Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.05: ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಸಂಬಧಿಸಿದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆದಿದ್ದು, 158 ಚುನಾವಣಾಧಿಕಾರಿ, 158 ಸಹಾಯಕ ಚುನಾವಣಾಧಿಕಾರಿ, 158 ಮೈಕ್ರೋಅಬ್ಸರ್ವರ್, 158 ರೂಫ್ ಡಿ, 158 ರೂಟ್ ಅಧಿಕಾರಿಗಳು, 158 ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಚುನಾವಣೆಯಲ್ಲಿ ಜಿಲ್ಲೆಯ ಒಟ್ಟು 2505 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು. ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ, 2 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮೋಹನ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ.84.65 ಕೋಟಿ ವ್ಯವಹಾರ ನಡೆಸಿ, ರೂ 43.13 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ 100 ಕೋಟಿ ರೂ. ವ್ಯವಹಾರದ ಗುರಿಯಿರಿಸಿಕೊಳ್ಳಲಾಗಿದೆ. ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 29 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಈ ಭಾರಿ 10% ಡಿವಿಡೆಂಟ್ ಘೋಷಿಸಲಾಗಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ ಯೋಜನೆಯಿದ್ದು, ಅದಕ್ಕಾಗಿ ಜಾಗ ಮೀಸಲಿರಿಸಲಾಗಿದೆ. ಸಂಘದ ಕಾರ್ಯ ಕ್ಷೇತ್ರದಲ್ಲಿ ಎರಡನೇ ಶಾಖೆ ತೆರೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯಕತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಹೆಚ್. ನರಸಿಂಹ ಪೂಜಾರಿ, ಬಿ. ಹೂವಯ್ಯ ಪೂಜಾರಿ, ದೊಟ್ಟಯ್ಯ ಪೂಜಾರಿ, ಮಾಜಿ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಂದು ಕಡೆ ಕಡಲು ಮತ್ತು ಮೂರು ಕಡೆ ನದಿಯಿಂದ ಆವೃತವಾಗಿರುವ ಪ್ರಕೃತಿ ರಮ್ಯ ಮರವಂತೆ, ಜಲಜಾನಪದ ಉತ್ಸವ ನಡೆಸಲು ಅತ್ಯಂತ ಪ್ರಶಸ್ತವಾದ ಸ್ಥಳ. ಇಲ್ಲಿ ನಡೆಸಲು ನಿರ್ಧರಿಸಿರುವುದಕ್ಕೆ ಸ್ವಾಗತವಿದೆ. ಅದರ ಯಶಸ್ಸಿಗೆ ಅಗತ್ಯವಿರುವ ಎಲ್ಲ ವಿಧದ ಬೆಂಬಲವನ್ನು ನೀಡಲಾಗುವುದು ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ರಾಜ್ಯ ಕನ್ನಡ ಜಾನಪದ ಪರಿಷತ್ತಿನ ಆಶ್ರಯದಲ್ಲಿ ಮರವಂತೆಯಲ್ಲಿ ನಡೆಸಲು ಉದ್ದೇಶಿಸಲಾದ ರಾಜ್ಯ ಜಲಜಾನಪದ ಉತ್ಸವದ ಲಾಂಛನವನ್ನು ಅವರು ಇಲ್ಲಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದರು. ಮರವಂತೆ ರಾಜ್ಯದ ಪ್ರಮುಖ ಸುಂದರ ಪ್ರವಾಸಿ ತಾಣಗಳಲ್ಲಿ ಒಂದು. ಪ್ರತಿದಿನ ನೂರಾರು ಪ್ರವಾಸಿಗಳು ಭೇಟಿ ನೀಡುವ ಈ ಪ್ರದೇಶವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುತ್ತಿದೆ. ಅದರೊಂದಿಗೆ ಇಲ್ಲಿ ಪ್ರವಾಸಿಗಳನ್ನು ಆಕರ್ಷಿಸಲು ವಿವಿಧ ಜಲಕ್ರೀಡೆಗಳನ್ನು ನಡೆಸಬೇಕು. ಜಲಜಾನಪದ ಉತ್ಸವದ ಸಂದರ್ಭ ಇಲ್ಲಿನ ಸೌಪರ್ಣಿಕಾ ನದಿಯಲ್ಲಿ ಕೇರಳ ಮಾದರಿಯಲ್ಲಿ ದೋಣಿಗಳ ಸ್ಪರ್ಧೆ ಏರ್ಪಡಿಸುವ ಬಗೆಗೂ ಸಂಘಟಕರು ಯೋಚಿಸಬೇಕು ಎಂದು ಅವರು ಸಲಹೆಯಿತ್ತರು.…

Read More

ಸಾಹಿತಿ, ನಿವೃತ್ತ ಉಪನ್ಯಾಸಕಿ ಡಾ| ಪಾರ್ವತಿ ಜಿ. ಐತಾಳ್ ಅವರೊಂದಿಗೆ ಕುಂದಾಪ್ರ ಡಾಟ್ ಕಾಂ ಮಾತುಕತೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಸನ್ಮಾನ್ಯ ಭೂಪೇಂದ್ರ ಯಾದವ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಹಾಗೂ ಮಾರ್ಪಾಡುಗಳ ಬಗ್ಗೆ ಚರ್ಚಿಸಿದರು. ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕೆಳಗಿನಂತೆ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದರು. ಕಸ್ತೂರಿ ರಂಗನ್ ವರದಿಯ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರಲಿದ್ದು, ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ. ಪಶ್ಚಿಮಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60% ಭೂ ಪ್ರದೇಶವು ಸಮೃದ್ಧ ಅರಣ್ಯವಾಗಿದೆ. ಆದ್ದರಿಂದ ವರದಿಯಲ್ಲಿ ಇರುವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವಿಧ ಸುಮುದಾಯದ ಮೋರ್ಚಾಗಳ ಮೂಲಕ ಸಂಘಟನಾ ಶಕ್ತಿ ಹೆಚ್ಚಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ವಿವಿಧ ಮೋರ್ಚಾಗಳ ಸಂಘಟನೆ ಮಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಕೊನೆಹಂತದ ಜನರಿಗೂ ತಲುಪಿಸುವ ಮೂಲಕ ಪಕ್ಷದ ಬಲವರ್ಧನಗೆ ವಿಶಿಷ್ಠ ಕೊಡಗೆ ನೀಡಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯ ಬಿಜೆಪಿ ಹಿಂದುಳಿದ ಮೋಚಾ ಆಶ್ರಯದಲ್ಲಿ ಕೋಟೇಶ್ವರ ಸಹನಾ ಕನ್‌ವೆಶನ್ ಶ್ರೀ ಕೃಷ್ಣ ಹಾಲ್‌ನಲ್ಲಿ ಗುರುವಾರ ನಡೆದ ಹಿಂದುಳಿದ ವರ್ಗ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ ವಿವಿಧ ಕಾರಣಗಳ ನವ ಇಟ್ಟುಕೊಂಡು ರಾಷ್ಟ್ರದ್ರೋಹ ಎಸಗುವ, ಭಯೋತ್ಪಾದನೆ, ಉಗ್ರವಾದ ಎಂದಿಗೂ ಸಹಿಸೋದಿಲ್ಲ ಎಂದ ಅವರು, ವಿದ್ರೋಹಿಗಳ ಹೆಡೆಮುರಿಕಟ್ಟಿ, ಈ ನೆಲದ ಕಾನೂನು ಮುರಿಯುವುದನ್ನು ಎಂದಿಗೂ ಸಹಿಸೋದಿಲ್ಲ ಎಂದು ಹೇಳಿದರು. ರಾಜಾಜಿನಗರ ಮಾಜಿ ಶಾಸಕ ದೇ.ಲ.ನರೇಂದ್ರ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೊಯಿಲಡಿ ಸುರೇಶ್ ನಾಯಕ್, ದಕ ಬಿಜೆಪಿ ಸಹ ಉಸ್ತುವಾರಿ ರಾಜೇಶ್ ಕಾವೇರಿ, ಮಾಜಿ ಶಾಸಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರು, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪಡೆಯಲು ಸ್ವಾವಲಂಬನ್ ಕಾರ್ಡ್ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810 /811, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಉಡುಪಿ, ಕುಂದಾಪುರ ಮೊ.ನಂ: 9901824878, ಕಾರ್ಕಳ ಮೊ.ನಂ: 9481145518 ಅಥವಾ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಎನ್.ಟಿ.ಎಸ್.ಇ ಮತ್ತು ಎನ್.ಎಮ್.ಎಮ್.ಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳು ಶಾಲೆಗಳ ಮೂಲಕ ವೆಬ್ಸೈಟ್ https://sslc.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಟಿ.ಎಸ್.ಇ ಹಾಗೂ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಾಲೂಕು ಹಂತದಲ್ಲಿ ವಿಶೇಷ ತರಬೇತಿಯನ್ನು ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ನ್ಯಾಯಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಸಿಕ 2,000 ರೂ. ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸುವAತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.03: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶುಕ್ರವಾರ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಹಾಗೂ ರಥೋತ್ಸವವು ವೈಭವದೊಂದಿಗೆ ನೆರವೇರಿತು. ವಾರ್ಷಿಕ ಜಾತ್ರೋತ್ಸವವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಪೂರ್ವಾಹ್ನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶತರುದ್ರಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸೂರ್ಯೋದಯದಿಂದ ಸೂರ್ಯಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟದಿಂದ ಶ್ರೀ ದೇವರ ನಾಮ ಸಂಕೀರ್ತನೆ ನಡೆಯಿತು. ಸಂಜೆ ಲಕ್ಷದೀಪೋತ್ಸವ ಪ್ರಯುಕ್ತ ನೆರೆದಿದ್ದ ಅಸಂಖ್ಯ ಭಕ್ತರು ಕುಂದೇಶ್ವರ ದೇವರಿಗೆ ಹಣತೆ ದೀಪ ಬೆಳಗಿ ದೇವರ ದರ್ಶನ ಪಡೆದರು. ದೇವಳದ ಪುಷ್ಪ ರಥೋತ್ಸವ ಹಾಗೂ ಶ್ರೀ ದೇವರ ಕಟ್ಟೆಪೂಜೆ ನಡೆಯಿತು. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದ ಬಳಿಕ ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರತಂದು ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು…

Read More