ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.8: ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು ಹತ್ತು ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುಗಪುರುಷ ಪತ್ರಿಕೆಯ ಸಂಸ್ಥಾಪಕ ಕೊಡತ್ತೂರು ಅನಂತಪದ್ಮನಾಭ ಉಡುಪರ ಸ್ಮರಣಾರ್ಥ ಸ್ಥಾಪಿಸಲಾಗಿರುವ ಕೊ. ಅ. ಉಡುಪ ಪ್ರಶಸ್ತಿಗೆ ಈ ಬಾರಿ ಕವಿ ಸಾಹಿತಿ ಚಿಂತಕ ಡಾ. ವಸಂತಕುಮಾರ ಪೆರ್ಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆಯ ಪ್ರಕಾಶಕ – ಸಂಪಾದಕ ಕೆ. ಭುವನಾಭಿರಾಮ ಉಡುಪ ತಿಳಿಸಿದ್ದಾರೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಫಲಕ, ಪ್ರಶಸ್ತಿಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಇದೇ ತಿಂಗಳ 24 ರಂದು ಕಿನ್ನಿಗೋಳಿಯಲ್ಲಿ ಜರಗಲಿರುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಉಡುಪರು ತಿಳಿಸಿದರು. ಪ್ರತಿಭಾವಂತ ಕವಿಯಾಗಿ, ಸಾಹಿತಿಯಾಗಿ ಚಿಂತಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಡಾ. ವಸಂತಕುಮಾರ ಪೆರ್ಲ ಅವರು ಸಾಹಿತ್ಯದ ಜೊತೆಗೆ ಪತ್ರಿಕೆ, ರೇಡಿಯೋ, ಟಿ. ವಿ. ಮುಂತಾದ ಸಮೂಹ ಮಾಧ್ಯಮಗಳಲ್ಲಿ ಹಾಗೂ ರಂಗಭೂಮಿ, ಸಿನಿಮಾ ಕ್ಷೇತ್ರಗಳಲ್ಲೂ ಪರಿಣಿತರು. ಒಳ್ಳೆಯ ವಾಗ್ಮಿ ಮತ್ತು ವಿದ್ವಾಂಸರೆಂದು ಗುರುತಿಸಲ್ಪಟ್ಟವರು. ಕನ್ನಡ, ತುಳು ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಸಾಹಿತ್ಯ ರಚನೆ ಮಾಡುತ್ತಿರುವ ಡಾ. ಪೆರ್ಲರ ಕವನಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೋಷಕರ ಮತ್ತು ವಿದ್ಯಾರ್ಥಿಗಳ ಅಭಿರುಚಿ ವಿಭಿನ್ನವಾದರೂ ಸಹ ಸದ್ಯ ವಿದ್ಯಾರ್ಥಿಗಳ ಅಭಿರುಚಿಗೆ ಪ್ರೋತ್ಸಾಹ ದೊರೆಯಬೇಕು. ಹುಟ್ಟೂರಿನಲ್ಲಿ ಒಂದು ಶಾಶ್ವತ ಕೊಡುಗೆ ನೀಡಬೇಕು ಎನ್ನುವ ಉದ್ದೇಶದಿಂದಎರಡು ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುವ ಕಾರ್ಯಕ್ಕೆ ಮುಂದಾಗಿದ್ದು, ಇದು ಲಾಭಕ್ಕಾಗಿ ಮಾಡಿದ ವ್ಯವಹಾರವಲ್ಲ. ಈ ಸತ್ಕಾರ್ಯದಿಂದ ಹೃದಯ ತುಂಬಿದೆ. ನಮ್ಮ ಎರಡೂ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಕ್ಕಳ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ವಹಿಸಬೇಕು ಎಂಬ ನೆಲೆಯಲ್ಲಿ ನಮ್ಮ ಸಂಸ್ಥೆಗೆ ನೂತನ ಹದಿನೈದು ಬಸ್ಗಳನ್ನು ಖರೀದಿಸಲಾಗಿದೆ. ಇದು ಈ ಎರಡೂ ಶಾಲೆಗಳನ್ನು ಟ್ರಸ್ಟಿನ ಸುಪರ್ದಿಯಲ್ಲಿ ತೆಗೆದುಕೊಂಡ ಮೊದಲ ದಿನದ ಯೋಚನೆಯಾಗಿತ್ತು ಎಂದು ಯುಬಿಎಸ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಯು.ಬಿ. ಶೆಟ್ಟಿ ಹೇಳಿದರು. ಇಲ್ಲಿನ ಯುಬಿಎಸ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಗುರುವಾರ ಟಾಟಾ ಸಂಸ್ಥೆಯ ನೂತನ ಐದು ಶಾಲಾ ಬಸ್ಗಳನ್ನು ಲೋಕಾರ್ಪಣೆ ಮಾತನಾಡಿದರು. ನಮ್ಮ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ಸಾರಿಗೆ ವ್ಯವಸ್ಥೆಯಾಗಬೇಕು ಎಂಬ ನಿಟ್ಟಿನಲ್ಲಿ ವಾಹನವನ್ನು ಖರೀದಿಸಲಾಗಿದೆ. ಮುಂದಿನ ದಿನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲೆ 3182 ಝೋನ್-1 ಇದರ ಸಹಾಯಕ ಗವರ್ನರ್ ಡಾ. ಉಮೇಶ್ ಪುತ್ರನ್ ಹೇಳಿದರು. ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಬುಧವಾರ ಕ್ಲಬ್ನ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ ಎಚ್. ಉದಯ ಆಚಾರ್ ಅವರಿಗೆ ರೋಟರ್ ಕಾಲರ್ ಹಸ್ತಾಂತರಿಸಿ ಮಾತನಾಡಿದರು. ರೋಟರಿ ಜಿಲ್ಲೆ 3182ನಿಂದ ಪ್ರಸಕ್ತ ಸಾಲಿನಲ್ಲಿ ಕಲಿಕಾ ಸಾಮರ್ಥ ನ್ಯೂನ್ಯತೆ ಇರುವ ಮಕ್ಕಳ ಅಭ್ಯುದಯಕ್ಕೆ ಸಂಬಂಧಿಸಿದ ಯೋಜನೆಗಳು, ಅಂಗಾಂಗ ಹಾಗೂ ಚರ್ಮ ದಾನ, ಸ್ತ್ರೀ ಸಬಲೀಕರಣ, ಇಲೆಕ್ಟ್ರಾನಿಕ್ಸ್ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಬಗ್ಗೆ ಕಾರ್ಯನಿರ್ವಹಿಸಲಾಗುತ್ತದೆ ಎಂದ ಅವರು ಸೇವಾಕಾಂಕ್ಷಿ ಮಾನವ ಸಂಪನ್ಮೂಲಗಳನ್ನು ಸಮರ್ಥವಾಗಿ ಕ್ರೂಢಿಕರಿಸಿ ಪ್ರಾಮಾಣಿಕವಾಗಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಜನ ಗುರುತಿಸುತ್ತಾರೆ. ಒಬ್ಬರಿಂದಾಗದ ಕೆಲಸ ಸಂಸ್ಥೆಯ ಮೂಲಕ ಮಾಡಬಹುದು. ಹೀಗಾಗಿ ಎಲ್ಲರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ. ಮನಸಿಗೆ ತೃಪ್ತಿ ನೀಡುವ ಉತ್ತಮ ಸೇವೆಗಳಿಂದ ಸಿಗುವ ಸಂತೋಷ ಶಾಶ್ವತವಾಗಿರುತ್ತದೆ. ಅಲ್ಲದೇ ಜೀವನದ ಜಂಜಾಟದಿಂದ ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ಇದರಲ್ಲಿ ಕಾಣಬಹುದಾಗಿದೆ ಎಂದು ಕಾಸರಗೋಡಿನ ಬ್ರಹ್ಮಕುಮಾರಿ ಬಿ. ಕೆ. ವಿಜಯಲಕ್ಷ್ಮೀ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ನಡೆದ ಇನ್ನರ್ವೀಲ್ ಕ್ಲಬ್ನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಕುಟುಂಬದಂತಿರುವ ಇನ್ನರ್ವೀಲ್ ಕ್ಲಬ್ಬಿನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಸ್ವ-ಬೆಳವಣಿಗೆಯೊಂದಿಗೆ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ ಎಂದರು. ೨೦೨೨-೨೩ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಆಯ್ಕೆಯದ ಭಾನುಮತಿ ಬಿ. ಕೆ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿಂಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.07: ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಾಲೂಕಿನ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ. ಪರಿಣಾಮವಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸಾಲ್ಬುಡ, ಕುದ್ರು ಪ್ರದೇಶ ಮುಳುಗಡೆಯಾಗಿದ್ದು, ಸಾಲ್ಬುಡದ ಕುದ್ರು ಗ್ರಾಮದ ಸಂತ್ರಸ್ತರನ್ನು ಎಸ್.ಡಿ.ಆರ್.ಎಫ್ ತಂಡ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಮರವಂತೆ, ಬಡಾಕೆರೆ ಮೊದಲಾದ ಪ್ರದೇಶಗಳಲ್ಲಿಯೂ ನೆರೆ ಕಾಣಿಸಿಕೊಂಡಿದೆ. ನೆರೆಯಿಂದಾಗಿ ಜನರು ಸಂಚಾರಕ್ಕೆ ದೋಣಿಗಳನ್ನು ಬಳಸುವಂತಾಗಿದೆ. ಪಂಚಗಂಗಾವಳಿ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಹಲವೆಡೆ ನೆರೆ ಕಾಣಿಸಿಕೊಂಡಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜು.6ರಂದು ಮಳೆಯಿಂದಾಗಿ ಗಂಗೊಳ್ಳಿ, ಹೊಸಂಗಡಿ, ಬಸ್ರೂರು, ಯಡ್ಯಾಡಿ ಮತ್ಯಾಡಿ, ಕುಳಂಜೆ, ಅಂಪಾರು, ಕೊರ್ಗಿ, ಸಿದ್ದಾಪುರ, ಹೆಮ್ಮಾಡಿ, ಗಂಗೊಳ್ಳಿ, ತೆಕ್ಕಟೆ, ಶಿರೂರು, ನಾವುಂದ ಗ್ರಾಮದ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಅಂದಾಜು 6.25 ಲಕ್ಷ ರೂ. ಹಾನಿಯಾದ ಬಗ್ಗೆ ವರದಿಯಾಗಿದೆ. ಇನ್ನು ಮರವಂತೆ, ಕಿರಿಮಂಜೇಶ್ವರ, ಗಂಗೊಳ್ಳಿಯ ಕೆಲ ಭಾಗಗಳಲ್ಲಿ ಕಡಲಕೊರೆತ ಕಾಣಿಸಿಕೊಂಡಿದ್ದು, ಸಮುದ್ರ ತಡದ ಜನರು ಭಯದಿಂದ ಬದುಕುವಂತಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.07: ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ8 ಹಾಗೂ 9ರಂದು ಎಲ್ಲಾ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 48 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಹಾಗೂ ಮರವಂತೆ ಪ್ರದೇಶಗಳಿಗೆ ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಶಾಸಕರಾದ ಸುಕುಮಾರ್ ಶೆಟ್ಟಿ ಅವರು ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಮರವಂತೆ ಹೊರಬಂದರು ಪ್ರದೇಶದ ಸಮೀಪ ಕಡಲ್ಕೊರೆತದಿಂದ ವ್ಯಾಪಕ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಂಸದರು ಕಡಲ್ಕೊರೆತಕ್ಕೆ ಕಲ್ಲಿನಿಂದ ತಡೆಗೋಡೆ ನಿರ್ಮಿಸಿದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಹಾಗಾಗಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಂಸತ್ತಿನ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಲಾಗುವುದು. ಶಾಸಕರ ಜೊತೆಗೂಡಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಜನರ ಸಮಸ್ಯೆಯ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದರು. ಕಾಮಗಾರಿಯಲ್ಲಿ ಹಣ ದುರುಪಯೋಗವಾದರೆ ಈ ಕುರಿತು ಸೂಕ್ತ ತನಿಖೆ ನಡೆಯಬೇಕು. ರಾಜ್ಯ ಸರ್ಕಾರದ ವತಿಯಿಂದ ಮರವಂತೆ ಭಾಗದ ವಿವಿಧ ಅಭಿವೃದ್ಧಿಗೆ ಈಗಾಗಲೇ 84 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಶೀಘ್ರದಲ್ಲಿ ಆರಂಭವಾಗಲಿದೆ ಎಂದರು. ಪ್ರಕೃತಿಯ ಮುಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.7: ಪ್ರಸಕ್ತ ಮಳೆಗಾಲದಲ್ಲಿ ಯಾವುದೇ ಜೀವ ಹಾಗೂ ಜಾನುವಾರು ಹಾನಿಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಅವಘಢಗಳು ನಡೆಯದಂತೆ ತಪ್ಪಿಸಬೇಕೆಂದು ಅಧಿಕಾರಿಗಳಿಗೆ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿವೃಷ್ಠಿಯಿಂದಾಗಿ ಮನೆಗಳು ಹಾನಿ ಉಂಟಾದ ಸಂದರ್ಭದಲ್ಲಿ ನಷ್ಠ ಪರಿಹಾರ ಅಂದಾಜಿಸುವಾಗ ಹಾನಿಯ ವಸ್ತುಸ್ಥಿತಿಯನ್ನು ವೈಜ್ಞಾನಿಕವಾಗಿ ಅಂದಾಜಿಸಿ ಗ್ರಾಮ ಲೆಕ್ಕಿಗರು ಪ್ರಾಥಮಿಕ ವರದಿಯನ್ನು ಸಲ್ಲಿಸಬೇಕು. ಅದರ ಆಧಾರದ ಮೇಲೆ ಹಾನಿಯ ಪ್ರಮಾಣವನ್ನು ಇಂಜಿನಿಯರ್ ಗಳು ನಿರ್ಧರಿಸುವುದು ಸೂಕ್ತ ಎಂದರು. ಕೆಲವೊಮ್ಮೆ ಮಳೆಯ ನೀರಿನಿಂದ ಮನೆಗಳ ತಳಪಾಯಗಳು ಹಾನಿಯಾದಲ್ಲಿ ಅಂತಹ ಮನೆಯನ್ನು ಸಂಪೂರ್ಣವಾಗಿ ಕೆಡವಿ ಹೊಸದಾಗಿ ನಿರ್ಮಾಣ ಮಾಡಬೇಕಾಗುತ್ತದೆ ಅವು ದುರಸ್ಥಿಗೆ ಯೋಗ್ಯವಾಗಿರುವುದಿಲ್ಲ ಇಂತಹವುಗಳನ್ನು ಅಂದಾಜಿಸುವಾಗ ಹಾನಿಯು ಸೂಕ್ಷö್ಮತೆಯನ್ನು ಆಧರಿಸಿ ವರದಿ ನೀಡಬೇಕಾಗುತ್ತದೆ ಎಂದರು. ಮಳೆಯ ನೀರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.7: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ…
