Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ 2 ವರ್ಷಗಳಿಂದ ವಸತಿ ಯೋಜನೆಯಡಿ ಗ್ರಾಮ ಪಂಚಾಯತಗಳಿಗೆ ಈ ತನಕ ಒಂದು ಮನೆಗಳನ್ನು ಸಹ ಮಂಜೂರು ಮಾಡಿಲ್ಲ. ಆದ್ದರಿಂದ ವಸತಿ ಯೋಜನೆಯಡಿ ಕೂಡಲೇ ಪ್ರತಿ ಗ್ರಾಮ ಪಂಚಾಯತಗೆ 100 ಮನೆ ಮಂಜೂರು ಮಾಡಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ. ವಸತಿ ಯೋಜನೆಯಡಿ 4 ತಿಂಗಳ ಹಿಂದೆ ಪ್ರತಿ ಗ್ರಾಮ ಪಂಚಾಯತಗಳಿಗೆ ಮಂಜೂರು ಮಾಡಿದ 20 ಮನೆಗಳ ಆದೇಶ ಸರಕಾರ ಹಿಂತೆಗೆದುಕೊಂಡಿದೆ. ಗ್ರಾಮ ಪಂಚಾಯತ ಫಲಾನುಭವಿಗಳ ಆಯ್ಕೆ ಮಾಡಿ ವಸತಿ ನಿಗಮಕ್ಕೆ ಕಳುಹಿಸಿದ ನಂತರ ಫಲಾನುಭವಿಗಳು ಮನೆ ಪ್ರಾರಂಭಿಸಿ ಪಂಚಾಂಗ ಗೋಡೆ ಹಂತ ತಲುಪಿದೆ. ನಂತರ ಸಕಾರಣವಿಲ್ಲದೆ ಸರಕಾರ ಮನೆ ಮಂಜೂರಾತಿ ಆದೇಶ ರದ್ದು ಮಾಡಿರುವುದರಿಂದ ಬಡ ಫಲಾನುಭವಿಗಳು ಆತಂಕದಲ್ಲಿದ್ದಾರೆ. ಮನೆಗಳು ಪ್ರಗತಿ ಹಂತದಲ್ಲೇ ನಿಂತಿವೆ. ಈ ಕುರಿತು ಬಿ ಜೆ ಪಿ ಶಾಸಕರು, ಸಂಸದರು, ಸಚಿವರು ಮೌನಕ್ಕೆ ಶರಣಾಗಿದ್ದು, ಇದರಿಂದ…

Read More

ಶ್ರೀಗೌರಿ ಎಸ್. ಜೋಶಿಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅತ್ಯಂತ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿಸುತ್ತಿರುವುದು ಗೊತ್ತಿರುವ ವಿಷಯವೇ. ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದ್ದು ಕರ್ನಾಟಕದ ಕೀರ್ತಿಪತಾಕೆಯನ್ನು ಎತ್ತಿ ಹಿಡಿದಿದ್ದಾರೆ. ಇದೀಗ ಈ ಗರಿಮೆಗಳ ಸಾಲಿಗೆ ಮತ್ತೊಬ್ಬ ವಿದ್ಯಾರ್ಥಿ ಸಾಧಕನ ಸಾಧನೆ ಸೇರುತ್ತಿದೆ. ಅವರೇ ಲೀಫ್ ಆರ್ಟಿಸ್ಟ್ ಅಕ್ಷಯ್ ಕೋಟ್ಯಾನ್. 1×1.7ಸೆಂ.ಮೀ. ಅಳತೆಯ ಫಿಗ್ ಎಲೆಯಲ್ಲಿ ಅವರು ರಚಿಸಿದ ಹಾಸ್ಯ ಜಗತ್ತಿನ ದಿಗ್ಗಜ ಚಾರ್ಲಿ ಚಾಪ್ಲಿನ್‌ರ ವಿಶೇಷ ಲೀಫ್ ಆರ್ಟ್ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಸೇರ್ಪಡೆಗೊಂಡಿದೆ. ಈ ಮೂಲಕ ಅಕ್ಷಯ್ ಕೋಟ್ಯಾನ್‌ರ ಲೀಫ್ ಆರ್ಟ್ ಪ್ರತಿಭೆಗೆ ಬಂಗಾರದ ಮೆರುಗು ಮೂಡಿದೆ. ಅಕ್ಷಯ್ ಕೋಟ್ಯಾನ್ ಆಳ್ವಾಸ್ ಪದವಿ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ವಿಷುವಲ್ ಆರ್ಟ್ಸ್‌ನ ಮೂರನೇ ವರ್ಷದಲ್ಲಿ ಓದುತ್ತಿದ್ದಾರೆ. ಸದಾ ಏನನ್ನಾದರೂ ಹೊಸದನ್ನು ಮಾಡಬೇಕೆಂದು ತುಡಿಯುವ ಅಕ್ಷಯ್‌ರ ಮನಸ್ಸಿಗೆ ಹೊಳೆದಿದ್ದು ಲೀಫ್ ಆರ್ಟ್. ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಹೇಗಾದರೂ ಸಮಯದ ಸದುಪಯೋಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರರ ರಕ್ಷಣೆಗಾಗಿ ನೀಡುವ ಅತ್ಯಾಧುನಿಕ ಜೀವ ರಕ್ಷಕ ಸಲಕರಣೆಗಳನ್ನು ನೀಡುವಂತೆ ಮತ್ತು ಮೀನುಗಾರರ ರಕ್ಷಣೆಗಾಗಿ ಗಂಗೊಳ್ಳಿಯ ಬಂದರು ಅಳಿವೆ ವ್ಯಾಪ್ತಿಯಲ್ಲಿ 24×7 ರಕ್ಷಣಾಪಡೆ ಕಾರ್ಯನಿವಹಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಆಗ್ರಹಿಸಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಕುಂದಾಪುರ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಯಶವಂತ ಖಾರ್ವಿ ನೇತೃತ್ವದಲ್ಲಿ ಕುಂದಾಪುರದಲ್ಲಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಿ ಮೀನುಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು. ಮೀನುಗಾರರು ತಮ್ಮ ಹೊಟ್ಟೆಪಾಡಿಗಾಗಿ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ಮಾಡುವುದು ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಸಮುದ್ರದಲ್ಲಿ ಏಕಾಏಕಿ ಹವಾಮಾನ ವೈಪರಿತ್ಯವಾದರೆ ತನ್ನನ್ನು ತಾನು ರಕ್ಷಣೆ ಮಾಡಲು ಯಾವುದೇ ರೀತಿಯ ಜೀವ ರಕ್ಷಣಾ ಸಾಧನಗಳು ದೋಣಿಯಲ್ಲಿ ಇರದೇ ಇರುದರಿಂದ ಸರಕಾರ ಎಲ್ಲಾ ಮೀನುಗಾರರಿಗೆ ಉಚಿತವಾಗಿಜೀವ ರಕ್ಷಕ ಸಲಕರಣೆಗಳನ್ನು ಹಾಗೂ ವಿವಿಧ ಸೌಲಭ್ಯಗಳನ್ನು ನೀಡುವಂತೆ ಮತ್ತು ಸರಕಾರದ ಗಮನಕ್ಕೆ ಬರುವಂತೆ ಸರಕಾರಕ್ಕೆ ಹಾಗೂ ಸಂಬಂಧಪಟ್ಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2020ನೇ ಸಾಲಿನ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಳಿಗಾಗಿ ಸೇವಾಸಿಂಧು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಲಾಖಾ ವೆಬ್‌ಸೈಟ್ https://sevasindhuservices.karnataka.gov.in/ ನಲ್ಲಿ ಅರ್ಹ ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 0820-2521324, 9480886467ನ್ನು ಸಂಪರ್ಕಿಸುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೆಹಲಿಯ ಇಂಡಿಯನ್ ಅಚೀವರ್ಸ್ ಸಂಸ್ಥೆ ಕೊಡಮಾಡಿದ ವರ್ಷದ ಅತ್ಯುತ್ತಮ ಉದ್ಯಮಿ ಪ್ರಶಸ್ತಿಗೆ ಶೆಫ್‌ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕ ಗೋವಿಂದ ಬಾಬು ಪೂಜಾರಿ ಅವರು ಭಾಜನರಾಗಿದ್ದಾರೆ. ಮಂಗಳವಾರ ಆನ್‌ಲೈನ್ ಮೂಲಕ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಗೋವಿಂದ ಬಾಬು ಪೂಜಾರಿ ಅವರು ಹಂತ ಹಂತವಾಗಿ ಸಾಧನೆಯ ಶಿಖರವೇರಿದವರು. ಶೆಫ್‌ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಗೋವಿಂದ ಪೂಜಾರಿ ಅವರು ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿದ್ದಾರೆ. ಮತ್ಸ್ಯ ಬಂಧನ ಸಂಸ್ಥೆಯ ಮೂಲಕ ಮೀನಿನ ಮೌಲ್ಯವರ್ಧಿತ ಖಾದ್ಯಗಳು. ಪ್ರಜ್ನ್ಯಾ ಸಾಗರ್ ಹೋಟೆಲ್ & ರೆಸಾರ್ಟ್ಸ್ ಸಂಸ್ಥೆ ಮೂಲಕ ಹೋಟೆಲ್ ಉದ್ಯಮ ನಡೆಸುತ್ತಿದ್ದು, ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿ ಗಳಿಸಿರುವ ಇವರು ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ದೇಶಕ್ಕೆ ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಮಂದಿ ಹುತಾತ್ಮರಾಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಮೇಲೆ ಅನೇಕರು ದಾಳಿ ಮಾಡಿದ್ದು, ಆಕ್ರಮಣ ಕೂಡ ನಡೆಯಿತು. ಸ್ವಾತಂತ್ರ್ಯದ ಬಳಿಕ ಅಧಿಕಾರದ ಲಾಲಸೆಯಿಂದ ದೇಶವನ್ನು ವಿಭಜಿಸಲಾಯಿತು. ದೇಶದ ವ್ಯವಸ್ಥೆಯನ್ನು ನಾಶ ಮಾಡುವ ಕೆಲಸ ನಡೆಯಿತು. ದೇಶದ ಭೂಭಾಗವನ್ನು ಕಳೆದುಕೊಂಡೆವು. ಇಂತಹ ಸಂಪಧ್ಭರಿತ ಭಾರತ ಏಕತೆ, ಅಖಂಡತೆಯನ್ನು ಪುನರ್ ಸ್ಥಾಪಿಸಿದಲು ಅಖಂಡ ಭಾರತ ಪರಿಕಲ್ಪನೆಯನ್ನು ಸಾಕಾರ ಮಾಡಲು ಭಾರತೀಯರು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ನವೀನಚಂದ್ರ ಉಪ್ಪುಂದ ಹೇಳಿದರು. ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರಗಿದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಭಾರತ್ ಮಾತಾ ಪೂಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತಾಂತರ, ಲವ್ ಜಿಹಾದ್ ಮೊದಲಾದವುಗಳಿಂದ ಹಿಂದುಗಳು ಭಯದಲ್ಲಿ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಐಸಿಸ್ ಹೆಸರಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಆ.18: ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದ ತಾಲೂಕಿನ ಬಿಜಾಡಿಯ ಹರೀಶ್ ಬಂಗೇರ ಬಿಡುಗಡೆಗೊಂಡು ಬೆಂಗಳೂರಿಗೆ ಮರಳಿದ್ದಾರೆ. ದಮಾಮ್ ವಿಮಾನ ನಿಲ್ದಾನದ ಮೂಲಕ ಹೊರಟಿದ್ದು ಅಲ್ಲಿಂದ ಬೆಂಗಳೂರು ವಿಮಾನ ನಿಲ್ದಾಣ ತಲುಪದ ಅವರನ್ನು ಪತ್ನಿ, ಮಗಳು ಹಾಗೂ ಅವರ ಬಿಡುಗಡೆಗಾಗಿ ನಿರಂತರವಾಗಿ ಶ್ರಮಿಸಿದ ಲೊಕೇಶ್ ಅಂಕದಕಟ್ಟೆ ಅವರ ತಂಡ ಬರಮಾಡಿಕೊಂಡಿತು. ಬೆಂಗಳೂರಿನಲ್ಲಿ ಸಂಜೆ ಬಿಜಾಡಿಗೆ ಬರುವ ಸಾಧ್ಯತೆ ಇದೆ. ಹರೀಶ್ ಬಂಗೇರ ಅವರ ಬಿಡುಗಡೆಗೆ ಲೋಕೇಶ್ ಅಂಕದಕಟ್ಟೆ ಹಾಗೂ ವಿವಿಧ ಸಂಘಟನೆಗಳು ಶ್ರಮಿಸಿದ್ದವು. ಆನೆಗುಡ್ಡೆಯ ತನಕ ಪಾದಯಾತ್ರೆಯನ್ನು ಮಾಡಲಾಗಿತ್ತು. ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಡಾ. ರವೀಂದ್ರ ಶ್ಯಾನುಭೋಗ್, ಸುಕೇಶ್ ಶೆಟ್ಟಿ ವಾಲ್ತೂರು, ಗೌತಮ್ ಶೆಟ್ಟಿ, ಹಿರಿಯ ಪೊಲೀಸ್ ಅಧಿಕಾರಿ ಕಮಲಪಂಥ್ ಸೇರಿದಂತೆ ಹಲವರು ಶ್ರಮಿಸಿದ್ದು, ಅಂತಿಮವಾಗಿ ಹರೀಶ್ ಬಂಗೇರ ನಿರಪರಾಧಿ ಎಂದು ಸಾಬೀತಾಗಿ ಸೌದಿ ಜೈಲನಿಂದ ಬಿಡುಗಡೆಗೊಂಡಿದ್ದಾರೆ. ಸೌದಿಯ ದೊರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ 10000 ರಿಂದ 12000 ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ, ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ಸ್ಥಳಾಂತರಿಸಬೇಕು. ವೈದ್ಯಾಧಿಕಾರಿಗಳ ನಿರ್ಧಾರದ ಮೇಲೆ ಹೋಂ ಐಸೋಲೇಶನ್ ನಲ್ಲಿರುವ ಸೋಂಕಿತರ ಮನೆಯನ್ನು ಸೀಲ್ಡೌನ್ ಮಾಡಿ, ಸುತ್ತ ಮುತ್ತಲಿನ 4 ಮನೆಗಳನ್ನು ಸೇರಿಸಿ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ. ಸೋಂಕಿತರು ಮತ್ತು ಅವರ ಸಂಪರ್ಕಿತರು ತಮ್ಮ ಮನೆಯ ವ್ಯಾಪ್ತಿಯನ್ನು ಬಿಟ್ಟು ಅನಾವಶ್ಯಕ ಸುತ್ತಾಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿರುವ ತಾಲೂಕಿನ ಬಿಜಾಡಿಯ ಹರೀಶ್ ಬಂಗೇರ ಬಿಡುಗಡೆಯ ಪ್ರಯತ್ನ ಯಶಸ್ವಿಯಾಗಿದ್ದು, ಆ.18ರಂದು ತಾಯ್ನಾಡಿಗೆ ಹಿಂತಿರುಗಲಿದ್ದಾರೆ. ಇಂದು ದಮಾಮ್ ವಿಮಾನ ನಿಲ್ದಾನದ ಮೂಲಕ ಹೊರಟಿದ್ದು ಅಲ್ಲಿಂದ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಬಗ್ಗೆ ರಿಯಾದ್ನ ರಾಯಭಾರಿ ಕಛೇರಿಯಿಂದ ಮಾಹಿತಿ ಬಂದಿರುವುದಾಗಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಎರಡು ದಿನಗಳ ಹಿಂದೆ ತಿಳಿಸಿದರು. ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ವ್ ಹಾಕಿದ್ದ ಆರೋಪದ ಮೇಲೆ ಹರೀಶ್ ಬಂಗೇರರನ್ನು 2019ರ ಡಿಸೆಂಬರ್ನಲ್ಲಿ ಸೌದಿ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಹರೀಶ್ ಅವರ ಪತ್ನಿ ಸುಮನಾ ಉಡುಪಿ ಪೊಲೀಸರಿಗೆ ದೂರು ನೀಡಿದ್ದರು. ಉಡುಪಿ ಪೊಲೀಸರು ಮೂಡುಬಿದಿರೆಯ ಅಬ್ದುಲ್ ಹುಯೇಸ್ ಮತ್ತು ಅಬ್ದುಲ್ ತುವೇಸ್ ಎಂಬವರನ್ನು ಬಂಧಿಸಿದ್ದು, ಅವರು ಹರೀಶ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅದರಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.17: ರಾಜ್ಯ ವಿಜ್ಞಾನ ಪರಿಷತ್ ಆಶ್ರಯದಲ್ಲಿ 10-12 ವರ್ಷದ ವಯೋಮಿತಿಯ ವಿದ್ಯಾರ್ಥಿಗಳಿಗಾಗಿ ನಡೆಸಲಾದ ವಿಜ್ಞಾನ ಪ್ರಬಂಧ ಸ್ವರ್ಧೆಯಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದ ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶಿವಾನಿ ಪ್ರಭಾಕರ ಪೂಜಾರಿ ಅವರು ಇಂದು ಬೆಂಗಳೂರಿನ ವಿಜ್ಞಾನ ಭವನದ ಪ್ರೊ.ಎಂ.ಎ.ಸೇತುರಾವ್ ಸಭಾಂಗಣದಲ್ಲಿ ನಡೆದ 8ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ರಾಜ್ಯ ಪ್ರಶಸ್ತಿ ಸ್ವೀಕರಿಸಿದರು. ಸುಸ್ಥಿರ ಜೀವನಕ್ಕಾಗಿ ವಿಜ್ಞಾನ ಎಂಬ ವಿಷಯದಲ್ಲಿ ಮರವಂತೆ ಶಾಲೆಯ ವಿದ್ಯಾರ್ಥಿಗಳು ಸ್ಥಳೀಯ ಗ್ರಾಮೀಣ ಭಾಗದ ಗುಡಿ ಕೈಗಾರಿಗಳಲ್ಲಿ ಕರಕುಶಲ ವಸ್ತುಗಳ ತಯಾರಿಕೆ ಕುರಿತು ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿದ್ದು, ಜಿಲ್ಲಾ, ರಾಜ್ಯದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಪದ್ಮವಿಭೂಷಣ ಪ್ರಶಸ್ತಿ ವಿಜೇತ ವಿಜ್ಞಾನಿ ಡಾ. ಅತ್ರಿ ಅವರಿಂದ ವಿದ್ಯಾರ್ಥಿನಿ ಶಿವಾನಿ ಪ್ರಭಾಕರ ಪೂಜಾರಿ ಅಭಿನಂದನಾ ಪತ್ರ ಹಾಗೂ ನೆನಪಿನ ಕಾಣಿಕೆ ಪಡೆದುಕೊಂಡರು. ಈ ಸಂದರ್ಭ ವಿದ್ಯಾರ್ಥಿನಿಗೆ ಮಾರ್ಗದರ್ಶಕಿಯಾಗಿದ್ದ ವಿಜ್ಞಾನ ಶಿಕ್ಷಕಿ ಚೈತ್ರಾ ಶೆಟ್ಟಿ, ರಾಷ್ಟ್ರೀಯ ಮಕ್ಕಳ…

Read More