ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೇಶ್ವರದ ನಾಣು ಚಂದನ್ ಅವರ ನೇತೃತ್ವ ಮತ್ತು ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ರಕ್ಷಾಬಂಧನ ದಿನಾಚರಣೆಯಲ್ಲಿ ವಿವಿಧ ಸೇವಾನಿರತರನ್ನು ಸನ್ಮಾನಿಸಲಾಯಿತು. ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಧರ್ಮದರ್ಶಿ ತಿಮ್ಮ ವಿ. ದೇವಾಡಿಗ ಕಾರ್ಯಕ್ರಮ ಉದ್ಘಾಟಿಸಿದರು. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬೈಂದೂರು ತಾಲ್ಲೂಕು ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಮಹೇಂದ್ರ ಪೂಜಾರಿ, ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೇಖರ ಖಾರ್ವಿ, ಧಾರ್ಮಿಕ ಚಟುವಟಿಕೆ ನಡೆಸುತ್ತಿರುವ ಪದ್ಮಾವತಿ ಟಿ. ದೇವಾಡಿಗ ಅವರು ಸನ್ಮಾನ ಸ್ವೀಕರಿಸಿದರು. ಕೋವಿಡ್ ವಾರಿಯರ್ಸ್ ದುಡಿಯುತ್ತಿರುವ ಕಿರಿಮಂಜೇಶ್ವರ ಗ್ರಾಮದ ಎಲ್ಲ ಆಶಾ ಕಾರ್ಯಕರ್ತರ ಸೇವೆಯನ್ನು ಗುರುತಿಸಿ ಅವರಿಗೆ ಕಿರು ಕಾಣಿಕೆ ನೀಡಿ ಶುಭ ಕೋರಲಾಯಿತು. ಮೀನುಗಾರಿಕಾ ಇಲಾಖೆಯ ನಿವೃತ್ತ ಅಧಿಕಾರಿ ಸಿ. ಎಸ್. ಖಾರ್ವಿ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೋವಿಡ್ ನಂತರದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಆನ್ಲೈನ್ ಶಿಕ್ಷಣ ಈಗ ಅನಿವಾರ್ಯವಾಗಿದ್ದು ಅದಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದೆ. ಸರಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣದ ದೊರೆಯುವಂತೆ ಮಾಡುವುದು ಸರಕಾರದ ಗುರಿಯಾಗಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಾಗ್ನಿಜೆಂಟ್ ಕಂಪೆನಿ ಹೆಲ್ಫ್ ಟು ಎಜುಕೇಟ್ ಯೋಜನೆಯಡಿ ಬೈಂದೂರು ರೋಟರಿ ಸಂಸ್ಥೆಯ ಮೂಲಕ ಕೊಡಮಾಡಿದ ರೂ. 10 ಲಕ್ಷ ಮೌಲ್ಯದ 30 ಕಂಪ್ಯೂಟರ್ ಸಿಸ್ಟಮ್ ಹಸ್ತಾಂತರಿಸಿ ಮಾತನಾಡಿದರು. ರೋಟರಿ ಕ್ಲಬ್ ಸಮಾಜ ಕಟ್ಟುವ ಕಾರ್ಯ ಮಾಡುತ್ತಿದೆ. ಬೈಂದೂರು ಸರಕಾರಿ ಕಾಲೇಜಿಗೆ ಕಾಗ್ನಿಜೆಂಟ್ ಸಂಸ್ಥೆಯ ಸಿಎಸ್ಆರ್ ಮೂಲಕ ನೀಡುವ ಕಾರ್ಯ ಮಾಡಿದೆ. ರೋಟರಿ ಸಂಸ್ಥೆಯ ಮೂಲಕ ಇನ್ನಷ್ಟು ಉತ್ತಮ ಕಾರ್ಯಗಳಾಗಲಿ ಎಂದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಕುಮಾರ್ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ಎಸ್. ಕುಮಾರ್ ಅವರು ಎರಡು ಭಾರಿ ಕೊಲ್ಲೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಕೊಲ್ಲೂರು ಜೀಪು ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸಾಯಿ ಬಿಲ್ಡೀಂಗ್ನ ಮೊದಲನೇ ಮಹಡಿಯಲ್ಲಿ ಸಿಎ ನಾಗರಾಜ ಪೂಜಾರಿ & ಕೋ ಚಾರ್ಟರ್ಡ್ ಅಕೌಂಟೆಂಟ್ಸ್ ನೂತನ ಕಛೇರಿ ಗುರುವಾರ ಶುಭಾರಂಭಗೊಂಡಿತು. ಈ ಸಂದರ್ಭ ಕುಂದಾಪುರ ಎಪಿಎಂಸಿ ಅಧ್ಯಕ್ಷ ವೆಂಕಟ ಪೂಜಾರಿ, ಉಪುಂದ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ, ಉದ್ಯಮಿಗಳಾದ ಸಮರ್ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಪ್ರವೀಣ ಶೆಟ್ಟಿ, ಪ್ರದೀಪ್ ಶೆಟ್ಟಿ, ರಾಜೇಂದ್ರ ಗಾಣಿಗ, ದಿನೇಶ್ ಆಚಾರ್, ಗಂಗಾಧರ ದೇವಾಡಿಗ, ಪ್ರವೀಣ್ ಆಚಾರ್, ಚಾರ್ಟರ್ಡ್ ಅಕೌಂಟೆಂಟೆ ನಾಗರಾಜ್ ಪೂಜಾರಿ, ತಿಮ್ಮಪ್ಪ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋ ಬಿಪಿಯಿಂದ ಯುವತಿ ಮೃತಪಟ್ಟ ಘಟನೆ ಆಲೂರು ಗ್ರಾಮದ ನಾರ್ಕಳಿ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಶ್ವಿನಿ(23) ಎಂಬವರು ಆ.23ರಂದು ಪ್ರಾಥಮಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್ ಪಡೆದುಕೊಂಡಿದ್ದಾರೆ. ರಾತ್ರಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಲೋ ಬಿಪಿ ಇರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ ಮೇರೆಗೆ ಕರೆದೊಯ್ಯಲಾಗಿತ್ತು. ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಹೋದರಿ ಅಕ್ಷಯ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ನ್ಯಾಯಾಲಯ ಸ್ಥಾಪನೆ ಬಗ್ಗೆ ಸರಕಾರ ಸ್ಥಳ ಮಂಜೂರು ಮಾಡಿದೆ. ಆದರೆ ನ್ಯಾಯಾಲಯಕ್ಕೆ ಇನ್ನೂ ಅಧೀಸೂಚನೆ ಹೊರಡಿಸಿಲ್ಲ. ಈ ಬಗ್ಗೆ ಸರಕಾರದ ಗಮನ ಸಳೆಯಲು ಬೈಂದೂರು ಭಾಗದ ಯವ ವಕೀಲರು ಸರಕಾರಕ್ಕೆ ಮನವಿ ಸಲ್ಲಿಸಿದರು. ಕುಂದಾಪುರದ ಉಪ ವಿಭಾಗಧಿಕಾರಿ ಕಛೇರಿಗೆ ಭೇಟಿ ನೀಡಿ 40ವರ್ಷದ ಹಿಂದಿನ ತಾಲೂಕು ರಚನೆ ಬೇಡಿಕೆ ಈಡೇರಿದೆ. ಆದರೆ ಇಲ್ಲಿ ನ್ಯಾಯಾಲಯ ಸ್ಥಾಪನೆ ಬೇಡಿಕೆ ಇನ್ನೂ ಹಾಗೆ ಇದೆ ಶಿಘ್ರವೇ ನ್ಯಾಯಾಲಯ ಸ್ಥಾಪನೆಗೆ ಅಧೀಸೂಚನೆ ನೀಡಬೇಕೆಂದು ಕೋರಿಕೊಂಡಿದ್ದಾರೆ. ಕುಂದಾಪುರ ಗ್ರೇಡ್ 2 ತಹಶೀಲ್ಧಾರ್ ರಾಮಚಂದ್ರ ಹೆಬ್ಬಾರ್ ಮನವಿ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಣಿಪಾಲದ ರಜತಾದ್ರಿಯಲ್ಲಿನ ಉಡುಪಿ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಇಡೀ ಪ್ರದೇಶವನ್ನು ತಂಬಾಕು ಮುಕ್ತ ವಲಯವನ್ನಾಗಿ ಘೋಷಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳೂ ಸೇರಿದಂತೆ, ಕಛೇರಿಗಳಿಗೆ ಆಗಮಿಸುವ ಸಾರ್ವಜನಿಕರು, ಆವರಣದಲ್ಲಿ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗೂ ಆವರಣದಲ್ಲಿನ ಕ್ಯಾಂಟೀನ್ ಹಾಗೂ ಇತರೆ ಮಳಿಗೆಗಳಲ್ಲಿ ಸಹ ಕಡ್ಡಾಯವಾಗಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಕಚೇರಿ ಎಂದು ಆಯಾ ಕಚೇರಿಯ ಮುಖ್ಯಸ್ಥರು ಘೋಷಣೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಈ ಪ್ರದೇಶಗಳಲ್ಲಿ ಆದೇಶ ಮೀರಿ ತಂಬಾಕು ಉತ್ಪನ್ನ ಬಳಸುವವರ ವಿರುದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಅಲಹಾಬಾದ್ (ಐಐಐಟಿ-ಎ) ಹಾಗೂ ಆಳ್ವಾಸ್ ಇಂಜಿನಿಯರ್ ಕಾಲೇಜಿನ ನಡುವಿನ ಒಪ್ಪಂದವು ಮುಂದಿನ ಐದು ವರ್ಷಕ್ಕೆ ವಿಸ್ತರಣೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇದ್ದ ಒಪ್ಪಂದದಿಂದಾಗಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನ, ಅವಕಾಶಗಳು ಸಿಕ್ಕಿವೆ. ರಾಜ್ಯದ ಎರಡು ಖಾಸಗಿ ಶಿಕ್ಷಣ ಸಂಸ್ಥೆಗಳು ಐಐಐಟಿ ಜೊತೆ ಒಡಂಬಡಿಕೆ ಮಾಡಿದ್ದು, ಅದರಲ್ಲಿ ಆಳ್ವಾಸ್ ಕೂಡ ಒಂದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಒಡಂಬಡಿಕೆಯಿಂದಾಗಿ ಇಂಟರ್ಶಿಪ್, ಸಂಶೋಧನೆ ಮತ್ತು ಕಾರ್ಯಾಗಾರಗಳನ್ನು ಪ್ರಾಧ್ಯಾಪಕರು ಮತ್ತು ಸಂಶೋಧನಾ ವಿದ್ವಾಂಸರ ತಂಡವು ಡೇಟಾ ವಿಶ್ಲೇಷಣೆ, ಯಂತ್ರ ಕಲಿಕೆ, ಆಳವಾದ ಕಲಿಕೆ, ಪೈಥಾನ್, ಜಾವಾ ಮುಂತಾದ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿಯಾಗಿ ನಡೆಸಲಾಗುತ್ತದೆ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳು ಮತ್ತು ಸಂಬಂಧಿತ ಪ್ರದೇಶಗಳಲ್ಲಿ ಪಿಎಚ್ಡಿ ಮತ್ತು ಪೋಸ್ಟ್ ಡಾಕ್ಟರೇಟ್ ಕಾರ್ಯಕ್ರಮಗಳನ್ನು ಮುಂದುವರಿಸಲು ಐಐಐಟಿ-ಎ ನಲ್ಲಿ ವಿದ್ಯಾರ್ಥಿಗಳು ಮತ್ತು ಎಐಇಟಿಯ ಅಧ್ಯಾಪಕರನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಒಪ್ಪಂದವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಯಾವುದೇ ಬಗೆಯ ಆಹಾರ ತಯಾರಿಕೆಯಲ್ಲಿ ಮಿತಿ ಮೀರಿದ ಟೇಸ್ಟಿ ಪೌಡರ್ ಬಳಕೆ ಕಂಡು ಬಂದಲ್ಲಿ ಅಂತಹ ಆಹಾರ ತಯಾರಕರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಆಹಾರ ಸುರಕ್ಷತೆ ಕುರಿತ ಜಿಲ್ಲಾ ಮಟ್ಟದ ಸಲಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೋಬಿ ಮಂಚೂರಿ, ಚೈನೀಸ್ ತಿನಿಸುಗಳು ಮುಂತಾದ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರುಚಿಯ ಹೆಚ್ಚಳಕ್ಕೆ ಟೇಸ್ಟಿ ಪೌಡರ್ನ ಬಳಕೆ ನಡೆಯುತ್ತಿದೆ, ಆದರೆ ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇದನ್ನು ಬಳಸಿದ್ದಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದ್ದು, ಅಹಾರ ಸುರಕ್ಷತಾ ಅಧಿಕಾರಿಗಳು ಈ ಬಗ್ಗೆ ದಿಢೀರ್ ದಾಳಿ ನಡೆಸಿ, ಆಹಾರ ಪದಾರ್ಥಗಳ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿ, ತಪ್ಪಿತಸ್ಥರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ, ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅಲ್ಲದೇ ಅನುಮತಿಯಿಲ್ಲದೇ ಅನಧಿಕೃತವಾಗಿ ಟೇಸ್ಟಿ ಪೌಡರ್ ಮಾರಾಟ ಮಾಡುವವರ ವಿರುದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಟಾರ್ ಸುವರ್ಣ ಕನ್ನಡದ ಖಾಸಗಿ ವಾಹಿನಿ ನಡೆಸುವ ಸುವರ್ಣ ಸೂಪರ್ ಸ್ಟಾರ್ ಎರಡನೇ ಸೀಸನ್ ಮೊದಲ ಎಪಿಸೋಡ್ನಲ್ಲಿ ಕುಂದಾಪುರದವರಾದ ದೀಪಿಕಾ ರಾಘವೇಂದ್ರ ಅವರು ವಿನ್ನರ್ ಆಗಿದ್ದಾರೆ. ಅಗಸ್ಟ್ 23ರ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಸ್ವರ್ಧಿಗಳು ಕೂಡ ಕುಂದಾಪುರದವರು ಎಂಬುದು ವಿಶೇಷವಾಗಿತ್ತು. ವಿಜೇತರಾದ ದೀಪಿಕಾ ಅವರು ಕುಂದಾಪುರ ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕಿಯಾಗಿದ್ದಾರೆ. ಉಳಿದಂತೆ ಸೌಮ್ಯಾ ಗೃಹಿಣಿ ಹಾಗೂ ಆನ್ಲೈನ್ ವ್ಯವಹಾರ ಮಾಡಿಕೊಂಡಿದ್ದರೆ, ರಂಜಿತಾ ಸಾಫ್ಟವೇರ್ ಕಂಪೆನಿಯಲ್ಲಿ ಹೆಚ್ಆರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂವರು ಒಂದೇ ದಿನ ವಿವಿಧ ಟಾಸ್ಕ್ಗಳ ಮೂಲಕ ಎದುರಾಳಿಗಳಾಗಿದ್ದರು. ನಟಿ ಶಾಲಿನಿ ಈ ಕಾರ್ಯಕ್ರಮ ನಿರೂಪಿಸುತ್ತಿದ್ದು ಮಹಿಳೆಯರೇ ಭಾಗವಹಿಸುವ ಕಾರ್ಯಕ್ರಮ ಇದಾಗಿದೆ. ಅಗಸ್ಟ್ 23ರ ಸಂಜೆ ಈ ಕಾರ್ಯಕ್ರಮ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಅಗಸ್ಟ್ 10ರಂದು ಶೂಟಿಂಗ್ ನಡೆದಿತ್ತು.
