Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ಕೆಲವು ವರ್ಷಗಳ ಹಿಂದೆ ಕ್ರೀಡಾ ಪ್ರತಿಭೆಗಳಿದ್ದರೂ ಅವರಿಗೆ ಸರಿಯಾದ ಅವಕಾಶಗಳು ಸಿಗುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಇಲಾಖೆಯಿಂದ ಹಾಗೂ ಶಾಲೆಯಿಂದ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಹಲವು ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಲು ಸಾಧ್ಯವಾಗುತ್ತಿದೆ. ಕ್ರೀಡೆಯಲ್ಲಿ ಸೋಲು ಗೆಲವು ಸಾಮಾನ್ಯವಾಗಿದ್ದು, ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸುವಂತಾಗಬೇಕು ಎಂದು ಗಂಗೊಳ್ಳಿ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ 2025-26ನ್ನು ಗುರುವಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಜ್ಜರ ಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ  ಸ್ಥಾನವನ್ನು ಪಡೆದುಕೊಂಡು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/  ಪರಿಶಿಷ್ಟ ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅಥವಾ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ಪರ್ಧಾ ಜಗತ್ತಿನ ಅನೇಕ ಸವಾಲುಗಳು ಹಾಗೂ ಸಫಲತೆಯ ಹಿಂದಿರುವ ಪ್ರೇರಣಾದಾಯಕ ಅಂಶಗಳ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಇನ್ನೋವೇಶನ್ ಆ್ಯಂಡ್ ಎಂಟ್ರಪ್ರಿನ್ಯುರ್‌ಶಿಪ್ ಡೆವಲಪ್ಮೆಂಟ್ ಸೆಲ್ ಇದರ ಆಶ್ರಯದಲ್ಲಿ ರಾಷ್ಟç ಪ್ರಶಸ್ತಿ ವಿಜೇತ ‘12th ಫೇಲ್’ಸಿನಿಮಾ ಪ್ರದರ್ಶನ ಹಾಗೂ ವಿಮರ್ಶೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪದವಿ ಶಿಕ್ಷಣಾರ್ಹತೆಯ ಜೊತೆಗೆ ರಾಜ್ಯ ಸರ್ಕಾರ ಆಯೋಜಿಸುವ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜಿನ ಆವರಣದಲ್ಲಿಯೇ ತರಬೇತಿ ನೀಡುವ ಉದ್ದೇಶದಿಂದ ಪ್ರಸ್ತುತ 2025-26 ರಿಂದ ಆರಂಭಗೊAಡ ಬಿ.ಕಾಂ. ಜೊತೆಗೆ ಎಸ್.ಎಸ್.ಸಿ. ವಿದ್ಯಾರ್ಥಿಗಳು ಕಾರ್ಯಕ್ರಮದ ಫಲಾನುಭವಿಗಳಾಗಿದ್ದಷ್ಟೇ ಅಲ್ಲದೆ ಸಿನಿಮಾದ ಕುರಿತು ರಚನಾತ್ಮಕವಾಗಿ ವಿಮರ್ಶೆ ನೀಡಿರುವುದು ವಿಶೇಷ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಉಮೇಶ್ ಶೆಟ್ಟಿ ಇವರು ಮಾತನಾಡಿ, ಎಸ್.ಎಸ್.ಸಿ. ವಿದ್ಯಾರ್ಥಿಗಳು ಸರ್ಕಾರಿ ನೌಕರಿಯ ಗುರಿ ಹೊಂದಿರುವ ಹಿನ್ನೆಲೆಯಲ್ಲಿ ಕಠಿಣ ಪರಿಶ್ರಮ ಹಾಗೂ ದೃಢ ಸಂಕಲ್ಪದ ಜೊತೆಗೆ ಗುರಿಯನ್ನು ತಲುಪುವಲ್ಲಿ ಅವಿರತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಡುಪಿ ಯಡಾಡಿ ಮತ್ಯಾಡಿಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್, ಸಾಯಿಮ್ (ಉತ್ತಮ ದಾಳಿಗಾರ) ಓಂಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ) ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘವು 67 ವರ್ಷಗಳ ಸಾರ್ಥಕ ಸೇವೆಯನ್ನು ನೀಡಿ 68ನೇ ವರ್ಷದಲ್ಲಿ ಯಶಪ್ರದವಾಗಿ ಮುನ್ನಡೆಯುತ್ತಿದೆ. ಸಂಘದ ಎಲ್ಲಾ 13 ಶಾಖೆಗಳು ಪ್ರಗತಿ ಪಥದಲ್ಲಿ ಸಾಗುತ್ತಿವೆ. ವರದಿ ವರ್ಷದ ಅಂತ್ಯಕ್ಕೆ ಸಂಘವು ಒಟ್ಟು ರೂ. 268,23,83,236.70 ಠೇವಣಾತಿಯನ್ನು ಹೊಂದಿದ್ದು, ರೂ. 5,83,50,933.46 ನಿವ್ವಳ ಲಾಭ ಗಳಿಸಿದೆ. ಸತತ 16 ವರ್ಷಗಳಿಂದ ಸಂಘವು ‘ಎ’ ತರಗತಿಯಲ್ಲಿ ಆಡಿಟ್ ವರ್ಗೀಕರಣವಾಗುತ್ತಿದ್ದು, ಸದಸ್ಯರಿಗೆ ಶೇ.16% ಡಿವಿಡೆಂಡ್‌ ನೀಡಲು ನಿರ್ಧರಿಸಲಾಗಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ.ಕೃಷ್ಣ ಕಾಂಚನ್‌ ಹೇಳಿದರು. ಅವರು ಕೋಟದ ವಿವೇಕ ಪದವಿಪೂರ್ವ ಕಾಲೇಜು ಇದರ ಮಹಾತ್ಮಗಾಂಧಿ ಸಭಾಭವನದಲ್ಲಿ ನಡೆದ ಕೋಟ ಸಹಕಾರಿ ವ್ಯವಸಾಯಕ ಸಂಘ ನಿ., ಕೋಟ ಇದರ 68ನೇ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ಒಟ್ಟು 19,464 ಸದಸ್ಯರನ್ನು ಹೊಂದಿದ್ದು, ರೂ.3,53,51,150 ಪಾಲು ಬಂಡವಾಳವನ್ನು ಹೊಂದಿದೆ. ರೂ.5.80,69,566 ಸಾಲ ಪಡೆದಿದ್ದು ಸದಸ್ಯರ ವಿವಿಧ ಉದ್ದೇಶಗಳಿಗೆ ವಿತರಿಸಲಾಗಿದೆ. ರೂ.3,92,246,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟವು ಬುಧವಾರ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಕಾಲೇಜಿನ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯನ್ನು ಪ್ರೀತಿಸಿ, ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ಕ್ರೀಡಾಂಗಣದಲ್ಲಿ ಆಡುವವರಿಗಿಂತ ಮೊಬೈಲ್‌ನಲ್ಲಿಯೇ ಆಡುವವರ ಸಂಖ್ಯೆ ಹೆಚ್ಚಾಗಿರುವುದು ಕಳವಳಕಾರಿ ಸಂಗತಿಯಾಗಿದೆ; ಶಾರೀರಿಕ ಕ್ರೀಡೆಯಿಂದ ವ್ಯಕ್ತಿಯ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಹೇಳಿದರು. ಮಹಾತ್ಮಗಾಂಧಿ ಪ್ರೌಢಶಾಲೆ ಸಾಬ್ರಕಟ್ಟೆಯ ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಕುಮಾರ್ ಶೆಟ್ಟಿ ಮಾತನಾಡಿ, “ಸೋಲು, ಗೆಲುವಿನ ಬಗ್ಗೆ ಗಮನ ಹರಿಸದೆ ಕ್ರೀಡೆಯಲ್ಲಿ ಖುಷಿಯಿಂದ ತೊಡಗಿಸಿಕೊಳ್ಳಿ. ಕ್ರೀಡೆಯಲ್ಲಿ ಗೆದ್ದಾಗ ಅಹಂಕಾರ ಪಡದೇ ಸೋತಾಗ ನಿರಾಸಕ್ತಿ ಹೊಂದದೆ ಭಾಗವಹಿಸುವಿಕೆಯ ಬಗ್ಗೆ ಗಮನಹರಿಸಿ” ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಬೈಂದೂರು: ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿಯ ಪಠ್ಯವನ್ನು ಮಾತ್ರವೇ ಕಲಿಸದೇ, ಅವರಲ್ಲಿ ಮೌಲ್ಯವನ್ನು ಬಿತ್ತುವ, ಕೌಶಲ್ಯ & ಆತ್ಮವಿಶ್ಬಾಸ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ. ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳನ್ನು ರೂಪಿಸುವ ಜವಾಬ್ದಾರಿಯೂ ಅವರ ಮೇಲಿದೆ ಎಂದು ರೋಟರಿ ಝೋನ್‌ 01ರ ಮಾಜಿ ಸಹಾಯಕ ಗವರ್ನರ್‌ ಸೋಮನಾಥನ್‌ ಆರ್.‌ ಹೇಳಿದರು. ಅವರು ರೋಟರಿ ಕ್ಲಬ್‌ ಬೈಂದೂರು ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ಅಂಬಿಕಾ ಇಂಟರ್‌ ನ್ಯಾಷನಲ್‌ ಹೋಟೆಲಿನಲ್ಲಿ ಆಯೋಜಿಸಲಾದ ರೋಟರಿ ಕುಟುಂಬ ಸಮ್ಮಿಲನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿ ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಕೊಡುಗೆ ಅಪಾರ ಎಂದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಿ.ಎನ್.‌ ಬಿಲ್ಲವ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ತಿಮ್ಮಪ್ಪ ಗಾಣಿಗ ತಗ್ಗರ್ಸೆ, ಸುಮಂಗಲಾ ಗಾಣಿಗ ಬೀಜಮಕ್ಕಿ, ಜಗದೀಶ್‌ ಶೆಟ್ಟಿ ಹೆಮ್ಮಾಡಿ ಅವರನ್ನು ಸನ್ಮಾನಿಸಲಾಯಿತು. ರೋಟರಿ ಸದಸ್ಯ ಶಿಕ್ಷಕರನ್ನು ಗೌರವಿಸಲಾಯಿತು. ಬೈಂದೂರು ರೋಟರಿ ಕ್ಲಬ್‌ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swd.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 15 ರ ವರೆಗೆ ವಿಸ್ತರಿಸಲಾಗಿದೆ.. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವ ವಿವಿಧ ಕಾರ್ಯಕ್ರಮಗಳನ್ನು ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಸುವ ಕುರಿತು ಚರ್ಚಿಸಲು ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಪ್ಟಂಬರ್ 15 ರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದಡಿ ಜಿಲ್ಲಾ ಮಟ್ಟದಲ್ಲಿ ಚಿಕತ್ರಕಲೆ, ಛಾಯಾಚಿತ್ರ, ಭಾಷಣ ಸ್ಪರ್ಧೆ, ಸೈಕಲ್ ರ್ಯಾಲಿ ಹಾಗೂ ಮೋಟಾರ್ ಬೈಕ್ ರ‍್ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಎಲ್ಲಾ ಸ್ಪರ್ಧೆಗಳ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ. 15 ರಂದು ನನ್ನ ಮತ ನನ್ನ ಹಕ್ಕು, ಗಾಂಧಿ ಭಾರತ ಹಾಗೂ ಸಂವಿಧಾನ ಪೀಠಿಕೆ ಎಂಬ ಶೀರ್ಷಿಕೆಯಡಿ ಶಿಕ್ಷಣ ಇಲಾಖೆಯ ಹಾಗೂ ವಸತಿ…

Read More