ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜದ ಒಳಿತು ಕೆಡುಕುಗಳ ವಿಮರ್ಶೆ ಮಾಡಿ ಒಳಿತನ್ನು ಸ್ವೀಕರಿಸುವ ಪ್ರಬುದ್ಧ ಮನಸ್ಸುಗಳ ನಿರ್ಮಾಣ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ಜ್ಞಾನ ಭೀಕ್ಷಾ ಪಾದಯಾತ್ರೆಯ ವಿವೇಕಾನಂದ ಹೆಚ್. ಕೆ. ಹೇಳಿದರು. ಅವರು, ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲಾ ಘಟಕ ಇದರ ಸಹಯೋಗದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದರು. ಶಾಲಾ ವಾಚನಾಲಯ ಸಂದರ್ಶಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕರುಣಾಕರ ಶೆಟ್ಟಿ, ರತ್ತುಬಾಯ್ ಜನತಾ ಪ್ರೌಢ ಶಾಲೆ ಮುಖ್ಯ ಉಪಾಧ್ಯಯರಾದ ಮಂಜು ಕಾಳವಾರ, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರವೀಂದ್ರ ಪಿ, ನಿವೃತ್ತ ಶಿಕ್ಷಕರಾದ ತಿಮ್ಮಪ್ಪಯ್ಯ ಜಿ. ಕಲಾವಿದರಾದ ಗಿರೀಶ್ ಬೈಂದೂರು, ಮಾರುತಿ, ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾದ್ಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿ ಕ್ಷಕಿ ಮುಕ್ತಾ ಪಿ. ಸ್ವಾಗತಿಸಿದರು. ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲಾ ಘಟಕದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆಯ ಸಮೀಪದ ಹೊಳೆದಂಡೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವೊಂದು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಉಪ್ಪುಂದ ಕರ್ಕಿಕಳಿ ವಿಶ್ವನಾಥ ಖಾರ್ವಿ ಅವರ ಪುತ್ರ ಸರ್ವದ (2 ವರ್ಷ 1 ತಿಂಗಳು) ಮೃತ ದುರ್ದೈವಿ. ಸೋಮವಾರ ಮಧ್ಯಾಹ್ನ 3:30ರ ವೇಳೆಗೆ ವಿಶ್ವನಾಥ ಖಾರ್ವಿ ಅವರು ಮನೆಯ ಕೋಣೆಯಲ್ಲಿ ಮಗುವನ್ನು ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಮಗುವಿನ ತಾಯಿ ಬೇರೆ ಕೆಲಸದಲ್ಲಿ ನಿರತರಾಗಿದ್ದರು. ಸುಮಾರು 4 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಕೋಣೆಯಲ್ಲಿ ಮಲಗಿದ್ದ ಮಗು ಎದ್ದು, ಯಾರ ಗಮನಕ್ಕೂ ಬಾರದಂತೆ ಮನೆಯ ಸಮೀಪ ಹರಿಯುವ ಎಡಮಾವಿನ ಹೊಳೆಯ ದಡದಲ್ಲಿ ನಡೆದುಕೊಂಡು ಹೋಗಿತ್ತು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದೆ. ಮೃತದೇಹವು ತೇಲಿಕೊಂಡು ಹೋಗಿ ಎಡಮಾವಿನ ಹೊಳೆಯು ಸಮುದ್ರವನ್ನು ಸೇರುವ ಉಪ್ಪುಂದ-ಕರ್ಕಿಕಳಿ ಬ್ರೇಕ್ ವಾಟರ್ ಸಮೀಪ ನೀರಿನಲ್ಲಿ ದೊರೆತಿರುವುದಾಗಿ ವರದಿಯಾಗಿದೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಸನಾತನ ಹಿಂದು ಧರ್ಮದಲ್ಲಿ ಗುರುಪೂರ್ಣಿಮೆಗೆ ವಿಶೇಷ ಮಹತ್ವದ ಸ್ಥಾನವಿದೆ. ಗುರುಗಳ ಆಶೀರ್ವಾದವಿಲ್ಲದೆ ಯಾರೂ ಕೂಡ ಜೀವದಲ್ಲಿ ಯಶಸ್ವಿಯಾಗಲಾರರು ಎಂದು ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಅರುಣ್ ಕುಮಾರ್ ಜಿ.ಟಿ. ಹೇಳಿದರು. ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಸಭಾಭವನದಲ್ಲಿ ಗುರುಪೂರ್ಣಿಮೆ ಅಂಗವಾಗಿ ಜರಗಿದ ಗುರುಪೂರ್ಣಿಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಜಿ.ಈಶ್ವರ, ಅರ್ಚಕ ಶಿವ ಜಿ.ಟಿ., ಮಹೇಶ ಜಿ.ಡಿ., ನರಸಿಂಹ ಕೆ., ರಾಘವೇಂದ್ರ ಜಿ.ಟಿ., ಚೇತನ್ ಮತ್ತಿತರರು ಉಪಸ್ಥಿತರಿದ್ದರು. ಅರುಣ್ ಕುಮಾರ್ ಜಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಕಾಂತ ಎನ್. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕುಂದಾಪುರ ಕಸಬಾ ಗ್ರಾಮದಿಂದ ಕಾಪು ತಾಲೂಕು ಹೆಜಮಾಡಿ ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿ 66(17) ರ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ನೋಟೀಸು ನೀಡಿದರೂ, ಕೆಲವು ಭೂ ಮಾಲಕರು ಈವರೆಗೂ ತಮ್ಮ ಹಕ್ಕಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಿ ಪರಿಹಾರಧನ ಪಡೆದಿರುವುದಿಲ್ಲ. ಬಾಕಿಯಾದ ಭೂಸ್ವಾಧೀನ ಪ್ರಕರಣಗಳ ಮತ್ತು ಬಾಕಿ ಇರುವ ಪರಿಹಾರ ಹಣದ ಬಗ್ಗೆ ಪಟ್ಟಿ ತಯಾರಿಸಿ, ಸಂಬಂಧಪಟ್ಟ ಗ್ರಾಮಕರಣಿಕರ ಹಾಗೂ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇರಿಸಲಾಗಿದೆ. ಜಮೀನು ಕಳೆದುಕೊಂಡು ಪರಿಹಾರ ಪಡೆಯಲು ಬಾಕಿ ಇರುವ ಸಂತ್ರಸ್ತರು ಸಂಬಂಧಪಟ್ಟ ಗ್ರಾಮ ಕರಣಿಕರಿಂದ ಮಾಹಿತಿ ಪಡೆದು 30 ದಿನಗಳ ಒಳಗೆ ಅಗತ್ಯವುಳ್ಳ ದಾಖಲೆಗಳೊಂದಿಗೆ ಕುಂದಾಪುರ ಸಕ್ರಮ ಪ್ರಾಧಿಕಾರಿಯವರು ರಾ.ಹೆ(17) ಹಾಗೂ ಸಹಾಯಕ ಕಮೀಷನರ್ ಕಚೇರಿಗೆ ಕೋರಿಕೆ ಅರ್ಜಿ ಸಲ್ಲಿಸಿ, ಪರಿಹಾರ ಹಣ ಪಡೆಯುವಂತೆ ಕುಂದಾಪುರ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಮಹಾಸಾಗರದಲ್ಲಿರುವ ಮಾಸ್ಕಡ್ ಬೂಬಿ ಎಂಬ ವಿಶೇಷ ಪಕ್ಷಿಯು ಗಾಯಗೊಂಡಿರುವ ರೀತಿಯಲ್ಲಿ ಕಂಡು ಬಂದಿದ್ದು, ಅರಣ್ಯ ಇಲಾಖೆಯವರು ಹಾಗೂ ಗ್ರಾಮಸ್ಥರು ಚಿಕಿತ್ಸೆ ನೀಡಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವ ಕಾರ್ಯ ನಡೆದಿದೆ. ಈ ಸಂದರ್ಭ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಗಳಾದ ರವಿರಾಜ್. ಬಿ., ಗುರುರಾಜ .ಬಿ., ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಊರ ಗ್ರಾಮಸ್ಥರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ನೊಂದಾಯಿತವಾದ ಎಲ್ಲಾ ಆಸ್ಪತ್ರೆ, ಕ್ಲಿನಿಕ್ಗಳನ್ನು, ತಮ್ಮಲ್ಲಿ ದೊರೆಯುವ ವಿವಿಧ ಚಿಕಿತ್ಸೆಗಳು, ಚಿಕಿತ್ಸೆಯ ದರಗಳು, ಚಿಕಿತ್ಸಾ ವಿಧಾನಗಳು (ಅಲೋಪತಿ, ಆಯುರ್ವೇದ ಇತ್ಯಾದಿ), ವೈದ್ಯರ ವಿವರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ಇದು ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತಿರಬೇಕು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೆ.ಪಿ.ಎಂ.ಇ ಯಡಿ ನೊಂದಾಯಿತ ಆಸ್ಪತ್ರೆಗಳು, ತಮ್ಮ ಅನುಮತಿಯ ನವೀಕರಣಕ್ಕೆ ಬರುವ ಸಂದರ್ಭದಲ್ಲಿ, ಕಾಯ್ದೆಯಡಿಯಲ್ಲಿನ ಎಲ್ಲಾ ಷರತ್ತುಗಳನ್ನು ಪೂರೈಸಿರುವ ಕುರಿತು ಪರಿಶೀಲನೆ ನಡೆಸಿ, ಅನುಮತಿಯನ್ನು ನವೀಕರಿಸಬೇಕು. ಜಿಲ್ಲೆಯಲ್ಲಿ ಯಾವುದೇ ನಕಲಿ ವೈದ್ಯರು ಕ್ಲಿನಿಕ್ಗಳನ್ನು ತೆರೆದು ಚಿಕಿತ್ಸೆ ನೀಡದಂತೆ ಪರಿಶೀಲಿಸಿ, ನವೀಕರಣ ಮಾಡಿಸದ ಆಸ್ಪತ್ರೆಗಳ ಪರವಾನಗಿಯನ್ನು ರದ್ದು ಮಾಡಿ, ಅವರು ಹೊಸದಾಗಿ ಪರವಾನಿಗೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತಾಲೂಕಿನ ವಾಲಿಬಾಲ್ ಅಸೋಸಿಯೇಶನ್ ಉದ್ಘಾಟನಾ ಸಮಾರಂಭವು ಮೂಡುಬಿದಿರೆಯಲ್ಲಿ ಶನಿವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ ಅಸೋಸಿಯೇಶನ್ನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿನಯ್ ಆಳ್ವ, ‘ಒಬ್ಬ ವೈದ್ಯನಾಗಿ ವೈದ್ಯಕೀಯ ಸೇವೆಗೆ ನನ್ನ ಆದ್ಯತೆ. ಆದರೆ ಅದರ ಜೊತೆಗೆ ಕ್ರೀಡಾ ಸ್ಪೂರ್ತಿ ಒದಗಿಸುವ, ದೈಹಿಕ ಸಮತೋಲನ ಕಾಯ್ದುಕೊಳ್ಳಲು ನೆರವಾಗುವ ವಾಲಿಬಾಲ್ನಂತಹ ಕ್ರೀಡೆಗಳಿಗೂ ಪ್ರಾಮುಖ್ಯತೆ ಕೊಡಲಿಚ್ಛಿಸುತ್ತೇನೆ. ಈ ಹಿನ್ನೆಲೆಯಲ್ಲಿ ಮೂಡುಬಿದಿರೆ ತಾಲೂಕಿನಲ್ಲಿ ವಿನೂತನವಾಗಿ ಉದ್ಘಾಟನೆಗೊಂಡಿರುವ ವಾಲಿಬಾಲ್ ಅಸೋಸಿಯೇಶನ್ನ ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ’ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ನ ಅಧ್ಯಕ್ಷ ಸತೀಶ್ ಕುಮಾರ್ ಪುತ್ತೂರು, ಆರಂಭದಲ್ಲಿಯೇ ಡಾ. ಮೋಹನ್ ಆಳ್ವರ ಬೆಂಬಲ ಸಿಕ್ಕಿದ್ದು ನಮಗೆ ಆನೆ ಬಲ ಸಿಕ್ಕಂತಾಗಿದೆ. ಆಳ್ವರು ಮೊದಲಿನಿಂದಲೂ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಾ ಬಂದವರು. ಅವರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ತಾಲೂಕಿನ ವಾಲಿಬಾಲ್ ಅಸೋಸಿಯೇಶನ್ ನೇತೃತ್ವದಲ್ಲಿ ಒಳ್ಳೆಯ ಕ್ರೀಡಾಕೂಟಗಳನ್ನು ಆಯೋಜಿಸಿ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮುವಂತೆ ಮಾಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ ಎಸ್ ವಿ ಎಸ್ ಅಸೋಸಿಯೇಷನ್ ವತಿಯಿಂದ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಈ ಸಾಲಿನ ಶೈಕ್ಷಣಿಕ ವರ್ಷದ ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷಾ ತರಬೇತಿ ಕಾರ್ಯಕ್ರಮವು ಗುಜ್ಜಾಡಿ ಗೋಪಾಲ ನಾಯಕ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಲಾಖಾ ಪರೀಕ್ಷೆಗಳ ಜೊತೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮಾಡಬೇಕು. ಇಂತಹ ಪರೀಕ್ಷೆಗಳ ಯಶಸ್ಸಿನಲ್ಲಿ ಪಾಲಕರು ಪೋಷಕರು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ತರಬೇತುದಾರರ ಪರಿಶ್ರಮ ಬಹಳಷ್ಟು ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಜಿ ಎಸ್ ವಿ ಎಸ್ ಅಸೋಸಿಯೇಷನ್ನಿನ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅತಿಥಿಗಳನ್ನು ಸ್ವಾಗತಿಸಿದರು. ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸದಾಶಿವ ನಾಯಕ್ ಪ್ರಸ್ತಾವಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೃಷಿ ರಂಗದಲ್ಲಿ ಸುಧಾರಣೆಗಳನ್ನು ಜಾರಿಗೆ ತರುವ ಹೆಸರಿನಲ್ಲಿ ಕೇಂದ್ರ ಸರಕಾರ ಅಂಗೀಕರಿಸಿರುವ ಮೂರು ಹೊಸ ಕೃಷಿ ಕಾನೂನುಗಳು ರೈತ ವಿರೋಧಿಯಾಗಿದೆ. ಮಾತ್ರವಲ್ಲ ವ್ಯವಸಾಯ ರಂಗವನ್ನು ಕಬಳಿಸಲು ಹೊಂಚು ಹಾಕುತ್ತಿರುವ ಕಾಪೋ೯ರೇಟ್ ಕಂಪೆನಿಗಳ ಪರವಾಗಿದೆ ಸಿಐಟಿಯು ತಾಲೂಕು ಸಂಚಾಲಕ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ದೂರಿದರು. ಹಾಗೂ ಆ.9ರಂದು ನಡೆಯುವ ರೈತ, ಕಾಮಿ೯ಕ, ಕೂಲಿಕಾರರ ದೇಶ ವ್ಯಾಪಿ ಪ್ರತಿಭಟನೆಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡರು. ಅವರು, ಮುದೂರು ಗ್ರಾಮದ ಉದಯ ನಗರ ಪ್ರದೇಶದ ಕಾಮಿ೯ಕರ ಸಭೆ ಉದ್ಘಾಟಿಸಿ ಮಾತನಾಡಿದರು. ಕಾಮಿ೯ಕ ಮುಖಂಡ ವೆಂಕಟೇಶ್ ಕೋಣಿ. ಉಪಸ್ಥಿತರಿದ್ದರು. ಸ್ಥಳೀಯ ಕಾಮಿ೯ಕ ಮುಖಂಡ ಸಜಿ ಸ್ವಾಗತಿಸಿದರು, ಮಹೇಶ್ ವಂದಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೆಪಿ ಆಡಳಿತ ಬಂದ ಬಳಿಕ ಬಡವರ ವಸತಿ ಯೋಜನೆ, ೯೪ಸಿ ಹಕ್ಕುಪತ್ರ ವಿತರಣೆ ಸ್ಥಗಿತವಾಗಿದೆ. ಅದನ್ನ ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಶೀಘ್ರ ಹೋರಾಟ ನಡೆಸಲಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಆಶೀರ್ವಾದ ಸದಾ ಇದೆ. ಅವರ ಬೆಂಬಲದಿಂದ ಸಂಘಟನೆಯನ್ನು ಬಲಪಡಿಸಿ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸಲಾಗುವುದು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮರವಂತೆಯಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲೆಡೆಯ ಜನರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಬಿಜೆಪಿ ದುರಾಡಳಿತದಿಂದ ರೋಸಿ ಹೋಗಿ, ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಮಾತನಾಡುತ್ತಿದ್ದಾರೆ. ಯುವಜನರು ಕಾಂಗ್ರೆಸ್ನತ್ತ ಮುಖಮಾಡುತ್ತಿದ್ದಾರೆ. ಇದು ಪಕ್ಷದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮಗಳ ಕಾರ್ಯಕರ್ತರನ್ನು ನೇರವಾಗಿ ಸಂಪರ್ಕಿಸಿ ಗ್ರಾಮೀಣ ಕಾಂಗ್ರೆಸ್ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು. ಬ್ಲಾಕ್ ಕಾಂಗ್ರೆಸ್…
