Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಾಡು ಭಗತ್ ನಗರದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಭಾನುವಾರ ಜರುಗಿತು. ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಗೋವಿಂದ ಬಾಬು ಪೂಜಾರಿ ಅವರು ಪುಷ್ಪಾ ಉಲ್ಲಾಸ್ ದಂಪತಿಗಳಿಗೆ ಮನೆಯ ಬಿಗದ ಕೈ ಹಸ್ತಾಂತರಿಸಿದರು. ಶ್ರೀ ವರಲಕ್ಷ್ಮೀ ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ನಾಲ್ಕನೇ ಮನೆ ಇದಾಗಿದ್ದು, ಇನ್ನು ಒಂದು ಮನೆಗಳು ನಿರ್ಮಾಣ ಹಂತದಲ್ಲಿದೆ. ಆರೋಗ್ಯ ಸೇವೆ, ಅಗತ್ಯವುಳ್ಳವರಿಗೆ ನೆರವು, ಪುಡ್ ಕಿಟ್ ವಿತರಣೆ ಸೇರಿದಂತೆ ಹತ್ತಾರು ಸಾಮಾಜಿಕ ಕಾರ್ಯಗಳನ್ನು ಟ್ರಸ್ಟ್ ಮೂಲಕ ಮಾಡಲಾಗುತ್ತಿದೆ ಎಂದರು. ಗೋವಿಂದ ಬಾಬು ಪೂಜಾರಿ ಅವರನ್ನು ಪುಷ್ಪಾ ಉಲ್ಲಾಸ್ ದಂಪತಿಗಳು ಹಾಗೂ ಸೇವಾ ಸಂಕಲ್ಪ ತಂಡದಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಭಾನುವಾರ 75ನೇ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು. ಕುಂದಾಪುರ ಗಾಂಧಿ ಮೈದಾನದಲ್ಲಿ ಉಪ ವಿಭಾಗಾಧಿಕಾರಿ ರಾಜು ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿ ಹೋರಾಟದ ಉತ್ಸಾಹ, ತ್ಯಾಗ ಭಾವನೆಗಳ ಮೂಲಕ ಹುತಾತ್ಮರನ್ನು ನೆನೆಯುತ್ತ, ಸವಾಲುಗಳನ್ನೆದುರಿಸುವ ಅಗತ್ಯತೆ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ. ಪ್ರಧಾನಿಯವರ ಆಶಯದಂತೆ, 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು 75 ರ ಯೋಜನೆಗಳು, 75ರ ಸಾಧನೆಗಳು, 75ರ ಕ್ರಿಯೆಗಳು ಹಾಗೂ 75ರ ಪರಿಹಾರ ಎನ್ನುವ ಐದು ಅಂಶಗಳತ್ತ ನಮ್ಮ ಮುಂದಿನ ರೂಪುರೇಶೆಯಾಗಿರುತ್ತದೆ. ಸ್ವಾತಂತ್ರ್ಯದ ಆಶಯವನ್ನು ಸರ್ವರಿಗೂ ತಲುಪಿಸುವ ನಿಟ್ಟಿನಲ್ಲಿ ಇನ್ನಷ್ಟು ದೃಢತೆಯ ಹೆಜ್ಜೆಗಳನ್ನಿಡುವ, ಸಂಕಲ್ಪ ತೊಡುವ ದಿನ ಇದಾಗಿದೆ ಎಂದವರು ಹೇಳಿದರು. ಗಾಂಧೀಜಿ- ನೇತಾಜಿ, ಪಟೇಲ್- ಸಾವರ್ಕರ್ ರಂತಹ ಮಹಾನ್ ನಾಯಕರ ಮುಂದಾಳ್ವತದಲ್ಲಿ ಕರಾವಳಿಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಉಮಾಬಾಯಿ ಅವರು ಮಹತ್ವದ ಪಾತ್ರ ವಹಿಸಿದ್ದರು. ತಿಲಕ್‌ರಿಂದ ಪ್ರೇರಿತರಾಗಿ, ಸೇವಾದಳದ ಮುಖ್ಯಸ್ಥರಾಗಿ, ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಕೆಲಸಗಳು ಆಗಬೇಕೆಂದರೆ ದಾನಿಗಳ ಸಹಕಾರ ಅತ್ಯಗತ್ಯ ಮುಳ್ಳಿಕಟ್ಟೆ ಸರ್ಕಲ್ ಎನ್ನುವುದು ಅಪಾಯಕಾರಿ ಜಂಕ್ಷನ್ ಆಗಿದೆ ಸಾರ್ವಜನಿಕರು ಮತ್ತು ವಾಹನ ಸವಾರರ ಹಿತ ದೃಷ್ಟಿಯಿಂದ ಬ್ಯಾರೆಕೇಡ್ ವ್ಯವಸ್ಥೆ ಮಾಡಿರುವುದು ತುಂಬಾ ಉತ್ತಮವಾದ ಕೆಲಸವಾಗಿದೆ ಎಂದು ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ ಶೆಟ್ಟಿ ಹಕ್ಲಾಡಿ ಹೇಳಿದರು. ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ ಬ್ಯಾರಿಕೇಡ್ ವಿತರಣೆ ಮತ್ತು ಸನ್ಮಾನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ನಿ, ಹೆಮ್ಮಾಡಿ (ಹೊಸಾಡು ಶಾಖೆ), ಗ್ರಾಮ ಪಂಚಾಯತ್ ಹೊಸಾಡು, ನಗು ಗ್ರೂಪ್ಸ್ ಮುಳ್ಳಿಕಟ್ಟೆ, ಹೇರಿಯ. ಪಿ ನಾಯ್ಕ್ ಮತ್ತು ಮಕ್ಕಳು ಮುಳ್ಳಿಕಟ್ಟೆ, ಪ್ರಮೋದ ಆಚಾರ್ಯ ಕಾಳಮ್ಮ ವೆಲ್ಡಿಂಗ್ ವರ್ಕ್ಸ್ ಮುಳ್ಳಿಕಟ್ಟೆ, ಸತೀಶ ಶೆಟ್ಟಿ ಮೂಕಾಂಬಿಕಾ ಆಲೂರು, ಸುಪ್ರಭಾ ಫ್ಯುಯೆಲ್ಸ್ ಮತ್ತು ಸರ್ವಿಸ್ ಮುಳ್ಳಿಕಟ್ಟೆ ಅವರು ಕೊಡಮಾಡಿದ ಏಳು ಬ್ಯಾರಿಕೇಡ್‌ಗಳನ್ನು ಗೋವಿಂದ ಬಾಬು ಪೂಜಾರಿ ಅವರು ಗಂಗೊಳ್ಳಿ ಪೊಲೀಸ್ ಠಾಣೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಸಮರ್ಪಿಸಿದ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಮುಂಬೈ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು. ಗಂಗೊಳ್ಳಿಯ ಸ್ವಗೃಹದಲ್ಲಿ ಬಿ. ಶ್ರೀಕಾಂತ ಪೈ ಅವರನ್ನು ಭೇಟಿ ಮಾಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ಹಾಗೂ ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಹಾಗೂ ರೋಟರಿ ಸದಸ್ಯರು ಸನ್ಮಾನಿಸಿ ಗೌರವಿಸಿದರು. ಗಂಗೊಳ್ಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರಾದ ಉಮೇಸ ಮೇಸ್ತ, ಜನಾರ್ಧನ ಪೂಜಾರಿ, ಪ್ರದೀಪ ಡಿ.ಕೆ., ಬಿ.ಲಕ್ಷ್ಮೀಕಾಂತ ಮಡಿವಾಳ, ವಾಸುದೇವ ಶೇರುಗಾರ್, ನಿಯೋಜಿತ ಅಧ್ಯಕ್ಷೆ ಸುಗುಣಾ ಆರ್.ಕೆ., ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಆಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸರ್ಕಾರಿ ಪಾಲಿಟೆಕ್ನಿಕ್ ಉಡುಪಿಯಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್ಲೈನ್ ಪ್ರಕಾರ ಆಗಸ್ಟ್ 12 ರಿಂದ ಆಗಸ್ಟ್ 31ರ ತನಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2570244 ನ್ನು ಸಂಪರ್ಕಿಸಬಹುದಾಗಿದೆಂದು ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿದ ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆ, ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಬಹುದಾಗಿದ್ದು, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ ಒಟ್ಟು ವೆಚ್ಚದ ಶೇ. 35 ರಂತೆ ಗರಿಷ್ಟ ರೂ. 10 ಲಕ್ಷ ಸಹಾಯಧನ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸದಾಗಿ ನಿರ್ಮಾಣ ಮಾಡುವ ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಒಟ್ಟು ವೆಚ್ಚದ ಶೇ. 40 ರಂತೆ ಗರಿಷ್ಟ ರೂ. 10 ಲಕ್ಷ ಸಹಾಯಧನ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ದ್ವಿತಿಯ ಹಂತದ ಸಂಸ್ಕರಣೆಗಳನ್ನು ಕೈಗೊಳ್ಳುವ ರೂ. 50 ಲಕ್ಷಕ್ಕಿಂತ ಅಧಿಕ ಬಂಡವಾಳವನ್ನು ತೊಡಗಿಸಿರುವ ಸಂಸ್ಕರಣಾ ಘಟಕಗಳಿಗೆ ಒಟ್ಟು ವೆಚ್ಚದ ಶೇ. 25 ರಂತೆ ಗರಿಷ್ಟ ರೂ. 50 ಲಕ್ಷ ಸಹಾಯಧನ ಕೃಷಿ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಧಿಯಡಿ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಮದ್ಯಮಾವದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಒಂದೂವರೆ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಉಸಿರಾಡುತ್ತಿರುವ ಇಲ್ಲಿನ ಹಟ್ಟಿಯಂಗಡಿ ಹನೆಮನೆ ಬಚ್ಚಿ ಎನ್ನುವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದು, ಸಹೃದಯಿ ದಾನಿಗಳ ಸಹಕಾರದ ಅಗತ್ಯವಿದೆ. ಬಚ್ಚಿ ಅವರನ್ನು ಪರಿಶೀಲಿಸಿದ ವೈದ್ಯರು ಶ್ವಾಸಕೋಶದಲ್ಲಿ ನೀರು ನಿಲ್ಲುತ್ತಿದ್ದು, ಸಂಪೂರ್ಣ ವಿಫಲವಾಗಿದ್ದರಿಂದ ಉಸಿರಾಟದ ಸಮಸ್ಯೆ ಉಂಟಾಗಿದೆ. ಉಸಿರಾಟ ಸಮಸ್ಯೆ ಹೃದಯಕ್ಕೆ ಒತ್ತಡ ಹಾಕುತ್ತಿದೆ. ಬ್ರೈನ್ ಟೂಮರ್ ಇದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ನೆರವಿಗೆ ಮನವಿ: ಚಿಕ್ಕ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದು, ಮಗಳ ಕೂಲಿಯೇ ಮನೆಯ ಜೀವನಾಧಾರವಾಗಿದ್ದು, ಬಚ್ಚಿ ಪತಿ ಕೂಡಾ ಅಡಕೆ ಮರದಿಂದ ಬಿದ್ದು ಕಾಲು ಆಪರೇಶನ್ ಆಗಿದ್ದರಿಂದ ಕೆಲಸ ಮಾಡಲು ಆಗುತ್ತಿಲ್ಲ. ಪ್ರಸ್ತುತ ಹೆಚ್ಚಿನ ಚಿಕಿತ್ಸೆ ಕೊಡಿಸಲು ಹಣಕಾಸಿನ ತೊಂದರೆಯಿಂದ ಪ್ರಸಕ್ತ ಬಚ್ಚಿ ಅವರಿಗೆ ಮನೆಯಲ್ಲಿಯೇ ಆರೈಕೆ ಮಾಡಲಾಗುತ್ತಿದೆ, ಮನೆಯಲ್ಲಿಯೇ ಆಕ್ಸಿಜನ್ ನಿರಂತರ 24 ಗಂಟೆ ನೀಡಲು ವೈದ್ಯರು ಕಡ್ಡಾಯ ಸೂಚಿಸಿದ್ದಾರೆ. ಆಕ್ಸಿಜನ್ ಪೂರೈಕೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅನುಪಮಾ ಪ್ರಸಾದ್ ಅವರ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಯು ಮೂರು ತಲೆಮಾರಿನ ಕಥೆಯನ್ನು ಹೇಳುತ್ತಾ 20ನೇ ಶತಮಾನದ ನಮ್ಮ ಭಾರತದ ಚಿತ್ರಣವನ್ನು ಸೂಕ್ಷ್ಮವಾಗಿ ಬಿತ್ತರಿಸುತ್ತದೆ ಎಂದು ಹಿರಿಯ ಲೇಖಕ ಪ್ರೊ. ಓ.ಎಲ್.ನಾಗಭೂಷಣಸ್ವಾಮಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿಯು ಹಲವು ಕಾದಂಬರಿಕಾರರ ಕಾದಂಬರಿಗಳಿಗೆ ಹೋಲಿಸಬಹುದು ಆದರೆ ಮೂರು ತಲೆಮಾರಿನ ಸಂಗತಿಗಳನ್ನು ನೈಜತೆಗೆ ಹತ್ತಿರವಾಗಿ ಬಿತ್ತರಿಸುತ್ತದೆ ಎಂಬುದು ಮನಸಿಗೆ ಸ್ಪಷ್ಟವಾಗಿ ಕಾಣುತ್ತದೆ. ಒಂದು ವಿಚಿತ್ರ ಸಂವೇದನೆಯೊಂದಿಗೆ ಕಾದಂಂಬರಿ ಓದಿಸಿಕೊಂಡು ಹೋಗುತ್ತದೆ. ಅಲ್ಲಿನ ಪಾತ್ರಗಳು ಮತ್ತು ಹಲವು ದಷ್ಟಿಕೋನಗಳಲ್ಲಿ ಕಥೆಯನ್ನು ಹೇಳುವ ಶೈಲಿ ಈ ಕಾದಂಬರಿಯಲ್ಲಿದೆ. ಹಾಗೆಯೇ ಈ ಕಾದಂಬರಿಯಲ್ಲಿ ಯಾವ ಪಾತ್ರವು ಮುಖ್ಯವಲ್ಲ. ಆದರೆ ಎಲ್ಲಾ ಪಾತ್ರಗಳು ಅತ್ಯಂತ ಮುಖ್ಯವೆನಿಸುತ್ತದೆ. ಜೀವನದ ಪರಿ ಹಳ್ಳ ನದಿಯಾಗಿ ಸಮುದ್ರ ಸೇರುವ ಪರಿ ಹಾದಿಗುಂಟ ಮನುಷ್ಯನ ಅನೇಕ ಸಂಚಲನಗಳನ್ನು ಹೊರಗೆಡವುತ್ತದೆ. ಗತಕಾಲವನ್ನು ಹೇಳುವುದು ಕಾಲದ ನೀರಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಬ್ಬರಿಗೂ ಜೀವನದಲ್ಲಿ ಶಿಸ್ತು, ತಾಳ್ಮೆ, ಗೌರವ ಅತಿ ಮುಖ್ಯ. ಶಿಸ್ತು ತಾಳ್ಮೆಯಿಂದ ಯಾವುದೇ ಕಾರ್ಯವನ್ನು ಯಶಸ್ವಿಯಾಗಿ ಮಾಡಬಹುದು. ಇಂದಿನ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಬಾಲ್ಯದಲ್ಲಿ ಗುರು ಹಿರಿಯರಿಂದ ಪಡೆದ ಸಂಸ್ಕಾಯುತ ಶಿಕ್ಷಣ ಮುಂದಿನ ನಮ್ಮ ಜೀವನದಲ್ಲಿ ಸಹಾಯಕ್ಕೆ ಬರುತ್ತದೆ. ವಿದ್ಯಾರ್ಥಿ ಜೀವನದ ಸದುಪಯೋಗ ಮಾಡಿಕೊಳ್ಳುವುದರ ಜೊತೆಗೆ ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನಕ್ಕೇರುವ ಪ್ರಯತ್ನ ಮಾಡಬೇಕು ಎಂದು ಸಂಶೋಧಕ ಬಾಂಡ್ಯ ಶ್ರೀಕಾಂತ ಪೈ ಹೇಳಿದರು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಹಾಗೂ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರಗಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಅರ್ಪಿಸಿದ ಬಿ.ಶ್ರೀಕಾಂತ ಅಣ್ಣಪ್ಪ ಪೈ ಅವರನ್ನು ಜಿಎಸ್‌ವಿಎಸ್ ಅಸೋಸಿಯೇಶನ್ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಪರವಾಗಿ ಗೌರವಿಸಲಾಯಿತು. 2019-20ನೇ ಸಾಲಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮದಲ್ಲಾದ ನಷ್ಟ ಹಾಗೂ ಸಾಲಬಾಧೆಯಿಂದ ಬೇಸತ್ತು ಕಾಳಾವರ ಗ್ರಾಮ ಶಾಲೆ ಬಳಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಗಾಣಿಗ (42) ಎಂಬವರು ಗುರುವಾರ ಮನೆಯ ಸಮೀಪದ ಹಾಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಘವೇಂದ್ರ ಗಾಣಿಗ ಬುಧವಾರ ಪತ್ನಿ ಸುಜಾತಾ ಬಳಿ ಉಡುಪಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಸಂಜೆ ಪತ್ನಿ ಪೋನ್ ಮಾಡಿ ವಿಚಾರಿಸಿದಾಗ ಹೋಟೆಲ್ ಬಾಗಿಲು ಹಾಕಿ ರಿಕ್ಷಾ ಮಾಡಿಕೊಂಡು ಮನೆಗೆ ಹೋಗು, ನಾನು ಬರೋದು ತಡವಾಗುತ್ತದೆ ಎಂದು ಪೋನ್ ಕಟ್ ಮಾಡಿದ್ದರು. ರಾತ್ರಿ ಪತ್ನಿ ಮತ್ತೆ ಪೋನ್ ಮಾಡಿದಾಗ ಮೊಬೈಲ್ ಚಾಲನೆಯಲ್ಲಿ ಇರಲಿಲ್ಲ. ಪತ್ನಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದು, ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಂಡ್ಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More