Author: ನ್ಯೂಸ್ ಬ್ಯೂರೋ

ಮಳೆಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಹೆಚ್ಚು. ಹಾಗಾಗಿ ಈ ಸಮಯದಲ್ಲಿ ನಾವು ಸೇವಿಸುವ ಆಹಾರಗಳ ಬಗ್ಗೆ ಗಮನಹರಿಸಿವುದು ಒಳ್ಳೆಯದು. ಮಳೆಗಾಲದಲ್ಲಿ ಯಾವ ಆಹಾರವನ್ನು ಸೇವಿಸಬೇಕು. ಯಾವುದನ್ನು ಸೇವಿಸಬಾರದೆಂಬ ಅರಿವು ಇದ್ದರೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಈ ಸಮಯದಲ್ಲಿ ಏನು ಸೇವಿಸಬೇಕು ಮತ್ತು ಏನನ್ನು ಸೇವಿಸಬಾರದು ನೋಡೋಣ. ಹಸಿರು ತರಕಾರಿಗಳು ಹೆಚ್ಚು ಬೇಡ:ಹಸಿರು ಸೊಪ್ಪುಗಳನ್ನು ವರ್ಷವಿಡೀ ತಿನ್ನಲು ಸಲಹೆ ನೀಡಲಾಗುತ್ತದೆಯಾದರೂ, ಮಳೆಗಾಲದಲ್ಲಿ ಹಾಗೆ ಹೆಚ್ಚು ಸೇವಿಸುವುದು ಒಳ್ಳೆಯದಲ್ಲ. ಈ ಋತುವಿನಲ್ಲಿ ತೇವಾಂಶವು ಹೆಚ್ಚಾಗುತ್ತದೆ ಎಂದು ಆಹಾರ ತಜ್ಞರು ನಂಬುತ್ತಾರೆ, ಇನ್ನು ಮಾನ್ಸೂನ್ ತಿಂಗಳಲ್ಲಿ ಕೀಟಾಣುಗಳು ತರಕಾರಿ ಎಲೆಗಳಲ್ಲಿ ನೆಲೆಸಲು ಮತ್ತು ಸಂತಾನೋತ್ಪತ್ತಿ ಮಾಡಲು ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಪಾಲಕ್, ಎಲೆಕೋಸು ಮತ್ತು ಹೂಕೋಸು ಮುಂತಾದ ತರಕಾರಿಗಳನ್ನು ತಿನ್ನಬಾರದು. ನೀರನ್ನು ಕುದಿಸಿ, ಕುಡಿಯುವುದು ಒಳ್ಳೆಯದು:ಮಳೆಗಾಲದಲ್ಲಿ ನೀರು ಕಲುಷಿತಗೊಳ್ಳುವ ಅಪಾಯ ಹೆಚ್ಚು. ಇಂತಹ ಕಲುಷಿತ ನೀರು ಹೊಟ್ಟೆಯ ಸೋಂಕುಗಳು, ಕಾಲರ, ಅತಿಸಾರ ಮತ್ತು ಟೈಫಾಯಿಡ್ ನಂತಹ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಕುದಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ ಹುದ್ದೆಗಳನ್ನು ಈ ಕೂಡಲೆ ಭತಿ೯ ಮಾಡಬೇಕು.ವಿವಿಧ ಇಲಾಖೆಗಳಲ್ಲಿ ನೇಮಕ ಗೊಂಡಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು,ಹೊರ ಗುತ್ತಿಗೆ ಪದ್ಧತಿಯನ್ನೇ ರದ್ದು ಪಡಿಸಲು ಒತ್ತಾಯಿಸುವ ಹೋರಾಟಕ್ಕೆ ಮುಂದಾಗಬೇಕು ಎಂದು ಡಿವೈಎಫ್ಐ ರಾಜ್ಯ ಮಾಜಿ ಕಾಯ೯ದಶಿ೯ ಮಹಾಂತೇಶ್ ಕರೆ ನೀಡಿದರು. ಬೈಂದೂರು ಸಿಐಟಿಯು ಕಚೇರಿಯಲ್ಲಿ ಇತ್ತೀಚೆಗೆ ಜರಗಿದ ‘ಉದ್ಯೋಗದ ಹಕ್ಕಿಗಾಗಿ’ ಬೈಂದೂರು ತಾಲೂಕು ಯುವಜನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಡಿವೈಎಫ್ಐ ಜಿಲ್ಲಾ ಮಾಜಿ ಅಧ್ಯಕ್ಷ ವೆಂಕಟೇಶ್ ಕೋಣಿ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಾ ಸಾಮಾಜಿಕ ಪಿಡುಗು ಹಾಗೂ ಸ್ಥಳೀಯ ಜ್ವಲಂತ ಸಮಸ್ಯೆಗಳನ್ನು ಕೈಗೆತ್ತಿ ಪರಿಹರಿಸಲು ಯುವಜನರು ಜಾತಿ,ಮತ,ಧಮ೯ ಪ್ರಾದೇಶಿಕತೆ ಭೇದ ಮರೆತು ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದರು. ಭಾರತ ಪ್ರಜಾಸತ್ತಾತ್ಮಕ ಯುವಜನ ಪೆಢರೇಶನ್ (ಡಿವೈಎಫ್ಐ) ಬೈಂದೂರು ತಾಲೂಕು ಸಮಿತಿಗೆ ಅಧ್ಯಕ್ಷರಾಗಿ ವಿಜಯ. ಬಿ. ಕಿರಿಮಂಜೇಶ್ವರ, ಹರೀಶ್ ಬೈಂದೂರು, ಉಪಾಧ್ಯಕ್ಷರಾಗಿ ಚಾಕೊ ಥೋಮಸ್, ಪ್ರದಾನ ಕಾರ್ಯದರ್ಶಿಯಾಗಿ ಜೊಕಿಮ್ ಗ್ರಾಸ್ ಯಡ್ತರೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಬಿಎಸ್‌ಸಿ ಪಠ್ಯಕ್ರಮದ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ತ್ರಾಸಿಯ ಡಾನ್‌ಬಾಸ್ಕೊ ಶಾಲೆಯ ಎಲ್ಲಾ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ 100 ಫಲಿತಾಂಶ ಬಂದಿದೆ. ಐದು ವರ್ಷಗಳಿಂದ ಸತತ ಈ ದಾಖಲೆಯಾಗಿದೆ. 29ರಲ್ಲಿ 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ಪ್ರಥಮ ಶ್ರೇಣಿ ಹಾಗೂ ಉಳಿದ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿ. ನಿತ್ಯಶ್ರೀ ಶೇ 94.2 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ ಶೇ 91.2 ಪಡೆದ ಪ್ರಾಂಜಲ್ ಮ್ಯಾಥ್ಯೂ ಲೋಬೊ ದ್ವಿತೀಯ ಸ್ಥಾನಿಯಾಗಿದ್ದಾರೆ. ಈ ಸಂದರ್ಭ ಮಾತನಾಡಿದ ಪ್ರಾಂಶುಪಾಲ ಫಾ. ಮ್ಯಾಕ್ಸಿಮ್ ಡಿಸೋಜ, ಕೋವಿಡ್ ಕಾರಣದಿಂದ ಬೋರ್ಡ್ ಪರೀಕ್ಷೆಯನ್ನು ರದ್ದುಮಾಡಿ, ಶಾಲಾ ಪರೀಕ್ಷೆಗಳ ಅಂಕ ಪರಿಗಣಿಸಿ ಫಲಿತಾಂಶ ಘೋಷಿಸಲಾಗಿತ್ತು. ಬೋರ್ಡ್ ಪರೀಕ್ಷೆ ನಡೆದಿದ್ದರೆ ವಿದ್ಯಾರ್ಥಿಗಳ ಸಾಧನೆಯ ಮಟ್ಟ ಇನ್ನೂ ಹೆಚ್ಚಿರುತ್ತಿತ್ತು ಎಂದು ಹೇಳಿದರು. ದಶಮಾನೋತ್ಸವದ ಸಂಭ್ರಮದಲ್ಲಿರುವ ಶಾಲೆ ಈ ವರ್ಷದಿಂದ ಸೀನಿಯರ್ ಸೆಕೆಂಡರಿ ಶಾಲೆಯಾಗಿ ಮೇಲ್ದರ್ಜೆಗೇರಿದ್ದು, 11ನೇ ತರಗತಿಯ ವಿಜ್ಞಾನ ಮತ್ತು ವಾಣಿಜ್ಞ್ಯ ಶಾಸ್ತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕರೋನಾ ಸೋಂಕಿನ ಸರಪಳಿಯನ್ನು ತುಂಡರಿಸಿ, ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಗ್ಗಿಸಿ , ಜಿಲ್ಲೆಯು ಜನರು ಕೋವಿಡ್ -19 ರ ಭಾದೆಗೆ ಒಳಗಾಗದಂತೆ ತಪ್ಪಿಸಲು, ಆಗಸ್ಟ್ 5 ರ ಗುರುವಾರದಿಂದ, ಕೋವಿಡ್-19 ಪಾಸಿಟಿವ್ ವ್ಯಕ್ತಿಗಳನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ಯಾರಂಟೈನ್ (Covid Care Centre)ಗೆ ಸ್ಥಳಾಂತರಗೊಳಿಸುವ0ತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ. ಅಂತಹ ರೋಗಿಗಳ ಸ್ಥಳಾಂತರವನ್ನು ತಡೆಯುವ, ವಿರೋಧಿಸುವ, ಪ್ರತಿರೋಧಿಸುವ ಯಾವುದೇ ವ್ಯಕ್ತಿಯ ಅಥವಾ ರೋಗಿಯ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005, ಸಾಂಕ್ರಾಮಿಕ ನಿಯಂತ್ರಣ ಕಾಯ್ದೆ 2020 ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಗರ್ಭಿಣಿಯರು, ಅಶಕ್ತರು, ಹಾಗೂ ಇತರ ವಿಶೇಷ ಪ್ರಕರಣಗಳಿದ್ದಲ್ಲಿ, ಅಂತಹವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲೂಕು ಆರೋಗ್ಯ ವೈದ್ಯಾಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವುದಕ್ಕೆ ಬೇಸರವಿಲ್ಲ. ಶಾಸಕನಾದವನು ಮಂತ್ರಿಯಾಗಲೇಬೇಕು ಎಂದೇನೂ ಇಲ್ಲ. ಶಾಸಕನಾಗಿಯೇ ಕ್ಷೇತ್ರದ ಜನರ ಋಣ ತೀರಿಸುವುದಾಗಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ. ನನಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ದುಃಖವೂ ಇಲ್ಲ ಸಂತೋಷವೂ ಇಲ್ಲ. ಎಲ್ಲಾ ಜಾತಿ ಧರ್ಮದ ಮತ ಪಡೆದು ಜನಪ್ರತಿನಿಧಿಯಾದವನು ಒಂದು ಜಾತಿ ಧರ್ಮದ ಆಧಾರದಲ್ಲಿ ಸ್ಥಾನಮಾನ ಕೇಳುವುದು ಸರಿಯಲ್ಲ. ಜಾತಿಪ್ರೇಮ ಉಳ್ಳವರು, ಜಾತಿ ರಾಜಕಾರಣ ನಡೆಸುವವರು ಜಾತಿ ಸಂಘಟನೆಯ ಚುನಾವಣೆಗೆ ನಿಲ್ಲಬೇಕು ಎಂದಿದ್ದಾರೆ. ಅಲ್ಲದೇ ಸರಳ ರಾಜಕಾರಣಿಯಂತೆ ಬಿಂಬಿಸಿಕೊಂಡು ಬದುಕುವ ರಾಜಕಾರಣಿಗಳಿದ್ದಾರೆ. ಅಂತಹ ರಾಜಕಾರಣದ ಅಗತ್ಯ ನನಗಿಲ್ಲ ಎಂದು ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ಹೊರಹಾಕಿದ್ದಾರೆ. ತನಗೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಪ್ರತಿಭಟನೆ ನಡೆಸುವುದು ಸರಿಯಲ್ಲ. ಅಂಥ ಪ್ರತಿಭಟನೆಗೆ ನನ್ನ ಬೆಂಬಲ ಇಲ್ಲ ಎಂಬುದಾಗಿಯೂ ಅವರು ಈ ಸಂದರ್ಭ ತಿಳಿಸಿದ್ದಾರೆ. ಇದನ್ನೂ ಓದಿ:► ಶಾಸಕ ಹಾಲಾಡಿಗೆ ದೊರೆಯದ ಸಚಿವ ಸ್ಥಾನ. ಅಭಿಮಾನಿಗಳ ಪ್ರತಿಭಟನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಭಾರಿಯೂ ಮಂತ್ರಿಗಿರಿ ಕೈತಪ್ಪಿದ್ದನ್ನು ಖಂಡಿಸಿ ಅವರ ಬೆಂಬಲಿಗರು ಬುಧವಾರ ಬೆಂಗಳೂರಿನ ಕಾವೇರಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ಹಾಲಾಡಿ ಅವರಿಗೆ ಮಂತ್ರಿಸ್ಥಾನ ನೀಡಿ ಎನ್ನುವ ಬೋರ್ಡ್ ಹಿಡಿದು ಕೆಲಕಾಲ ಪ್ರತಿಭಟಿಸಿದ್ದು ಬಳಿಕ ಪೊಲೀಸರು ಪ್ರತಿಭಟನೆಯನ್ನು ಮೊಟಕುಗೊಳಿಸಿದರು. ಈ ವೇಳೆ ಜೈ ಭಾರ್ಗವ ಬಳಗದ ಅಜಿತ್ ಶೆಟ್ಟಿ ಕಿರಾಡಿ, ವಸಂತ್ ಗಿಳಿಯಾರ್, ಹರೀಶ್ ಶೆಟ್ಟಿ ಅರೆಶಿರೂರು, ಅಜಿತ್ ಉಳ್ತೂರು ಸೇರಿದಂತೆ ಇನ್ನಿತರರು ಇದ್ದರು. ಕುಂದಾಪುರ ಕ್ಷೇತ್ರಕ್ಕಿಲ್ಲ ಮಂತ್ರಿಸ್ಥಾನ:ನಾಲ್ಕು ಭಾರಿ ಬಿಜೆಪಿ ಪಕ್ಷದಿಂದ ಹಾಗೂ ಒಂದು ಭಾರಿ ಪಕ್ಷೇತರವಾಗಿ ಗೆದ್ದು ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಈ ಭಾರಿ ಮಂತ್ರಿ ಪದವಿಗೆ ಪರಿಗಣಿಸಬೇಕು ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನ ಆರಂಭಿಸಿದ್ದರು. ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ತಾನು ಮಂತ್ರಿ ಪದವಿಗಾಗಿ ಯಾರ ಕಾಲಿಗೂ ಬಿಳುವುದಿಲ್ಲ. ಉತ್ತಮ ಪದವಿ ಸಿಕ್ಕರೆ ಮಂತ್ರಿ ಕಾರು, ಗನ್’ಮ್ಯಾನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರಿಗೆ ಕಾರಂತರೇ ಸಾಟಿ. ಅವರ ನೇರ ನುಡಿ, ವ್ಯಕ್ತಿತ್ವ, ಸಾಹಿತ್ಯ ಕೃಷಿ, ಪ್ರೇರಣದಾಯಕ, ಕಾರಂತರ ನುಡಿಮುತ್ತುಗಳು ಪ್ರಸ್ತುತ ಸಮಾಜಕ್ಕೆ ಕಿವಿಮಾತಾಗಿದ್ದು, ಅವರು ಕಾದಂಬರಿಗಳಲ್ಲಿ ತೋರಿಸುತ್ತಿದ್ದ ಪರಿಸರ ಪ್ರೇಮ ಅಮೋಘವಾದ್ದು, ಪರಿಸರ ಉಳಿಸಿ ಬೆಳೆಸೋದು ಪ್ರತಿಯೊಬ್ಬರ ಕರ್ತವ್ಯ ಎಂದು ಉಡುಪಿ ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕ ಸೂರ್ಯಕಾಂತ್ ಬಿರಾದಾರ್ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಮಿನಿ ಸಂಭಾಗಣ, ಅಂಗನವಾಡಿ, ಗ್ರಂಥಾಲಯ, ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟ ಕೃಷಿ ಅಧಿಕಾರಿ ಕುಮಾರಿ ಸುಪ್ರಭ, ಬ್ರಹ್ಮಾವರ ಕೃಷಿ ಇಲಾಖೆಯ ಸಿಬ್ಬಂದಿ ಕುಮಾರಿ ದೀಪಾಂಜಲಿ, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಈರ್ವರು ಶಾಸಕರಿಗೆ ಸಚಿವ ಸ್ಥಾನ ಖಚಿತವಾಗಿದೆ. ರಾಜ್ಯ ಸಂಪುಟದಲ್ಲಿ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟದಲ್ಲಿ 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ದಲಿತ, 3 ಎಸ್.ಸಿ., 1 ಎಸ್.ಟಿ ಮತ್ತು ಮಹಿಳೆ ಶಾಸಕಿಗೂ ಸ್ಥಾನ ನೀಡಲಾಗಿದ್ದು, ರಾಜ ಭವನದಲ್ಲಿ ಇಂದು ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ:ಸುನೀಲ್ ಕುಮಾರ್ – ಕಾರ್ಕಳ,ಕೋಟ ಶ್ರೀನಿವಾಸ ಪೂಜಾರಿ – ಎಂಎಲ್ಸಿಎಸ್ ಅಂಗಾರ-ಸುಳ್ಯ,ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ,ಆರ್.ಅಶೋಕ್- ಪದ್ಮನಾಭ ನಗರ,ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ,ಉಮೇಶ್ ಕತ್ತಿ- ಹುಕ್ಕೇರಿ,ಎಸ್.ಟಿ.ಸೋಮಶೇಖರ್- ಯಶವಂತಪುರ,ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ,ಬೈರತಿ ಬಸವರಾಜ – ಕೆ ಆರ್ ಪುರಂ,ಮುರುಗೇಶ್ ನಿರಾಣಿ – ಬೀಳಗಿ,ಶಿವರಾಂ ಹೆಬ್ಬಾರ್- ಯಲ್ಲಾಪುರ,ಶಶಿಕಲಾ ಜೊಲ್ಲೆ- ನಿಪ್ಪಾಣಿ,ಕೆಸಿ ನಾರಾಯಣಗೌಡ – ಕೆಆರ್ ಪೇಟೆ,ಅರಗ ಜ್ಞಾನೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಲಭ್ಯವಿರುವ ಕಾಳ ಮೆಣಸು ಪುನಃಶ್ಚೇತನ, ಅಣಬೆ ಉತ್ಪಾದನಾ ಘಟಕಗಳು ಸ್ಫಾಪನೆ, ಕೃಷಿ ಹೊಂಡಗಳ ನಿರ್ಮಾಣ, ಸಮಗ್ರ ಪೀಡೆ/ ಪೋಷಕಾಂಶಗಳ ನಿರ್ವಹಣೆ 20 ಅಶ್ವಶಕ್ತಿಗಿಂತ ಕಡಿಮೆ ಸಾಮರ್ಥ್ಯದ ಟ್ರಾಕ್ಟರ್ ಖರೀದಿಗೆ, ಪ್ಯಾಕ್ ಹೌಸ್ ಘಟಕ ನಿರ್ಮಾಣಕ್ಕೆ, ಪ್ರಾಥಮಿಕ/ ಬಹುಪಯೋಗಿ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ತೋಟಗಾರಿಕೆ ಬೆಳೆಗಳನ್ನು ಒಣಗಿಸಲು ನಿರ್ಮಾಣ ಮಾಡುವ ಸೋಲರ್ ಡ್ರೆಯರ್ ಗಳಲ್ಲಿ ಉಪಯೋಗಿಸುವ ಸಿಲ್ ಪಾಲಿನ ಹಾಳೆಗಳಿಗೆ ಸಹಾಯ ಧನ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಉಡುಪಿ ಜಿಲ್ಲೆಯ ತೋಟಗಾರಿಕೆ ನಿರ್ದೇಶಕರ ಕಚೇರಿ 0820-2531950, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರು ಉಡುಪಿ ತಾಲೂಕು 0820-2522837, ಕುಂದಾಪುರ ತಾಲೂಕು 08254-230813 ಹಾಗೂ ಕಾರ್ಕಳ ತಾಲೂಕು 08258-230288 ನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2020ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರರಾಷ್ರೀಯ ಮಟ್ಟದ ವಿವಿಧ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಅರ್ಹ ಕ್ರೀಡಾಪಟುಗಳು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಢೀಕೃತ ದಾಖಲೆಗಳೊಂದಿಗೆ ಇದೇ ಆಗಸ್ಟ್ 25 ರೊಳಗೆ ಹಿಂತಿರುಗಿಸಲು ಕೋರಿದೆ. ನಂತರ ಬರುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2521324, 9480886467 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More