ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಖ್ಯಾತ ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ (91 ವರ್ಷ) ಅವರು ಶನಿವಾರ ಬೆಳಿಗ್ಗೆ ನಿಧನರಾದರು. ಅವರು ವಯೋಸಹಜ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಅವರ ನಿಧನಕ್ಕೆ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಅಪ್ಪಣ್ಣ ಹೆಗ್ಡೆ ಅವರು 1960 ರಿಂದ 1983ರ ವರೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ಬಳಿಕ 1983ರಿಂದ 1994ರವರೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಜನಸಂಪರ್ಕ, ಸರಳ ಜೀವನಶೈಲಿ ಹಾಗೂ ಜನಪರ ಕಾರ್ಯಗಳಿಂದ ಅವರು ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ರಾಜಕೀಯದ ಜೊತೆಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಬೋ ಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಸಿಎಸ್ಆರ್ ನಿಧಿ ಮೂಲಕ ಶಾಲಾ ಕೊಠಡಿಯ ನಿರ್ಮಾಣವಾಗಲಿದ್ದು ಶುಕ್ರವಾರ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಗಂಟಿಗೊಳೆ ಅವರು ಈ ಕನಸಿಗೆ ರೆಕ್ಕೆಪುಕ್ಕ ನೀಡಿದ್ದು ಬೈಂದೂರು ಉತ್ಸವ. ಬೈಂದೂರು ಉತ್ಸವದ ಯಶಸ್ಸು, ಗುರಿ ಇಂದು ಬೈಂದೂರು ಕ್ಷೇತ್ರದಲ್ಲಿ ಇಂತಹ ಕಾರ್ಯಗಳನ್ನು ನಮ್ಮಿಂದ ದಾನಿಗಳ ಮೂಲಕ ಮಾಡಿಸುತ್ತಿದೆ. ಬೈಂದೂರು ಉತ್ಸವ ಯಶಸ್ಸು ಈ ರೀತಿಯ ಕಾರ್ಯಕ್ರಮಗಳ ಮೂಲಕ ಪ್ರತಿಧ್ವನಿಸುತ್ತಿರುವುದು ಬೈಂದೂರಿನ ಗೆಲುವಾಗಿದೆ ಎಂದರು. ಕಾರ್ಯಕ್ರಮದಲ್ಲಿ ರೋಬೋಸಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ಸಿಇಒ ರಾನ್ ಮಹಾನ್, ಗ್ಲೋಬಲ್ ಸೇಲ್ಸ್ ಸಂಸ್ಥೆಯ Executive Vice-President ಸ್ಟೀಫನ್, Global Delivery ಇದರ Executive Vice-President ಶ್ರೀನಿಧಿ ರಾವ್, ಎಚ್ಆರ್ ರೀನಾ ಮಲಿಕ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇದೇ ಬರುವ ಮಾಚ್೯1ರಂದು ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ: ಪವಿತ್ರ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ ಶುಕ್ರವಾರ ಜರಗಿತು. ಶ್ರೀ ದೇಗುಲದ ನಾಗದೇವರಿಗೆ ಹಾಗೂ ಅಮೃತೇಶ್ವರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಾಗಮಂಡಲ ನಡೆಯಲಿರುವ ಕೋಟ ಗಾಂಧಿ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವನ್ನು ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಸಲ್ಲಿಸಿಕೊಂಡು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಅಡಿಕೆ ಮರವನ್ನು ನಿಲ್ಲಿಸುವ ಮೂಲಕ ಚಪ್ಪರ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಚಪ್ಪರ ಮುಹೂರ್ತ ಕಾರ್ಯದಲ್ಲಿ ಶ್ಯಾಮಿಯಾನ ಮಾಲಿಕರಾದ ದೇವದಾಸ್ ಕಾಂಚನ್ ಹಾಗೂ ಮಂಡಲದ ಚಪ್ಪರ ನೇತೃತ್ವ ಪಡೆದ ಭರತ್ ಗಾಣಿಗ, ಮೇಸ್ತ್ರೀ ಅಶೋಕ್ ಪೂಜಾರಿ ಅರ್ಚಕರಲ್ಲಿ ಪ್ರಸಾದ ಸ್ವೀಕರಿಸಿ ಪಾಲ್ಗೊಂಡರು. ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಸುಧಾ ಎ. ಪೂಜಾರಿ, ಶಿವ ಪೂಜಾರಿ, ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿ ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶುದ್ಧ ಪರಿಸರದಲ್ಲಿ ನಿರ್ಮಿತವಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ತನ್ನ ಪರಿಸರಸ್ನೇಹಿ ಕಾರ್ಯಗಳ ಮೂಲಕ ಸತತ ನಾಲ್ಕನೆಯ ಬಾರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ ಗ್ರೀನ್ ಸ್ಕೂಲ್ ಅವಾರ್ಡನ್ನು ತನ್ನದಾಗಿಸಿಕೊಂಡು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈ ಪ್ರಶಸ್ತಿಯನ್ನು ಪಡೆದ ಉಡುಪಿ ಜಿಲ್ಲೆಯ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (ಸಿಎಸ್ಇ) ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿ 20,000 ಕ್ಕೂ ಹೆಚ್ಚು ಶಾಲೆಗಳು ಸ್ಪಧೆಯಲ್ಲಿ ಭಾಗವಹಿಸಿದ್ದವು. ಶುದ್ಧ ಗಾಳಿ, ಇಂಧನ, ಆಹಾರ, ಭೂಮಿ, ನೀರು, ತ್ಯಾಜ್ಯದ ವ್ಯವಸ್ಥಿತ ನಿರ್ವಹಣೆಯ ಮಾನದಂಡದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ನವದೆಹಲಿಯಲ್ಲಿ ನಡೆದ ದಿ ಗ್ರೀನ್ ಸ್ಕೂಲ್ಸ್ ಕಾರ್ನಿವಲ್ 2026ರ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಸಂಗೀತಾ ಕೆ.ಆರ್. ಹಾಗೂ ವಿದ್ಯಾ ಅಮೀನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ವಿದ್ಯಾರ್ಥಿಗಳಾದ ವಿಹಾನ್ ಹಂಚಿನಾಳ, ಗೌರೀಶ್ ಬಸವರಾಜ, ರಾಹುಲ್ ಉಳ್ಳೂರು, ನೇಚರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಕಾರ್ಪೊರೇಟ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಜೊತೆಗೂಡಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಕೈಗೊಳ್ಳಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಬಿ. ದಯಾನಂದ್ ಶೆಟ್ಟಿ , ಡೈರೆಕ್ಟರ್ ಅಂಡ್ ಸೀನಿಯರ್ ಕನ್ಸಲ್ಟೆಂಟ್ ಪ್ರೊಜಿನ್ ಟೆಕ್ಸ್ ಅವರು ಆಗಮಿಸಿ ಹೇಗೆ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು ಮತ್ತು ಅದಕ್ಕೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ, ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಎಂಬಿಎ ವಿದ್ಯಾರ್ಥಿನಿ ಅದಿತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕಾರ್ಯಕ್ಷೇತ್ರದಲ್ಲಿ 25 ಮಂದಿ ಅಭ್ಯರ್ಥಿಗಳಿಗೆ ಸೀರೆ ಗುಚ್ಚು ಹಾಕುವ ಮೂರು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು. ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ. ಉದ್ಘಾಟಿಸಿ, ಕೌಶಲ್ಯಾಭಿವೃದ್ಧಿ ತರಬೇತಿ ಅಡಿಯಲ್ಲಿ ಸೀರೆಗುಚ್ಚು ಹಾಕುವ ತರಬೇತಿಯು ನಿಮಗೆ ಒಂದು ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ, ಸ್ವಉದ್ಯೋಗ ಮಾಡುವುದರಿಂದ ಸ್ವಾವಲಂಬನೆ ಜೀವನ ನಡೆಸಲು ಸುಲಭ ಸಾಧ್ಯ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ ಕೋಟತಟ್ಟು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸತೀಶ್ ಕುಂದರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಮಹಿಳೆಯರಿಗೆ ಇಂದು ಸ್ವಾವಲಂಬನೆಯಾಗಿ ಬದುಕಲು ಉತ್ತಮ ಅವಕಾಶ ಕೊಟ್ಟಿದೆ ಎಂದರು. ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿ ಇದರ ತರಬೇತಿ ಶಿಕ್ಷಕಿ ರೀನಾ ಎಲ್ಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿಗಳಾದ ಇಬ್ಬರು ವ್ಯಕ್ತಿಗಳಿಗೆ ನ್ಯಾಯಾಲಯವು ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 5,000 ರೂಪಾಯಿ ದಂಡ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಗೆ ಒಳಗಾದವರನ್ನು ಕುಂದಾಪುರದ ಮಾಚಟ್ಟು ಗ್ರಾಮದ ಶರತ್ ಶೆಟ್ಟಿ (32) ಮತ್ತು ಅದೇ ಗ್ರಾಮದ ಪ್ರಶಾಂತ್ ನಾಯ್ಕ್ (28) ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ:ಅಮಾಸೆಬೈಲು ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯು ಶಾಲೆಗೆ ಹೋಗಿ ಬರುವ ವೇಳೆ ರಿಕ್ಷಾ ಚಾಲಕ ಶರತ್ ಶೆಟ್ಟಿ ಮತ್ತು ಆತನ ಸಹಚರ ಪ್ರಶಾಂತ್ ನಾಯ್ಕ್ ಆಟೋರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಸಂತ್ರಸ್ತ ಬಾಲಕಿಯು ಈ ಘಟನೆಯ ಬಗ್ಗೆ ತನ್ನ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿದ್ದಳು. ಶಿಕ್ಷಕರು ನೀಡಿದ ದೂರಿನ ಮೇರೆಗೆ 2025ರ ಜುಲೈ 15ರಂದು ಅಮಾಸೆಬೈಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕುಂದಾಪುರ ಡಿವೈಎಸ್ಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಸವಾರ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಾವುಂದ ರಾ.ಹೆ 66 ರಲ್ಲಿ ರಾತ್ರಿ ಸಂಭವಿಸಿದೆ. ಜಯಂತ ಗಂಭೀರ ಗಾಯಗೊಂಡ ವ್ಯಕ್ತಿ. ಕುಂದಾಪುರದಿಂದ ಬೈಂದೂರಿಗೆ ಹೋಗುತ್ತಿದ್ದ ಬೈಕ್ ಸವಾರ ಮಿಥುನ್ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರುಗಡೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯಂತ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದರು. ತಕ್ಷಣ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಟ್ಬೇಲ್ಲೂರು ಸಮೀಪ ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ (60) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಡಿತದ ಚಟ ಹೊಂದಿದ್ದರಿಂದ ಕೆಲಸಕ್ಕೆ ಬರುವುದು ಬೇಡ ಎಂದು ಹೇಳಲಾಗಿತ್ತು. ಅದಾಗಿ 3 ದಿನಗಳ ಬಳಿಕ ಕೆಲಸ ಮಾಡುವವರಿಗೆ ಇರಲು ಕೊಟ್ಟಿದ್ದ ರೂಮಿನ ಬಳಿ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಹುಮಹಡಿ ವಸತಿ ಸಮುಚ್ಚಾಲಯಗಳು ಕೊಳಚೆ ಹಾಗೂ ತ್ಯಾಜ್ಯದ ನೀರನ್ನು ಶುದ್ಧೀಕರಣದ ನಿರ್ವಹಣೆ ಮಾಡುವುದರೊಂದಿಗೆ ಮರು ಬಳಕೆ ಮಾಡಬೇಕು. ಒಂದೊಮ್ಮೆ ಕೊಳಚೆ ನೀರನ್ನು ಶುದ್ಧೀಕರಿಸದೆ ಎಲ್ಲಂದಲ್ಲಿ ನದಿ ತೋಡುಗಳಿಗೆ ಬಿಟ್ಟು ಜಲಮಾಲಿನ್ಯ ಉಂಟು ಮಾಡಿದರೆ ಅಂತವರ ಮೇಲೆ ಮುಂದಿನ ದಿನಗಳಲ್ಲಿನಿರ್ದಾಕ್ಷಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ 376 ಕ್ಕೂ ಹೆಚ್ಚು ಅಪಾರ್ಟ್ಮೆಂಟ್ಗಳು ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ಸಂಸ್ಕರಣೆ ಮಾಡದೇ ಮಳೆ ನೀರು ಹರಿಯುವ ತೋಡುಗಳಿಗೆ ಬಿಡುತ್ತಿರುವ ಹಿನ್ನೆಲೆ, ನಗರ ಸಭೆ ವತಿಯಿಂದ ನೋಟೀಸ್ ನೀಡಲಾಗಿದೆ. ಇವುಗಳಲ್ಲಿ 200 ಮಣಿಪಾಲ್ನಲ್ಲಿ, 105 ಉಡುಪಿ ನಗರದಲ್ಲಿ, 70 ಮಲ್ಪೆ ವ್ಯಾಪ್ತಿಯಲ್ಲಿದ್ದು, ಸಮುಚ್ಚಯದ ಮಾಲೀಕರು ತ್ಯಾಜ್ಯದ ನಿರ್ವಹಣೆಯನ್ನು ವೈಜ್ಞಾನಿಕವಾಗಿ…
