ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶಕ್ಕೆ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಡುಗೆಯಾಗಿ ನೀಡಿದ ಅವಳಿ ಜಿಲ್ಲೆ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಬ್ಯಾಂಕಿಂಗ್ ಉದ್ಯೋಗಕ್ಕೆ ಮತ್ತು ಬ್ಯಾಂಕ್ ಪರೀಕ್ಷೆ ಎದುರಿಸಲು ಅತಿ ಹೆಚ್ಚು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಕೆನರಾ ಬ್ಯಾಂಕ್ ರಿಕವರಿ ಮ್ಯಾನೇಜರ್ ಪ್ರಭಾಕರ ಶೆಟ್ಟಿ ಹೇಳಿದರು. ಇಲ್ಲಿನ ಶಿಕ್ಷಪ್ರಭಾ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಎಂ.ಬಿ.ಎ ಪರೀಕ್ಷೆ ತರಬೇತಿಯ ನೂತನ ಬ್ಯಾಚ್ನ್ನು ಉದ್ಘಾಟನೆಗೊಳಿಸಿ ಮಾತನಾಡಿ ದೇಶದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು ಅದರಲ್ಲಿ ಸಿಂಹಪಾಲು ಅನ್ಯರಾಜ್ಯದ ವಿದ್ಯಾರ್ಥಿಗಳ ಪಾಲಾಗುತ್ತಿರುವುದು ಕಳವಳಕಾರಿ ಸಂಗತಿ. ವಿದ್ಯಾರ್ಥಿಗಳು ಪದವಿ ಹಂತದಲ್ಲೇ ಧೃಢ ನಿರ್ಧಾರ ಮಾಡಿ ಪ್ರಯತ್ನ ನಡೆಸಿದರೆ ನಿರಾಯಸವಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಪ್ರಭಾ ಅಕಾಡೆಮಿ ಮುಂದಾಳತ್ವ ವಹಿಸಿರುವುದು ಸಂತಸದ ಸಂಗತಿ ಎಂದರು. ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಮಾತನಾಡಿ ನಮ್ಮ ಸಂಸ್ಥೆಯ ಗುಣಮಟ್ಟ ಶಿಕ್ಷಕರು ವಿದ್ಯಾರ್ಥಿಗಳಿಗೆ ನಿರಂತರ ತರಬೇತಿ ನೀಡಲು ಸಿದ್ದರಿದ್ದು ವಿದ್ಯಾರ್ಥಿಗಳು ಬದ್ದತೆಯೊಂದಿಗೆ ತರಗತಿಗೆ ಹಾಜರಾಗಬೇಕು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೊಲ್ಲೂರು ಹಾಗೂ ಆರಕ್ಷಕ ಠಾಣೆ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಚರಣೆ ೨೦೨೧ರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಪರಾಧ ತಡೆಯ ಬಗ್ಗೆ ಕೊಲ್ಲೂರಿನ ಠಾಣಾಧಿಕಾರಿ ನಾಸಿರ್ ಹುಸೇನ್ರವರು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಎಸ್ ಅರುಣ್ಪ್ರಕಾಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ, ಪೂರ್ಣಿಮಾ ಎನ್ ಜೋಯಿಸ್, ಸುಕೇಶ್ ಶೆಟ್ಟಿ ಹೊಸಮಠ, ರಾಮನಾಯ್ಕ ಕೆ.ಬಿ, ಪ್ರ.ದ.ಸಹಾಯಕರಾದ ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ನಾಗರಾಜ ಅಡಿಗ ಕೆ. ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಪರಾಧಗಳು ಸಂಭವಿಸಿದಾಗ ಪೋಲಿಸರಿದ್ದಾರೆ ಎಂದುಕೊಳ್ಳುವ ಮೊದಲು ಅಪರಾಧ ಸಂಭವಿಸದಂತೆ ಎಚ್ಚರವಹಿಸಬೇಕಿದೆ. ಅದು ಕೂಡ ನಮ್ಮದೇ ಕರ್ತವ್ಯವೂ ಆಗಿದೆ. ಬದುಕಿನ ಭದ್ರತೆಗೆ ನೀವೆಲ್ಲರೂ ಪೋಲಿಸ್ನಂತೆಯೇ ಎಚ್ಚರದಲ್ಲಿ ಇರಬೇಕು ಎಂದು ಕುಂದಾಪುರ ಪೋಲಿಸ್ ಉಪಾಧೀಕ್ಷಕರಾದ ಶ್ರೀಕಾಂತ್ ಕೆ. ಹೇಳಿದರು. ಅವರು ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜನೆಯ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಂತ್ರಜ್ಞಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಬದಲಾಗಿ ಅದನ್ನು ದುರುಪಯೋಗ ಮಾಡಿಕೊಳ್ಳಬಾರದು. ಅಪರಾಧಗಳು ನಮ್ಮ ಬದುಕಿನ ಕನಸನ್ನು ಕಸಿದುಕೊಳ್ಳುತ್ತವೆ. ಹಾಗಾಗಿ ಕೆಟ್ಟದನ್ನು ನಾವು ಯೋಚಿಸಬಾರದು ಕುಂದಾಪುರ ಪೊಲೀಸ್ ಉಪನಿರೀಕ್ಷಕ ಸದಾಶಿವ ಆರ್ ಗವರೋಜಿ ಮಾತನಾಡಿ ಪ್ರಸ್ತುತ ಅನೇಕ ಹೊಸ ಹೊಸ ರೀತಿಯ ವಂಚನೆಯ ಜಾಲಗಳಿವೆ. ಅವುಗಳ ಪ್ರಚೋದನೆಗೆ ನಾವು ಒಳಗಾಗಬಾರದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸುಧಾ ಪ್ರಭು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೀತೆಯ ಸಾರ ಸಕಲರಿಗೂ ಉತ್ತಮ ಜೀವನಕ್ಕೆ ಬೆಳಕು ನೀಡಿದಂತೆ ಶ್ರದ್ಧೆಯಿಂದ ಮಾಡುತ್ತಿರುವ ಗೀತ ಪ್ರಸಾರ ಕಾರ್ಯಕ್ರಮ ಬೈಂದೂರಿನಲ್ಲಿ ಅತಿ ಯಶಸ್ವಿಯಾಗಲು ಇಲ್ಲಿಯ ಕಾರ್ಯಕರ್ತರ ಶ್ರಮ ಅಪಾರ ಎಂದು ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು. ಅವರು ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಶ್ರೀಮದ್ಭಗವದ್ಗೀತಾ ಜಯಂತಿ ಆಚರಣೆ ಸಮಿತಿ ಬೈಂದೂರು ಗೀತಾ ಜಯಂತಿ ಉತ್ಸವ 2021 ಇದರ ವಲಯ ಮಟ್ಟದ ಸ್ಪರ್ಧಾ ಕೂಟದ ಉದ್ಘಾಟಿಸಿ ಮಾತನಾಡಿದರು. ಶ್ರೀಮದ್ಭಗವದ್ಗೀತಾ ಜಯಂತಿ ಆಚರಣೆ ಸಮಿತಿ ಅಧ್ಯಕ್ಷರಾದ ರಾಮಕೃಷ್ಣ ಶೇರುಗಾರ್ ಬಿಜೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ಸಮಿತಿಯ ಮುಖ್ಯಸ್ಥರಾದ ವಿಶ್ವೇಶ್ವರ ಅಡಿಗ ಸ್ಪರ್ಧಾ ನಿಯಮಗಳನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ರಾಮಕ್ಷತ್ರಿಯ ಸಮಾಜ ಅಧ್ಯಕ್ಷರಾದ ಪರಮೇಶ್ವರ ಹೋಬಳಿದಾರ್, ಬೈಂದೂರು ರತ್ತೂಬಾಯಿ ಜನತಾ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ರಾಮಕ್ಷತ್ರಿಯ ಮಾತೃ ಮಂಡಳಿ ಅಧ್ಯಕ್ಷರಾದ ಮಂಜುಳಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಲೇಖಕನಾದವನು ಸದಾ ಸೃಜನಶೀಲತೆಯೊಂದಿಗೆ ಓದುಗರಿಗೆ ನವನವೀನ ವಿಚಾರಗಳು ತಿಳಿಸುತ್ತಿರಬೇಕು. ಸಾಮಾನ್ಯವಾಗಿ ಸುದೀರ್ಘವಾಗಿರುವ ಪುಸ್ತಕದ ಓದು ಜ್ಞಾನಶೀಲ ಮಾತ್ರವಲ್ಲ ಪರಿವರ್ತನಾಶೀಲವೂ ಆಗಿರಬೇಕು. ಹೀಗಿನ ಆಶಯಕ್ಕೆ ಪೂರಕವಾಗಿ ಮನಲೋಕದಲ್ಲಿ ಪ್ರಕಟವಾಗಿರುವ ಎಲ್ಲ ಲೇಖನಗಳು ಇತಿಹಾಸದ ರೋಚಕ ಮಾಹಿತಿಗಳು ಮತ್ತು ವರ್ತಮಾನದ ವಾಸ್ತವಗಳಿಂದ ಕೂಡಿದೆ ಎಂದು ಮಂಗಳೂರಿನ ಹಿರಿಯ ಲೇಖಕಿ-ಸಂಶೋಧಕಿ ರೋಹಿಣಿ ಬಿ ಎಮ್ ಹೇಳಿದರು ಅವರು ಗಾಂಧಿ ವಿಚಾರ ವೇದಿಕೆ ಬ್ರಹ್ಮಾವರ ಘಟಕ ಹಾಗೂ ಮಿತ್ರ ಮಂಡಳಿ ಕೋಟ ಸಹಯೋಗದೊಂದಿಗೆ ಕೋಟ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿಯಲ್ಲಿ ಭಾನುವಾರ ಆಯೋಜಿಸಲಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಷ್ತಾಕ್ ಹೆನ್ನಾಬೈಲ್ ರವರ “ಮನಲೋಕ” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿ ಸಾಹಿತ್ಯಲೋಕದಲ್ಲಿ ದಿನದಿಂದ ದಿನಕ್ಕೆ ಓದುಗರ ಪ್ರೀತಿಗೆ ಪಾತ್ರರಾಗುತ್ತಿರುವ ವಿಶಿಷ್ಟ ಶೈಲಿಯ ಲೇಖಕ ಮುಷ್ತಾಕ್ ಹೆನ್ನಾಬೈಲರ ಭಾಷೆ, ವಿಚಾರ, ವಿವೇಕವು ಮುಂಬರುವ ದಿನಗಳಲ್ಲಿ ಕನ್ನಡದ ಸಮಸ್ತ ಓದುಗರಿಗೆ ಸದಾಕಾಲ ರೋಮಾಂಚಕ ಮೂಡಿಸುವುದು ನಿಶ್ಚಿತ. ಅವರೊಬ್ಬ ನಾನು ಕಂಡ ಅದ್ಭುತ ಅಧ್ಯಯನಶೀಲ ಪರಿಪೂರ್ಣ ಲೇಖಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಯಿಂಗ್ ವಾಹನದ ಹಿಂಭಾಗ ಜಾನುವಾರು ಕಳೇಬರ ಕಟ್ಟಿ ಎಳೆದೊಯ್ದ ಹೆದ್ದಾರಿ ಗುತ್ತಿಗೆದಾರ ಕಂಪೆನಿಯ ವಿರುದ್ದ ಹಿಂದೂ ಹಿತರಕ್ಷಣ ವೇದಿಕೆ ಬೈಂದೂರು ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡ, ಹಿಂದೂ ಜಾಗರಣ ವೇದಿಕೆ, ಸ್ವದೇಶಿ ಬಳಗ ಹಾಗೂ ಇನ್ನಿತರ ಹಿಂದೂಪರ ಸಂಘಟನೆಗಳಿಂದ ಸೋಮವಾರ ಶಿರೂರು ಟೋಲ್ ಪ್ಲಾಜಾ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್ – ಬಜರಂಗದಳದ ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಬಿಜೂರು ಜಾನುವಾರುಗಳ ಕಳೇಬರವನ್ನು ಪೈಶಾಚಿಕವಾಗಿ ಏಳೆದೊಯ್ದ ಹೆದ್ದಾರಿ ಗುತ್ತಿಗೆದಾರ ಕಂಪೆನಿಯ ಕೃತ್ಯ ಹೇಯವಾಗಿದೆ ಎಂದು ಕಿಡಿಕಾರಿದರು. ಶಿರೂರು ಟೋಲ್ ಗೇಟ್ನಲ್ಲಿ ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು ಇವುಗಳನ್ನು ಆದಷ್ಟು ಬೇಗ ಸರಿಪಡಿಸಬೇಕು. ಒಂದೊಮ್ಮೆ ಇವುಗಳನ್ನು ಸರಿಪಡಿಸದಿದ್ದಲ್ಲಿ ವಿ.ಹಿ.ಪ ಹಾಗೂ ವಿವಿಧ ಸಂಘಟನೆಯ ವತಿಯಿಂದ ಶಿರೂರು ಟೋಲ್ ಪ್ಲಾಜಾದ ಮುಂದೆ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದರು. ವಿ.ಹಿ.ಪ ಬಜರಂಗದಳ ಮುಖಂಡ ಜಗದೀಶ ಕೊಲ್ಲೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸತತ ಮೂರು ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಸಚಿವರಾಗಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಭಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಡಿ.10ರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ ಗೆಲ್ಲಿಸಲು ಚುನಾಯಿತ ಪ್ರತಿನಿಧಿಗಳು ಶ್ರಮವಹಿಸಬೇಕಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಸದನದಲ್ಲಿ ದೀನ ದಲಿತರ, ಬಡವರ, ಹಿಂದುಳಿದ ವರ್ಗದವರ ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಸರ್ಮಥವಾಗಿ ಕಾರ್ಯನಿರ್ವಹಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ಬಗ್ಗೆ ಅಪಾರ ಅನುಭವವುಳ್ಳವರು. ಹಿಂದುಳಿದ ವರ್ಗದ ನಾಯಕರಾಗಿ ದಕ್ಷ, ಪ್ರಾಮಾಣಿಕ, ಸರಳ ಸಜ್ಜನಿಕೆಯ ಮೂಲಕ ಹೆಸರಾದವರು. ಮತ್ತೊಮ್ಮೆ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ ಜವಾಬ್ದಾರಿ ಚುನಾಯಿತ ಪ್ರತಿನಿಧಿಗಳದ್ದಾಗಿದೆ ಎಂದರು. ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮ:ಪ್ರಧಾನಿ ನರೇಂದ್ರ ಮೋದಿಜಿಯವರ ಪರಿಕಲ್ಪನೆಯ ಸ್ಮಾರ್ಟ್ ಸಿಟಿಯ ಜೊತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ರವರ ಮಹಾ ಪರಿನಿರ್ವಾಣಾ ದಿನ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಎಸ್. ಅರುಣ್ಪ್ರಕಾಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಡಾ. ಬಿ. ಆರ್. ಅಂಬೇಡ್ಕರ್ರವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಗೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ದೀಕ್ಷಾ, ಪ್ರಥಮ ಕಲಾ ವಿಭಾಗದ ಕೀರ್ತನಾ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು ಹಾಗೂ ದ್ವಿತೀಯ ಕಲಾ ವಿಭಾಗದ ಸಿಂದುಶ್ರೀ ಮಯ್ಯ ದೇಶಭಕ್ತಿಗೀತೆ ಹಾಡಿದರು. ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ, ಎಂ ವಾಸುದೇವ ಉಡುಪ, ಜ್ಯೀತಿ ಎ ಶೆಟ್ಟಿ, ಪೂರ್ಣಿಮಾ ಎನ್ ಜೋಯಿಸ್, ಪ್ರ.ದ.ಸಹಾಯಕರಾದ ದಿನಕರ ಶೆಟ್ಟಿ, ಹಾಗೂ ಯತೀಶ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ ನಿರೂಪಿಸಿ ಸ್ವಾಗತಿಸಿದರು, ಗಣಕಶಾಸ್ತ್ರ ಉಪನ್ಯಾಸಕ ರಾಮನಾಯ್ಕ ಕೆ.ಬಿಯವರು ವಿದ್ಯಾರ್ಥಿಗಳಿಗೆ ಮಧ್ಯಾವಾರ್ಷಿಕ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು, ಸಮಾಜಶಸ್ತ್ರ ಉಪನ್ಯಾಸಕರಾದ ನಾಗರಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ರಾಜ್ಯ ಸರಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಬೈಂದೂರು ಶಾಸಕರು ಹಾಗೂ ಸಂಸದರು ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ವರದಿ ಜಾರಿಗೊಳಿಸುವ ಸಂಬಂಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವರದಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದರ ಒಳಿತು ಕೆಡಕುಗಳನ್ನು ತಿಳಿದುಕೊಂಡು ಯಾರಿಗೂ ತೊಂದರೆಯಾಗದಂತೆ ವರದಿ ಅನುಷ್ಠಾನಗೊಳಿಸಬೇಕು. ಹೀಗಾಗಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸಲು ಮುಂದಾಗಬಾರದು ಎಂದು ಸರಕಾರವನ್ನು ಆಗ್ರಹಿಸಲಾಗುವುದು ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಹೇಳಿದರು. ಹೆಮ್ಮಾಡಿಯಲ್ಲಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೈಂದೂರು ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕರು ಹಾಗೂ ಸಂಸದರ ಗಮನಕ್ಕೆ ತರಲಾಗಿದೆ. ಈ ಸಂಬಂಧ ಶಾಸಕ ಸುಕುಮಾರ್ ಶೆಟ್ಟಿ ಅವರು ಡಿ.೬ರಂದು ಬೈಂದೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಲಿದ್ದಾರೆ. ಸರಕಾರಿ ಆಸ್ಪತ್ರೆಗೆ ಅಗತ್ಯ ಮೂಲಭೂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ‘ಕಾರ್ಟೂನು ಹಬ್ಬ’ದ ಕಾರ್ಟೂನು ಸ್ಪರ್ದೆಗೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದು ‘ಕೋಮು ಸೌಹಾರ್ದತೆ ವಿಷಯದ ಮೇಲೆ ಸ್ವರ್ಧೆ ನಡೆಯಿತು. ಕಾರ್ಟೂನು ಹಬ್ಬದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ದೆಯ ವಿಷಯವನ್ನು ಘೋಷಿಸಿದ ಅರ್ಧ ಗಂಟೆಗಳ ತನಕ ವಿಧ್ಯಾರ್ಥಿಗಳು ತಮ್ಮ ತಮ್ಮ ಪೋಷಕರ ಜೊತೆ ಆ ವಿಷಯದ ಕುರಿತು ಚರ್ಚಿಸಿ ತಿಳಿದುಕೊಂಡು ನಂತರ ಚಿತ್ರಗಳನ್ನು ರಚಿಸುವ ಅವಕಾಶ ನೀಡಲಾಗಿತ್ತು. ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುಮಾರು 170ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ದೆಯು 4ರಿಂದ 7ನೆಯ ತರಗತಿಯ ಒಳಗಿನ ವಿಧ್ಯಾರ್ಥಿಗಳಿಗೆ, 8ರಿಂದ 10ನೆಯ ತರಗತಿಯ ಒಳಗಿನ ವಿಧ್ಯಾರ್ಥಿಗಳಿಗೆ ಹಾಗೂ ಪಿಯುಸಿ ನಂತರದ ವಿಧ್ಯಾರ್ಥಿಗಳಿಗೆ ಹೀಗೆ ಮೂರು ವಿಭಾಗಗಳಲ್ಲಿ ನಡೆದಿತ್ತು. ಈ ಸ್ಪರ್ಧೆಯಲ್ಲಿ 4ರಿಂದ 7ನೆಯ ತರಗತಿಯ ಒಳಗಿನ ಮಕ್ಕಳಿಗೆ ಪ್ರಥಮ ಬಹುಮಾನವಾಗಿ 8 ಸಾವಿರ ರೂಪಾಯಿ, ದ್ವಿತೀಯ ಬಹುಮಾನವಾಗಿ 4 ಸಾವಿರ ರೂ, ತೃತೀಯ ಬಹುಮಾನವಾಗಿ…
