ಚೆನ್ನಾಗಿ ಕಾಣಬೇಕೆಂದು ಅಂದುಕೊಳ್ಳುವುದು ಸಹಜ. ನಮ್ಮ ದೇಹದ ಸದೃಢತೆಗಾಗಿ ನಮ್ಮ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡಿಕೊಳ್ಳಲು ನಾವು ಹೇಗೆ ಕಷ್ಟ ಪಡುತ್ತವೆಯೋ ಅದೇ ರೀತಿ ನಮ್ಮ ಸೌಂದರ್ಯ ರಕ್ಷಣೆಗೆ ಹಲವು ವಿಧಾನಗಳಲ್ಲಿ ನಾವು ಪ್ರಯತ್ನ ಪಡುತ್ತೇವೆ. ನಮ್ಮ ತ್ವಚೆಯ ಹೊಳಪನ್ನು ಈ ಕೆಳಗಿನ ಹಲವಾರು ಆರೋಗ್ಯಕರ ನೈಸರ್ಗಿಕವಾದ ಆಹಾರಗಳನ್ನು ಸೇವನೆ ಮಾಡುವುದರಿಂದ ರಕ್ಷಣೆ ಮಾಡಿಕೊಳ್ಳಬಹುದು. ಅವಕ್ಯಾಡೊ (ಬೆಣ್ಣೆ ಹಣ್ಣು): ಅವಕ್ಯಾಡೊ ಹಣ್ಣುಗಳಲ್ಲಿ ಮನುಷ್ಯನ ದೇಹಕ್ಕೆ ಅವಶ್ಯವಾಗಿ ಬೇಕಾದ ಆರೋಗ್ಯಕರ ಕೊಬ್ಬಿನ ಅಂಶಗಳು ಸಿಗುತ್ತವೆ. ಇವು ನಮ್ಮ ತ್ವಚೆಯನ್ನು ಒಳಗಿನಿಂದಲೇ ಮಾಯಿಶ್ಚರೈಸರ್ ಮಾಡುತ್ತವೆ. ಅವಕ್ಯಾಡೊಗಳಲ್ಲಿ ಕಂಡು ಬರುವ ಹೆಚ್ಚಿನ ಪ್ರಮಾಣದ ಫ್ಯಾಟಿ ಆಸಿಡ್ ಅಂಶಗಳು, ಪ್ರೋಟೀನ್ ಅಂಶಗಳು, ಮತ್ತು ವಿಟಮಿನ್ ‘ ಎ ‘, ವಿಟಮಿನ್ ‘ ಡಿ ‘, ವಿಟಮಿನ್ ‘ ಇ ‘ ಜೀವ ಸತ್ವಗಳು ದೇಹದಲ್ಲಿ ಕೊಲಾಜೆನ್ ಅಂಶವನ್ನು ಉತ್ಪತ್ತಿ ಮಾಡಲು ಸಹಾಯ ಮಾಡುತ್ತವೆ. ದೇಹದ ಮೇಲ್ಭಾಗದಲ್ಲಿ ಅಂದರೆ ಚರ್ಮದ ಯಾವುದೇ ಭಾಗದಲ್ಲಿ ಕಂಡು ಬರುವ ಸುಕ್ಕುಗಳು, ಸಣ್ಣ ಸಣ್ಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದಲ್ಲಿಕೋವಿಡ್ 2ನೇ ಅಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಲಾಕ್‍ಡೌನ್ ಜಾರಿಯಲ್ಲಿದ್ದು. ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಪರಿಹಾರದ ಪ್ಯಾಕೇಜ್ ಸರ್ಕಾರವು ಘೋಷಣೆ ಮಾಡಿದೆ. ಪ್ರಸ್ತುತ ಸಾಲಿನಲ್ಲಿ ಭಾರತ ಸರ್ಕಾರದ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೋಂದಾಯಿಸಿಕೊಂಡ ಮೀನುಗಾರರಿಗೆ ತಲಾ ರೂ.3000 ಪರಿಹಾರವನ್ನು ಕೋವಿಡ್ಎರಡನೇ ಪ್ಯಾಕೇಜ್ ನಿಧಿಯಡಿಯಲ್ಲಿ ಸರ್ಕಾರದ ಮಾರ್ಗಸೂಚಿ ಮೇರೆಗೆ ಘೋಷಿಸಲಾಗಿದೆ. ಈ ಯೋಜನೆಯ ಸದರಿ ಪರಿಹಾರವನ್ನುಡಿ.ಬಿ.ಟಿ (ಡೈರೆಕ್ಟ್ ಬೆನಿಫಿಶರಿಟ್ರಾನ್‍ಸ್ಫರ್ ಪೋರ್ಟ್‍ಲ್) ಮುಖಾಂತರ ಅರ್ಹ ಫಲಾನುಭವಿಗಳಿಗೆ ಪಾವತಿಸಬೇಕಾಗಿರುವುದರಿಂದ ಎಲ್ಲಾ ಫಲಾನುಭವಿಗಳು ತಮ್ಮಆಧಾರ್ ಸಂಖ್ಯೆಯನ್ನು ಬ್ಯಾಂಕ್ಖಾತೆಗೆ ಲಿಂಕ್ ಮಾಡದಿದ್ದಲ್ಲಿಕೂಡಲೇ ಲಿಂಕ್ ಮಾಡಿಸತಕ್ಕದ್ದು. ಸಾಂಪ್ರದಾಯಿಕ ದೋಣಿ ಮಾಲೀಕರು (ಎನ್ಎಮ್-ನಾನ್-ಮೋಟರೈಸ್ಡ್ ಯಡಿಯಲ್ಲಿ ನೋಂದಾಯಿತ ದೋಣಿ ಮಾಲೀಕರು)ತಮ್ಮದೋಣಿಯ ಆರ್.ಸಿ., ಆಧಾರ್ಕಾರ್ಡ್, ಮೊಬೈಲ್ ಸಂಖ್ಯೆ, ಆಧಾರ್ ಲಿಂಕ್ ಲಗತ್ತಿಸಲಾದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ಸಂಬಂಧಿತ ಪ್ರಾಧಿಕೃತ ಅಧಿಕಾರಿಗಳ ಕಚೇರಿಗೆ ಒದಗಿಸಬೇಕೆಂದು ಮೀನುಗಾರಿಕೆ ಹಿರಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಥಲಸ್ಸಿಮಿಯಾ ಮೇಜರ್ ಕಾಯಿಲೆಯಿಂದ ಬಳಲುತ್ತಿರುವ ಇಲ್ಲಿನ ಗೋಳಿಹೊಳೆ ಗ್ರಾಮದ ಮಾವಿನ ಮನೆಯ ಮಂಜುನಾಥ ಹಾಗೂ ಸುಮತಿ ದಂಪತಿಗಳ ಮಗ ಸುಶಾಂತ್‌ಗೆ ಜೆಸಿಐ ಬೈಂದೂರುಸಿಟಿಯಿಂದ 30000 ರೂ. ಧನಸಹಾಯವನ್ನು ಮಗುವಿನ ಹೆತ್ತವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಜೆಸಿಐ ಇಂಡಿಯಾ ಪ್ರೋಗ್ರಾಮ್ ಡೈರೆಕ್ಟರ್ ಜೆಸಿ ಸೆನ್ ಅಬ್ದುಲ್ ಜಬ್ಬಾರ್ ಸರ್, ವಲಯಾಧಿಕಾರಿ ಹೆಚ್‌ಜಿಎಫ್ ಮಣಿಕಂಠ ಎಸ್ ದೇವಾಡಿಗ, ಹಾಗೂ ಜೆಸಿಐ ಬೈಂದೂರು ಸಿಟಿ ಇದರ ಅಧ್ಯಕ್ಷರಾದ ಹೆಚ್‌ಜಿಎಫ್ ಶ್ರೀಧರ ಆಚಾರ್ಯ, ಕಾರ್ಯದರ್ಶಿ ಸವಿತಾ ದಿನೇಶ್ ಗಾಣಿಗ, ಸದಸ್ಯರಾದ ರಾಘವೇಂದ್ರ ಹೊಳ್ಳ, ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ತಂಡವು, ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು. ಕೇಂದ್ರ ತಂಡದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸೂಪರಿಟೆಂಡೆಂಟ್ ಇಂಜನಿಯರ್ ಸದಾನಂದ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನು ಸ್ವಾಮಿ ಹಾಗೂ ಇವರೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಆಯುಕ್ತ ಮನೋಜ್ ರಾಜನ್, ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ವಿಜ್ಞಾನಿ ಡಾ.ಶ್ರೀನಿವಾಸ ರೆಡ್ಡಿ ಇದ್ದರು. ಬೈಂದೂರು ತಾಲೂಕಿನ ಬೈಂದೂರು, ಉಪ್ಪುಂದ, ಮೆಡಿಕಲ್, ಮರವಂತೆ, ಕಾಪು ತಾಲೂಕಿನ ಕಾಪುಲೈಟ್ ಹೌಸ್, ಕೈಪುಂಜಾಲು ಉಡುಪಿ ತಾಲೂಕಿನ ಪಡುಬಿದ್ರೆ ಬೀಚ್ ಮತ್ತು ಬ್ಲೂ ಫ್ಲಾಗ್ ಬೀಚ್ ಗೆ ಭೇಟಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ವಿಬಾಗಾಧಿಕಾರಿ ರಾಜು , ಬೈಂದೂರು ತಹಸೀಲ್ದಾರ್ ಶೋಭಾಲಕ್ಷಿ ಎಚ್. ಎಸ್., ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಸೀಲ್ದಾರ್ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಇತ್ತಿಚಿಗೆ ಹತ್ಯೆಗೀಡಾದ ಯಡಮೊಗೆ ಗ್ರಾಮದ ಉದಯ ಗಾಣಿಗ ಅವರ ಕುಟುಂಬಕ್ಕೆ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ರೂ.1 ಲಕ್ಷವನ್ನು ಮಾನವೀಯ ನೆಲೆಯಲ್ಲಿ ಹಸ್ತಾಂತರಿಸಿದರು. ನೆರವು ಹಸ್ತಾಂತರಿಸಿ ಸಾಂತ್ವಾನದ ಮಾತನಾಡಿದ ಅವರು, ಪೋಲಿಸರು ಈಗಾಗಲೇ ತಪ್ಪಿತಸ್ಥರನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕಾನೂನು ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ. ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ನಾವು ಪಕ್ಷ ಬದ್ಧವಿದೆ ಎಂದರು. ಈ ಸಂದರ್ಭ ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜೆಡ್ಡು ಮತ್ತು ಪ್ರಿಯದರ್ಶಿನಿ ಬೆಸ್ಕೂರು, ಮಾಜಿ ಜಿ.ಪಂ.ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಹರ್ಷ ಮೆಲ್ಕೋಡ್, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಶ್ರೀಗಣೇಶ್ ಉಪ್ಪುಂದ, ರವಿ ಗಾಣಿಗ ಮಲ್ಲಾರಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾಗುವ ಒಟ್ಟು 40,000 ರೂ. ಮೊತ್ತದ ಅಗತ್ಯ ಪರಿಕರಗಳನ್ನು ಹಸ್ತಾಂತರಿಸಲಾಯಿತು. ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಗತ್ಯ ಪರಿಕರಗಳನ್ನು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಶಿರೂರು ಗ್ರಾ.ಪಂ ಅಧ್ಯಕ್ಷೆ ದಿಲ್ಶಾದ್ ಬೇಗಂ, ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಂದಿನಿ, ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ, ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ, ನಿರ್ದೇಶಕರಾದ ಚಿಕ್ಕು ಪೂಜಾರಿ, ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶಿರೂರು ಶಾಖೆಯ ವ್ಯವಸ್ಥಾಪಕ ನಾಗರಾಜ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ: 8277734612 ಹಾಗೂ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕಾಕರಣಕ್ಕಾಗಿ ಅನುಬಂಧ-5 ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರಾದ ರವೀಂದ್ರ ಮೊ.ನಂ: 8660523556 ಇವರನ್ನು, ನಗರದ ಡಾ.ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ, ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜೈನ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿರುವ ಜೈನ ದೇವಾಲಯ (ಬಸದಿ) ನವೀಕರಣ, ದುರಸ್ಥಿ ಹಾಗೂ ಜೀರ್ಣೋದ್ಧಾರಕ್ಕಾಗಿ ಸಹಾಯಧನ ಪಡೆಯಲು ಜೈನ ಬಸದಿ ಸಮಿತಿ ಅಥವಾ ಮಂಡಳಿಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ಸೈಟ್ https://dom.karnataka.gov.in/ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಲಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳು ಕೊಚ್ಚಿ ಹೋಗುವುದು ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಆಗಬಹುದಾದ ಹಾನಿಯ ಪ್ರಮಾಣ ಕಡಿಮೆ ಮಾಡಲು ಮತ್ತು ಸಂರಕ್ಷಣೆ ದೃಷ್ಟಿಯಿಂದ ಈ ಕೆಳಕಂಡ ಕೆಲವು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ. ಕೆಳಗೆ ಬಿದ್ದಿರುವ ರೋಗಪಿಡಿತ ಕಾಯಿಗಳನ್ನು ಹಾಗೂ ಒಣಗಿದ ಹಿಂಗಾರಗಳನ್ನು ತೆಗೆದು ಸುಡಬೇಕು ಅಥವಾ ತೋಟದಿಂದ ಹೊರಗೆ ಗುಂಡಿಗಳಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು. ತೋಟಗಳಲ್ಲಿ ಆದಷ್ಟು ಸ್ವಚ್ಛತೆಯನ್ನು ಕಾಪಾಡಬೇಕು. ತೋಟಗಳಲ್ಲಿ ನೀರು ನಿಲ್ಲದಂತೆ ಬಸಿಲುಗಾಲುವೆಗಳನ್ನು ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ತೋಟದಲ್ಲಿ ಅಲ್ಲಲ್ಲಿ ಅಡಿಕೆ ಸಿಪ್ಪೆ, ಭತ್ತದ ಹೊಟ್ಟು ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಬಳಸಿ ಹೊಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ 11 ವರ್ಷ ಮೇಲ್ಪಟ್ಟ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆಗಳನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
