Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದುರ್ಬಲರ ಸಮಾಜದ ಏಳಿಗೆಗಾಗಿ ಶ್ರಮಿಸುವ ಕಾರ್ಯ ಭಗವಂತನಿಗೆ ಸಲಿಸುವ ಭಕ್ತಿಯಷ್ಟೆ ಶ್ರೇಷ್ಠವಾದದ್ದು ಎಂದು ಉಡುಪಿ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ಶ್ರೀಪಾದಂಗಳ ನುಡಿದರು. ಅವರು ಶನಿವಾರ ಕೋಟತಟ್ಟು ಗ್ರಾಮಪಂಚಾಯತ್ ಹಾಗೂ ದಾನಿಗಳಿಂದ ನಿರ್ಮಾಣಗೊಂಡ ಕೋಟತಟ್ಟು ಚಿಟ್ಟಿಬೆಟ್ಟಿನ ಎಂಟು ಗೃಹಗಳ ಲೋಕಾರ್ಪಣಾ ಸಮಾರಂಭ ಆಸರೆ -2026 ಕಾರ್ಯಕ್ರಮದಲ್ಲಿ ಆಶ್ರೀವಚನ ನೀಡಿ ಮಾತನಾಡಿದರು. ಕೊರಗ ಸಮುದಾಯ ಎಂಬ ಕುಲ ಕಸುಬು ಮಾಡಿ ಜೀವನ ಸಾಗಿಸುವ  ಪರಂಪರೆಯ ಮುಗ್ಧ ಜೀವಗಳಿಗೆ ಆಸರೆ ನೀಡಿರುವುದು ಕೋಟತಟ್ಟು ಪಂಚಾಯತ್ ಅತೀ ಶ್ರೇಷ್ಠವಾದ ಕಾಯಕ ಮಾಡಿದೆ, ಅಲ್ಲದೆ ಈ ಕಾರ್ಯದಲ್ಲಿ ಕೈ ಜೋಡಿಸಿಕೊಂಡ ದಾನಿಗಳ ಸಹಕಾರಕ್ಕೆ ಗೌರವ ಸಲ್ಲಿಸಿದ ಸ್ವಾಮೀಜಿ ನಮ್ಮ ಮಠದ ವತಿಯಿಂದ ಐದು ಲಕ್ಷ ರೂಗಳ ದೇಣಿಗೆಯನ್ನು ಘೋಷಿಸಿ ಭಾರತ ವಿಶ್ವಗುರುವಾಗಿ ವಿಶ್ವಮಟ್ಟದಲ್ಲಿ ಆದರ್ಶ ನೀಡುವ ದೇಶವಾಗಲಿ ಎಂದರು. ಸಮಾಜಸೇವಕ ಎಚ್. ಎಸ್. ಶೆಟ್ಟಿ ಮಾತನಾಡಿ, ಬದುಕಿನಲ್ಲಿ ಮಾನವೀಯ ಕಾರ್ಯ ಎಂದರೆ ಅದು ಈ ಸಮಾಜಕ್ಕೆ ನೀಡುವ ಕೊಡುಗೆಗಳು ಅದರಲ್ಲಿ ಕೊರಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್‌ನಲ್ಲಿ ಜಲ್ ಅರ್ಪಣ್ ದಿವಸ ಆಚರಣೆ, ಜೆಜೆಎಮ್‌ ಯೋಜನೆಯಡಿ ಸೃಜಿಸಿದ ಸ್ವತ್ತುಗಳ ನಿರ್ವಹಣೆಯ ಬಗ್ಗೆ, ಕುಡಿಯುವ ನೀರಿನ ಯೋಜನೆಯ ಕಾರ್ಯಾಚರಣೆ ಹಾಗೂ ನಿರ್ವಹಣೆ ಬಗ್ಗೆ ಗ್ರಾಮಸ್ಥರಿಗೆ, ವಿಡಬ್ಲೂಎಸ್‌ಸಿ ಸದಸ್ಯರಿಗೆ ಶನಿವಾರ ಮಾಹಿತಿ ನೀಡಲಾಯಿತು. ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕ ಮಗಳೂರು ಕ್ಷೇತ್ರದ ಮಾನ್ಯ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು 8 ಕೊರಗ ಸಮುದಾಯದ ಫಲಾನುಭವಿಗಳಿಗೆ ಮನೆ ಹಾಗೂ ಕುಡಿಯುವ ನೀರಿನ ಸೇವೆಯನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬ್ರಹ್ಮಾವರ ತಾ. ಪಂ ಇಒ, ಇಇ ಮತ್ತು ಎಇಇ, ಆರ್‌ಡಬ್ಲೂಎಸ್‌, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇಲಾಖೆಯ ಸೆಕ್ಷನ್ ಆಫೀಸರ್ ಗಳು, ಫಲಾನುಭವಿಗಳು, ಪಂಚಾಯತ್ ಪಂಪ್ ಆಪರೇಟರ್, ಗ್ರಾಮಸ್ಥರು ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇವರ ಒಲುಮೆಗೆ ಪಾತ್ರರಾಗಲು ಮತ್ತು ದೇವರನ್ನು ಒಲಿಸಿಕೊಳ್ಳಲು ಭಜನೆ ಸುಲಭ ಮಾರ್ಗವಾಗಿದೆ. ಭಕ್ತಿಯಿಂದ ಮಾಡಿದ ಪ್ರತಿಯೊಂದು ಕಾರ್ಯ ದೇವರಿಗೆ ಸಲ್ಲುತ್ತದೆ. ಗುರುಗಳು ಹಾಗೂ ಹಿರಿಯರು ನಡೆದುಕೊಂಡು ಬಂದ ಸನ್ಮಾರ್ಗದಲ್ಲಿ ಮುನ್ನಡೆದು, ಪ್ರತಿನಿತ್ಯ ಮನೆಯಲ್ಲಿ ಭಜನೆ ಮಾಡುವ ಸಂಪ್ರದಾಯವನ್ನು ಬೆಳೆಸಿ ಮುನ್ನಡೆಸಿಕೊಂಡು ಬರಬೇಕು. ಭಜನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯುವುದಲ್ಲದೆ ಸಮಾಜದ ಒಗ್ಗಟ್ಟು ಹಾಗೂ ಬೆಳವಣಿಗೆ ಕೂಡ ಸಾಧ್ಯವಾಗುತ್ತದೆ ಎಂದು ನಿವೃತ್ತ ಲೆಕ್ಕಪರಿಶೋಧಕ ಮಂಜುನಾಥ ಖಾರ್ವಿ ಹೇಳಿದರು. ಅವರು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇದರ ವತಿಯಿಂದ 81ನೇ ಮಹಾ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಆಯೋಜಿಸಲಾಗಿದ್ದ ಕಾರವಾರ-ಮಂಗಳೂರುವರೆಗಿನ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಗ್ರಾಪಂ. ಮಾಜಿ ಸದಸ್ಯ, ಪತ್ರಕರ್ತ ಬಿ. ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಗಮಿಸಿ ಶುಭ ಕೋರಿದರು. ಮಾಜಿ ಮಂಡಲ ಪ್ರಧಾನ ಬಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಕಷ್ಟು ಕುಟುಂಬಗಳು ತಮ್ಮ ಜೀವನ ಕಟ್ಟಿಕೊಂಡು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮತ್ತು ಮಾತೃಶ್ರೀ ಸೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ನಂಬಿಕೆ ತಳಹದಿದಲ್ಲಿ ಕಾರ್ಯಾಚರಿಸುವ ಏಕಮಾತ್ರ ಸಂಸ್ಥೆಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುತಿಸಿಕೊಂಡಿದೆ. ಕಾವಂದರ ಚಿಂತನೆ ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು, ಈ ದಿಸೆಯಲ್ಲಿ ಸ್ವಂತ ಉದ್ಯಮಕ್ಕೆ ಈ ಹೊಲಿಗೆ ತರಬೇತಿ  ಶಕ್ತಿಯುತವಾಗಿ ಈ ಸಮಾಜದಲ್ಲಿ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ಶ್ರೀ ಕ್ಷೇತ್ರ ಪ್ರತಿಯೋಜನೆ ಯೋಚನೆ ದುರ್ಬಲರ ಕಣ್ಣಿರೊರೆಸುವ ಕಾರ್ಯ ಮಾಡಲಿದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 19 ರಿಂದ 21ರ ತನಕ ನಡೆಯುವ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದಲ್ಲಿ ಫೆಬ್ರವರಿ 20ರಂದು ಸಂಜೆ ಶ್ರೀನಿವಾಸ ಸಭಾಮಂಟಪದಲ್ಲಿ ರೈತಪೀಠ ಪ್ರಶಸ್ತಿ ಪ್ರದಾನ ನಡೆಯಲಿದೆ. 240ಕ್ಕೂ ಹೆಚ್ಚು ಭಾರತೀಯ ಭತ್ತದ ತಳಿಗಳನ್ನು ಸಂರಕ್ಷಣೆ ಮಾಡಿದ ಅಪರೂಪದ ಕೃಷಿಕ ಋಷಿ ಬಿ.ಕೆ. ದೇವರಾಯ ಮಿತ್ತಬಾಗಿಲು. ಅವರು ಮೂಡಬಿದರೆ ಎಸ್‌ ಕೆಎಫ್‌ ಸಂಸ್ಥೆ ನೀಡುವ ನೂತನ ಪ್ರಥಮ ರೈತಪೀಠ ಪ್ರಶಸ್ತಿಯನ್ನು ಸ್ವೀಕರಿಸುವರು. ತಮ್ಮ ಬದುಕನ್ನೇ ಕೃಷಿ ಕಾಯಕಕ್ಕೆ ಅರ್ಪಿಸಿರುವ ರೈತರ ತ್ಯಾಗ, ಪರಿಶ್ರಮ ಮತ್ತು ರೈತರ ಮಹತ್ವವನ್ನು ಗುರುತಿಸುವ ಮಹತ್ವದ ಉದ್ದೇಶದಿಂದ “ರೈತಪೀಠ” ಎಂಬ ಗೌರವ ಪ್ರಶಸ್ತಿಯನ್ನು ಸ್ಥಾಪಿಸಿ ರೈತರನ್ನು ಗೌರವಿಸುವುದು ನಮ್ಮ ಮುಖ್ಯ ಉದ್ದೇಶ. ನಮ್ಮ ಯುವ ಸಮುದಾಯ ಕೃಷಿಯತ್ತ ಆಕರ್ಷಿತರಾಗಬೇಕು, ಕೃಷಿಯನ್ನೂ ಕೂಡ ಕಾರ್ಪೋರೇಟ್‌ ವ್ಯವಸ್ಥೆಯ ಹಂತಕ್ಕೆ ಬೆಳೆಸಬೇಕು, ಮುನಿಯಾಲಿನ ಗೋಧಾಮ ಎಂಬ ಕೃಷಿಲೋಕವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಡೇರಹೋಬಳಿ ನಿವಾಸಿ ಮಂಜುನಾಥ ಮೊಗವೀರ (72) ಅವರಿಗೆ ಸ್ಕೂಟರ್ ಢಿಕ್ಕಿಯಾಗಿ, ಗಾಯಗೊಂಡ ಘಟನೆ ಹೆಮ್ಮಾಡಿಯ ಸಂತೋಷನಗರ ಕ್ರಾಸ್ ಹತ್ತಿರ ಇತ್ತೀಚಿಗೆ ಸಂಭವಿಸಿದೆ. ಗಾಯಗೊಂಡ ಮಂಜುನಾಥ ಅವರನ್ನು ಸ್ಕೂಟರ್ ಸವಾರ ಪ್ರವೀಣ್ ಹಾಗೂ ಸ್ಥಳೀಯರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಾಂಡೇಶ್ವರ ಗ್ರಾಮಪಂಚಾಯತ್‌ನ ವಿಕಲಚೇತನ ಕೊಠಡಿ ಮತ್ತು ರೆಕಾರ್ಡ್ ರೂಮ್ ಅನ್ನು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರಿ, ಉಪಾಧ್ಯಕ್ಷ ವೈಬಿ ರಾಘವೇಂದ್ರ, ಗ್ರಾಮ ಆಡಳಿತಾಧಿಕಾರಿ ಐರಿನ್ ಶಾಂತಿ ಫೆರೆರಾ, ಪಂಚಾಯತ್ ಸದಸ್ಯರು, ಪಿಡಿಓ ವಂದನಾ, ಕಾರ್ಯದರ್ಶಿ ವಿಜಯ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ವೆಂಕಟೇಶ ಮರಕಾಲ ಅವರ ಪುತ್ರ ನಾಗರಾಜ್ ಕುಂದರ್ (38) ಅವರು ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ. ಅವರು ಅವಿವಾಹಿತರಾಗಿದ್ದು, ರೆಡಿಮೇಡ್ ಪಾಗರ ಮಾಡುವ ಕೆಲಸ ಮಾಡಿಕೊಂಡಿದ್ದರು. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ  ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ 79.00ಕಿ.ಮೀ. ನಲ್ಲಿ ಬಳ್ಕೂರು- ಕಂಡ್ಲೂರು ಮಧ್ಯದಲ್ಲಿ ವರಾಹಿ ನದಿಗೆ ನಿರ್ಮಿಸಲಾಗಿರುವ ಸೇತುವೆಯ ಮರು ನಿರ್ಮಾಣದ ಕುರಿತ ರಾಜ್ಯ ಸರಕಾರದ ನಿರ್ಧಾರಕ್ಕೆ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೊಡ್ಗಿ ಅವರು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಉಡುಪಿ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಅತಿ ಹತ್ತಿರದ ಈ ಮಾರ್ಗದ ಕಿ.ಮೀ 79.00ರಲ್ಲಿ ಬಳ್ಕೂರು – ಕಂಡ್ಲೂರು ಮಧ್ಯ ಸೇತುವೆ ಇದ್ದು ಇದು 1972ರಲ್ಲಿ ನಿರ್ಮಾಣಗೊಂಡಿದೆ. ಸೇತುವೆಯು 10 ಅಂಕಣಗಳನ್ನು ಒಳಗೊಂಡಿದ್ದು ಒಟ್ಟು 312ಮೀ. ಉದ್ದವಿದೆ. ಈ ಸೇತುವೆ ಈಗಾಗಲೇ ಶಿಥಿಲ ಗೊಂಡಿರುವ ಕಾರಣ ಇದರ ಮೇಲೆ ಅಧಿಕ ಭಾರ ಹೊತ್ತ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಸೇತುವೆ ಕುಸಿಯುವ ಸಾಧ್ಯತೆಯೊಂದಿಗೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳುವ ಸಂಭವವಿದೆ. ಹೀಗಾಗಿ ಸೇತುವೆಯ ಮರುನಿರ್ಮಾಣಕ್ಕೆ ಅಂದಾಜು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತರಬೇತಿ ಮತ್ತು ಉದ್ಯೋಗ ಘಟಕವು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಅದು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಪ್ರಸ್ತುತ ಉದ್ಯಮದ ನಿರೀಕ್ಷೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಪರಸ್ಪರ ಮತ್ತು ವೃತ್ತಿಪರ ಸಾಮರ್ಥ್ಯಗಳನ್ನು ಬಲಪಡಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿತ್ತು. ‘ಥ್ರಸ್ಟ್ ಅಕಾಡೆಮಿ’ಯ ಸಂಸ್ಥಾಪಕ ಕಾರ್ತಿಕ್ ಆಳ್ವ ಅವರು ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿಯನ್ನು ನಡೆಸಿದರು. ತರಬೇತಿಯ ಸಮಯದಲ್ಲಿ, ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯ, ವ್ಯಕ್ತಿತ್ವ ಅಭಿವೃದ್ಧಿ, ಸಂದರ್ಶನ ಸಿದ್ಧತೆ, ಗುಂಪು ಚರ್ಚಾ ತಂತ್ರಗಳು, ಕೆಲಸದ ಸ್ಥಳದ ಶಿಷ್ಟಾಚಾರ ಮತ್ತು ವೃತ್ತಿಪರ ಪ್ರಸ್ತುತಿಯ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಸಂವಾದಾತ್ಮಕ ತರಬೇತಿಯಲ್ಲಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಸಲುವಾಗಿ ಪ್ರಾಯೋಗಿಕ ಚಟುವಟಿಕೆಗಳು ಹಾಗು ಅಣುಕು ಸಂದರ್ಶನವನ್ನು ನಡೆಸಲಾಯಿತು.ಪ್ರಾಂಶುಪಾಲರು ಮತ್ತು ಅಧ್ಯಾಪಕರು ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಮತ್ತು ವೃತ್ತಿ ಅನ್ವೇಷಣೆಗಳಲ್ಲಿ ಪಡೆದ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಅನ್ವಯಿಸಲು ಪ್ರೋತ್ಸಾಹಿಸಿದರು.…

Read More