Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವಭ್ರೂಣ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಕಾನೂನಿನ ಅಡಿಯಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಸೂತಿ ತಜ್ಞ ಹಾಗೂ ಜಿಲ್ಲಾ ಪಿಸಿ & ಪಿಎನ್ಡಿಟಿ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು. ಅವರು ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸಾವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಪುರುಷ ಮತ್ತು ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಸರಕಾರ ಕಾನೂನನ್ನು ಜಾರಿಗೆ ತಂದಿದೆ. ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಇದನ್ನು ಉಲ್ಲಂಘಿಸುವವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದರು. ಪ್ರಸ್ತುತ ಜಿಲ್ಲೆಯಲ್ಲಿ 1000 ಜನ ಪುರುಷರಿಗೆ, 957 ಜನ ಹೆಣ್ಣು ಮಕ್ಕಳಿದ್ದಾರೆ ಎಂದ ಅವರು ಜಿಲ್ಲೆಯಲ್ಲಿ ಗಂಡು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಡುಗೆ ಅನಿಲ,ತೈಲ ಬೆಲೆ ಏರಿಕೆ ವಿರೋಧಿಸಿ ಸಿಐಟಿಯುನಿಂದ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕೊರೊನಾ ಪರಿಹಾರ ಪ್ರತಿ ಕಾಮಿ೯ಕರಿಗೆ 10000ರೂ. ನೀಡಬೇಕು. ಮೊದಲಾದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)ರಾಜ್ಯ ಸಮಿತಿಯ ಕರೆಯ ಮೇರೆಗೆ ಬೈಂದೂರು ತಾಲೂಕು ಸಿಐಟಿಯು ಕಾಮಿ೯ಕ ಸಂಘಗಳ ನೇತೃತ್ವದಲ್ಲಿ ಇಂದು ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಕಾಮಿ೯ಕರ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಬೇಡಿಕೆಗಳಮನವಿಯನ್ನು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸಿಐಟಿಯು ಮುಖಂಡರಾದ ಗಣೇಶ ತೊಂಡೆಮಕ್ಕಿ,ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಶೀಲಾವತಿ, ರಾಜೀವಪಡುಕೋಣೆ, ವೆಂಕಟೇಶ ಕೋಣಿ, ನಾಗರತ್ನ ನಾಡ, ಮಂಜುಪಡುವರಿ, ಗಣೇಶ ಮೊಗವೀರ ಬೈಂದೂರು, ಮಾಧವ ಪೂಜಾರಿ ಉಪ್ಪುಂದ, ಲಕ್ಷ್ಮಣ ಯಡ್ತರೆ,ಹರೀಶ್ ಬೈಂದೂರು, ರಾಮ ಬಡಾಕೆರೆ, ಮೊದಲಾದವರು ಹೋರಾಟದ ನೇತೃತ್ವ ವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಕೋವಿಡ್ -19 ಪಾಸಿಟಿವಿಟಿ ದರದ ಆಧಾರದ ಮೇಲೆ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಂತೆಗಳನ್ನು ನಡೆಸಲು ಅನುಮತಿ ನೀಡಲಾಗಿರುತ್ತದೆ. ಅದರಂತೆ ವಾರದ ಸಂತೆಗಳನ್ನು ನಡೆಸುವಾಗ ಜನಜಂಗುಳಿ ಹೆಚ್ಚಾಗಿ ಉಂಟಾಗುವುದನ್ನು ನಿಯಂತ್ರಿಸುವ ಸಲುವಾಗಿ ವಿಶಾಲ ಪ್ರದೇಶಗಳಲ್ಲಿ ಸಂತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ನಿರ್ದೇಶನ ನೀಡಲಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ವಾರದ ಸಂತೆಗಳನ್ನು ತೀರ ಇಕ್ಕಟ್ಟಿನ ಸ್ಥಳಗಳಲ್ಲಿ ನಡೆಸುತ್ತಿರುವುದು ಕಂಡುಬಂದಿದ್ದು, ಇದರಿಂದಾಗಿ ಸಂತೆಗಳಲ್ಲಿ ಸಾಮಾನು ಖರೀದಿಸಲು ಬರುವ ಜನರು ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೋವಿಡ್-19 ರ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಕೊರೋನಾ ಸೋಂಕು ಹರಡುವಿಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸುವಾಗ ಸಾರ್ವಜನಿಕರ ನಡುವೆ ಸಾಮಾಜಿಕ ಅಂತರ ಹಾಗೂ ಇತರೆ ಕೋವಿಡ್-19 ಸಂಬಂಧಿತ ನಿಯಮಗಳು ಪಾಲನೆಯಾಗುವ ಬಗ್ಗೆ ನೋಡಿಕೊಳ್ಳಲು ನಗರಸಭೆಯ ಆಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯತ್ಗಳ ಮುಖ್ಯಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಯದರ್ಶಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ದರು ನಿವಾಸಿ ರಾಜೇಶ್ ಶೇರಿಗಾರ್(46) ಬುಧವಾರ ಸಂಜೆ ಹೃದಯಾಘಾತದಿಂಧ ಸ್ವಗೃಹದಲ್ಲಿ ನಿಧನರಾದರು. ಅವರು ಕುಂದಾಪುರದ ಕಾವೇರಿ ಮೀನು ಹೋಟೆಲ್ ಹಾಗೂ ಪ್ರೀತಿ ಪುಡ್ ಪ್ರಾಡಕ್ಸ್ ವ್ಯವಹಾರ ನಡೆಸುತ್ತಿದ್ದರು. ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ದುಡಿಯುತ್ತಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ಅವರ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭ ಅವರು ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವ ಭರವಸೆ ನೀಡಿ, ಮನೆ ನಿರ್ಮಿಸಲು ಅಗತ್ಯವಿರುವ ಸಲಕರಣೆಗಳನ್ನು ಸ್ಥಳೀಯ ಮುಖಂಡರ ಮೂಲಕ‌ ಒದಗಿಸಿಕೊಡುವುದಾಗಿ ತಿಳಿಸಿದರು. ಕಲಾವಿದನಿಗೆ ಆರ್ಥಿಕ ಸಹಾಯ ಮಾಡಿದರು. ಈ ಸಂದರ್ಭ ಬಿಜೆಪಿಯ ಪ್ರಮುಖರು ಜೊತೆಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮಾರುಕಟ್ಟೆಯಲ್ಲಿ ದೊರೆಯುವ ಹತ್ತಾರು ಬಗೆಯ ಹಣ್ಣು, ತರಕಾರಿಗಳನ್ನು ನಮ್ಮ ತೋಟದಲ್ಲಿಯೂ ಬೆಳೆಸಬಹುದಲ್ವಾ. ತೆಂಗು, ಹಲಸು, ಗೇರು ಮುಂತಾದ ತೋಟಗಾರಿಕಾ ಬೆಳೆಗಳಿಂದ ಹಿಡಿದು ಕೈದೋಟದಲ್ಲಿ ಅರಳುವ ಸುಂದರ ಹೂವಿನ ಗಿಡಗಳನ್ನು ನಾವೂ ಬೆಳೆಸಬಹುದಲ್ವ. ಹೀಗೊಂದು ಯೋಚನೆ ಸಾಕಷ್ಟು ಭಾರಿ ನಿಮಗೂ ಬಂದಿದೆಯೇ. ಹಾಗಿದ್ದರೆ ನಿಮ್ಮ ಯೋಜನೆಗಳನ್ನು ಸಾಕಾರಗೊಳಿಸಲು ಇದೇ ಸರಿಯಾದ ಸಮಯ. ಬೈಂದೂರು ವತ್ತಿನಣೆ ಬಳಿ ಬರುವ ಕರ್ನಾಟಕ ನರ್ಸರಿಯಲ್ಲಿ ನೂರಾರು ಬಗೆಯ ಫಲ-ಪುಪ್ಪದ ಗಿಡಗಳ ಸಂಗ್ರಹವಿದೆ. ಇಲ್ಲಿ 5,000ಕ್ಕೂ ಅಧಿಕ ಅಪೂರ್ವ ಸಸ್ಯ ಸಂಕುಲವಿದ್ದು ಈ ಪೈಕಿ 400ಕ್ಕೂ ಹೆಚ್ಚು ಪ್ರಭೇದದ ಹಣ್ಣಿನ ಗಿಡಗಳು, ಶುದ್ದ ಕಾಂಡದ ಕಸಿ ಮಾಡಿದ ಗಿಡ, ಹೈಬ್ರೀಡ್ ಗಿಡಗಳು, ಒಳಾಂಗಣ ಹಾಗೂ ಹೊರಾಂಗಣಕ್ಕೆ ಹೊಂದಿಕೊಳ್ಳುವ ಅಲಂಕಾರಿಕ ಹೂವಿನ ಗಿಡಗಳು ನರ್ಸರಿಯಲ್ಲಿವೆ. ಯಾವೆಲ್ಲ ಗಿಡಗಳಿವೆ? ಮೂರು ಕೆ.ಜಿ ತೂಕದ ಹಣ್ಣು ನೀಡುವ ಮಾವಿನ ಗಿಡ, ಒಂದು ಕೆ.ಜಿ ಹಣ್ಣು ನೀಡುವ ಸೀತಾಫಲ ಗಿಡ, ಥಾಯ್ಲೆಂಡ್ ಹಣ್ಣುಗಳು, ಶುಗರ್ ಕಡಿಮೆ ಮಾಡುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಇಬ್ಬರು ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ವೈದ್ಯರಾದ ಡಾ.ಕಾಶೀನಾಥ ಪೈ ಮತ್ತು ಡಾ. ಕೃಪಾಶ್ರೀ ಅವರನ್ನು ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು. ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ರಾಜೇಶ್ ಎಂ.ಜಿ ಸ್ವಾಗತಿಸಿದರು. ರೋಟರಿ ಜಿಲ್ಲೆ ವಲಯ ೧ರ ಜೋನಲ್ ಅಸಿಸ್ಟೆಂಟ್ ಕೆ.ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ರೋಟರಿ ಕಾರ್ಯದರ್ಶಿ ನಾರಾಯಣ ಈ. ನಾಯ್ಕ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಮತ್ತು 9 ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಜುಲೈ 13 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯು ಕಠಿಣವಾಗಿದ್ದು, ಮೂರ್ನಾಲ್ಕು ಮಟ್ಟದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಕೇವಲ ಹೆಸರಿನಲ್ಲಿ ಒಂದೆರಡು ಅಕ್ಷರಗಳು ತಾಂತ್ರಿಕ ಕಾರಣದಿಂದಾಗಿ ಬದಲಾಗಿದ್ದರೆ ಅವರಿಗೆ ಸಿಗಬೇಕಾದ ವಿದ್ಯಾರ್ಥಿವೇತನದಿಂದ ಅವರು ವಂಚಿತರಾಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸರಕಾರವು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸುವ ಕ್ರಿಯೆಯನ್ನು ಸರಳಗೊಳಿಸಿ ಅಗತ್ಯ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಹಿಂದೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ಸಿಗದೇ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಮತ್ತು ಅಗಾಧ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ಹಿನ್ನೆಲೆಯಿಂದ ಘೋಷಿಸಲಾದ ಲಾಕ್ ಡೌನ್ ಸಮಸ್ಯೆಯಿಂದಾಗಿ ಆರ್ಥಿಕ ಸಂಕಷ್ಟದಿಂದ ಶಿಕ್ಷಣವನ್ನು ಮೊಟಕುಗೊಳಿಸಿ ಕೂಲಿ ಕೆಲಸ, ಉದ್ಯೋಗದ ಕಡೆಗೆ ಒಲವು ತೋರುತ್ತಿದ್ದಾರೆ. ಇದು ಬಹಳ ಗಂಭೀರವಾದ ಪಿಡುಗಾಗಿ ಸಮಾಜವನ್ನು ಉನ್ನತ ಶಿಕ್ಷಣದಿಂದ ವಂಚಿತ ಸಮಾಜವಾಗಿ ಪರಿವರ್ತಿಸುತ್ತಿದೆ. ಇದನ್ನು ಸರಿದೂಗಿಸಲು ಸರಕಾರ ಕ್ರಿಯಾಶೀಲ ಕ್ರಮಗಳನ್ನು ತಗೆದುಕೊಂಡು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜುಲೈ 19 ಮತ್ತು 22ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಕೈಗೊಂಡಿರುವ ಸಿದ್ದತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 7597 ಬಾಲಕರು , 6787 ಬಾಲಕಿಯರು ಸೇರಿದಂತೆ ಒಟ್ಟು 14384 ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ 88 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ತಲಾ 88 ಮುಖ್ಯ ಅಧೀಕ್ಷಕರು , ಕಸ್ಟೋಡಿಯನ್, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿ ಒಟ್ಟು 2266 ಸಿಬ್ಬಂದಿಗಳನ್ನು ವಿವಿಧ ಕಾರ್ಯಗಳಿಗೆ ನಿಯೋಜಿಸಿದ್ದು, ಈ ಎಲ್ಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮೂಲಕ ವಿದ್ಯಾರ್ಥಿಗಳನ್ನು…

Read More