Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಕುಮಾರ್ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ಎಸ್. ಕುಮಾರ್ ಅವರು ಎರಡು ಭಾರಿ ಕೊಲ್ಲೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದರು. ಕೊಲ್ಲೂರು ಜೀಪು ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸಾಯಿ ಬಿಲ್ಡೀಂಗ್‌ನ ಮೊದಲನೇ ಮಹಡಿಯಲ್ಲಿ ಸಿಎ ನಾಗರಾಜ ಪೂಜಾರಿ & ಕೋ ಚಾರ್ಟರ್ಡ್ ಅಕೌಂಟೆಂಟ್ಸ್ ನೂತನ ಕಛೇರಿ ಗುರುವಾರ ಶುಭಾರಂಭಗೊಂಡಿತು. ಈ ಸಂದರ್ಭ ಕುಂದಾಪುರ ಎಪಿಎಂಸಿ ಅಧ್ಯಕ್ಷ ವೆಂಕಟ ಪೂಜಾರಿ, ಉಪುಂದ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ, ಉದ್ಯಮಿಗಳಾದ ಸಮರ್ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಪ್ರವೀಣ ಶೆಟ್ಟಿ, ಪ್ರದೀಪ್ ಶೆಟ್ಟಿ, ರಾಜೇಂದ್ರ ಗಾಣಿಗ, ದಿನೇಶ್ ಆಚಾರ್, ಗಂಗಾಧರ ದೇವಾಡಿಗ, ಪ್ರವೀಣ್ ಆಚಾರ್, ಚಾರ್ಟರ್ಡ್ ಅಕೌಂಟೆಂಟೆ ನಾಗರಾಜ್ ಪೂಜಾರಿ, ತಿಮ್ಮಪ್ಪ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋ ಬಿಪಿಯಿಂದ ಯುವತಿ ಮೃತಪಟ್ಟ ಘಟನೆ ಆಲೂರು ಗ್ರಾಮದ ನಾರ್ಕಳಿ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಶ್ವಿನಿ(23) ಎಂಬವರು ಆ.23ರಂದು ಪ್ರಾಥಮಿಕ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಪ್ರಥಮ ಡೋಸ್ ಪಡೆದುಕೊಂಡಿದ್ದಾರೆ. ರಾತ್ರಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಲೋ ಬಿಪಿ ಇರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ ಮೇರೆಗೆ ಕರೆದೊಯ್ಯಲಾಗಿತ್ತು. ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಹೋದರಿ ಅಕ್ಷಯ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ನ್ಯಾಯಾಲಯ ಸ್ಥಾಪನೆ ಬಗ್ಗೆ ಸರಕಾರ ಸ್ಥಳ ಮಂಜೂರು ಮಾಡಿದೆ. ಆದರೆ ನ್ಯಾಯಾಲಯಕ್ಕೆ ಇನ್ನೂ ಅಧೀಸೂಚನೆ ಹೊರಡಿಸಿಲ್ಲ. ಈ ಬಗ್ಗೆ ಸರಕಾರದ ಗಮನ ಸಳೆಯಲು ಬೈಂದೂರು ಭಾಗದ ಯವ ವಕೀಲರು ಸರಕಾರಕ್ಕೆ ಮನವಿ ಸಲ್ಲಿಸಿದರು. ಕುಂದಾಪುರದ ಉಪ ವಿಭಾಗಧಿಕಾರಿ ಕಛೇರಿಗೆ ಭೇಟಿ ನೀಡಿ 40ವರ್ಷದ ಹಿಂದಿನ ತಾಲೂಕು ರಚನೆ ಬೇಡಿಕೆ ಈಡೇರಿದೆ. ಆದರೆ ಇಲ್ಲಿ ನ್ಯಾಯಾಲಯ ಸ್ಥಾಪನೆ ಬೇಡಿಕೆ ಇನ್ನೂ ಹಾಗೆ ಇದೆ ಶಿಘ್ರವೇ ನ್ಯಾಯಾಲಯ ಸ್ಥಾಪನೆಗೆ ಅಧೀಸೂಚನೆ ನೀಡಬೇಕೆಂದು ಕೋರಿಕೊಂಡಿದ್ದಾರೆ. ಕುಂದಾಪುರ ಗ್ರೇಡ್ 2 ತಹಶೀಲ್ಧಾರ್ ರಾಮಚಂದ್ರ ಹೆಬ್ಬಾರ್ ಮನವಿ ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಣಿಪಾಲದ ರಜತಾದ್ರಿಯಲ್ಲಿನ ಉಡುಪಿ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಇಡೀ ಪ್ರದೇಶವನ್ನು ತಂಬಾಕು ಮುಕ್ತ ವಲಯವನ್ನಾಗಿ ಘೋಷಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳೂ ಸೇರಿದಂತೆ, ಕಛೇರಿಗಳಿಗೆ ಆಗಮಿಸುವ ಸಾರ್ವಜನಿಕರು, ಆವರಣದಲ್ಲಿ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗೂ ಆವರಣದಲ್ಲಿನ ಕ್ಯಾಂಟೀನ್ ಹಾಗೂ ಇತರೆ ಮಳಿಗೆಗಳಲ್ಲಿ ಸಹ ಕಡ್ಡಾಯವಾಗಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಕಚೇರಿ ಎಂದು ಆಯಾ ಕಚೇರಿಯ ಮುಖ್ಯಸ್ಥರು ಘೋಷಣೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಈ ಪ್ರದೇಶಗಳಲ್ಲಿ ಆದೇಶ ಮೀರಿ ತಂಬಾಕು ಉತ್ಪನ್ನ ಬಳಸುವವರ ವಿರುದ್ದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಅಲಹಾಬಾದ್ (ಐಐಐಟಿ-ಎ) ಹಾಗೂ ಆಳ್ವಾಸ್ ಇಂಜಿನಿಯರ್ ಕಾಲೇಜಿನ ನಡುವಿನ ಒಪ್ಪಂದವು ಮುಂದಿನ ಐದು ವರ್ಷಕ್ಕೆ ವಿಸ್ತರಣೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇದ್ದ ಒಪ್ಪಂದದಿಂದಾಗಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನ, ಅವಕಾಶಗಳು ಸಿಕ್ಕಿವೆ. ರಾಜ್ಯದ ಎರಡು ಖಾಸಗಿ ಶಿಕ್ಷಣ ಸಂಸ್ಥೆಗಳು ಐಐಐಟಿ ಜೊತೆ ಒಡಂಬಡಿಕೆ ಮಾಡಿದ್ದು, ಅದರಲ್ಲಿ ಆಳ್ವಾಸ್ ಕೂಡ ಒಂದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಒಡಂಬಡಿಕೆಯಿಂದಾಗಿ ಇಂಟರ್ಶಿಪ್, ಸಂಶೋಧನೆ ಮತ್ತು ಕಾರ್ಯಾಗಾರಗಳನ್ನು ಪ್ರಾಧ್ಯಾಪಕರು ಮತ್ತು ಸಂಶೋಧನಾ ವಿದ್ವಾಂಸರ ತಂಡವು ಡೇಟಾ ವಿಶ್ಲೇಷಣೆ, ಯಂತ್ರ ಕಲಿಕೆ, ಆಳವಾದ ಕಲಿಕೆ, ಪೈಥಾನ್, ಜಾವಾ ಮುಂತಾದ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿಯಾಗಿ ನಡೆಸಲಾಗುತ್ತದೆ. ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳು ಮತ್ತು ಸಂಬಂಧಿತ ಪ್ರದೇಶಗಳಲ್ಲಿ ಪಿಎಚ್ಡಿ ಮತ್ತು ಪೋಸ್ಟ್ ಡಾಕ್ಟರೇಟ್ ಕಾರ್ಯಕ್ರಮಗಳನ್ನು ಮುಂದುವರಿಸಲು ಐಐಐಟಿ-ಎ ನಲ್ಲಿ ವಿದ್ಯಾರ್ಥಿಗಳು ಮತ್ತು ಎಐಇಟಿಯ ಅಧ್ಯಾಪಕರನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಒಪ್ಪಂದವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಯಾವುದೇ ಬಗೆಯ ಆಹಾರ ತಯಾರಿಕೆಯಲ್ಲಿ ಮಿತಿ ಮೀರಿದ ಟೇಸ್ಟಿ ಪೌಡರ್ ಬಳಕೆ ಕಂಡು ಬಂದಲ್ಲಿ ಅಂತಹ ಆಹಾರ ತಯಾರಕರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಆಹಾರ ಸುರಕ್ಷತೆ ಕುರಿತ ಜಿಲ್ಲಾ ಮಟ್ಟದ ಸಲಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೋಬಿ ಮಂಚೂರಿ, ಚೈನೀಸ್ ತಿನಿಸುಗಳು ಮುಂತಾದ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರುಚಿಯ ಹೆಚ್ಚಳಕ್ಕೆ ಟೇಸ್ಟಿ ಪೌಡರ್ನ ಬಳಕೆ ನಡೆಯುತ್ತಿದೆ, ಆದರೆ ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇದನ್ನು ಬಳಸಿದ್ದಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದ್ದು, ಅಹಾರ ಸುರಕ್ಷತಾ ಅಧಿಕಾರಿಗಳು ಈ ಬಗ್ಗೆ ದಿಢೀರ್ ದಾಳಿ ನಡೆಸಿ, ಆಹಾರ ಪದಾರ್ಥಗಳ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿ, ತಪ್ಪಿತಸ್ಥರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ, ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅಲ್ಲದೇ ಅನುಮತಿಯಿಲ್ಲದೇ ಅನಧಿಕೃತವಾಗಿ ಟೇಸ್ಟಿ ಪೌಡರ್ ಮಾರಾಟ ಮಾಡುವವರ ವಿರುದ್ದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಟಾರ್ ಸುವರ್ಣ ಕನ್ನಡದ ಖಾಸಗಿ ವಾಹಿನಿ ನಡೆಸುವ ಸುವರ್ಣ ಸೂಪರ್ ಸ್ಟಾರ್ ಎರಡನೇ ಸೀಸನ್ ಮೊದಲ ಎಪಿಸೋಡ್‌ನಲ್ಲಿ ಕುಂದಾಪುರದವರಾದ ದೀಪಿಕಾ ರಾಘವೇಂದ್ರ ಅವರು ವಿನ್ನರ್ ಆಗಿದ್ದಾರೆ. ಅಗಸ್ಟ್ 23ರ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಸ್ವರ್ಧಿಗಳು ಕೂಡ ಕುಂದಾಪುರದವರು ಎಂಬುದು ವಿಶೇಷವಾಗಿತ್ತು. ವಿಜೇತರಾದ ದೀಪಿಕಾ ಅವರು ಕುಂದಾಪುರ ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕಿಯಾಗಿದ್ದಾರೆ. ಉಳಿದಂತೆ ಸೌಮ್ಯಾ ಗೃಹಿಣಿ ಹಾಗೂ ಆನ್‌ಲೈನ್ ವ್ಯವಹಾರ ಮಾಡಿಕೊಂಡಿದ್ದರೆ, ರಂಜಿತಾ ಸಾಫ್ಟವೇರ್ ಕಂಪೆನಿಯಲ್ಲಿ ಹೆಚ್‌ಆರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂವರು ಒಂದೇ ದಿನ ವಿವಿಧ ಟಾಸ್ಕ್‌ಗಳ ಮೂಲಕ ಎದುರಾಳಿಗಳಾಗಿದ್ದರು. ನಟಿ ಶಾಲಿನಿ ಈ ಕಾರ್ಯಕ್ರಮ ನಿರೂಪಿಸುತ್ತಿದ್ದು ಮಹಿಳೆಯರೇ ಭಾಗವಹಿಸುವ ಕಾರ್ಯಕ್ರಮ ಇದಾಗಿದೆ. ಅಗಸ್ಟ್ 23ರ ಸಂಜೆ ಈ ಕಾರ್ಯಕ್ರಮ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಅಗಸ್ಟ್ 10ರಂದು ಶೂಟಿಂಗ್ ನಡೆದಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಹಿತಿ ಮತ್ತು ಕಲಾವಿದರ ವೇದಿಕೆ ಬೆಂಗಳೂರು, ಸಂಗೀತ ಸಂಭ್ರಮ ಬೆಂಗಳೂರು ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ಸಂಭ್ರಮದ ಗ್ರಾಮೀಣ ಮಕ್ಕಳ ಅಮೃತಮಹೋತ್ಸವ ಅಂಗವಾಗಿ ರಾಜ್ಯಾದ್ಯಂತ ನಡೆದ ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳೇ, ನಡೆಸಿಕೊಟ್ಟ ಅಮೃತಸಿಂಚನ ಕಾರ್ಯಕ್ರಮ ಹಕ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಎನ್.ಎಚ್ ನಾಗೂರ, ಭಾಗವಹಿಸಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸುವ ಮೂಲಕ ಚಾಲನೆ ನೀಡಿದರು. ಸಮೂಹ ಗಾಯನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಿಂದ 7 ತಾಲೂಕಿನ ವಿವಿಧ ಭಾಗಗಳಿಂದ 83 ಶಾಲೆಗಳ 274 ವಿದ್ಯಾರ್ಥಿ ವಿದ್ಯಾರ್ಥಿನಿಯರ ಅಮೃತಸಿಂಚನ ಸಮೂಹ ಗಾಯನದಲ್ಲಿ ಪಾಲ್ಗೊಂಡಿದ್ದರು. ಜನಪದ ಗೀತೆ, ಭಕ್ತಿ ಗೀತೆ, ನಾಡ ಗೀತೆ, ದೇಶಭಕ್ತಿ ಗೀತೆ, ರಾಷ್ಟ್ರಗೀತೆ, ವಚನ ಹೀಗೆ ಆಯ್ಕೆ ಮಾಡಿದ ಹನ್ನೆರಡು ಹಾಡು ಸಮೂಹ ಗಾಯನ ಮೂಲಕ ಚಿತ್ರೀಕರಿಸಿ ರಾಜ್ಯಮಟ್ಟಕ್ಕೆ ಕಳುಹಿಸಲಾಯಿತು. ಹಕ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾದ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೊಯಿಸರ ಕ್ಲಾಂಪೆಕ್ಸ್‌ನಲ್ಲಿ ಬೆಳಕು ಎಂಟರ್‌ಪ್ರೈಸಸ್‌ನ ಸ್ಥಳಾಂತರಿತ ಕಛೇರಿ ಗುರುವಾರ ಶುಭಾರಂಭಗೊಂಡಿತು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಸ್ಥಳಾಂತರಿತ ಕಛೇರಿ ಉದ್ಘಾಟಿಸಿದರು. ಈ ಸಂದರ್ಭ ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಕಟ್ಟದ ಮಾಲಿಕರಾದ ಚಂದ್ರ ಜೋಯಿಸ್, ಉದ್ಯಮಿ ನೌಷದ್, ಬೆಳಕು ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಹಾಗೂ ಅವರ ತಂದೆತಾಯಿಗಳಾದ ಯಶೋಧ ಹಾಗೂ ನಾರಾಯಣ ದಂಪತಿಗಳು ಸೇರಿದಂತೆ ಇತರರರು ಉಪಸ್ಥಿತರಿದ್ದರು. ಕಳೆದ ಮೂರು ವರ್ಷಗಳಿಂದ ಬೆಳಕು ಎಂಟರ್‌ಪ್ರೈಸಸ್ – ಕಾಮನ್ ಸರ್ವಿಸ್ ಸೆಂಟರ್ ಹಾಗೂ ಸೇವಾ ಸಿಂಧು ಮೂಲಕ ಸರಕಾರಿ ಸೇವೆಗಳು, ಸ್ಕಾಲರ್‌ಶಿಪ್ ಸಲ್ಲಿಕೆ, ಉದ್ಯೋಗದ ಅರ್ಜಿ ಸಲ್ಲಿಕೆ ಸೇರಿದಂತೆ ಹತ್ತು ಹಲವು ಸೇವೆಗಳನ್ನು ಯಶಸ್ವಿಯಾಗಿ ನೀಡಲಾಗುತ್ತಿದೆ.

Read More