ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೊರಗ ಕಾಲನಿಯಲ್ಲಿ ಮೆಹೆಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಕ್ಕೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಕ್ರಮಕೈಗೊಳ್ಳಲಾಗಿದೆ. ಪೊಲೀಸರು ಮಾಡಿದ ತಪ್ಪಿಗೆ ತಪ್ಪಿತಸ್ಥರು ಬೆಲೆತೆರಬೇಕು. ಈ ನಿಟ್ಟಿನಲ್ಲಿ ಸಿಓಡಿ ತನಿಖೆಗೆ ಪ್ರಕರಣ ರವಾನಿಸಲಾಗುತ್ತದೆ. ಕೊರಗರು ಅನೇಕ ಸಮಸ್ಯೆಗಳನ್ನು ಹೇಳಿದ್ದು ಅದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಜಾಗರೂಕತೆ ವಹಿಸಲಾಗುತ್ತದೆ. ಪೊಲೀಸರು ನೊಂದವರ ಮೇಲೆ ಹಾಕಿದ ಕೇಸು ಸುಳ್ಳು ಎಂಬುದು ಅರಿವಿದ್ದು ಇದರ ಬಗ್ಗೆ ತನಿಖೆ ನಡೆಯುತ್ತದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗ ಕಾಲನಿಯಲ್ಲಿ ಮೆಹೆಂದಿ ವೇಳೆ ಪೊಲೀಸರಿಂದ ಹಲ್ಲೆಗೊಳಗಾದ ಕೊರಗ ಸಮುದಾಯದವರನ್ನು ಭೇಟಿಮಾಡಿ ಅವರು ಮಾತನಾಡಿ ತಳಮಟ್ಟದ ಸಮುದಾಯದ ಯಾರು ಹೆದರುವ ಅಗತ್ಯವಿಲ್ಲ, ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಬ್ಬರ ಅಮಾನತು ಮಾಡಲಾಗಿದೆ. ಉಳಿದವರ ವರ್ಗಾವಣೆ ಮಾಡಲಾಗಿದ್ದು ಮುಂದಿನ ಕ್ರಮದ ಬಗ್ಗೆ ಅವಲೋಕನ ಮಾಡಲಾಗುತ್ತದೆ. ಈ ಪ್ರಕರಣವನ್ನು ನಾನು ಸಿಒಡಿಗೆ ನೀಡುತ್ತೇವೆ. ಈ ಪ್ರಕರಣಕ್ಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋಟತಟ್ಟು ಗ್ರಾಮದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಸರಣಿ ಮಾಡಿರುವ ಅವರು, “ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಸಿಎಂ ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ? ಎಂದು ಪ್ರಶ್ನಿಸಿದ್ದಾರೆ. ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೊರಗರು, ಗಿರಿಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ನಾನು, ಗೃಹ ಸಚಿವರು, ಸರ್ಕಾರ ನಿಮ್ಮ ಜೊತೆಯಿದೆ. ಅವಶ್ಯವಿದ್ದರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟದಲ್ಲಿ ಗಿರಿಜನರ ಮೇಲೆ ಪೋಲಿಸರಿಂದ ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿ.ಎಸ್.ಐ ಸಸ್ಪೆಂಡ್ ಮಾಡಿ ಆರು ಮಂದಿ ಪೊಲೀಸರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಲ್ಲಿರುವ ಪರಿಸ್ತಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೇನೆ ಎಂದರು. ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್ಪಿ ಅವರಿಗೆ ಕರೆ ಮಾಡಿ ಪ್ರಕರಣದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಬಡಾಕರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಜ.7ರ ಶುಕ್ರವಾರ ಬೆಳಿಗ್ಗೆ 10-30ಕ್ಕೆ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ನಾವುಂದದಲ್ಲಿನ ಸಂಘದ ಪ್ರಧಾನ ಕಛೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸಂಘದ ಪ್ರಧಾನ ಕಛೇರಿ ಹಾಗೂ ಎಲ್ಲಾ ಶಾಖೆಗಳು ಸ್ವಂತ ನಿವೇಶನದಲ್ಲಿ ಕಟ್ಟಡ ಹೊಂದಿದೆ. ಮರವಂತೆ ಶಾಖೆಗೂ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದ್ದು, ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ನೀಡುವ ಗುರಿ ಹೊಂದಲಾಗಿದೆ ಎಂದರು. ಜ.7ರ ಬೆಳಿಗ್ಗೆ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡವನ್ನು ಉದ್ಘಾಟಿಸಲಿದಾರೆ. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಗೋದಾಮು ಉದ್ಘಾಟನೆ ಮಾಡಲಿದ್ದಾರೆ. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಶುಭಶಂಸನೆಗೈಯಲಿದ್ದು, ಮರವಂತೆ ಗ್ರಾಪಂ ಅಧ್ಯಕ್ಷೆ ರುಕ್ಮಿಣಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.31: ಕುಂದಾಪುರದ ಕೆನರಾ ಬ್ಯಾಂಕ್ ನ ಅಚಾತುರ್ಯದಿಂದ ಸೀಝ್ ಆಗಬೇಕಿದ್ದ ಖಾಲಿ ಜಾಗದ ಬದಲು ಕೋರ್ಟ್ ನಲ್ಲಿ ಪ್ರಕರಣ ಚಾಲ್ತಿಯಲ್ಲಿದ್ದ ಅಂಗಡಿಯನ್ನು ಸೀಝ್ ಮಾಡಿರುವ ಘಟನೆ ಕುಂದಾಪುರದ ಆಲೂರಿನಲ್ಲಿ ನಡೆದಿದ್ದು, ಇಂದು ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ತೆರಳಿ ಅಂಗಡಿಯ ಸೀಝ್ ತೆರವುಗೊಳಿಸಿ ಮಾಲೀಕರಿಗೆ ಅಂಗಡಿಯ ಕೀಯನ್ನು ಹಿಂದಿರುಗಿಸಿದ್ದಾರೆ. ಕುಂದಾಪುರದ ಕೆನರಾ ಬ್ಯಾಂಕಿನ ಕಣ್ತಪ್ಪಿನಿಂದ ಇದೀಗ ಅಂಗಡಿ ಮಾಲಕರು ನಷ್ಟು ಅನುಭವಿಸುವಂತಾಗಿದ್ದು, ಈ ಅಚಾತುರ್ಯ ತಮ್ಮ ಕಣ್ತಪ್ಪಿನಿಂದಲೇ ಆಗಿದ್ದಾಗಿ ಬ್ಯಾಂಕಿನವರೂ ಕೋರ್ಟ್ ನಲ್ಲಿ ಒಪ್ಪಿಕೊಂಡಿದ್ದಾರೆ. ಬ್ಯಾಂಕ್ ನವರು ಯಾವುದೇ ಸೂಚನೆ ನೀಡದೆ ಅಂಗಡಿ ಮುಚ್ಚಿದ್ದರು. ಅಲ್ಲದೆ ಈ ವೇಳೆ ಅಂಗಡಿ ಸಾಮಾನುಗಳನ್ನು ತೆರವುಗೊಳಿಸುವುದಾಗಿ ಸೂಚನೆ ನೀಡಿದರೂ ಅದಕ್ಕೆ ಅವಕಾಶ ನೀಡದೇ ಅಂಗಡಿ ಸೀಝ್ ಮಾಡಿದ ಕಾರಣ ಅಂಗಡಿ ಒಳಗಿದ್ದ ಅಪಾರ ಪ್ರಮಾಣದ ವಸ್ತುಗಳು ನಿರುಪಯುಕ್ತವಾಗಿದ್ದು ಇದರಿಂದ ತುಂಬಾ ನಷ್ಟವಾಗಿದೆ ಎಂದು ಅಂಗಡಿ ಮಾಲಕ ನಾಗರಾಜ್ ಹೇಳಿದ್ದಾರೆ. ಈ ಬಗ್ಗೆ ಕಟ್ಟಡದ ಮಾಲಕರಾದ ಗುರುಪ್ರಸಾದ್ ಅವರು ಮಾತನಾಡಿ, ತಾವ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಗ್ರ ಕೃಷಿ ಪದ್ದತಿಯಿಂದ ಯಶಸ್ಸು ಸಾಧ್ಯವಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಹೆಚ್ಚು ಹೆಚ್ಚು ಕೃಷಿ ಕಾಯಕದಲ್ಲಿ ತೋಡಗಿಸಿ ಕೊಳ್ಳುವಂತಾಗಬೇಕು. ಆ ಮೂಲಕ ನಮ್ಮ ದೇಶವನ್ನು ರೈತ ಪ್ರಧಾನ ದೇಶ ಎಂಬುದಾಗಿ ಮತ್ತೊಮ್ಮೆ ಸಾಬೀತು ಪಡಿಸಬೇಕಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಕೃಷಿ ಉಳಿವಿಗಾಗಿ ರೈತ ಬೆಳೆದ ಎಲ್ಲಾ ಬೆಳೆಗಳಿಗೂ ಸರಕಾರವೇ ನಿಗದಿತ ನಿರ್ದಿಷ್ಟ ದರ ನಿಗದಿಪಡಿಸಬೇಕು. ಈ ಮೂಲಕ ರೈತನಿಗೆ ನೈತಿಕವಾಗಿ ಬೆಂಬಲ ಸೂಚಿಸಿದಂತಾಗುತ್ತದೆ ಎಂದು ಯುವ ಸಾಧಕ ಕೃಷಿಕ ರಾಜೇಶ್ ಕಾಂಚನ್ ಕೊರವಡಿ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ, ಗಿಳಿಯಾರು ಯುವಕ ಮಂಡಲ ಗಿಳಿಯಾರು, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ಬೇಳೂರಿನಲ್ಲಿ ಜರುಗಿದ ೧೨ನೇ ಸರಣಿ ಮಾಲಿಕೆ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಬೇಳೂರಿನ ಯುವ ಸಾಧಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಕರ್ಕುಂಜೆ ಶಾಲೆಗೆ ವರ್ಗಾವಣೆಗೊಂಡಿರುವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಚಂದ್ರ ಶೆಟ್ಟಿ ಇವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡುವ ಕಾರ್ಯಕ್ರಮ ಜರುಗಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅರುಣಾ ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ, ಕಾಳಾವರ ಗ್ರಾಮ ಪಂಚಾಯತ್ ಸದಸ್ಯರುಗಳಾದ ಚಂದ್ರ ಪೂಜಾರಿ, ಪಾರ್ವತಿ ಶೇರೆಗಾರ್, ಅಸೋಡು ಹಾಲು ಉತ್ಪಾದಕರ ಸಂಘ ಮಾಜಿ ಅಧ್ಯಕ್ಷ ದಯಾನಂದ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಪ್ಪಯ್ಯ ಶೇರಿಗಾರ್, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ನಾಗರಾಜ್ ಶೆಟ್ಟಿಗಾರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ದಾನಿಗಳಾದ ಅಶೋಕ್ ಶೋಭರಾವ್ ಇವರ ಮಕ್ಕಳಿಂದ ಸಮವಸ್ತ್ರ ವಿತರಣೆ, ಹಾಗೂ ವೆಂಕಟ ರಮಣ ಇವರ ಮಕ್ಕಳಿಂದ ಬಿಸಿಯೂಟ ಯೋಜನೆಗೆ ಗ್ರೈಂಡರ್ಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು. ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಸ್ವಾಗತಿಸಿದರು. ಅತಿಥಿ ಶಿಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀಜಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಪುಣ್ಯಕೋಟಿ ಕಟ್ಟಡದ ಉದ್ಘಾಟನಾ ಸಮಾರಂಭ ಗೋಪಾಡಿ ಶ್ರೀ ಚಿಕ್ಕು ಅಮ್ಮ ದೈವಸ್ಥಾನದ ಬ್ರಹ್ಮಲಿಂಗೇಶ್ವರ ಸಭಾಭವನದಲ್ಲಿ ಜರುಗಿತು. ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ನೂತನ ಕಟ್ಟಡ ಉದ್ಘಾಟಿಸಿ ಶುಭ ಹಾರೈಸಿದರು. ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕ ಎ.ಜಗದೀಶ್ ಕಾರಂತ, ನರಸಿಂಹ ಕಾಮತ್ ಸಾಣೂರು, ಸುಧಾಕರ ಶೆಟ್ಟಿ, ನಾಮ ನಿರ್ದೇಶಕ ಡಿ.ಗೋಪಾಲ ಕೃಷ್ಣ ಕಾಮತ್, ಡಾ, ನಿತ್ಯಾನಂದ ಭಕ್ತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಿರಿಯ ನಿರ್ದೇಶಕ ಗಣೇಶ್ ಬಿ, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಮತಿ ನಾಗರಾಜ, ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸರೋಜ ಎಸ್ ಪೂಜಾರಿ, ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಶೇಖರ ಚಾತ್ರಬೆಟ್ಟು, ಶ್ರೀ ರಘುರಾಮ ಭಜನಾ ಮಂಡಳಿ ಗೌರವಧ್ಯಕ್ಷ ಅಶೋಕ ಪೂಜಾರಿ ವಡ್ಡಿನಮನೆ, ಬೀಜಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯಕಾರ್ಯ ನಿರ್ವಾಹಕ ರಾಜು ಬಿ, ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಇಂದು ಎಲ್ಲ ವರ್ಗದ ಜನರಿದ್ದಾರೆ. ಎಲ್ಲರಿಗೂ ಒಳಿತು ಮಾಡುವಂತೆ ಪ್ರಾರ್ಥನೆ ಸಲ್ಲಿಸಿ, ಪ್ರತಿಯೊಬ್ಬರು ಭಗವಂತನನ್ನು ಕಾಣುವಂತೆ ಪ್ರೇರಿಪಿಸಿ ಮಾರ್ಗದರ್ಶಿಸಿದವರು ಮಧೂಸೂಧನ ಬಾಯಿರಿಯವರು. ಸಮಾಜದಲ್ಲಿ ಮೌಲ್ಯಯುತವಿರುವ ಇತಂಹ ಶ್ರೇಷ್ಠ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಕೆಲಸಗಳನ್ನು ಯಶಸ್ವಿ ಕಲಾವೃಂದ ಮಾಡಿದೆ. ಯಶಸ್ವಿ ಕಲಾವೃಂದ ಈ ಕಾರ್ಯ ಶ್ಲಾಘನೀಯವಾದದ್ದು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆ ಇವರ ನೇತೃತ್ವದಲ್ಲಿ ಭಾನುವಾರ ಸಂಜೆ ತೆಕ್ಕಟ್ಟೆಯ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಜರುಗಿದ ವರ್ಣ ವೈಭವ-೨೧ ಕಾರ್ಯಕ್ರಮದಲ್ಲಿ ಸಾಧಕರನ್ನು ಗೌರವಿಸಿ ಅಭಿನಂದನಾ ಮಾತುಗಳನ್ನಾಡಿದರು. ಯಶಸ್ವಿ ಕಲಾವೃಂದ ಕೊಮೆ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯುತ್ ಗುತ್ತಿಗೆದಾರ ಶ್ರೀಕಾಂತ್ ಶಣೈ, ನಿವೃತ್ತ ಆಧ್ಯಾಪಕ ಶ್ರೀನಿವಾಸ ಅಡಿಗ, ತೆಕ್ಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ್ ಕಾಂಚನ್, ಯಶಸ್ವಿ ಕಲಾವೃಂದ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕಣ್ಣೆದುರು ಆನೇಕ ರೀತಿಯ ಅಪರಾಧಗಳು ಸಮಾಜದಲ್ಲಿ ನಡೆಯುತ್ತಿರುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಕೀಡಿಗೇಡಿಗಳನ್ನು ಬೆಳೆಯಲು ಸಾರ್ವಜನಿಕರು ಸಹಕಾರ ನೀಡದೆ ಅಂತಹ ಘಟನೆಗಳಾದಾಗ ಕೊಡಲೇ ನಮ್ಮ ಗಮನಕ್ಕೆ ತಂದರೇ ಸೂಕ್ತ ಕಾನೂನು ಕ್ರಮ ಜರುಗಿಸಲು ಸಹಕಾರಿಯಾಗುತ್ತದೆ ಎಂದು ಪ್ರೊಬೇಶನರಿ ಪಿಎಸ್ಐ ಜಯಶ್ರೀ ಹುನ್ನೂರು ಹೇಳಿದರು. ಕುಂದಾಪುರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಕೋಟೇಶ್ವರ ಗ್ರಾಮ ಪಂಚಾಯತ್ನಲ್ಲಿ ಜರುಗಿದ ಅಪರಾಧ ತಡೆ ಮಾಸಚಾರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅವರು ಗ್ರಾಮಗಳಲ್ಲಿ ಶಾಲಾ ಕಾಲೇಜುಗಳು ಬಿಡುವ ವೇಳೆ ಮದ್ಯಪಾನಿಗಳಿಂದ ವಿದ್ಯಾರ್ಥಿಗಳಿಗೆ ಕೀಟಲೆ ನೀಡುವುದಲ್ಲದೇ ಅನವಶ್ಯಕ ತೊಂದರೆ ಕೊಡುವುದು, ಅಸಹಾಯಕ ವೃದ್ಧರಿಗೆ ಹಿಂಸೆ ನೀಡುವುದು ಅಪರಾಧವಾಗಲಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ಸಂದ್ಯಾ ಸುರಕ್ಷಾ, ವೃದ್ಯಾಪವೇತನ ಸೇರಿದಂತೆ ಅಸಹಾಯಕರಿಗೆ ಸಹಾಯ ಹಸ್ತ ಬೇಕಾದಲ್ಲಿ ಇಲಾಖೆಗಳ ಗಮನಕ್ಕೆ ತಂದರೇ ಸೂಕ್ತ ನ್ಯಾಯ ಒದಗಿಸಲು ಸಹಾಯವಾಗಲಿದೆ ಎಂದರು. ಕುಂದಾಪುರ ಪೊಲೀಸ್ ಠಾಣೆಯ ಎಎಸ್ಐ ಅಶೋಕ್ ಎಚ್.ಎಸ್, ಠಾಣೆಯ ಸಿಬ್ಬಂದಿಗಳಾದ ಅವಿನಾಶ್, ರವೀಂದ್ರ, ರಮೇಶ್, ಸಚಿನ್…
