ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀಕ್ಷೇತ್ರ ಧರ್ಮಸ್ಥಳದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಗುರುವಾರ ನಡೆಸಲು ನಿರ್ಧರಿಸಲಾಗಿತ್ತು. ಕೋವಿಡ್-19ರ ನಿರ್ಬಂಧದ ಕಾರಣ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ವಿವಾಹಕ್ಕೆ ನೋಂದಣಿ ಮಾಡಿಕೊಂಡವರು ಅವರ ಗ್ರಾಮದ ದೇವಸ್ಥಾನದಲ್ಲಿ ಅಥವಾ ಮನೆಯಲ್ಲಿ ಕುಟುಂಬದ ಸದಸ್ಯರೊಡನೆ ಸೇರಿಕೊಂಡು ವಿವಾಹ ನೆರವೇರಿಸಬಹುದು ಎಂದು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಬೈಂದೂರು ತಾಲ್ಲೂಕಿನ 9 ಜೋಡಿಗಳ ವಿವಾಹ ಗುರುವಾರ ನೆರವೇರಿತು ಎಂದು ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್ ಹೇಳಿದರು. ಅವರು ಹೇರಂಜಾಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ನಂದನವನದ ಎನ್. ಜಿ. ನರೇಂದ್ರ ಮತ್ತು ಹನೆಹಳ್ಳಿ ಜ್ಯೋತಿ ಅವರ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು. ಶ್ರೀ ಕ್ಷೇತ್ರದಿಂದ ವಧುವಿಗೆ ಮಂಗಳಸೂತ್ರ, ಸೀರೆ, ರವಿಕೆ ಕಣ, ವರನಿಗೆ ಪಂಚೆ, ಶಾಲು, ಇಬ್ಬರಿಗೂ ತಲಾ ರೂ 5 ಸಾವಿರ ಮೊತ್ತದ ಚೆಕ್, ಮಂಜುನಾಥ ಸ್ವಾಮಿಯ ಫೋಟೋ ಮತ್ತು ಉಡುಗೊರೆಯನ್ನು ನೀಡಲಾಗಿದೆ ಎಂದರು. ಇನ್ನೂಳಿದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಎರಡು ವೇತನಗಳ ನಡುವೆ ಗಣನೀಯ ವ್ಯತ್ಯಾಸವಿದೆ. ಇದರಿಂದ ಉದ್ಯೋಗ ಖಾತ್ರಿ ಕೂಲಿಕಾರರಿಗೆ ಅನ್ಯಾಯವಾಗುತ್ತಿದೆ. ಅಕುಶಲ ಕೆಲಸದ ಕಾರ್ಮಿಕರ ಎರಡು ಗುಂಪುಗಳ ಕೂಲಿಯಲ್ಲಿ ಮಾಡಿರುವ ತಾರತಮ್ಯ ಖಂಡನೀಯ. ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು ಎಂದು ಅಖಿಲ ಭಾರತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ ಹೇಳಿದರು. ಅವರು ಕೆರ್ಗಾಲಿನಲ್ಲಿ ನಡೆದ ಕೂಲಿಕಾರರ ಸಭೆಯಲ್ಲಿ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ಕೃಷಿಕಾರ್ಮಿಕರ ಕೂಲಿಯನ್ನು ಪರಿಷ್ಕರಿಸಿ ರೂ 424. 80ನಿಗದಿಗೊಳಿಸಿದೆ. ಆದರೆ ಕೇಂದ್ರದ ಯೋಜನೆಯಾದ ಮಹಾತ್ಮ ಗಾಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರಿಗೆ ರೂ 289 ನೀಡಲಾಗುತ್ತಿದೆ. ಈ ತಾರತಮ್ಯವನ್ನು ನಿವಾರಿಸಬೇಕು ಎಂದು ಬೇಡಿಕೆ ದಿನಾಚರಣೆ ಅಂಗವಾಗಿ ಬೈಂದೂರು ತಾಲ್ಲೂಕಿನ ವಿವಿಧೆಡೆ ನಡೆದ ಕೂಲಿಕಾರರ ಸಭೆಗಳಲ್ಲಿ ಒತ್ತಾಯಿಸಲಾಯಿತು. ಕೂಲಿಕಾರರ ಸಂಘದ ಮುಖಂಡರೂ, ಕಾಯಕ ಬಂಧುಗಳೂ ಆದ ಸಾಕು, ಸುಶೀಲಾ, ಜಯಂತಿ, ವೀಣಾ ಇದನ್ನು ಅನುಮೋದಿಸಿದರು. ಪ್ರಸಕ್ತ ವರ್ಷದಲ್ಲಿ ನರೇಗಾ ಕೂಲಿಕಾರರ ಹಕ್ಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌಕೂರು ಏತ ನೀರಾವರಿ ಕಾಮಗಾರಿಯಲ್ಲಿಪೈಪ್ಲೈನ್ ಲೇಯಿಂಗ್ ಕಾಮಗಾರಿಯನ್ನು ಕೈಗೊಳ್ಳಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989 ರ ಕಲಂ 221(ಎ)(2) & (5) ರನ್ವಯ ಕುಂದಾಪುರ ತಾಲೂಕಿನ ಮಾವಿನಕಟ್ಟೆ ಸರ್ಕಲ್ನಿಂದ ನೇರಳಕಟ್ಟೆ ಸರ್ಕಲ್ವರೆಗೆ ಮೇ 1 ರಿಂದ ಮೇ 11 ರ ವರೆಗೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ, ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ವಾಹನಗಳ ಪರ್ಯಾಯ ಮಾರ್ಗ: ಅಂಪಾರು-ನೇರಳಕಟ್ಟೆ-ನೆಂಪು-ಹೆಮ್ಮಾಡಿ ಮಾರ್ಗವಾಗಿ ಹಾಗೂ ಕಂಡ್ಲೂರು-ಗುಲ್ವಾಡಿ-ಮಾವಿನಕಟ್ಟೆ-ಹಟ್ಟಿಯಂಗಡಿ-ತಲ್ಲೂರು-ಹೆಮ್ಮಾಡಿ ಮಾರ್ಗವಾಗಿ ತಲುಪುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯ ಕಾರಣದಿಂದ ದಿನೇ ದಿನೇ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂಜಾಗ್ರತೆಯಾಗಿ ಜಿಲ್ಲೆಯ ಸರಕಾರಿ ಮತು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳ ಸಂಖ್ಯೆಯ ಹೆಚ್ಚಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವೈದ್ಯಕೀಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದರೂ ಕೂಡಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತೊಂದರೆಯಾಗದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರಸ್ತುತ ಇರುವ ಐಸಿಯು ಬೆಡ್ ಗಳಗಿಂತಲೂ ಇನ್ನೂ ಹೆಚ್ಚಿನ ಸಂಖ್ಯೆಯ ಐಸಿಯು ಬೆಡ್ ಗಳನ್ನು ಸಿದ್ದಮಾಡಲು ಸಾಧ್ಯತೆಗಳಿದ್ದಲ್ಲಿ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ, ಬೆಡ್ ಮೇನಜ್ ಮೆಂಟ್ ಸಿಸ್ಟಂ ನಲ್ಲಿ ಪ್ರತೀ ದಿನ ಆಸ್ಪತ್ರೆಗೆ ದಾಖಲಾಗುವ ಮತ್ತು ಬಿಡುಗಡೆಯಾಗುವ ರೋಗಿಗಳ ವಿವರಗಳನ್ನು ದಾಖಲಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 600 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 346, ಕುಂದಾಪುರ, ಬೈಂದೂರು ತಾಲೂಕಿನ 217, ಕಾರ್ಕಳ, ಹೆಬ್ರಿ ತಾಲೂಕಿನ 93 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 660 ಪ್ರಕರಣಗಳಲ್ಲಿ 407 ಸಿಂಟಮಿಕ್ ಹಾಗೂ 253 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 57 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 603 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2763 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 2596 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 419 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಕೋವಿಡ್ ಪಾಸಿಟಿವ್ ಆಗಿದ್ದ ಉಡುಪಿಯ 73 ವರ್ಷದ ಪುರುಷ ಹಾಗೂ 50 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಮೇ ತಿಂಗಳಿಂದ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿಯೊಂದಿಗೆ ಬೆಳ್ತಿಗೆ ಅಕ್ಕಿಯನ್ನು ವಿತರಿಸಲಾಗುತ್ತದೆ. ಒಟ್ಟು ಪ್ರಮಾಣದ ಅರ್ಧದಷ್ಟು ಕುಚ್ಚಲಕ್ಕಿ ಹಾಗೂ ಇನ್ನರ್ಧ ಬೆಳ್ತಿಗೆ ಅಕ್ಕಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ನ್ಯಾಯಬೆಲೆ ಅಂಗಡಿಗಳು ಲಾಕ್ ಡೌನ್ ಅವಧಿಯಲ್ಲಿ ಬೆಳಗ್ಗೆ 7 ರಿಂದ 10 ವರೆಗೆ ಕಾರ್ಯನಿರ್ವಹಿಸುತ್ತದೆ. ರಜಾ ದಿನಗಳಂದು ಕೂಡಾ ಈ ಅವಧಿಯಲ್ಲಿ ತೆರೆದಿರುತ್ತದೆ. ಈ ಅವಧಿಯಲ್ಲಿ ಪಡಿತರ ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಯಾವುದೇ ಗೊಂದಲಕ್ಕೀಡಾಗುವ ಅಗತ್ಯವಿಲ್ಲ. ಅರ್ಹರಿಗೆಲ್ಲರಿಗೂ ಪಡಿತರ ವಿತರಿಸಲಾಗುವುದು. ಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಘೋಷಿಸಲಾದ ಹೆಚ್ಚುವರಿ ಪಡಿತರ ಸಾಮಾಗ್ರಿ ಕೂಡ ಶೀಘ್ರ ವಿತರಣೆಯಾಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ -19ರ ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ ಕೋವಿಡ್ ಮತ್ತು ಹಳೆಯ ಕಟ್ಟಡದಲ್ಲಿ ನಾನ್ ಕೋವಿಡ್ ಒಳರೋಗಿಗಳನ್ನು ದಾಖಲಿಸಿ, ಉಳಿದ ಸೇವೆಗಳಾದ ನಾನ್ ಕೋವಿಡ್ ಹೊರರೋಗಿ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಪ್ರಯೋಗಾಲಯ ಸೇವೆ, ಕ್ಷ-ಕಿರಣ ಸೇವೆ, ಫೀವರ್ ಕ್ಲನಿಕ್, ಡಯಾಲಿಸಿಸ್ ವಿಭಾಗ, ಎ.ಆರ್.ಟಿ ಸೆಂಟರ್, ಐ.ಸಿ.ಟಿ.ಸಿ ವಿಭಾಗ, ಎಂ.ಎಲ್ ಸಿ ಸೇವೆ, ಪೋಸ್ಟ್ ಮಾರ್ಟಮ್ ಸೇವೆ, ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮಗಳನ್ನು ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಸದರಿ ಆಸ್ಪತ್ರೆಯಲ್ಲಿಯೇ ನಿರ್ವಹಿಸಲಾಗುತ್ತಿದೆ. ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಕಲಾಮಂದಿರದಲ್ಲಿ ಕೋವಿಡ್-19 ಲಸಿಕಾಕರಣ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ ► ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಕೋವಿಡ್ ನೆಪದಲ್ಲಿ ಸ್ಥಳಾಂತರಿಸುವ ಹಿಂದೆ ಹುನ್ನಾರ ಅಡಗಿದೆ:…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕೆ ಹೇರಲಾಗಿರುವ ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿರುವ ಸುಮಾರು 100ಕ್ಕೂ ಮಿಕ್ಕಿ ಲಾರಿ ಮತ್ತು ಇತರ ವಾಹನ ಚಾಲಕರು ಹಾಗೂ ನಿರ್ವಾಹಕರಿಗೆ ತ್ರಾಸಿ ಬೀಚ್ನಲ್ಲಿ ಗಂಗೊಳ್ಳಿಯ ಗಂಗೊಳ್ಳಿಯ ಮಹಮ್ಮದ್ ಶಾಕೀರ್ ಹುಸೇನ್, ಮಹಮ್ಮದ್ ಇಮ್ರಾನ್ ಅಲ್-ಫಲ್ಹಾ, ಮಹಮ್ಮದ್ ಜುನೈದ್ ವಾಹನ ಚಾಲಕ ನಿರ್ವಾಹಕರಿಗೆ ಊಟದ ಪ್ಯಾಕೇಟ್ ಮತ್ತು ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳನ್ನು ದಾಖಾಲಾತಿ ಮಾಡಲು ಕುಂದಾಪುರ ಸಹಾಯಕ ಕಮೀಷನರ್ರವರನ್ನು ಭೇಟಿ ಮಾಡಿ ಮನವಿ ನೀಡಲಾಯಿತು. ಮನವಿಗೆ ಸ್ಪಂದಿಸಿದ ಸಹಾಯಕ ಕಮೀಷನರ್ ಮೂರು ನಾಲ್ಕು ದಿನಗಳಲ್ಲಿ, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಒಳರೋಗಿಗಳ ದಾಖಾಲಾತಿ ಹಾಗೂ ಇತರೇ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಹಳೆ ಕಟ್ಟಡದಲ್ಲಿರುವ ಆಕ್ಸಜಿನ್ ಬೆಡ್ ಗಳನ್ನು ಹೊಸ ಕಟ್ಟಡಕ್ಕೆ ಸಿಪ್ಟ್ ಮಾಡಿ ಸಾರ್ವಜನಿಕರ ಸೇವೆಗೆ ಅವಕಾಶ ಮಾಡುಕೊಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷರಾದ ಪಿ.ದೇವಕಿ ಸಣ್ಣಯ್ಯ, ಪುರಸಭೆ ಸದಸ್ಯರಾದ ಕೆ.ಜಿ. ನಿತ್ಯಾನಂದ, ಚಂದ್ರಶೇಖರ ಖಾರ್ವಿ, ಶ್ರೀಧರ ಸೇರಿಗಾರ್, ಅಬ್ಬು ಮಹಮ್ಮದ್, ಅಶ್ಪಾಕ್ ಕೋಡಿ ಉಪಸ್ಥಿತರಿದ್ದರು. ಇದನ್ನೂ ಓದಿ ► ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಕೋವಿಡ್ ನೆಪದಲ್ಲಿ ಸ್ಥಳಾಂತರಿಸುವ ಹಿಂದೆ ಹುನ್ನಾರ ಅಡಗಿದೆ: ಎಂಎಲ್ಸಿ ಕೆ. ಪ್ರತಾಪಚಂದ್ರ ಶೆಟ್ಟಿ ಆರೋಪ – https://kundapraa.com/?p=47774 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 568 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 312, ಕುಂದಾಪುರ, ಬೈಂದೂರು ತಾಲೂಕಿನ 175, ಕಾರ್ಕಳ, ಹೆಬ್ರಿ ತಾಲೂಕಿನ 78 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 568 ಪ್ರಕರಣಗಳಲ್ಲಿ 364 ಸಿಂಟಮಿಕ್ ಹಾಗೂ 204 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 28 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 540 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2903 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 2359 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 439 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಕೋವಿಡ್ ಪಾಸಿಟಿವ್ ಆಗಿದ್ದ ಕುಂದಾಪುರದ 76 ವರ್ಷದ ಮಹಿಳೆ ಹಾಗೂ ಕಾರ್ಕಳದ 62 ವರ್ಷದ ಪುರುಷ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
