Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ಪೋಲಿಸ್ ಕಮಿಷನರೇಟ್ ವ್ಯಾಪ್ತಿಯಡಿಯಲ್ಲಿ ಮಹಿಳಾ ಸುರಕ್ಷತಾ ಅಭಿಯಾನದ ಅಂಗವಾಗಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ ಕುರಿತು ಜಾಗೃತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಪಣಂಬೂರು ಎಸಿಪಿ ಮಹೇಶ್ ಪ್ರಸಾದ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ, ಇಂತಹ ಸಂದರ್ಭಗಳಲ್ಲಿ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆ ಒದಗಿಸಲು ಪೋಲಿಸ್ ಇಲಾಖೆಯ ಸದಾ ಸಿದ್ಧವಾಗಿರುತ್ತದೆ. ಮಹಿಳೆಯರಿಗೆ ಯಾವುದೇ ರೀತಿಯ ಅಭದ್ರತೆಯ ಪರಿಸ್ಥಿತಿ ಬಂದೊದಗಿದರೆ ತುರ್ತು ಸಹಾಯವಾಣಿ ೧೧೨ಕ್ಕೆ ಕರೆ ಮಾಡುವ ಮೂಲಕ ಪೋಲಿಸ್ ಸಹಾಯವನ್ನು ಪಡೆಯಬಹುದು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಮೂಡುಬಿದಿರೆ ಪೋಲಿಸ್ ಇನ್ಸ್‌ಪೆಕ್ಟರ್ ದಿನೇಶ್ ಕುಮಾರ್, ಎಸ್‌ಐಗಳಾದ ಸುದೀಪ್ ಹಾಗೂ ದಿವಾಕರ್ ರೈ, ಎಎಸ್‌ಐ ಕಾಂತಪ್ಪ ಹಾಗೂ ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Read More

ಕುಂಧಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಹಾಗೂ ನವಶಕ್ತಿ ಮಹಿಳಾ ವೇದಿಕೆ ರಿ ಕೊಲ್ಲೂರು ಇವರ ಆಶ್ರಯದಲ್ಲಿ ಕೋವಿಡ್ 19 ಜನ ಜಾಗೃತಿ ಕಾರ್ಯಕ್ರಮ ಕೊಲ್ಲೂ ರಿನಲ್ಲಿ ನಡೆಯಿತು. ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ್ ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾಸ್ಕ್, ಸ್ಯಾನಿಟೈಜರ್ ಮತ್ತು ಸಾಮಾಜಿಕ ಅಂತರ ಪಾಲಿಸಿ ಯಾವುದೇ ಆತಂಕ ಬೇಡ, ಧೈರ್ಯದಿಂದಿರಿ ಎಂದು ಸಲಹೆ ನೀಡಿದರು. ಇದೇ ಸಂದರ್ಭ ಕೋವಿಡ್ 19 ಜನ ಜಾಗೃತಿ ಕರಪತ್ರವನ್ನು ಸಂಘದ ಸದಸ್ಯರು ಕೊಲ್ಲೂರಿನ ಅಂಗಡಿ ಮುಂಗಟ್ಟುಗಳಿಗೆ ಹಾಗೂ ಗ್ರಾಮದ ಸ್ಥಳೀಯರಿಗೆ ನೀಡಿ ಕೋವಿಡ್ 19 ಜನ ಜಾಗೃತಿ ಮೂಡಿಸಿದರು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಮತ್ತು ಸಂಘದ ಸದಸ್ಯರಾದ ಸುಷ್ಮಾ, ಜಯಲಕ್ಷ್ಮಿ, ರತ್ನ, ಸುಗುಣ, ಗೌರಿ, ಉಷಾ, ಭವಾನಿ, ಮತ್ತು ಸ್ಥಳೀಯ ಅಂಗನವಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಸಿಟಿ ವತಿಯಿಂದ ಸೆಲ್ಯೂಟು ಸೈಲೆಂಟ್ ಎಂಬ ಕಾರ್ಯಕ್ರಮದಡಿಯಲ್ಲಿ ಸಮಾಜದ ಎಲೆಮರೆ ಕಾಯಿಯಂತೆ ಇದ್ದು ತಮ್ಮದೇ ಆದ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವವರನ್ನು ಗುರುತಿಸುವ ನಿಟ್ಟಿನಲ್ಲಿ ಬೈಂದೂರು ಭಾಗದ ಯುವ ಯೋಧ ಪ್ರಸ್ತುತ ಜಮ್ಮು-ಕಾಶ್ಮೀರದ ಪುಲ್ವಾಮದ ಗಡಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಾಜ ದೇವಾಡಿಗ ಅವರನ್ನು ಇಲ್ಲಿನ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ಶ್ರೀಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಬೈಂದೂರು ಸಿಟಿ ವಲಯಾಧಿಕಾರಿ ಮಣಿಕಂಠ ದೇವಾಡಿಗ, ಘಟಕದ ಉಪಾಧ್ಯಕ್ಷೆ ಸೌಮ್ಯ ಬಿಕೆ, ಸಕ್ಕು ಕಲ್ಮಕ್ಕಿ, ಭಾನುಮತಿ ಬಿಕೆ, ಚೈತ್ರ, ದೀಪಿಕಾ ಆಚಾರ್ಯ, ಪ್ರೇಮ ವಿ ಶೆಟ್ಟಿ, ರಾಘವೇಂದ್ರ ಪೂಜಾರಿ, ರಾಘವೇಂದ್ರ ಹೊಳ್ಳ, ರಾಘವೇಂದ್ರ ದೀಕ್ಷಾ ಮೊಬೈಲ್, ಅಶ್ರಫ್, ಸ್ಥಾಪಕ ಕಾರ್ಯದರ್ಶಿ ಸುಶಾಂತ್ ಆಚಾರ್ಯ, ಉಪಸ್ಥಿತರಿದ್ದರು. ಪ್ರಾಜೆಕ್ಟ್ ಡೈರೆಕ್ಟರ್ ಸತೀಶ್ ದೇವಾಡಿಗ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ಸವಿತಾ ಗಾಣಿಗ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಇಲ್ಲಿನ ಜನ್ಮಭೂಮಿ ಫೌಂಡೇಶನ್ ರಿ. ಇವರ ವತಿಯಿಂದ ಕೊರೋನಾ ವಾರಿಯರ್ಸ್ ಹಾಗೂ ನಾಡಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಚೆಫ್ಟಾಕ್ ಫುಡ್ & ಹಾಸ್ಪಿಟಾಲಿಟಿ ಪ್ರೈ ಲಿ. ಇದರ ವ್ಯವಸ್ಥಾಪಕ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿ ಅವರಿಗೆ ‘ಭಾರತ ಗೌರವ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಶಸ್ತಿ ಸಮಾರಂಭದಲ್ಲಿ ನಾಡಿನ ಖ್ಯಾತ ಸಾಹಿತಿ ಡಾ. ಕುಂ ವೀರಭದ್ರಪ್ಪ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್, ಎಸ್ ಹೊಸಮನಿ, ಬೆಂಗಳೂರು ಎಸಿಪಿ, ಸಿಸಿಬಿ ಹೆಚ್. ಎಸ್…

Read More

ಚಾಂದ್ರಮಾನ ಪಂಚಾಗ ರೀತ್ಯಾ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಸೌರಮಾನ ಪಂಚಾಗ ರೀತ್ಯಾ ಸಿಂಹಮಾಸದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಇದಲ್ಲದೇ ವರಾಹ ಪುರಾಣದ ಪ್ರಕಾರ ಶ್ರೀ ಕೃಷ್ಣ ಜನ್ಮವು ಆಷಾಢ ಮಾಸದ ಶುಕ್ಲಪಕ್ಷದ ದ್ವಾದಶಿಯಂದು ಆಯಿತು. ಆ ಸಂದರ್ಭದಲ್ಲಿ ಚಾಂದ್ರಮಾನದ ಶ್ರಾವಣ ಮಾಸವೇ ಸೌರಮಾನದ ಸಿಂಹಮಾಸವಾಗಿತ್ತು. ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿಯೇ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುವುದು ವಾಡಿಕೆ. ದೇಶದ ವಿವಿಧ ಪ್ರದೇಶಗಳಲ್ಲಿ ತಮ್ಮದೇ ವೈಖರಿಯಲ್ಲಿ ಶ್ರೀಕೃಷ್ಣನನ್ನು ಆರಾಧಿಸುವರು, ಪೂಜಿಸುವರು. ಇದೇ ದಿನವನ್ನು ಗೋಕುಲಾಷ್ಟಮಿಯೆಂದೂ, ಶ್ರೀ ಕೃಷ್ಣ ಜಯಂತಿಯೆಂದೂ, ಜನ್ಮಾಷ್ಟಮಿಯೆಂದೂ ಕರೆಯುವರು. ಶ್ರೀಮನ್ನಾರಾಯಣನ ದಶಾವತಾರಗಳಲ್ಲಿ ಒಂಭತ್ತನೆಯ ಅವತಾರವೇ ಶ್ರೀ ಕೃಷ್ಣ. ಮನುಷ್ಯರಂತೆ ವ್ಯವಹರಿಸಿದರೂ, ಕಾಲಕ್ಕೆ ತಕ್ಕ ಹಾಗೆ ತನ್ನ ಅಪ್ರತಿಮ ಮತ್ತು ಅಮೋಘವಾದ ಜ್ಞಾನ, ಬಲ, ಶಕ್ತಿ, ತೇಜಸ್ಸುಗಳನ್ನೂ ಮತ್ತು ಆತ್ಮ ಗುಣ ಸಂಪತ್ತನ್ನೂ ಪ್ರದರ್ಶಿಸಿದ ಪರಮ ಪುರುಷ. ವರಾಹ ಪುರಾಣದಲ್ಲಿ ಉಲ್ಲೇಖಿಸಿದಂತೆ, ಅಂದು ರಾತ್ರಿ ಸ್ತ್ರೀಯು ಪತಿಯೊಡನೆ ಉಪವಾಸವಿದ್ದು ವ್ರತವನ್ನಾಚರಿಸಿದರೆ ಅವಳ ಹೃದಯದಲ್ಲಿ ಭಗವಂತನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈಶಾನ್ಯ ಸಾರಿಗೆಯ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂರ್ಮ ರಾವ್ ಎಂ ಅವರನ್ನು ತಕ್ಷಣದಿಂದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿದೆ. ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ಬೆಂಗಳೂರಲ್ಲಿ ಸೇವೆ ಆರಂಭಿಸಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರವಾರ – ಬೆಂಗಳೂರು ಹಗಲು ರೈಲು ಕುಂದಾಪುರಕ್ಕೆ ಬೇಗನೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಸದರು ಹಾಗೂ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿದೆ. ಬೆಂಗಳೂರಿನಿಂದ ಬರುವಾಗ ಮಂಗಳೂರು ಜಂಕ್ಷನ್ ಬೇಗನೇ ತಲುಪುತ್ತಿದ್ದು ಅಲ್ಲಿಂದ ಕೊಂಕಣ ರೈಲ್ವೆ ಪ್ರವೇಶಿಸಲು ವಿಪರೀತ ವಿಳಂಬವಾಗುತ್ತಿದೆ. ಕುಂದಾಪುರಕ್ಕೆ ಸಂಜೆ 6 ಗಂಟೆಯೊಳಗೆ ತಲುಪುವಂತೆ ವೇಳಾಪಟ್ಟಿ ಬದಲಾಯಿಸಬೇಕು ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ. ಸಂಜೆ ನಾಲ್ಕರಿಂದ ಏಳರವರೆಗೆ ವಿಸ್ಟಾಡೋಮ್ ಸೌಂದರ್ಯ ಪ್ರಯಾಣಿಕರಿಗೆ ಲಭ್ಯವಾಗಲಿದೆ ಬೇಗನೇ ರೈಲು ಬರುವುದರಿಂದ ಕಾರವಾರ ಕಡೆ ತೆರಳುವ ಮತ್ತು ಕರಾವಳಿಗೆ ಬಂದಿಳಿಯುವ ಜನರಿಗೂ ಅನುಕೂಲವಾಗಲಿದೆ. ಯಶವಂತಪುರ ಕಾರವಾರ ರೈಲು ಸೇರಿದಂತೆ ಯಾವುದೇ ರೈಲಿಗೂ ಕುಂದಾಪುರ ನಿಲ್ದಾಣದಲ್ಲಿ ರಿಸರ್ವಡ್ ಮತ್ತು ಅನ್ ರಿಸರ್ವಡ್ ಟೀಕೆಟ್ ಸಿಗದೆ ಇರುವುದು ತೀವ್ರ ಸಮಸ್ಯೆ ತಂದೊಡ್ಡಿದೆ. ಕೌಂಟರ್ ಟಿಕೆಟ್ ಸಿಗದೆ ಇರುವುದರಿಂದ ಮತ್ತೊಂದು ಸಮಸ್ಯೆಯಾಗಿದೆ. ಪೋಸ್ಟ್ ಆಫೀಸ್ ಪಿಆರ್‌ಎಸ್ ಸಂಪೂರ್ಣ ವಿಫಲವಾಗಿದೆ. ಸಮಸ್ಯೆಗಳನ್ನು ಕೂಡಲೆ ಪರಿಹರಿಸಲು ಕ್ರಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರ ಬೃಹತ್ ರಂಗೋಲಿಯನ್ನು ಸ್ವಯಂಸ್ಪೂರ್ತಿಯಿಂದ ಬಿಡಿಸಿದ ಕಲಾವಿದನ ಕೈಚಳಕಕ್ಕೆ ಸ್ವತಃ ಮಂತ್ರಾಲಯದ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಘವೇಂದ್ರ ಸ್ವಾಮಿಯ ಪರಮಭಕ್ತರಾಗಿರುವ ತಾಲೂಕಿನ ವಕ್ವಾಡಿಯ ಕಲಾವಿದ ಮಹೇಂದ್ರ ಆಚಾರ್ಯ ಪ್ರತಿವರ್ಷದಂತೆ ಈ ಬಾರಿಯೂ ಮಂತ್ರಾಲಯಕ್ಕೆ ತೆರಳಿದ್ದರು. ಆ.24ರಂದು ಸ್ವ ಇಚ್ಚೆಯಿಂದ ಕ್ಷೇತ್ರದಲ್ಲಿ ಬೃಹತ್ ರಂಗೋಲಿ ರಚನೆಗೆ ಮುಂದಾದರು. ಸತತ 8 ತಾಸುಗಳ ಪರಿಶ್ರಮದಿಂದ 7.5 ಅಡಿ ಎತ್ತರ ಹಾಗೂ 4 ಅಡಿ ಅಗಲದ ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿ 1008 ಶ್ರೀಸುಬುಧೇಂದ್ರ ತೀರ್ಥ ಶ್ರೀಗಳ ಪಾದರ ರಂಗೋಲಿ ರಚಿಸಿ ಭಕ್ತವೃಂದವನ್ನು ನಿಬ್ಬೆರುಗೊಳಿಸಿದ್ದಾರೆ. ರಂಗೋಲಿಯಲ್ಲಿ ಮೂಡಿದ ತನ್ನ ಭಾವ ಚಿತ್ರ ಕಂಡ ಶ್ರೀಗಳು ಬೆರಗಾಗಿ ಕಲಾವಿದ ಮಹೇಂದ್ರ ಆಚಾರ್ಯ ಅವರಿಗೆ ಫಲಮಂತ್ರಾಕ್ಷತೆ ನೀಡಿ ಹರಸಿದ್ದಾರೆ. ವಕ್ವಾಡಿ ನಿವಾಸಿಯಾಗಿರುವ ಮಹೇಂದ್ರ ಆಚಾರ್ಯ ಗ್ರಾಮೀಣ ಕಲಾಪ್ರತಿಭೆ. ಮಂಗಳೂರಿನ ಮಹಾಲಸಾ ಆರ್ಟ್ ಕಾಲೇಜಿನಲ್ಲಿ ಬಿಬಿಎ (ಬಾಚುಲರ್ ಆಫ್ ವಿಷುವಲ್ ಆರ್ಟ್) ಪದವಿ ಪಡೆದವರು. ಪದವಿ ಬಳಿಕ ಊರಿನಲ್ಲಿ ಕಲಾಶಾಲೆ ಆರಂಭಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೈದ್ಯಕೀಯ ರಂಗದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿರುವ ಗಣ್ಯರಿಗೆ ಕೊಡಮಾಡಲಾಗುವ ‘ಸಿಎಂಇ ಎಕ್ಸಲೆನ್ಸ್ ದ್ರೋಣಾಚಾರ್ಯ’ ಪ್ರಶಸ್ತಿಯನ್ನು ಈ ಬಾರಿ ಮಂಗಳೂರಿನ ಹಿರಿಯ ವೈದ್ಯ ಡಾ. ಶಾಂತಾರಾಮ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುತ್ತಿದೆ. 1942ರ ಏಪ್ರಿಲ್ 14ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡ್ಲಕಟ್ಟೆ ದೊಡ್ಡಮನೆಯ ಕಿದಿಯೂರು ತೇಜಪ್ಪ ಶೆಟ್ಟಿ ಮತ್ತು ಮೊಳಹಳ್ಳಿ ವಿಶಾಲಾಕ್ಷಿ ಶೆಟ್ಟಿ ದಂಪತಿ ಪುತ್ರನಾಗಿ ಬಂಟ್ಸ್ ಮನೆತನದಲ್ಲಿ ಜನಿಸಿದ ಡಾ. ಶಾಂತಾರಾಮ ಶೆಟ್ಟಿ ಅವರು, ಮಂಗಳೂರಿನ ಹಿರಿಯ ವೈದ್ಯರಾಗಿ, ಅಂತಾರಾಷ್ಟ್ರೀಯ ಖ್ಯಾತಿಯ ಓರ್ಥೋಪೆಡಿಕ್ ಸರ್ಜನ್, 50 ವರ್ಷಗಳ ವೈದ್ಯಕೀಯ ಬೋಧನೆ, ಉಪನ್ಯಾಸರಾಗಿ ಪ್ರಸ್ತುತ ಮಂಗಳೂರಿನ ತೇಜಸ್ವಿನಿ ಹಾಸ್ಪಿಟಲ್ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ, ನಿಟ್ಟೆ ವಿವಿಯ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅವರು ಮೈಸೂರಿನ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ತನ್ನ ಉನ್ನತ ವ್ಯಾಸಂಗವನ್ನು ಪೂರ್ಣಗೊಳಿಸಿ ವೈದ್ಯಕೀಯ ರಂಗದಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ವೈದ್ಯಕೀಯ ರಂಗದ ಇವರ ಅನನ್ಯ ಸೇವೆಯನ್ನು ಗುರುತಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮದ ರಾಮಂದಿರ ರಸ್ತೆಯ ದೇವಾಡಿಗರ ಬೆಟ್ಟು ನಿವಾಸದ ಸುನೀತಾ (32) ಎಂಬವರು ಆಗಸ್ಟ್ 14 ರಿಂದ ಮನೆಯಿಂದ ತೆರಳಿದ್ದು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. 5.2 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಬಣ್ಣದ ಬಿಳಿ ಚುಕ್ಕೆ ಇರುವ ಚೂಡಿದಾರ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಬಿಳಿ ಚುಕ್ಕೆವುಳ್ಳ ಬಿಳಿ ಬಣ್ಣದ ವೇಲ್ ಧರಿಸಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೋಲಿಸ್ ಠಾಣೆ: 0820-2564155 ಮೊ.ನಂ: 94808 05454 ಅಥವಾ ಪೋಲಿಸ್ ವೃತ್ತ ನಿರೀಕ್ಷಕರ ಕಚೇರಿ, ಬ್ರಹ್ಮಾವರ: 0820-2561966,94808 05432 ನ್ನು ಸಂಪರ್ಕಿಸುವಂತೆ ಕೋಟ ಪೋಲಿಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More