ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದನ್ನೂ ಓದಿ ► ಕುಂದಗನ್ನಡ ಅಧ್ಯಯನ ಪೀಠ ಸ್ಥಾಪನೆಗೆ ಮನವಿ – https://kundapraa.com/?p=51024 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ, ಅ16: ಜಿಲ್ಲೆಯಲ್ಲಿ ಸೋಮವಾರ 107 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 39, ಕುಂದಾಪುರ, ಬೈಂದೂರು ತಾಲೂಕಿನ 38, ಕಾರ್ಕಳ, ಹೆಬ್ರಿ ತಾಲೂಕಿನ 29 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 107 ಪ್ರಕರಣಗಳಲ್ಲಿ 84 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 84 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು 133 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1330 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3077ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗೆ ಇಲಾಖೆಯಿಂದ ವರ್ಷಪೂರ್ತಿ ಕಾರ್ಯಕ್ರಮ: ಸಚಿವ ವಿ. ಸುನಿಲ್ ಕುಮಾರ್ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹೊತ್ತಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಚಿಂತನೆ ಇದೆ ಎಂದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಕೋಟ ಡಾ ಶಿವರಾಮ ಕಾರಂತ ಥೀಮ್ ಪಾರ್ಕ್ ಹಾಗೂ ಅಮೃತೇಶ್ವರಿ ದೇವಸ್ಥಾನಗಳಿಗೆ ಭೇಟಿ ನೀಡಿದ ಬಳಿಕ ಥೀಮ್ ಪಾರ್ಕಿನಲ್ಲಿ ಮಾತನಾಡಿ ಶಿವರಾಮ ಕಾರಂತರದ್ದು ಚಲನಶೀಲ ವ್ಯಕ್ತಿತ್ವವಾಗಿದ್ದು, ಎಲ್ಲಾ ವಿಭಾಗದಲ್ಲಿಯೂ ಸೇವೆ ಸಲ್ಲಿಸಿದ್ದರು. ಅವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುತ್ತಿದೆ. ಅದನ್ನು ಮುಂದುವರಿಸಲಾಗುವುದು ಎಂದರು. ಈ ಸಂದರ್ಭ ಡಾ. ಶಿವರಾಮ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಹುದ್ದೆ ನೇಮಕಾತಿ ಆದೇಶ ರದ್ದುಗೊಳಿಸಿದ್ದ ಅಭ್ಯರ್ಥಿ ಸಂಕಷ್ಟಕ್ಕೆ ಸಿಲುಕುವಂತಾಗಿವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ರೋಟರಿ ಕ್ಲಬ್ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಗಂಗೊಳ್ಳಿ, ಕೊಡಪಾಡಿ ಮತ್ತು ತ್ರಾಸಿ ಗ್ರಾಮದ ರಿಕ್ಷಾ ಚಾಲಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ನ್ನು ಭಾನುವಾರ ವಿತರಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ರೋಟರಿ ಕ್ಲಬ್ನ ನಿಕಟಪೂರ್ವ ಅಧ್ಯಕ್ಷರಾದ ಬಿ. ಲಕ್ಷ್ಮೀಕಾಂತ ಮಡಿವಾಳ, ಪ್ರದೀಪ ಡಿ.ಕೆ., ರೋಟರಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
