Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ಕೇಳಲ್ಲ. ಬೆಂಗಳೂರಿಗೆ ಹೋಗಿ ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳುವುದಿಲ್ಲ. ಯಾವ ನಾಯಕನ ಹಿಂದೆಯೂ ತಿರುಗಾಡಲು ಹೋಗಲ್ಲ. ನಾನಿನ್ನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ. ಈಗಲೂ ಕೇಳಲು ಹೋಗಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಸಂಪುಟ ರಚನೆಯ ಕಸರತ್ತು ಜೋರಾಗಿದ್ದು ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮಾತ್ರ ನೇರ ನುಡಿಯ ಮೂಲಕ ನಾಯಕರಿಗೆ ಬಿಸಿಮುಟ್ಟಿಸಿದ್ದಾರೆ. ನಾನೆಂದೂ ರಾಜಕೀಯದಲ್ಲಿ ಲಾಬಿ, ಜಾತಿವಾದಿತನ ನಾನು ಮಾಡಿಲ್ಲ, ಮಾಡುವುದು ಇಲ್ಲ. ಯಾರ ಕಾಲಿಗೆ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಶ್ರದ್ಧೆಯಿಂದ ಮಾಡುತ್ತೇನೆ. ಶಾಸಕನಾಗಿ ಜನ ಸೇವೆಯನ್ನು ಐದು ಅವಧಿಯಲ್ಲೂ ಮಾಡುತ್ತಿದ್ದೇನೆ ಎಂದವರು ಹೇಳಿದ್ದಾರೆ. ಈವರೆಗೆ…

Read More

ಹೆಚ್ಚಿನವರು ಊಟ ಮಾಡಿದ ನಂತರ ಸಿಹಿ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಹೋಟೆಲ್‍ನಲ್ಲಿ ಅಥವಾ ಹೊರಗೆ ಎಲ್ಲಾದರೂ ತಿಂದರೆ, ಅಂತಿಮವಾಗಿ ಐಸ್ ಕ್ರೀಮ್, ಸಿಹಿತಿಂಡಿಗಳು ಅಥವಾ ಯಾವುದೇ ಪುಡ್ಡಿಂಗ್ ನಂತಹ ಸಿಹಿತಿಂಡಿಗಳನ್ನು ನೀಡಲಾಗುತ್ತದೆ. ಆದರೆ ಊಟ ಮಾಡಿದ ನಂತರವೇ ಸಿಹಿ ತಿಂಡಿಗಳನ್ನು ಏಕೆ ತಿನ್ನಲಾಗುತ್ತದೆ ಎಂದು ಯಾರಾದರೂ ಯೋಚಿಸಿದ್ದಾರೆಯೇ? ಈ ಬಗ್ಗೆ ಇಂದು ಒಂದಷ್ಟು ಮಾಹಿತಿ ಇಲ್ಲಿದೆ. ನಮ್ಮ ಹಿರಿಯರು ಹಿಂದಿನಿಂದಲೂ ಮೊದಲಿಗೆ ಖಾರ ತಿನ್ನಬೇಕು, ಊಟದ ಕೊನೆಗೆ ಸಿಹಿಯನ್ನು ತಿನ್ನಬೇಕು, ಎಂದು ಪಾಯಸ ಮತ್ತಿತರ ಸಿಹಿ ಭಕ್ಷ್ಯಗಳನ್ನು ಮಾಡುತ್ತಾರೆ. ಯಾಕೆ ಕೊನೆಗೆ ಸಿಹಿ ಸೇವಿಸಬೇಕು ತಿಳಿಯೋಣ. ವಾಸ್ತವವಾಗಿ, ಸಿಹಿ ವಸ್ತುಗಳು ಕಾರ್ಬೋಹೈಡ್ರೆಟ್‍ಗಳಿಂದ ಸಮೃದ್ಧವಾಗಿರುತ್ತವೆ, ಇದು ಜೀರ್ಣಾಂಗ ಪ್ರಕ್ರಿಯೆಯನ್ನು ಸುಧಾರಿಸುತ್ತದೆ. ಆದ್ದರಿಂದ ಊಟ ತಿಂದ ನಂತರ ಸ್ವಲ್ಪ ಸಿಹಿ ತಿನ್ನಬೇಕು. ಸಿಹಿ ತಿಂದ ನಂತರ ಸೆರೊಟೋನಿನ್ ಹಾರ್ಮೋನ್ ಮಟ್ಟ ಹೆಚ್ಚುತ್ತದೆ. ಇದು ಮನಸ್ಸನ್ನು ಸಂತೋಷಪಡಿಸುತ್ತದೆ. ಆದ್ದರಿಂದ ಮನಸ್ಸು ಅಸಂತುಷ್ಟವಾಗಿದ್ದರೆ, ಸ್ವಲ್ಪ ಸಿಹಿ ತಿನ್ನಬೇಕು. ಅನೇಕ ಜನರು ಹೈಪೋಗ್ಲೈಸೀಮಿಯಾ ಅಂದರೆ ಕಡಿಮೆ ಸಕ್ಕರೆಯಿಂದ ಬಳಲುತ್ತಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಾಗತಿಕವಾಗಿ ವ್ಯಾಪಿಸಿದ ಕೋವಿಡ್-19 ಸೋಂಕಿನಿಂದಾಗಿ ವಿವಿಧ ಸರಕುಗಳ ಉತ್ಪಾದನೆ ಮತ್ತು ಬೇಡಿಕೆಯ ಮೇಲೆ ತೀವ್ರ ಸ್ವರೂಪದ ಋಣಾತ್ಮಕ ಪರಿಣಾಮ ಉಂಟಾಗಿದೆ. ಭಾರತದ ವಿದೇಶಿ ವ್ಯಾಪಾರದಲ್ಲಿಯೂ ಕುಸಿತ ಕಂಡುಬಂದಿದೆ ಎಂದು ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕಿ ಡಾ. ವರದುರ್ಗಾ ಭಟ್ ಅಭಿಪ್ರಾಯಪಟ್ಟರು. ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಏರ್ಪಡಿಸಿದ್ದ ‘ಕೋವಿಡ್-19, ಅಂತರರಾಷ್ಟ್ರೀಯ ವ್ಯಾಪಾರ ಹಾಗೂ ಅಭಿವೃದ್ಧಿ: ಭಾರತದಲ್ಲಿನ ಸನ್ನಿವೇಶ’ ವಿಷಯದ ಕುರಿತು ರಾಜ್ಯಮಟ್ಟದ ವೆಬಿನಾರ್‌ನಲ್ಲಿ ಅವರು ವಿಷಯ ಮಂಡನೆ ಮಾಡಿದರು. ಉದ್ಯಮಗಳ ನಿಲುಗಡೆ, ಉದ್ಯೋಗ ನಷ್ಟ ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿದೆ. ಆದರೆ ಈ ದುಸ್ಥಿತಿ ಮತ್ತು ಸಂಕಷ್ಟಗಳ ನಡುವೆಯೂ ಭಾರತದ ಆರ್ಥಿಕತೆಗೆ ಕೆಲವು ಹೊಸ ಅವಕಾಶಗಳು ಸೃಷ್ಟಿಯಾಗಿರುವುದನ್ನೂ ಕಾಣುತ್ತಿದ್ದೇವೆ ಎಂದು ಅವರು ಹೇಳಿದರು. ವೆಬಿನಾರ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಮುಂದಿರಿಸಿದ ಪ್ರಶ್ನೆ ಹಾಗೂ ಸಂದೇಹಗಳಿಗೆ ಡಾ. ಭಟ್ ಪ್ರತಿಕ್ರಿಯಿಸಿದರು. ಬೈಂದೂರು ಕಾಲೇಜು ಅಲ್ಲದೆ ರಾಜ್ಯದ ವಿವಿಧ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರು ಬದುಕಿನೂದಕ್ಕು ನುಡಿದಂತೆ ಬದುಕಿ ಮಾದರಿ ಆದವರು ಅವರ ಬದುಕೇ ಅವರ ಸಂದೇಶದಂತೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿ ಎಲ್ಲಾರಿಗೂ ಮಾದರಿಯಾದ ಮಹಾನ್ ಚೇತನ ಇದು ಸಮಾಜಕ್ಕೆ ತಲುಪಿಸುವ ಕಾರ್ಯವಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿಯ ನಿರ್ದೇಶಕ ಎಸ್ ರಂಗಪ್ಪ ಕ.ಆ.ಸೇ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕೆರೆ ಮಧ್ಯದ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಮಿನಿ ರಂಗಮಂದಿರ, ಗ್ರಂಥಾಲಯ ವೀಕ್ಷಿಸಿದರು. ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ-ಸಾಹಿತ್ಯಿಕ ಕಾರ್ಯಕ್ರಮ, ತರಭೇತಿ, ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಕಾರಂತರ ಬದುಕಿನ ಅನಾವರಣಕ್ಕೆ ಥೀಮ್ ಪಾರ್ಕ್ ಸಹಕಾರಿ ಎಂದು ಶ್ಲಾಘಿಸಿದರು. ಕಾರಂತ ಥೀಮ್ ಅಭಿವೃದ್ಧಿ ಬಗ್ಗೆ ಚರ್ಚೆಕಾರಂತ ಥೀಮ್ ಪಾರ್ಕ್‌ನಲ್ಲಿ ಇನ್ನಷ್ಟೂ ಹೊಸ ಯೋಜನೆ ರೂಪಿಸಿಕೊಂಡು ಕಾರಂತರ ಕುರಿತಾದ ಚಟುವಟಿಕೆಯನ್ನು ಇನ್ನಷ್ಟೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಬೈಂದೂರು ತಾಲ್ಲೂಕು ಚಿತ್ತೂರು ವಲಯ ಹಾಗೂ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ‘ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ’ವು ಇಲ್ಲಿನ ಇಡೂರಿನಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮಿನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ತಾಲೂಕಿನ ಯೋಜನಾಧಿಕಾರಿ ಶಶಿರೇಖಾ ಪಿ., ಉಪವಲಯ ಸಹಾಯಕ ಅರಣ್ಯಧಿಕಾರಿ ಸುನಿಲ್ ಕುಮಾರ್, ಚಿತ್ತೂರು ವಲಯ ಒಕ್ಕೂಟಗಳ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಇಡೂರು ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಆಚಾರ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮತಿ ಆಚಾರ್ಯ ಒಕ್ಕೂಟದ ಪದಾಧಿಕಾರಿಗಳು ಮತ್ತು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು. ವಲಯದ ಮೇಲ್ವಿಚಾರಕ ಶ್ರೀನಿವಾಸ್ ಸ್ವಾಗತಿಸಿ, ಗ್ರಾಮದ ಸೇವಾಪ್ರತಿನಿಧಿ ಪ್ರೇಮಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೌಪರ್ಣಿಕಾ ನದಿಯಲ್ಲಿ ಪ್ರವಾಹ ಬಂದಾಗ ನೀರಿನಿಂದ ಆವೃತವಾಗಿ ಊರಿನ ಪ್ರಧಾನ ಭಾಗದಿಂದ ಸಂಪರ್ಕ ಕಡಿದುಕೊಳ್ಳುವ ನದಿತೀರ ಪ್ರದೇಶಗಳನ್ನು ಹೊಂದಿದ ಐದು ಗ್ರಾಮಗಳಿಗೆ ಜಿಲ್ಲಾಡಳಿತ ಒದಗಿಸಿದ ದೋಣಿಗಳನ್ನು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್ ಆಯಾ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಜಿಲ್ಲಾಧಿಕಾರಿಗಳ ನೇತೃತ್ವದ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ನಾಡ, ಬಡಾಕೆರೆ, ಮರವಂತೆ, ನಾವುಂದ, ಹೇರೂರು ಗ್ರಾಮಗಳಿಗೆ ತಲಾ ಒಂದು ದೋಣಿ ವಿತರಿಸಲಾಗಿದೆ. 18 ಅಡಿ ಉದ್ದದ ಪ್ರತಿ ಫೈಬರ್ ದೋಣಿಯನ್ನು ರೂ 85,000ಕ್ಕೆ ಖರೀದಿಸಲಾಗಿದೆ. ಈ ಗ್ರಾಮಗಳಲ್ಲಿ ವಿವಿಧ ಮೂಲಗಳಿಂದ ಖರೀದಿಸಿದ ದೋಣಿಗಳು ಈಗಾಗಲೇ ಇದ್ದರೂ ಪ್ರವಾಹ ಬಂದಾಗ ಗ್ರಾಮಗಳ ಎಲ್ಲ ಬಾಧಿತ ಪ್ರದೇಶಗಳಲ್ಲಿ ಏಕ ಕಾಲದಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಹೆಚ್ಚುವರಿ ದೋಣಿಗಳಿಗೆ ಬೇಡಿಕೆ ಬಂದ ಕಾರಣ ಇವುಗಳನ್ನು ಒದಗಿಸಲಾಗಿದೆ. ದೋಣಿಗಳ ನಿರ್ವಹಣೆ ಮತ್ತು ಉಸ್ತುವಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ ಎಂದರು. ಮರವಂತೆಗೆ ನೀಡಿದ ದೋಣಿಯನ್ನು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯಿಂದ ತಲ್ಲೂರು ಕಡೆಗೆ ಸೈಕಲ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿಯಾದ ಪರಿಣಾಮ ಸೈಕಲ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ತಾಲೂಕಿನ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಂತೋಷನಗರ ನಿವಾಸಿ ರಾಮ ಕುಲಾಲ್ (೬೦) ಮೃತ ದುರ್ದೈವಿ. ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮ್ಮ ಸೈಕಲ್‌ನಲ್ಲಿ ತೆರಳುತ್ತಿರುವ ರಾಮ ಕುಲಾಲ್ ಅವರು, ಡಿವೈಡರ್ ಬದಿಯಿಂದ ರಸ್ತೆಯ ಎಡಗಡೆಗೆ ಸೈಕಲ್ ತಿರುಗಿಸಿದ ಪರಿಣಾಮ ಹಿಂದಿನಿಂದ ಬಂದ ಕಾರು ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸೈಕಲ್‌ನಲ್ಲಿದ್ದ ರಾಮ ಕುಲಾಲ್ ಅವರು ಕೆಲ ದೂರ ಹೋಗಿ ಬಿದ್ದಿದ್ದು ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿತ್ತು. ಗಂಗೊಳ್ಳಿಯ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. ರಾಮ ಕುಲಾಲ್ ಅವರು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಹೆಮ್ಮಾಡಿ ಘಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಕೆಲ ದಿನ ಬೆಂಗಳೂರಿನಲ್ಲಿದ್ದ ಅವರು ನಿನ್ನೆಯಷ್ಟೇ ಊರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಿವೃತ್ತ ಸೈನಿಕ ರಾಜೇಶ ಮೊಗವೀರ ಅವರನ್ನು ರೋಟರಿ ಕ್ಲಬ್ ವತಿಯಿಂದ ಇಲ್ಲಿನ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್, ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಸಂಸ್ಥೆಯ ಮಾಜಿ ಅಧ್ಯಕ್ಷರಾದ ಉಮೇಶ ಮೇಸ್ತ, ಬಿ.ಲಕ್ಷ್ಮೀಕಾಂತ ಮಡಿವಾಳ, ಜನಾರ್ದನ ಪೂಜಾರಿ ಪೆರಾಜೆ, ಪ್ರದೀಪ ಡಿ.ಕೆ., ವಾಸುದೇವ ಶೇರುಗಾರ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೌಲ್ಯಗಳು ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಶಿಥಿಲವಾಗಿದೆ. ಹಣ, ಅಧಿಕಾರ ಹಾಗೂ ಪ್ರಚಾರದ ಆಧಾರದಲ್ಲಿಯೇ ಅದನ್ನು ಅಳೆಯಲಾಗುತ್ತಿದೆ. ಎಲ್ಲವನ್ನೂ ಕೈಯಂಚಲ್ಲಿ ಪಡೆಯುವಷ್ಟು ಸಲೀಸಾಗಿ ಮುಂದುವರಿದಿರುವ ಸಮಾಜದಲ್ಲಿ ಮಾನವೀಯ ಮೌಲ್ಯಗಳ ಮರುಸ್ಥಾಪನೆಯಾಗಬೇಕಿದೆ ಎಂದು ಸಾಹಿತಿ, ಚಿಂತಕ ವಿವೇಕಾನಂದ ಹೆಚ್. ಕೆ ಹೇಳಿದರು. ಕಲಾಕ್ಷೇತ್ರ ಕುಂದಾಪುರ ಸಂಸ್ಥೆಯು ಮಂಗಳವಾರ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡಿರುವ ವಿವೇಕಾನಂದ ಹೆಚ್. ಕೆ ಅವರೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿ ಕೆಟ್ಟವರು, ವಂಚಕರು ಈ ಸಮಾದಲ್ಲಿ ವಿಜ್ರಂಭಿಸುತ್ತಾರೆ ಎಂಬ ಭಾವನೆ ಇದೆ. ಕೆಲವು ವರ್ಷಗಳ ಹಿಂದೆ ಒಳ್ಳೆಯವರಿಗೆ ಸಮಾಜದಲ್ಲಿ ಗೌರವವಿತ್ತು. ಇಂದೂ ಅಂತಹ ಒಳ್ಳೆಯತನಕ್ಕೆ ಗೌರವಕೊಡುವ ಕಾರ್ಯವಾಗಬೇಕಿದೆ. ಮನ, ಮನೆ ಹಾಗೂ ಮತಗಳಲ್ಲಿ ಬದಲಾವಣೆಯಾದರೆ ಮುಂದಿನ ಹದಿನೈದು ವರ್ಷಗಳಲ್ಲಿ ಮೌಲ್ಯಗಳ ಮರುಸ್ಥಾಪನೆ ಮಾಡಬಹುದಾಗಿದೆ. ಯಾವುದೇ ಕ್ಷೇತ್ರದ ಕೆಟ್ಟ ವ್ಯಕ್ತಿಗಳನ್ನು ನಿರ್ಲಕ್ಷಿಸಿ ಒಳ್ಳೆಯವರನ್ನು ಗೌರವಿಸುವ ಕಾರ್ಯ ನಮ್ಮಿಂದ ಆರಂಭವಾದರೆ ಮುಂದಿನ ಪೀಳಿಗೆಯಾದರೂ ನೆಮ್ಮದಿಯಿಂದ ಬದುಕಬಹುದು ಎಂದರು. ಮೌಲ್ಯಗಳ ಉದ್ದೀಪನಕ್ಕಾಗಿ ಪಾದಯಾತ್ರೆ:ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾದ ವಿವೇಕಾನಂದ ಹೆಚ್. ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆಯಲ್ಲಿ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಪಾಲನೆಯತ್ತ ಕಾಳಜಿ ವಹಿಸಲು ಪ್ರತ್ಯೇಕ ವಿಭಾಗ ಆರಂಭಿಸಲಾಗಿದೆ. ಪರಿಣತ ವ್ಯಕ್ತಿಯ ನೇತೃತ್ವದಲ್ಲಿ ಕೆಲಸ ಮಾಡುವ ಈ ವಿಭಾಗ ವಿಶಿಷ್ಟ ವಿಧಾನಗಳನ್ನು ಬಳಸಿಕೊಂಡು ತನ್ನ ಉದ್ದೇಶ ಸಾಧಿಸುತ್ತದೆ ಎಂದು ಹೊಸಾಡಿನ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಫಾ. ಮ್ಯಾಕ್ಸಿಮ್ ಡಿಸೋಜ ಹೇಳಿದರು. ಅವರು, ಡಾನ್ ಬಾಸ್ಕೊ ಶಾಲೆಯ ಬೋಧಕ, ಬೋಧಕೇತರರಿಗಾಗಿ ಈಚೆಗೆ ನಡೆಸಿದ ಮಾನಸಿಕ ಆರೋಗ್ಯ ಮತ್ತು ಕ್ಷೇಮಪಾಲನೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯ ಆಪ್ತ ಸಮಾಲೋಚಕಿಯಾಗಿ ಕೆಲಸಮಾಡುತ್ತಿರುವ ರಕ್ಷಿತಾ ಎನ್. ಜೆ ಈ ವಿಷಯದಲ್ಲಿ ವಿಶೇಷ ಶಿಕ್ಷಣದ ಜತೆಗೆ ಅಂತರರಾಷ್ಟ್ರೀಯ ಸಂಸ್ಥೆಯೊಂದರಿಂದ ಚಿಕಿತ್ಸಕ ಆಟಗಳು ಮತ್ತು ಚಿಕಿತ್ಸಾ ಪರಿಣತಿ ಪಡೆದುಕೊಂಡಿದ್ದಾರೆ. ಅವರು ಮಾನಸಿಕ ಸಮಸ್ಯೆ ಇರುವ ಮತ್ತು ವಿಶೇಷ ಅಗತ್ಯ ಇರುವ ಮಕ್ಕಳಿಗೆ ಚಿಕಿತ್ಸೆ ನೀಡುತ್ತಾರೆ. ಅದರೊಂದಿಗೆ ಮಕ್ಕಳಲ್ಲಿ ಮಾನಸಿಕ ಸಮಸ್ಯೆ ಉದ್ಭವಿಸಿದಾಗ ಚಿಕಿತ್ಸಕ ಆಟಗಳು, ಆಪ್ತ ಸಮಾಲೋಚನೆ ಹಾಗೂ ಪಾರಸ್ಪರಿಕ ಕ್ರಿಯೆಗಳ ಮೂಲಕ ಅದನ್ನು ಹೇಗೆ…

Read More